ಬೆಂಗಳೂರು: ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆ ನಿವಾರಿಸಲು ಬೆಸ್ಕಾಂ ಹೊಸ ಯೋಜನೆ ರೂಪಿಸಿದೆ. ರಾಜ್ಯದ 8 ಜಿಲ್ಲೆಗಳಿಗೆ ಸಂಬಂಧಿಸಿ 11 ‘ವಾಟ್ಸ್ ಆ್ಯಪ್ ಸಹಾಯವಾಣಿ’ ಸಂಖ್ಯೆಗಳನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ.
ಮಳೆಗಾಲ ಹಾಗೂ ತುರ್ತು ಸಂದರ್ಭಗಳಲ್ಲಿ ನೋಡಲ್ ಅಧಿಕಾರಿಗಳು ಸಹಾಯವಾಣಿ ಕೇಂದ್ರಕ್ಕೆ ಬರುವ ದೂರುಗಳ ಸ್ವೀಕಾರದಡಿ ಬೆಸ್ಕಾಂನ ಹಾಲಿ ಸಹಾಯವಾಣಿ ಸಂಖ್ಯೆ 1912ಕ್ಕೆ ಸಾವಿರಾರು ಕರೆಗಳು ಬರುತ್ತಿದ್ದವು. ಕರೆಗಳ ಒತ್ತಡ ಕಡಿಮೆ ಮಾಡಲು ಮತ್ತು ಕರೆಗಳನ್ನು ಸರಾಗವಾಗಿ ನಿರ್ವಹಣೆ ಮಾಡಲು ಹೊಸ ನಂಬರ್ ಗಳನ್ನು ನೀಡಲಾಗಿದೆ.
ಇದನ್ನೂ ಓದಿ | ಬೆಂಗಳೂರಿನಲ್ಲಾದ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ದುರಂತದಿಂದ ಎಚ್ಚೆತ್ತ ಬೆಸ್ಕಾಂ
ಒಂದೇ ನಂಬರ್ ಇದ್ದ ಕಾರಣ ಸಾರ್ವಜನಿಕರಿಗೆ ಸಹಾಯವಾಣಿ ಕರೆ ಸುಲಭವಾಗಿ ಲಭ್ಯವಾಗದ ಹಿನ್ನೆಲೆಯಲ್ಲಿ ವಾಟ್ಸ್ ಆ್ಯಪ್ ಸಹಾಯವಾಣಿ ಪ್ರತಿ ಜಿಲ್ಲೆಗೆ ಒಂದರಂತೆ ನೀಡಲು ಸಚಿವರು ಬೆಸ್ಕಾಂಗೆ ಸೂಚಿಸಿದ್ದರು.
ಇದೀಗ ಹೆಸ್ಕಾಂ, ಜಿಸ್ಕಾಂ ಮತ್ತು ಚೆಸ್ಕಾಂ ವ್ಯಾಪ್ತಿಯಲ್ಲಿ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 11 ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಬೆಸ್ಕಾಂ ಒದಗಿಸಿದ್ದು, ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗೂ ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ ಎಂದು ಇಂಧನ ಸಚಿವ ವಿ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ | ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್!: ವಿದ್ಯುತ್ ಮೀಟರ್ ಠೇವಣಿ ಹೆಚ್ಚಿಸಿದ ಬೆಸ್ಕಾಂ