ದೊಡ್ಡಬಳ್ಳಾಪುರ: ಬಿಬಿಎಂಪಿ ಕಸ ಸಾಗಿಸುವ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಮಾವಿನಕುಂಟೆ ಮೂಲದ ನಿವಾಸಿ ರಾಜು (30) ಮೃತ ದುರ್ದೈವಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ದೊಡ್ಡಬೆಳವಂಗಲ ಸಮೀಪದ ಕತ್ತಿಹೊಸಹಳ್ಳಿ ಬಳಿ ಬೈಕ್‌ಗೆ ಡಿಕ್ಕಿಯಾದ ಲಾರಿ ಪಲ್ಟಿಯಾಗಿದೆ.
ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಜ್ವರ ಬಂದರೆ ಸಾಫ್ಟ್‌ವೇರ್ ಇಂಜಿನಿಯರ್ ಬಳಿ ಹೋಗುವ BBMP: ಕಸದ ಲಾರಿ ಕುರಿತ ತಪಾಸಣೆ ನಾಟಕ