Betting Case | ಬೆಟ್ಟಿಂಗ್ ಕೇಸ್‌ನಲ್ಲಿ ವಸೂಲಿ ಮಾಡಿದ್ರಾ ಸದಾಶಿವನಗರ ಪೊಲೀಸ್ ಕಾನ್ಸ್‌ಟೇಬಲ್‌? - Vistara News

ಕ್ರೈಂ

Betting Case | ಬೆಟ್ಟಿಂಗ್ ಕೇಸ್‌ನಲ್ಲಿ ವಸೂಲಿ ಮಾಡಿದ್ರಾ ಸದಾಶಿವನಗರ ಪೊಲೀಸ್ ಕಾನ್ಸ್‌ಟೇಬಲ್‌?

ಸದಾಶಿವನಗರ ಕಾನ್ಸ್‌ಟೇಬಲ್‌ (Betting Case) ಶಿವಕುಮಾರ್ ಮೇಲೆ ಕ್ರಿಕೆಟ್ ಬೆಟ್ಟಿಂಗ್ ಸಂಬಂಧಿಸಿದ ಆರೋಪ ಕೇಳಿ ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Betting Case
ಸದಾಶಿವನಗರ ಕಾನ್ಸ್‌ಟೇಬಲ್‌ ಶಿವಕುಮಾರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕ್ರಿಕೆಟ್ ಬೆಟ್ಟಿಂಗ್ (Betting Case) ಸಂಬಂಧಿಸಿದಂತೆ ಸದಾಶಿವನಗರ ಕಾನ್ಸ್‌ಟೇಬಲ್‌ ಶಿವಕುಮಾರ್ ಮೇಲೆ ಸುಲಿಗೆ ಆರೋಪ ಕೇಳಿಬಂದಿದೆ. ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.

ತಮ್ಮ ಠಾಣಾ ವ್ಯಾಪ್ತಿ ಬಿಟ್ಟು ಸಹಕಾರ ನಗರದ ಉದ್ಯಮಿಗೆ ಬೆದರಿಸಿ ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಈಶಾನ್ಯ ವಿಭಾಗ ಡಿಸಿಪಿಗೆ ಸಹಕಾರ ನಗರದ ಉದ್ಯಮಿ ಯೋಗೇಶ್ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ಗೆ ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಪೇದೆ ಶಿವಕುಮಾರ್ ಹೆದರಿಸಿದ್ದರು ಎನ್ನಲಾಗಿದೆ. ಹಾಗೂ ಮೂರು ಲಕ್ಷ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ | ಬೆಟ್ಟಿಂಗ್‌ ಕಂಪನಿ ಪರ ಪ್ರಚಾರ ಮಾಡಿದ ಬಾಂಗ್ಲಾ ಕ್ರಿಕೆಟಿಗನ ವೃತ್ತಿಗೆ ಬಂತಾ ಕುತ್ತು?

ಈ ದೂರಿನನ್ವಯ ಡಿಸಿಪಿ ಅನೂಪ್ ಶೆಟ್ಟಿ ಯಲಹಂಕ ಎಸಿಪಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಶಿವಕುಮಾರ್, ಪ್ರಭಾವಿ ರಾಜಕಾರಣಿಯಿಂದ ತನ್ನ ವಿರುದ್ಧ ಕ್ರಮ ಕೈಗೊಳ್ಳದಂತೆ ಪ್ರಭಾವ ಬೀರುತ್ತಿದ್ದಾರೆ ಎನ್ನಲಾಗಿದೆ. ಇನ್ನೊಂದು ಕಡೆ ಶಿವಕುಮಾರ್ ಬಾತ್ಮಿದಾರನ ಮಾಹಿತಿ ಮೇರೆಗೆ ಸಹಕಾರನಗರಕ್ಕೆ ತೆರಳಿ ಬೆಟ್ಟಿಂಗ್ ಕೇಸ್ ವಿಚಾರಕ್ಕೆ ಹೋಗಿದ್ದರು. ಆದರೆ ಬಾತ್ಮಿದಾರ ಮಾಹಿತಿ ಕೊಟ್ಟಿರಲಿಲ್ಲ. ಹಣದ ವ್ಯವಹಾರ ತನಿಖೆ ನಂತರ ಅಷ್ಟೇ ಗೊತ್ತಾಗಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ತಮ್ಮ ಡಿವಿಷನ್ ಬಿಟ್ಟು ಬೇರೆ ಡಿವಿಷನ್‌ನಲ್ಲಿ ಕೇಸ್ ವಿಚಾರಕ್ಕೆ ಎಸ್‌ಬಿ ಕಾನ್ಸ್‌ಟೇಬಲ್‌ ಹೋಗಿದ್ದರಾ? ಅಥವಾ ನಿಜವಾಗಲೂ ಅಧಿಕಾರ ಬಳಸಿ ಹಣ ವಸೂಲಿ ಮಾಡಿದ್ದರಾ? ಎಂಬುದರ ಬಗ್ಗೆ ತನಿಖೆ ನಡೆಯಲಿದೆ.

ಇದನ್ನೂ ಓದಿ | IPL Betting: 1 ಕೋಟಿ ಕಳಕೊಂಡ ಪೋಸ್ಟ್‌ ಮಾಸ್ಟರ್‌, ಅಷ್ಟು ದುಡ್ಡು ಬಂದದ್ದು ಎಲ್ಲಿಂದ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Rameshwaram Cafe Blast: ಕರ್ನಾಟಕ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಇದರಲ್ಲಿ ಹುಬ್ಬಳ್ಳಿಯ ಗೌಸಿಯಾ ಟೌನ್‌ನ ನಿವಾಸಿ ಕೂಡ ಸೇರಿದ್ದಾನೆ.

VISTARANEWS.COM


on

Rameshwaram Cafe Blast
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ. ಈ ಪೈಕಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯೆಬ್‌ ಅಬ್ದುಲ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್‌ನಲ್ಲಿ ವಾಸವಿದ್ದ ಶೋಯೆಬ್‌ ಅಬ್ದುಲ್ ಮಿರ್ಜಾನನ್ನು ವಶಕ್ಕೆ ಪಡೆದಿದ್ದು, ಈತ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ | Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ಏಪ್ರಿಲ್ 12ರಂದು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

Continue Reading

ಕರ್ನಾಟಕ

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

Self Harming: ಹುಬ್ಬಳ್ಳಿಯ ನವನಗರದಲ್ಲಿ ಟ್ರಾಫಿಕ್‌ ಕಾನ್‌ಸ್ಟೇಬಲ್ ಹಾಗೂ ಮಹಿಳೆಯೊಬ್ಬರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Self Harming
Koo

ಹುಬ್ಬಳ್ಳಿ: ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಟ್ರಾಫಿಕ್‌ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Boiler Blast

ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ಕರ್ನಾಟಕ

Boiler Blast: ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Boiler Blast: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಅವಘಡ ನಡೆದಿದೆ.

VISTARANEWS.COM


on

Boiler Blast
Koo

ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ರಾಜಕೀಯ

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Prajwal Revanna Case: ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy slams DK Shivakumar
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂಬುದಕ್ಕೆ ಇನ್ನೆಷ್ಟು ಸಾಕ್ಷಿ ಬೇಕು? ತಾವು ಅರ್ಧ ನಿಮಿಷಗಳ ಕಾಲ ಮಾತನಾಡಿದ್ದಾಗಿ ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಸಾಕ್ಷಿ ಏನಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಇದು ಸರಿಯೇ? ಇದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ ನಿಮಗೇ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈಗಿನ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ಅವರ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ಸಂಭಾಷಣೆಯಲ್ಲಿ ಏನಿದೆ? ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ, ಶಿವರಾಮೇಗೌಡ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ? ಇದ್ಯಾವುದನ್ನೂ ಇವರು ಸಾಕ್ಷಿಯಾಗಿ ಪರಿಗಣಿಸುವುದಿಲ್ಲವೇ? ಇದಕ್ಕಿಂತ ಮತ್ತೇನು ಸಾಕ್ಷಿಗಳು ಬೇಕು ನಿಮಗೆ? ಎಂದು ಕೇಳಿದರು.

ಯಾರು ಯಾರೋ ಬರುತ್ತಿರುತ್ತಾರೆ. ಕೆಟ್ಟವರು ಬರ್ತಾರೆ, ಒಳ್ಳೆಯವರು ಬರ್ತಾರೆ ಅಂತ ಡಿ.ಕೆ. ಶಿವಕುಮಾರ್‌ ಅವರು ಹೇಳಿದ್ದಾರೆ. ವಕೀಲ ದೇವರಾಜೇಗೌಡರ ಜತೆಗೆ ಡಿಕೆಶಿ ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖವಾದ ಅಂಶ ಅಲ್ವಾ ಇವರಿಗೆ? ಸಾಕ್ಷಿ ಕೊಡಿ ಸಾಕ್ಷಿ ಕೊಡಿ ಅಂತ ಹೇಳ್ತಾರೆ. ಎಸ್‌ಐಟಿ ತಂಡದಿಂದ 7 ಜನರನ್ನು ಬಂಧನ ಮಾಡಿ ಕರೆ ತಂದಿದ್ದಾರೆ. ಹಾಗಾದರೆ ಯಾವ ಸಾಕ್ಷಿ ಮೇಲೆ ಬಂಧನ ಮಾಡಿ ಕರೆ ತಂದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಹಲವಾರು ಜನರನ್ನು ಪ್ರತಿ ನಿತ್ಯ ಕರೆಯುವ ಎಸ್‌ಐಟಿ ಅಧಿಕಾರಿಗಳು ಈಗ ಮಾಡುತ್ತಿರುವುದು ಏನು? ಕಿರುಕುಳ ಅಲ್ಲವೇ? ಅವರಿಗೂ ಇದಕ್ಕೂ ಏನು ಸಂಬಂಧ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಈ ಪ್ರಕರಣದಲ್ಲಿ ಈಗ ಎಲ್ಲವೂ ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೆ ಇದೆ. ಮಾಹಿತಿ ಏನು ಇದೆಯೋ ಎಲ್ಲವನ್ನು ಸಹ ಕೊಡಿ ಅಂತ ಕೇಳುತ್ತಾರೆ. ದೂರನ್ನು ಬಹಳ ಕಷ್ಟಪಟ್ಟು ಕೊಡಿಸಿದ್ದೇವೆ ಅಂತ ಹೇಳುತ್ತಾರೆ. ಅ ವ್ಯಕ್ತಿ ಜೊತೆ ಮಾತನಾಡಬೇಕಾದರೆ ಕಷ್ಟ ಪಟ್ಟು ಕೊಡಿಸಿದ್ದೇವೆ ಅಂತ ಹೇಳ್ತಾರೆ. ಇದಕ್ಕಿಂತಲೂ ಸಿಎಂ ಅವರಿಗೆ ಸಾಕ್ಷಿ ಬೇಕಾ..? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ 6 ಪ್ರಶ್ನೆ ಇಟ್ಟಿದ್ದಾರಂತೆ..?

ಬಿಜೆಪಿಯವರಿಗೆ ಏನೋ ಪತ್ರ ಬರೆದಿದ್ದಾರಂತೆ, ಗೊತ್ತಿದ್ದು ಯಾಕೆ ಪ್ರಜ್ವಲ್‌ಗೆ ಟಿಕೆಟ್ ಕೊಟ್ಟಿರಿ? ಜೆಡಿಎಸ್ ಅವರು ಪ್ರಜ್ವಲ್ ಅವರನ್ನು ಸಸ್ಪೆಂಡ್ ಯಾಕೆ ಮಾಡಿದರು? ಈಗ 5- ಪ್ರಶ್ನೆ ಕೇಳಿದ್ದೇವೆ ಅಂತ ಹೇಳುತ್ತಾರೆ. ನಾನು ಪಾರ್ಟಿಯಿಂದ ವಜಾ ಮಾಡುವ ನಿರ್ಧಾರ ಕೈಗೊಂಡೆ. ಆದರೆ, ಸಿಎಂ ಹೇಳಿಕೆಯನ್ನು ನೋಡಿದರೆ ಆರೋಪಿಯನ್ನು ಅಪರಾಧಿಯನ್ನಾಗಿ ಮಾಡಿದ್ದಾರೆ. ಆದರೆ, ಪ್ರಜ್ವಲ್‌ ಇನ್ನೂ ಆರೋಪಿ ಸ್ಥಾನದಲ್ಲಿ ಇದ್ದಾನೆ. ಅಪರಾಧಿ ಅನ್ನುವುದನ್ನು ಕೋರ್ಟ್‌ ನಿರ್ಧಾರ ಮಾಡಲಿದೆ? ಅದೀಗ ಎಲ್ಲಿ ಸಾಬೀತಾಗಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ನಿಮ್ಮ ಎಸ್‌ಐಟಿಯವರು ಹೇಳುವ ಪ್ರಕಾರ, ವಿಡಿಯೊಗಳಲ್ಲಿ ಪ್ರಜ್ವಲ್‌ ಮುಖ ಕಾಣುತ್ತಿಲ್ಲ. ಹಾಗಾದರೆ, ಅಪರಾಧಿ ಸ್ಥಾನದಲ್ಲಿ ಯಾಕೆ ನಿಲ್ಲಿಸಿದ್ದೀರಿ? ಈ ಆರೋಪ ಪ್ರಜ್ವಲ್‌ ಮೇಲೆ ಬಂದ ತಕ್ಷಣ ನಾವು ನೈತಿಕತೆ ಉಳಿಸಿಕೊಳ್ಳಲು ಮೇಲೆ ಸಸ್ಪೆಂಡ್ ಮಾಡಿದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading
Advertisement
LPL 2024
ಪ್ರಮುಖ ಸುದ್ದಿ18 mins ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ20 mins ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು27 mins ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ40 mins ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ1 hour ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ2 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ2 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ2 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ2 hours ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ2 hours ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು11 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು12 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌