Site icon Vistara News

Bigg Boss Kannada : ಸ್ವರ್ಗ- ನರಕಕ್ಕೆ ಎಂಟ್ರಿ ಕೊಟ್ಟ ಸ್ಪರ್ಧಿಗಳು; ಬಿಗ್‌‌ ಬಾಸ್‌ ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್

Bigg Boss season 11 The real game starts today

ಬೆಂಗಳೂರು: ಕನ್ನಡ ಕಿರುತೆರೆಯ ಬಿಗೆಸ್ಟ್‌ ರಿಯಾಲಿಟಿ ಶೋ ಬಿಗ್‌ಬಾಸ್ 11ನೇ ಸೀಸನ್‌ಗೆ (Bigg Boss Kannada) ಕಿಕ್ ಸ್ಟಾರ್ಟ್ ಸಿಕ್ಕಿದೆ. ಕನ್ನಡ ಟೆಲಿವಿಷನ್ ಲೋಕದಲ್ಲಿ ದೊಡ್ಮನೆಯ ಕಲರವ ಮತ್ತೆ ಶುರುವಾಗಿದೆ. ಭಿನ್ನ -ವಿಭಿನ್ನ ಹದಿನೇಳು ಸ್ಪರ್ಧಿಗಳು ಈ ಬಾರಿಯ ಕನ್ನಡ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟು ದಿನದಿಂದ ಒಂದು ಲೆಕ್ಕ ಈಗಿನಿಂದ ಇನ್ನೊಂದು ಲೆಕ್ಕವನ್ನು ಬಿಗ್ ಬಾಸ್ ಶುರುಮಾಡಿದ್ದು, ಸ್ವರ್ಗ- ನರಕದ ಆಟಕ್ಕೆ ಸ್ಪರ್ಧಿಗಳು ನಿನ್ನೆ ಭಾನುವಾರ ಗ್ರಾಂಡ್ ಎಂಟ್ರಿ (bigg boss kannada season 11) ಕೊಟ್ಟಿದ್ದಾರೆ.

ದೊಡ್ಮನೆಯ ರಂಗಿನಾಟಕ್ಕೆ ಬಣ್ಣದ ಲೋಕದಿಂದ ಮಾತ್ರವಲ್ಲದೇ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೆ ಚಾಪು ಮೂಡಿಸಿ ಫೇಮಸ್‌ ಆಗಿರುವ ಕಂಟೆಸ್ಟೆಂಟ್ಸ್ ಎಂಟ್ರಿ ಕೊಟ್ಟಿದ್ದಾರೆ. ಮೊದಲಿಗೆ ಕಿರುತೆರೆ ನಟಿ ಭವ್ಯಾ ಗೌಡ ಎಂಟ್ರಿ ಕೊಟ್ಟರೆ, ನಂತರ ಒಬ್ಬೊಬ್ಬರಾಗೆ ಕೆಲವರು ಸ್ವರ್ಗಕ್ಕೆ, ಮತ್ತೆ ಕೆಲವರು ನರಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮೈ ತುಂಬಾ ಚಿನ್ನವನ್ನು ಹಾಕಿಕೊಂಡ ಗೋಲ್ಡ್ ಸುರೇಶ್, ಫೇಸ್‌ಬುಕ್ ಲಾಯರ್ ಜಗದೀಶ್, ಹಿಂದುತ್ವವಾದಿ ಚೈತ್ರಾ ಕುಂದಾಪುರ, ಹೀಗೆ ಭಿನ್ನ-ವಿಭಿನ್ನ ವ್ಯಕ್ತಿತ್ವದ ಸ್ಪರ್ಧಿಗಳನ್ನು ಬಿಗ್ ಬಾಸ್ 11ನೇ ಸೀಸನ್ ಮನೆಯೊಳಗೆ (bigg boss kannada season 11 grand opening) ಕಾಲ್ಟಿಟ್ಟಿದ್ದಾರೆ.

ಸ್ವರ್ಗ- ನರಕದ ಆಟಕ್ಕೆ ರೆಡಿಯಾದ ಕಂಟೆಸ್ಟೆಂಟ್ಸ್

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡು ಮನೆಗಳನ್ನು ಮಾಡಲಾಗಿದೆ. ಬಿಗ್‌ ಮನೆಗೆ ಗ್ರ್ಯಾಂಡ್ ವೆಲ್ಕಮ್ ಪಡೆದುಕೊಂಡ ಹದಿನೇಳು ಸ್ಪರ್ಧಿಗಳಲ್ಲಿ ಒಬ್ಬೊಬ್ಬರಾಗೆ ಸ್ವರ್ಗ- ನರಕದ ಆಟಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗಕ್ಕೆ ಭವ್ಯ, ಯಮುನಾ, ಧನರಾಜ್, ಗೌತಮಿ, ಧರ್ಮ ಕೀರ್ತಿ, ಲಾಯರ್ ಜಗದೀಶ್, ತ್ರಿವಿಕ್ರಮ್, ಹಂಸ, ಐಶ್ವರ್ಯ ಹಾಗೂ ಉಗ್ರಂ ಮಂಜು ಎಂಟ್ರಿ ಕೊಟ್ಟಿದ್ದಾರೆ. ಇನ್ನು ನರಕಕ್ಕೆ ಅನುಷಾ ರೈ, ಶಿಶಿರ್, ಮಾನಸ, ಗೋಲ್ಡ್ ಶಶಿ, ಚೈತ್ರ, ಮೋಕ್ಷಿತ ಹಾಗು ರಂಜಿತ್ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗ ಹಾಗೂ ನರಕದ ಆಟಕ್ಕೆ ಕಂಟೆಸ್ಟೆಂಟ್ಸ್ ತುದಿಗಾಲಲ್ಲಿ ನಿಂತಿದ್ದು, 17 ಜನ ಬಿಗ್ ಬಾಸ್ ಸ್ಪರ್ಧಿಗಳಲ್ಲಿ ನಾಲ್ವರು ದರ್ಶನ್ ಆಪ್ತರಾಗಿರುವುದು (bigg boss kannada season 11 timings) ವಿಶೇಷ.

ಬಿಗ್ ಬಾಸ್ ಸೀಸನ್ 10 ಕಾಂಟ್ರವರ್ಸಿ ಮೂಲಕವೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿತ್ತು. ಸೀಸನ್ 11 ಬಿಗ್ ಬಾಸ್ ವೀಕ್ಷಕರಿಗೆ ಬೆಟ್ಟದಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ ಅಂದರೆ ತಪ್ಪಾಗಲ್ಲ. ಹಲವು ಕಾಂಟ್ರವರ್ಸಿಗಳ ಮೂಲಕವೇ ಕಳೆದ ಸೀಸನ್ ಸ್ಪರ್ಧಿಗಳು ನೇಮ್ ಆ್ಯಂಡ್ ಫೇಮ್ ಗಿಟ್ಟಿಸಿಕೊಂಡಿದ್ದರು. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಇನ್ನೆಷ್ಟು ಕಾಂಟ್ರವರ್ಸಿ ಕ್ರಿಯೇಟ್ ಆಗುತ್ತೆ ಎಂದು ಬಿಗ್ ಬಾಸ್ ವೀಕ್ಷಕರು ಕಾಯ್ತಾ ಇದ್ದಾರೆ. ಇನ್ನು ದೊಡ್ಮನೆಯಲ್ಲಿರುವ ನಟ ದರ್ಶನ್‌ ಫಾಲೋವರ್ಸ್‌ನಿಂದ ಈ ಬಾರಿಯ ಬಿಗ್ ಬಾಸ್ ಸಖತ್ ಕಿಕ್ ಕೊಡಲಿದೆ ಎಂದು ಹೇಳಲಾಗುತ್ತಿದೆ.

ದೊಡ್ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್


ಹದಿನೇಳು ಸ್ಪರ್ಧಿಗಳಲ್ಲಿ ನಾಲ್ವರು ಕಂಟೆಸ್ಟೆಂಟ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ದರ್ಶನ್ ಅವರ ಹೆಸರನ್ನು ಹಗಲಿರುಳು ಜಪ ಮಾಡುವ ಈ ನಾಲ್ವರು, ಸುದೀಪ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ದೊಡ್ಮನೆಯಲ್ಲಿ ಹಿಂದೆಂದೂ ಈ ತರಹದ ಕಾಕತಾಳೀಯ ಆಗಿರಲಿಲ್ಲ. ಆದರೆ ಈ ಬಾರಿ ನಿಜವಾಗಿದೆ. ಆ ನಾಲ್ಕು ಜನ ಸ್ಪರ್ಧಿಗಳು ಪ್ರತಿನಿತ್ಯ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಜಪ ಮಾಡಿದರೂ ಕೂಡ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಕೆಲವು ದರ್ಶನ್ ಆಪ್ತರು ವೇದಿಕೆ ಮೇಲೆ ದಚ್ಚು ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಈ ನಾಲ್ವರಿಂದ ಬಿಗ್ ಬಾಸ್ ಮನೆಯಲ್ಲೂ ದರ್ಶನ್ ಬಗ್ಗೆ ಚರ್ಚೆಯಾಗುತ್ತಾ ಅಂತ ಬಿಗ್ ಬಾಸ್ ವೀಕ್ಷಕರಿಗೆ ಕುತೂಹಲ ಕ್ರಿಯೇಟ್ ಆಗಿದೆ.

ಮುಂದಿನ ನೂರು ದಿನಗಳವರೆಗೆ ದರ್ಶನ್ ವಿಚಾರ ಒಂಟಿ ಮನೆಯಲ್ಲಿ ಕೇಳಿ ಬಂದರೆ, ದರ್ಶನ್ ವಿಚಾರವನ್ನು ಸುದೀಪ್ ಗಮನಿಸಿ ವಾರಾಂತ್ಯದಲ್ಲಿ ಯಾವ ರೀತಿ ಮಾತನಾಡುತ್ತಾರೆ ಎಂಬುದು ಸದ್ಯ ಬಿಗ್ ಬಾಸ್ ವೀಕ್ಷಕರಲ್ಲಿ ಹಾಟ್ ಟಾಪಿಕ್ ಆಗಿ ಚರ್ಚೆಯಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version