ಬೆಂಗಳೂರು: ನಗರದ ಕಾಮಾಕ್ಷಿಪಾಳ್ಯ ಬಳಿಯ ಸುಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಸುಮನಹಳ್ಳಿಯಿಂದ ಲಗ್ಗೆರೆಗೆ ತೆರಳುತ್ತ್ತಿದ್ದ ಬಸ್ಚಾ, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಇದರಿಂದ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಬಸ್ ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದರು. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಬಸ್ ಚಾಲಕ ಹಾಗೂ ಬಸ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮೃತ ಯುವಕನ ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ | Drowned | ಕೆರೆಯಲ್ಲಿ ಮುಳುಗಿದ್ದ ತಮ್ಮನ ಸಹಿತ ರಕ್ಷಣೆ ಮಾಡಲು ಹೋದ ಮೂವರು ಅಕ್ಕಂದಿರೂ ನೀರು ಪಾಲು!