ಬೆಂಗಳೂರು: ನಗರದಲ್ಲಿ ಪುಂಡರ ವ್ಹೀಲಿಂಗ್ ಶೋಕಿ ಇನ್ನೂ ನಿಂತಿಲ್ಲ. ಇತ್ತೀಚೆಗೆ ನಗರದ ವಿವಿ ಪುರಂ ಬಳಿಯ ಕಿಮ್ಸ್ ಕಾಲೇಜು ಮುಖ್ಯ ರಸ್ತೆಯಲ್ಲೇ ಯುವಕರು ವ್ಹೀಲಿಂಗ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಗೋರಿಪಾಳ್ಯದಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೆ, ವ್ಹೀಲಿಂಗ್ ಮಾಡಿಕೊಂಡು ಬಂದ ಯುವಕ ಗುದ್ದಿದ್ದ. ಇದರಿಂದ ಮಹಿಳೆಯ ತಲೆ, ಕೈಕಾಲುಗಳಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರ ಸಿಸಿಟಿವಿ ದೃಶ್ಯ ಎಲ್ಲೆಡೆ ಹರಿದಾಡಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ವ್ಹೀಲಿಂಗ್ ಮಾಡುತ್ತಾ ಭೀಕರವಾಗಿ ಪ್ರಾಣ ಕಳೆದುಕೊಂಡಿರುವ ಘಟನೆಗಳೂ ಆಗಿಂದಾಗ್ಗೆ ವರದಿಯಾಗುತ್ತಿರುತ್ತವೆ. ಇಷ್ಟಾದರೂ ವ್ಹೀಲಿಂಗ್ ಮಾಡುವವರು ಇನ್ನೂ ಬುದ್ಧಿ ಕಲಿತಿಲ್ಲ.
ಇದನ್ನೂ ಓದಿ | ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದವರ ಬಂಧನ
ಬೈಕ್ ಜತೆ ಸರ್ಕಸ್ ಮಾಡುತ್ತಾ, ಜನಸಂದಣಿಯಿರುವ ರಸ್ತೆಯಲ್ಲೇ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಟಾರ್ಚರ್ ಕೊಡುತ್ತಿದ್ದಾರೆ. ವಿವಿ ಪುರಂ ಹಾಗೂ ಬಸವನಗುಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿರ್ಲಕ್ಷ್ಯದಿಂದ ವ್ಹೀಲಿಂಗ್ ಮಾಡುತ್ತಿರುವ ಪುಂಡರ ಹಾವಳಿಗೆ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸಂಚಾರ ಪೊಲೀಸರು ಈ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ | ಸೋಮವಾರಪೇಟೆಯಲ್ಲಿ ಬೈಕ್, ಸ್ಕೂಟರ್ ಢಿಕ್ಕಿ: ಸಿಆರ್‌ಪಿಎಫ್ ಯೋಧನ ಸ್ಥಿತಿ ಗಂಭೀರ