Site icon Vistara News

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Biometric Attendance

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (Biometric Attendance) ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ. ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ದರ್ಶಿಗಳಿಗೆ ಸೂಚನ ನೀಡಿದ್ದಾರೆ.

ಇದನ್ನೂ ಓದಿ | Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

ಬೆಂಗಳೂರು: ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ (Cabinet meeting) ಸರಕಾರಿ ನೌಕರರ (Govt Employees) ವೇತನ ಹೆಚ್ಚಳದ (Salary Hike) ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಈ ಸಲವಾದರೂ ಏರಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ ನಿರಾಸೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ (guarantee Schemes) ಹೆಚ್ಚಿನ ಹಣ ಹರಿದುಹೋಗುತ್ತಿರುವುದರಿಂದ ಹಾಗೂ ವಿವಿಧ ಮೂಲಗಳಿಂದ ನಿರೀಕ್ಷಣ ಪ್ರಮಾಣದ ಹಣಕಾಸು (Finance) ಬರುತ್ತಿಲ್ಲವಾದ್ದರಿಂದ ಸದ್ಯ ನೌಕರರ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹಣಕಾಸು ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಸಚಿವ ಸಂಪುಟಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಿಎಸ್‌ಟಿ ಸೇರಿ, ವಿವಿಧ ಮೂಲಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಹರಿದುಹೋಗುತ್ತಿದೆ. ಹೀಗಾಗಿ ವೇತನ ಪರಿಷ್ಕರಣೆ ಸದ್ಯದ ಮಟ್ಟಿಗೆ ಸಾಧ್ಯವಾಗದು ಎಂದು ಅಧಿಕಾರಿಗಳು ಕಳೆದ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ವೇತನ ಪರಿಷ್ಕರಣೆ, ಹೊಸ ಪಿಂಚಣಿ ಯೋಜನೆಯಲ್ಲಿ ಇರುವವರನ್ನು ಹಳೇ ಪಿಂಚಣಿ ಯೋಜನೆಯ ವ್ಯಾಪ್ತಿಗೆ ತರಬೇಕು ಎನ್ನುವ ಬೇಡಿಕೆ ಸಹ ಈಡೇರಿಸಲು ಸಾಧ್ಯವಾಗದು. ಈ ಬೇಡಿಕೆ ಈಡೇರಿಸಿದರೆ ಪ್ರತಿ ತಿಂಗಳು ವಿವಿಧ ಬಾಬುಗಳಿಗೆ ಹಣವನ್ನು ಹೊಂದಿಸಲು ಕಷ್ಟ ಆಗಬಹುದು ಎಂದು ಅಧಿಕಾರಿಗಳ ತಂಡ ಸಂಪುಟ ಸದಸ್ಯರಿಗೆ ವಿವರಿಸಿದೆ.

ಹಣದ ಕೊರತೆ ಇದೆ ಎಂದ ಮಾತ್ರಕ್ಕೆ ವೇತನ ಪರಿಷ್ಕರಣೆ ಮಾಡದೇ ಇರಲು ಸಾಧ್ಯವಿಲ್ಲ. ತಕ್ಷಣಕ್ಕೆ ಆಗದೇ ಇದ್ದರೂ ಮುಂದೆ ಮಾಡಲೇಬೇಕಾಗುತ್ತದೆ ಎಂದು ಆರ್ಥಿಕ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಶೇ 27.50ರಷ್ಟು ಫಿಟ್‌ಮೆಂಟ್‌ಗೆ ಶಿಫಾರಸು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾಗಿದ್ದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಆಯೋಗ 244 ಪುಟಗಳ ವರದಿಯನ್ನು ಮಾರ್ಚ್ 16ರಂದು ಮುಖ್ಯಮಂತ್ರಿಗೆ ಸಲ್ಲಿಸಿತ್ತು. ಏಳನೇ ವೇತನ ಆಯೋಗವು ಶೇ. 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಶಿಫಾರಸು ಮಾಡಿತ್ತು. ಶಿಫಾರಸು ಮಾಡಿದ ದಿನದಿಂದಲೇ ಚುನಾವಣೆಯ ನೀತಿ ಸಂಹಿತೆ ಆರಂಭವಾದ ಕಾರಣ ಶಿಫಾರಸು ಜಾರಿ ಸಾಧ್ಯವಾಗಿರಲಿಲ್ಲ. ಈಗ ನೀತಿ ಸಂಹಿತೆ ಮುಗಿದು ತಿಂಗಳು ಕಳೆದರೂ ಕ್ರಮ ಕೈಗೊಂಡಿಲ್ಲ ಎನ್ನುವುದು ನೌಕರರ ಆರೋಪ.

Exit mobile version