Bengaluru Rain | ಅಬ್ಬರಿಸಿದ ಮಳೆ-ತತ್ತರಿಸಿದ ಬೆಂಗಳೂರು: ಇಬ್ಬರು ಕಾರ್ಮಿಕರ ಸಾವು - Vistara News

ಬೆಂಗಳೂರು

Bengaluru Rain | ಅಬ್ಬರಿಸಿದ ಮಳೆ-ತತ್ತರಿಸಿದ ಬೆಂಗಳೂರು: ಇಬ್ಬರು ಕಾರ್ಮಿಕರ ಸಾವು

ಬೆಂಗಳೂರಿನ ಜ್ಞಾನ ಭಾರತಿ ಉಪ್ಕಾರ್ ಲೇಔಟ್‌ನಲ್ಲಿ ಪೈಪ್‌ಲೈನ್ ಕೆಲಸ ಮಾಡುತ್ತಿದ್ದ ವೇಳೆ ಮಳೆನೀರು ನುಗ್ಗಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ.

VISTARANEWS.COM


on

Bengaluru Male
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಸಂಜೆಯಿಂದಲೇ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಚಂದ್ರಾ ಲೇಔಟ್, ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ, ಜಯಮಹಲ್ ರಸ್ತೆ ಮತ್ತು ದಕ್ಷಿಣ ಬೆಂಗಳೂರು ಸುತ್ತಮುತ್ತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳು, ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್, ಕಚೇರಿಗಳು, ದೇವಸ್ಥಾನಗಳ ಒಳಗೆ ನೀರು ನುಗ್ಗಿದೆ.

ಬೆಳಗ್ಗೆ ನೀರು ನುಗ್ಗಿದ ಮನೆಗಳಿಗೆ ಭೇಟಿ ನೀಡಿ ಸಿ.ಎಂ ಬೊಮ್ಮಾಯಿ ಪ್ರತೀ ಮನೆಗೂ 25 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಒಂದು ವರ್ಷದಲ್ಲಿ ತಗ್ಗು ಪ್ರದೇಶದಲ್ಲಿ ನೀರು ಹರಿಯದೇ ಇರುವ ರೀತಿ ಸರಿ ಮಾಡಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ | ನೈಋತ್ಯ ಮುಂಗಾರು ಅಂಡಮಾನ್‌ ಪ್ರವೇಶ, ರಾಜ್ಯದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ

ವಿದ್ಯಾಪೀಠದಲ್ಲಿ 113 ಮೀ.ಮೀ. ಸಂಪಂಗಿರಾಮನಗರದಲ್ಲಿ 100.3 ಮೀ.ಮೀ. ಮಳೆ, ನಾಗಪುರದಲ್ಲಿ 100 ಮೀ.ಮೀ., ಅಗ್ರಹಾರ ದಾಸರಹಳ್ಳಿಯಲ್ಲಿ 97.5 ಮೀ.ಮೀ., ಹಂಪಿ ನಗರ 93.5 ಮೀ.ಮೀ. , ರಾಜಮಹಲ್ ಗುಟ್ಟಹಳ್ಳಿ 95 ಮೀ.ಮೀ., ದಯಾನಂದ ನಗರ 82 ಮೀ.ಮೀ. , ಸೂಲಿಕೆರೆ 80 ಮೀ.ಮೀ., ಆನೇಕಲ್‌ 74 ಮೀ.ಮೀ., ಕಾಡುಗೊಂಡಹಳ್ಳಿ 64 ಮೀ.ಮೀ., ಚಿಕ್ಕಬಾಣಾವರ 65ಮೀ.ಮೀ., ಕೊಡಿಗೇಹಳ್ಳಿ 65 ಮೀ.ಮೀ., ಹಳ್ಳಿ 56 ಮೀ.ಮೀ., ಕೆಂಗೇರಿ 60 ಮೀ.ಮೀ., ಆರ್‌.ಆರ್‌.ನಗರ 50 ಮಿ.ಮೀ. ಮಳೆಯಾಗಿರುವ ವರದಿಯಾಗಿದೆ.

ಜೆ.ಸಿ.ನಗರ, ಕುರುಬರಹಳ್ಳಿ, ಮೂಡಲಪಾಳ್ಯ, ಎಚ್‌ಎಸ್‌ಆರ್‌ ಲೇಔಟ್‌, ಕೋರಮಂಗಲ, ಚಿಕ್ಕಕಲ್ಲಸಂದ್ರ, ಪದ್ಮನಾಭನಗರ, ವಿಜಯನಗರ, ರಾಯಪುರಂ, ಬಸವೇಶ್ವರನಗರ 6ನೇ ಕ್ರಾಸ್‌, ಜಯನಗರ 3ನೇ ಬ್ಲಾಕ್‌, ಶಿವಾಜಿನಗರ, ವಸಂತನಗರ, ದೊಡ್ಡನೆಕ್ಕುಂದಿಯ ಗುರುರಾಜ ಲೇಔಟ್‌, ರಾಮಮೂರ್ತಿನಗರದ ಗುರುಮೂರ್ತಿರೆಡ್ಡಿ ಲೇಔಟ್‌ನ 3ನೇ ಬ್ಲಾಕ್‌, ಎಚ್‌ಬಿಆರ್‌ ಲೇಔಟ್‌ 3ನೇ ಬ್ಲಾಕ್‌ನ 13ನೇ ಕ್ರಾಸ್‌, ಇಂದಿರಾನಗರ 100 ಅಡಿ ರಸ್ತೆಯ 7ನೇ ಮುಖ್ಯರಸ್ತೆ, ಆರ್‌ಬಿಐ ಕಾಲೊನಿ, ಆರ್‌.ಟಿ.ನಗರ ಸಮೀಪದ ಮಂಜುನಾಥ ನಗರ, ಮುರುಗೇಶಪಾಳ್ಯದ ಕೆ.ಆರ್‌.ಗಾರ್ಡನ್‌, ಡಾಲರ್ಸ್ ಕಾಲೊನಿಯ 5ನೇ ಮುಖ್ಯರಸ್ತೆ, ಮಲ್ಲೇಶ್ವರ, ರಾಜಾಜಿನಗರ, ನಾಗರಬಾವಿ, ಆರ್ ಆರ್‌ ನಗರ, ತ್ಯಾಗರಾಜ ನಗರ ಸೇರಿದಂತೆ ಹಲವೆಡೆ ಮಳೆ ಸೇರಿದಂತೆ ಹಲವು ಬಡಾವಣೆಗಳಲ್ಲಿನೂರಾರು ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಯಿತು.

ಕೊಳಚೆಯೊಂದಿಗೆ ಹರಿದುಬಂದ ಮಳೆ ನೀರನ್ನು ಹೊರಹಾಕಲು ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡಿದರು. ಬಟ್ಟೆ, ದಿನಸಿ ಪದಾರ್ಥಗಳು, ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್‌ ಉಪಕರಣಗಳು ನೀರು ಪಾಲಾದವು. ರಾಜರಾಜೇಶ್ವರಿನಗರದ ಮೆಟ್ರೊ ನಿಲ್ದಾಣದ ಬಳಿ ಕಾಂಪೌಂಡ್‌ ಕುಸಿಯಿತು. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ಪೈಪ್ ಲೈನ್ ಕೆಲಸ ಮಾಡ್ತಿದ್ದ ವೇಳೆ ಮಳೆನೀರು ನುಗ್ಗಿ ಸಾವು

ಬೆಂಗಳೂರಿನ ಜ್ಞಾನ ಭಾರತಿ ಉಪ್ಕಾರ್ ಲೇಔಟ್ ನಲ್ಲಿ ಪೈಪ್ ಲೈನ್ ಕೆಲಸ ಮಾಡುತ್ತಿದ್ದ ವೇಳೆ ಮಳೆನೀರು ನುಗ್ಗಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತತ್ರ ಪ್ರದೇಶದ ಅಂಕಿತ್ ಕುಮಾರ್ ಸಾವಗೀಡಾದ ಕಾರ್ಮಿಕರು. ಇನ್ನೊಬ್ಬ ಕಾರ್ಮಿಕ್ ಬಚಾವ್‌ ಆಗಿದ್ದು, ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಧಾವಿಸಿದ್ದಾರೆ. ಘಟನೆ ಸಂಬಂಧ ಇಬ್ಬರು ಕಾಂಟ್ರಾಕ್ಟರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಳೆ

ಕಾವೇರಿ ಐದನೇ ಹಂತದ ಯೋಜನೆಯ ಇಂಜಿನೀಯರ್ ರಮೇಶ್ ಈ ಕುರಿತು ಮಾತನಾಡಿ, ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್‌ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿದೆ. ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ. ಯಾವುದೇ ರೀತಿಯ ಸೇಫ್ಟಿ ಲೋಪ ಆಗಿಲ್ಲ. ಎಲ್ಲವೂ ಸರಿ ಇತ್ತು. ಒಂದೂವರೆ ವರ್ಷಗಳಿಂದ ಈ ಕಾವೇರಿ ಐದನೇ ಹಂತದ ಕಾಮಾಗರಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಇನ್ನೂ ನಾಲ್ಕು ದಿನ ಮಳೆ

ನಗರದಲ್ಲಿಇನ್ನೂ 4 ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಮೇ 18, 19ರಂದು ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಮಾ. 1 ರಿಂದ ಮೇ 17 ರವರೆಗೆ ವಾಡಿಕೆಯಂತೆ 97 ಮೀ.ಮೀ. ಮಳೆ ಯಾಗಬೇಕಿತ್ತು. ಈ ವರೆಗೆ 182 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ 90% ಹೆಚ್ಚು ಮಳೆ ಸುರಿದಿದೆ.

ಇದನ್ನೂ ಓದಿ |ಕೊಪ್ಪಳದಲ್ಲಿ ಮಳೆಯಿಂದ ನೆಲಕ್ಕುರುಳಿದ ಬೆಳೆ; ನೀರು ತುಂಬಿದ ಗುಂಡಿಗೆ ಬಿದ್ದು ಬಾಲಕಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Bengaluru News: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

VISTARANEWS.COM


on

Inauguration of Kannada learning classes for Malayali speakers
Koo

ಬೆಂಗಳೂರು: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (Bengaluru News) ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಕಾ ತರಗತಿಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚು ಭಾಷೆಯನ್ನು ಕಲಿಯುವವರು ಹೆಚ್ಚು ಸಾಧನೆ, ಯಶಸ್ಸು ಪಡೆಯುತ್ತಾರೆ. ನಾವು ಬೇರೆ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಗೆ ಗೌರವ ಕೊಟ್ಟು ಭಾಷೆ ಕಲಿಯಲು ಮುಂದಾಗಬೇಕು. ಕರ್ನಾಟಕ ರಾಜ್ಯದಲ್ಲಿರುವ ಮಲೆಯಾಳಿ ಭಾಷಿಕರು ಕನ್ನಡ ಭಾಷೆ ಕಲಿಯುತ್ತಿರುವುದು ನಿಮ್ಮ ವ್ಯಕ್ತಿತ್ವ, ಆತ್ಮ ವಿಶ್ವಾಸ ಹೆಚ್ಚಿಸುವ ಜತೆಗೆ ಕರ್ನಾಟಕ ರಾಜ್ಯಕ್ಕೆ ಕೊಡುಗೆ ನೀಡಲು ಮುಂದಾಗಿರುವುದು ಸಂತೋಷದ ವಿಷಯ ಎಂದು ಹೇಳಿದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಇಲ್ಲಿಗೆ ನಿಲ್ಲಬಾರದು. ಈ ಯೋಜನೆ ಹೆಚ್ಚು ವಿಸ್ತೃತವಾಗಿ ಪ್ರತಿ ಜಿಲ್ಲೆಗಳಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಪ್ರಾಧಿಕಾರದಿಂದ ಆಗಬೇಕು. ಪ್ರಾಧಿಕಾರದಿಂದ ಆಯೋಜಿಸಿದ್ದ ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ಜೀವನ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಭಾಷೆ ತುಂಬಾ ಪ್ರಮುಖವಾದುದು. ಹೆಚ್ಚು ಭಾಷೆ ಕಲಿತಷ್ಟು ವ್ಯಕ್ತಿತ್ವ ವಿಕಾಸನ ಆಗುವುದರೊಂದಿಗೆ ನಮ್ಮಲ್ಲಿನ ಜ್ಞಾನವೂ ಹೆಚ್ಚಾಗುತ್ತದೆ.

ಬೇರೆ ಬೇರೆ ಭಾಷೆಗಳಲ್ಲಿರುವ ಒಳ್ಳೆಯ ವಿಚಾರಗಳು ಕನ್ನಡಿಗರಿಗೆ ಪರಿಚಯವಾಗಬೇಕೆಂಬ ಉದ್ದೇಶದಿಂದ ಹಲವು ಪುಸ್ತಕಗಳನ್ನು ಅನುವಾದ ಮಾಡಿಸಲಾಗಿದೆ. ಕನ್ನಡ ಭಾಷೆಯಿಂದ ಮಲೆಯಾಳಿ ಭಾಷೆಗೆ ಮಲೆಯಾಳಿ ಭಾಷೆಯಿಂದ ಕನ್ನಡ ಭಾಷೆಗೆ ಹೆಚ್ಚೆಚ್ಚು ಕೃತಿಗಳು ಅನುವಾದವಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕರಾದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆ ಬಹಳ ಬಲಿಷ್ಠವಾಗಿ ಉಳಿಯಲು ರಾಜ್ಯಗಳ ಭಾಷೆಗಳು ಪ್ರಮುಖವಾದುದು. ಭಾಷೆ ದುರ್ಬಲವಾದರೆ ದೇಶದ ಒಕ್ಕೂಟ ವ್ಯವಸ್ಥೆ ದುರ್ಬಲವಾಗುತ್ತದೆ. 2011ರ ಜನಗಣತಿ ಪ್ರಕಾರ ಭಾರತದಲ್ಲಿ 19,509 ತಾಯ್ನುಡಿಗಳಿವೆ. ರಾಜ್ಯದಲ್ಲಿ 230ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಎಲ್ಲರೂ ಸೇರಿ ರಾಜ್ಯ ಭಾಷೆಯನ್ನು ಬೆಳೆಸಬೇಕು ಅದರ ಜತೆಗೆ ಸಣ್ಣ ಭಾಷೆಗಳನ್ನು ಬೆಳೆಸಬೇಕು ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧಾಕರನ್ ರಾಮಂತಳ್ಳಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತು ಮಲೆಯಾಳಂ ಮಿಷನ್ ಕೇರಳ ಸರ್ಕಾರ ಮತ್ತು ಕನ್ನಡ ಕಲಿಕಾ ಯೋಜನೆ ಸಂಚಾಲಕ ಟಾಮಿ ಜೆ. ಅಲುಂಕಲ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Dog Meat: ಬೆಂಗಳೂರಿನಲ್ಲಿ ನಾಯಿ ಮಾಂಸದ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಹೊರ ರಾಜ್ಯಗಳಿಂದ ಪ್ರತಿ ದಿನ ಬೆಂಗಳೂರಿಗೆ ನಾಯಿ ಮಾಂಸ ಬರುತ್ತಿದೆ ಎನ್ನಲಾಗಿದ್ದು, ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ಮೆಜೆಸ್ಟಿಕ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Dog meat
Koo

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಲವು ಹಿಂದು ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಮಾಂಸದ ಪಾರ್ಸೆಲ್‌ಗಳಲ್ಲಿ ನಾಯಿ ಮಾಂಸ (Dog Meat) ಕಂಡುಬಂದಿದೆ. ಇದರಿಂದ ಸ್ಥಳದಲ್ಲಿ‌ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪಗಳನ್ನು ಅಬ್ದುಲ್‌ ರಜಾಕ್‌ ಅಲ್ಲಗಳೆದಿದ್ದಾರೆ. ನಾಯಿ ಮಾಂಸದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆಗಳು ದಾಳಿ ಮಾಡಿದ್ದು, ಈ ವೇಳೆ ಸಾವಿರಾರು ಕೆ.ಜಿ ಮಾಂಸ ಪತ್ತೆಯಾಗಿದೆ. ಆದರೆ, ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೆಯುತ್ತಿದೆ. ಆಹಾರ ಇಲಾಖೆ ಅಧಿಕಾರಿಗಳು ಬೇಕಿದ್ದರೆ ಬಂದು ಚೆಕ್ ಮಾಡಲಿ ಎಂದು ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಮಾಂಸದ ಪಾರ್ಸೆಲ್‌ಗಳಲ್ಲಿ ಪ್ರಾಣಿಯ ಬಾಲ ಉದ್ದವಾಗಿರೋದು ಕಂಡುಬಂದಿದ್ದರಿಂದ, ಕುರಿ ಬಾಲ ಈ ರೀತಿ ಇರುತ್ತದಾ ಎಂದು ಹಿಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ರಾಜಸ್ಥಾನ ಕುರಿಗಳಿಗೆ ಇದೇ ರೀತಿ ಬಾಲ ಉದ್ದವಾಗಿರುತ್ತೆ, ಅದನ್ನು ನಾಯಿ ಎನ್ನುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಹಣ ವಸೂಲಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಅವರ ವಿರುದ್ಧ ದೂರು ನೀಡುತ್ತೇವೆ ಎಂದು ಅಬ್ದುಲ್‌ ರಜಾಕ್‌ ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಅಧಿಕಾರಿಗಳ ಪರಿಶೀಲನೆ

ಸ್ಥಳಕ್ಕೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. 5 ಬಾಕ್ಸ್‌ಗಳಲ್ಲಿ ಇದ್ದ ಕುರಿ ಮಾಂಸದ ಸ್ಯಾಂಪಲ್ ತೆಗೆದುಕೊಂಡಿದ್ದೇವೆ. ಮೇಲ್ನೋಟಕ್ಕೆ ಇದು ಕಳಪೆಯಾಗಿ ತೋರುತ್ತಿದೆ. ಇದನ್ನು ನಾವು ಪ್ರಯೋಗಾಲಯಕ್ಕೆ ಕಳುಹಿಸಿಕೊಡುತ್ತೇವೆ. 14 ದಿನದ ಬಳಿಕ ರಿಪೋರ್ಟ್ ಸಿಗುತ್ತದೆ ಎಂದು ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಮೂಲಕ ನಾಯಿ ಮಾಂಸ, ನಗರದ ವಿವಿಧ ಹೋಟೆಲ್‌ಗಳಿಗೆ ಸರಬರಾಜು ಆಗುತ್ತಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಪ್ಲೈ ಆಗುತ್ತಿದೆ ಎನ್ನಲಾಗಿದೆ. ರಾಜಸ್ಥಾನದಿಂದ ಕುರಿ ಮಾಂಸ ಅಂತ ಹೇಳಿ ನಾಯಿ ಮಾಂಸವನ್ನು ತರಿಸಿ ಇಲ್ಲಿನ ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದು ಒಂದು ದೊಡ್ಡ ದಂಧೆ ಆಗಿದ್ದು, ಅಧಿಕಾರಿಗಳು, ಸಚಿವ ಜಮೀರ್ ಅಹ್ಮದ್ ಎಲ್ಲರೂ ಭಾಗಿ ಆಗಿದ್ದಾರೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಕಳೆದೊಂದು ವರ್ಷದಿಂದ 700 ರೂ.ಗಳಿಗಿಂತ ಹೆಚ್ಚಿನ ದರಕ್ಕೆ ಕುರಿ ಹಾಗೂ ಮೇಕೆಯ ಮಟನ್ ಮಾಂಸ ಮಾರಾಟವಾಗುತ್ತಿದೆ. ಆದರೆ, ಬೆಂಗಳೂರಿನ ಶಿವಾಜಿನಗರ ಸೇರಿ ಕಡೆ ಕೆಲ ವ್ಯಾಪಾರಿಗಳು ಪ್ರತಿ ಕೆ.ಜಿ. ಮಾಂಸವನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟು ಕಡಿಮೆ ದರಕ್ಕೆ ಮಾಂಸ ಹೇಗೆ ಸಿಗುತ್ತೆ ಎಂದು ಅನುಮಾನಗೊಂಡ ಮುಸ್ಲಿಂ ವ್ಯಾಪಾರಿಗಳೇ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಕಡಿಮೆ ದರಕ್ಕೆ ನಾಯಿ ಮಾಂಸ ತರಿಸಿಕೊಂಡು ಹೆಚ್ಚಿನ ದರಕ್ಕೆ ಕುರಿ ಮಾಂಸವೆಂದು ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಫಿಶ್ ಎಂದು ಸ್ಟಿಕ್ಕರ್ ಹಾಕಿಕೊಂಡು ಏನು ಪ್ಯಾಕ್ ಮಾಡಿದ್ದಾರೋ ನೋಡಿ, ಕುರಿಯ ಬಾಲ ಇಷ್ಟು ಉದ್ದ ಇರುತ್ತಾ? ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಎಲ್ಲ ಮಾಂಸ ಆಹಾರ ಗುಣಮಟ್ಟ ಚೆಕ್ ಮಾಡಬೇಕು ಎಂದು ಹಿಂದುಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ವೇಳೆ ಪುನೀತ್‌ ಕೆರೆಹಳ್ಳಿ ಸೇರಿ ಹಲವು ಕಾರ್ಯಕರ್ತರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ.

Continue Reading

ಬೆಂಗಳೂರು

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Bengaluru News: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.

VISTARANEWS.COM


on

Apollo International Public School introduced Sqay samara kale as part of the syllabus
Koo

ಬೆಂಗಳೂರು: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು (Bengaluru News) ಪರಿಚಯಿಸಿದೆ.

ಗುರುವಾರ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡಲಾಯಿತು.

ಶಾಲೆಯ ಪ್ರಾಚಾರ್ಯೆ ಡಾ. ವೇದವತಿ ಬಿ.ಎ. ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷೆ ಐಶ್ವರ್ಯ ಡಿಕೆಎಸ್ ಹೆಗ್ಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಈ ವೇಳೆ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.

Continue Reading
Advertisement
Health Tips Kannada
ಆರೋಗ್ಯ8 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ53 mins ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ6 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Vijay Mallya
ದೇಶ7 hours ago

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌