ʼದಲಿತ ವಿರೋಧಿ ಕಾಂಗ್ರೆಸ್‌ʼ: ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನದಂದು ದಾಳಿ ನಡೆಸಿದ ಬಿಜೆಪಿ - Vistara News

ಬೆಂಗಳೂರು

ʼದಲಿತ ವಿರೋಧಿ ಕಾಂಗ್ರೆಸ್‌ʼ: ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನದಂದು ದಾಳಿ ನಡೆಸಿದ ಬಿಜೆಪಿ

ದಲಿತ ಮತಗಳನ್ನು ಪಡೆದುಕೊಳ್ಳಲು ಇತ್ತೀಚೆಗಷ್ಟೆ ಎಸ್‌ಸಿಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ, ಒಬಿಸಿ ಸಮಾವೇಶಗಳನ್ನು ನಡೆಸಿರುವ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

VISTARANEWS.COM


on

bjp-blames-congress-on-ambedkar-parinirvana-day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದಂದು ಕಾಂಗ್ರೆಸ್‌ ನಾಯಕರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದರೆ ಇತ್ತ ಕಾಂಗ್ರೆಸ್‌ ವಿರುದ್ಧವೇ ಬಿಜೆಪಿ ದಾಳಿ ನಡೆಸಿದೆ. ದಲಿತ ವಿರೋಧಿ ಕಾಂಗ್ರೆಸ್‌ ಎಂದು ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ಬರಹವನ್ನು ರಾಜ್ಯ ಬಿಜೆಪಿ ಪ್ರಕಟಿಸಿದೆ.

ದಲಿತ ಮತಗಳನ್ನು ತನ್ನತ್ತ ಸೆಳೆಯಲು ಎಲ್ಲ ಕಸರತ್ತನ್ನೂ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್‌ ಪಕ್ಷವೇ ಅಂಬೇಡ್ಕರ್‌ ಅವರಿಗೆ ಅನ್ಯಾಯ ಮಾಡಿದ್ದು ಎಂಬುದಾಗಿ ಪ್ರಕಟಣೆ ಹೊರಡಿಸಿದೆ.

ಬಾಬಾ ಸಾಹೇಬರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯದ ಇತಿಹಾಸ ಎಂದು ಹೇಳಿರುವ ಬಿಜೆಪಿ, ಅಂಬೇಡ್ಕರ್‌ ಅವರನ್ನು ಚುನಾವಣೆಗಳಲ್ಲಿ ಸೋಲಿಸಿದರು, ಅಂಬೇಡ್ಕರ್‌ ಅಂತ್ಯಸಂಸ್ಕಾರಕ್ಕೆ ಭೂಮಿ ನೀಡಲು ನಿರಾಕರಿಸಿದರು, ಅಂಬೇಡ್ಕರ್‌ ಅವರನ್ನು ಬಿಟ್ಟು, ತಮಗೆ ತಾವೇ ಭಾರತ ರತ್ನ ಘೋಷಿಸಿಕೊಂಡರು, ತುರ್ತುಪರಿಸ್ಥಿತಿ ಹೇರಿ ಸಂವಿಧಾನದ ಆಶಯಕ್ಕೆ ಕೊಳ್ಳಿ ಇಟ್ಟರು ಎಂದು ತಿಳಿಸಿದೆ.

ಮುಂಬಯಿ ನಾರ್ಥ್ ಸೆಂಟ್ರಲ್‌ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಕುತಂತ್ರದಿಂದ ಸೋಲಿಸಿದ್ದು ಇದೇ ಕಾಂಗ್ರೆಸ್. ‌ಆದರೆ ಈಗ ತನ್ನ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅದೇ‌ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದೆ.

ಕಾಂಗ್ರೆಸ್ ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್‌ನ್ನು‌ ತ್ಯಜಿಸಿದ್ದು. “ಕಾಂಗ್ರೆಸ್‌ ಸೇರುವುದೆಂದರೆ, ಅದು ಆತ್ಮಹತ್ಯೆ ಮಾಡಿಕೊಂಡಂತೆ” ಎಂಬ ಅಂಬೇಡ್ಕರ್ ಮಾತು ಇಲ್ಲಿ ಉಲ್ಲೇಖಾರ್ಹ. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತ ಎಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು.

ನೆಹರೂ ಸಮಾಧಿಗೆ 52 ಎಕರೆಗೂ ಹೆಚ್ಚು ಜಾಗ ಕೊಟ್ಟ ಕಾಂಗ್ರೆಸ್‌ಗೆ ಡಾ. ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ 6 ಅಡಿ ಜಾಗವನ್ನು ದೆಹಲಿಯಲ್ಲಿ ಬೇಕಂತಲೇ ಕೊಡಲಿಲ್ಲ. ದೇಶದ ಬಡವರಿಗೆ ಬದುಕುವ ಹಕ್ಕು ಕೊಟ್ಟ ಅಂಬೇಡ್ಕರರಿಗೆ ಕಾಂಗ್ರೆಸ್ ಅಂತಿಮ ಸಂಸ್ಕಾರವನ್ನು ಗೌರವದಿಂದ ನಡೆಸಲೂ ಬಿಡದೆ ಅವಮಾನಿಸಿದ್ದನ್ನು ಜನ ಮರೆತಿಲ್ಲ.

ಸಂವಿಧಾನ ಶಿಲ್ಪಿ ಅಂಬೇಡ್ಕರರಿಗೆ ಭಾರತ ರತ್ನ ನೀಡಲು ಕಾಂಗ್ರೆಸ್‌ ಹಿಂದೆ ಮುಂದೆ ನೋಡಿತ್ತು, ಆದರೆ ಅದಾಗಲೇ ನೆಹರೂ, ಇಂದಿರಾ ಗಾಂಧಿ ತಮಗೆ ತಾವೇ ಭಾರತ ರತ್ನಕ್ಕೆ ಕೊರಳೊಡ್ಡಿದ್ದರು! ಇಂಥ ಸಮಯದಲ್ಲೂ ಸಂವಿಧಾನ ಕೊಟ್ಟವರ ನೆನಪೂ ಆಗದ ಕಾಂಗ್ರೆಸ್‌ಗೆ ಈಗ ಅಂಬೇಡ್ಕರ್ ಜಪ ಕೇವಲ ಆಷಾಡಭೂತಿತನ ಅಷ್ಟೇ.

ಅಂಬೇಡ್ಕರ್ ಕರ್ನಾಟಕದಲ್ಲಿ ಭೇಟಿ ನೀಡಿದ 10 ಪ್ರಮುಖ ಸ್ಥಳಗಳ ಅಭಿವೃದ್ಧಿಗೆ 70 ವರ್ಷಗಳಲ್ಲಿ ಕಾಂಗ್ರೆಸ್ ಮುಂದಾಗಲಿಲ್ಲ, ಬಿಜೆಪಿ ಬರಬೇಕಾಯಿತು‌. ಅತೀ ಹೆಚ್ಚು ದಲಿತರ ಗೆಲ್ಲಿಸಿ ಕೇಂದ್ರ ಸಂಪುಟದಲ್ಲಿರಿಸಿದ್ದು ಬಿಜೆಪಿ. 70 ವರ್ಷ ದಲಿತರ ಮೀಸಲು ಹೆಚ್ಚಳ ಮಾಡಲಿಲ್ಲ, ಬಿಜೆಪಿಯೇ ಬಂದು ಮೀಸಲು ಕೊಡಬೇಕಾಯ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರ ವಿಧಿ ತೆಗೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಂದೇ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರ ಆಶಯವನ್ನು ಗೌರವಿಸದೇ ಆರ್ಟಿಕಲ್ 370 ರ ವಿಧಿಯನ್ನು 70 ವರ್ಷ ಮುಂದುವರಿಸಿದರು. ಬಾಬಾ ಸಾಹೇಬರ ಆ ಆಶಯವನ್ನು ನನಸು ಮಾಡಿದ್ದು ಮೋದಿ ಸರ್ಕಾರ.

ಮೋದಿ‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರಿಗೆ ಸಂಬಂಧಿಸಿದ ಪ್ರಮುಖ 5 ಸ್ಥಳಗಳನ್ನು ಪಂಚತೀರ್ಥ ಎಂಬ ಹೆಸರಿನಲ್ಲಿ ಅಭಿವೃದ್ಧಿ ಮಾಡಿದೆ. ಅರ್ಥಪೂರ್ಣವಾದ ಸಂವಿಧಾನ ದಿನಾಚರಣೆ ಜಾರಿಗೆ ತಂದಿದೆ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ | ಅಂಬೇಡ್ಕರ್​ ಮಹಾ ಪರಿನಿರ್ವಾಣ ದಿನ; ಸಂಸತ್​ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Rave Party: ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

VISTARANEWS.COM


on

rave party electronic city
Koo

ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿವೆ. ಜೊತೆಗೆ ಪಾರ್ಟಿಯಲ್ಲಿ ಆಂಧ್ರ ಮತ್ತು ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದುದು ತಿಳಿದುಬಂದಿದೆ. ಡ್ರಗ್ಸ್‌ ಬಳಕೆ ಮತ್ತಿತರ ವಿಚಾರಗಳ ಬಗ್ಗೆ ಇವರನ್ನು ಪ್ರಶ್ನಿಸಲಾಗುತ್ತಿದೆ.

ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಕಂಡುಬಂದರು. ಇವರು ಆಹ್ವಾನಿತರಾಗಿ ಪಾರ್ಟಿಯಲ್ಲಿ ಭಾಗವಹಿಸಲು ಬಂದರೇ ಅಥವಾ ದುಡ್ಡು ನೀಡಿ ಕರೆಸಲಾಯಿತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇವರಲ್ಲಿ ಹಲವರು ತೆಲುಗು ನಟಿಯರು ಎಂದು ಗೊತ್ತಾಗಿದೆ. ಬಂದವರಲ್ಲಿ ಹೆಚ್ಚಿನವರು ಕೂಡ ತೆಲುಗಿನವರು.

ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

ಕಾನ್‌ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬವರ ಮಾಲಿಕತ್ವದ ಫಾರ್ಮ್ ಹೌಸ್‌ನಲ್ಲಿ ಇದು ನಡೆದಿದ್ದು, ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿಗೆ ಆಂಧ್ರಪ್ರದೇಶದಿಂದ ಫ್ಲೈಟ್‌ನಲ್ಲಿ ಹಲವರನ್ನು ಕರೆಸಿಕೊಂಡಿದ್ದ. ಒಂದು ಬೆಂಜ್ ಕಾರಿನಲ್ಲಿ ಆಂಧ್ರಪ್ರದೇಶದ ಎಂಎಲ್ಎ ಒಬ್ಬರ ಪಾಸ್ ಪತ್ತೆಯಾಗಿದೆ. ಎಂಎಲ್ಎ ಕಾಕನಿ ಗೋವರ್ಧನ ರೆಡ್ಡಿ ಎಂಬವರ ಹೆಸರಿನ ಪಾಸ್ ಕಂಡುಬಂದಿದೆ.

ಪಾರ್ಟಿ ಸ್ಥಳದಲ್ಲಿ ಹದಿನೈದಕ್ಕೂ ಹೆಚ್ಚು ವಿಲಾಸಿ ಕಾರುಗಳು ಪತ್ತೆಯಾಗಿವೆ. ದುಬಾರಿ ಮರ್ಸಿಡಿಸ್‌ ಬೆಂಜ್, ಜಾಗ್ವಾರ್, ಆಡಿ ಕಾರುಗಳಲ್ಲಿ ಕುಬೇರರು ಬಂದಿದ್ದುದು ಗೊತ್ತಾಗಿದೆ. ಸನ್ ಸೆಟ್ ಟು ಸನ್ ರೈಸ್ ಪಾರ್ಟಿ ಎಂದು ಆಯೋಜಿಸಲಾಗಿತ್ತು. ಭಾನುವಾರ ಸಂಜೆ ಐದು ಗಂಟೆಯಿಂದ ಬೆಳಗ್ಗೆ ಆರು ಗಂಟೆ ತನಕ ಪಾರ್ಟಿ ನಡೆಸಲು ಉದ್ದೇಶಿಸಲಾಗಿತ್ತು.

ನಗರದ ಒಳಭಾಗದಲ್ಲಿ ಸಿಸಿಬಿ ಪೊಲೀಸರು ಇಂಥ ಪಾರ್ಟಿಗಳ ಮೇಲೆ ನಿರಂತರ ನಿಗಾ ಇಟ್ಟಿದ್ದು, ದಾಳಿಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ನಗರದ ಹೊರ ವಲಯದಲ್ಲಿ ಕಳ್ಳತನದಿಂದ ಪಾರ್ಟಿ ಆಯೋಜಿಸಲಾಗಿದೆ. ಇಂಥ ಒಂದು ದಿನದ ಪಾರ್ಟಿಗೆ ಮೂವತ್ತರಿಂದ ಐವತ್ತು ಲಕ್ಷ ಖರ್ಚು ಮಾಡಲಾಗುತ್ತದೆ. ಪಾರ್ಟಿಯಲ್ಲಿ ಡಿಜೆಗಳು, ಮಾಡೆಲ್‌ಗಳು ಹಾಗು ಟೆಕ್ಕಿಗಳು ಪತ್ತೆಯಾಗಿದ್ದಾರೆ. ಡಿಜೆಗಳಾದ RABZ, KAYVEE ಮತ್ತು BLOODY MASCARA ಎಂಬವರು ಭಾಗಿಯಾಗಿದ್ದಾರೆ. ಎಲ್ಲರನ್ನೂ ಪ್ರಶ್ನಿಸಲಾಗುತ್ತಿದೆ. ನಾರ್ಕೊಟಿಕ್ಸ್ ಸ್ನಿಫರ್ ಡಾಗ್‌ಗಳಿಂದ ಸ್ಥಳ ಪರಿಶೀಲನೆ ನಡೆಯುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರು ಎಲ್ಲರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Dangerous Bike Stunt: ಬೆಂಗಳೂರಿನಲ್ಲಿ ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Dangerous Bike Stunt
Koo

ಬೆಂಗಳೂರು: ನಗರದಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ (Dangerous Bike Stunt) ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ಯುವಕ ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಚಾಲನೆ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಇದರಿಂದ ಬೈಕ್ ನಂಬರ್ ಪ್ಲೇಟ್ ಅಧರಿಸಿ ಸಿಲಂಬರಸನ್‌ನನ್ನು ಪೊಲೀಸರು ಬಂಧಿಸಿ, ಡಿಎಲ್ ರದ್ದು ಮಾಡಲು ಆರ್‌ಟಿಒಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್!

yelahanka flyover

ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಅದೇ ರೀತಿ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿತ್ತು.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ನಂತರ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿತ್ತು. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Continue Reading

ಕರ್ನಾಟಕ

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Bengaluru Rain: ಧಾರಾಕಾರ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

VISTARANEWS.COM


on

Bengaluru Rain
ಭಾರಿ ಮಳೆಯಿಂದ ದೇವನಹಳ್ಳಿ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು
Koo

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರವೂ ಮಳೆ ಆರ್ಭಟ (Bengaluru Rain) ಮುಂದುವರಿಯಿತು. ನಗರದ ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ಚಿಕ್ಕಪೇಟೆ, ಮೆಜೆಸ್ಟಿಕ್, ಯಲಹಂಕ, ಯಶವಂತಪುರ, ಲಗ್ಗೆರೆ, ರಾಜಾಜಿನಗರದಲ್ಲಿ ಭಾರಿ ಮಳೆಯಾಯಿತು. ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ.ಆರ್.ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ.ಆರ್.ಪುರ ಕಡೆಗೆ ನಿಧಾನಗತಿಯ ವಾಹನ ಸಂಚಾರ ಕಂಡುಬಂದಿತು.

ಇನ್ನು ಪೈಪ್‌ಲೈನ್ ಮುಖ್ಯ ರಸ್ತೆಯ ಕಮಲಾ ನಗರದಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ರಸ್ತೆಗಳು ಜಲಾವೃತವಾಗಿದ್ದರಿಂದ ರಾಮಮೂರ್ತಿ ನಗರ – ಟಿನ್ ಫ್ಯಾಕ್ಟರಿ ರಸ್ತೆ, ಸಂಜಯನಗರ ಕ್ರಾಸ್ – ವಿಮಾನ ನಿಲ್ದಾಣ ರಸ್ತೆ, ಹುಣಸಮಾರನಹಳ್ಳಿ ಸರ್ವಿಸ್ ರಸ್ತೆ, ಬಿಇಎಲ್‌ನಿಂದ ಹೆಬ್ಬಾಳ ಮಾರ್ಗ, ಅನಿಲ್ ಕುಂಬ್ಳೆ ಜಂಕ್ಷನ್-ಬಿಆರ್ವಿ ಜಂಕ್ಷನ್ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಕೆರೆಯಂತಾದ ದೇವನಹಳ್ಳಿಯ ಸರ್ಕಲ್

ದೇವನಹಳ್ಳಿ: ಪಟ್ಟಣದ ಸುತ್ತಮುತ್ತಲ ಪ್ರದೇಶದಲ್ಲಿ ಧಾರಕಾರ ಮಳೆ ಸುರಿದಿದೆ. ನಿರಂತರ ಒಂದು ಗಂಟೆ ಸುರಿದ ಮಳೆಗೆ ಪಟ್ಟಣದ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು. ಸುಮಾರು ಮೂರು ಅಡಿಗಿಂತ ಹೆಚ್ಚು ನೀರು ನಿಂತಿದ್ದರಿಂದ ವಾಹನ ಸವಾರರು ಮುಂದೆ ಹೋಗಲು ಹೈರಾಣಾದರು.

ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ

ಆನೇಕಲ್: ಬೆಂಗಳೂರು ನಗರ ಹೊರವಲಯದ ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ ಕಂಡುಬಂತು. ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ | Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ರಾಜ್ಯದ 17 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, 17 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು

ಕೊಪ್ಪಳ: ಸಿಡಿಲು ಬಡಿದು (Lightning strike) ರೈತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ. ಉತ್ತಮ ಮಳೆ (Rain News) ಹಿನ್ನೆಲೆಯಲ್ಲಿ ಜಮೀನಿನಲ್ಲಿ ಬಿತ್ತನೆ ಸಲುವಾಗಿ ಕೃಷಿ ಚಟುವಟಿಕೆ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಈಶಪ್ಪ ಕಳಮಳ್ಳಿ (40) ಮೃತ ರೈತ.

ಮಳೆ ಬಂದ ಖುಷಿಯಲ್ಲಿ ಎತ್ತುಗಳೊಂದಿಗೆ ರೈತ ಭೂಮಿ ಹದ ಮಾಡುತ್ತಿದ್ದ. ಈ ವೇಳೆ ಸಿಡಿಲು ಬಡಿದು ರೈತ ಈಶಪ್ಪ ಕಳಮಳ್ಳಿ ಮೃತಪಟ್ಟಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ರೈತನ ಸಹೋದರ ಪಾರಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಡಿಲು ಬಡಿದು ಯುವಕನಿಗೆ ಗಂಭೀರ ಗಾಯ

ಧಾರವಾಡ: ಸಿಡಿಲು ಬಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮುಗದ ಗ್ರಾಮದ ಕೆರೆ ಬಳಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಸಿಡಿಲು ಸಹಿತ ಮಳೆ ವೇಳೆ ಅವಘಡ ನಡೆದಿದೆ. ದಡ್ಡಿಕಮಲಾಪುರ ಗ್ರಾಮದ ನಿವಾಸಿ ರವಿ ಕೊರಮಡ್ಡಿ ಗಾಯಾಳು. ಇದೆ ವೇಳೆ ಸಿಡಿಲಿಗೆ ಎಮ್ಮೆ ಕರು ಬಲಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Continue Reading
Advertisement
rave party electronic city
ಕ್ರೈಂ25 mins ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ26 mins ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ52 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ2 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ2 hours ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Dina Bhavishya
ಭವಿಷ್ಯ3 hours ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ8 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ8 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ8 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ9 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ17 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ18 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌