ಬೆಂಗಳೂರು: ಮತದಾರರ ಮಾಹಿತಿ ಕಳವು ಮಾಡಲಾಗುತ್ತಿದೆ ಎಂದುಚಿಲುಮೆ ಸಂಸ್ಥೆ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ದಾಳಿ ನಡೆಸಿದ್ದ ಬೆನ್ನಿಗೇ ಇದೀಗ ಕಾಂಗ್ರೆಸ್ ವಿರುದ್ಧ ದತ್ತಾಂಶ ಕಳವು ಆರೋಪವನ್ನು ಬಿಜೆಪಿ ಮಾಡಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ದೂರು ನೀಡಿದ್ದಾರೆ. ನಂತರ ಮಾತನಾಡಿದ ಅಶ್ವತ್ಥನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ನಿರ್ದೇಶನ ಮೇರೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಕೆಲವು ಉಚಿತ ಯೋಜನೆ ಗಳ ಬಗ್ಗೆ ದೂರು ನೀಡಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಉಚಿತ ಯೋಜನೆ ಆಮಿಷ ಒಡ್ಡುವ ಕೆಲಸ ಮಾಡ್ತಿದ್ದಾರೆ. ಮತದಾರರ ವೋಟರ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಕಲೆಕ್ಟ್ ಮಾಡ್ತಿದ್ಸಾರೆ. ಈ ರೀತಿ ಅಕ್ರಮವಾಗಿ ಹಲವೆಡೆ ಮಾಡ್ತಿದ್ದಾರೆ. ಅಲ್ಲದೆ ಫೋನ್ ಪೇ, ಗೂಗಲ್ ಪೇ ನಂಬರ್ ಗಳನ್ನು ಕೂಡ ಕಲೆಕ್ಟ್ ಮಾಡ್ತಿದ್ಸಾರೆ.
ಮತದಾರರ ವೈಯಕ್ತಿಕ ವಿವರಗಳನ್ನು ಕೇಳೋಕೆ ಯಾರಿಗೂ ಹಕ್ಕು ಇರಲ್ಲ. ಆದರೆ ಕಾಂಗ್ರೆಸ್ ನಾಯಕರು ಚುನಾವಣೆ ನಾಟಕ ಮಾಡ್ತಿದ್ದಾರೆ. ರಾಹುಲ್ ಗಾಂಧಿ ಇಂದು ನಾಲ್ಕನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇವರಿಗೆ ಬೇರೆ ರಾಜ್ಯಗಳಲ್ಲಿ ಇದನ್ನು ಮಾಡಲಿಕ್ಕೆ ಆಗಿಲ್ಲ. ಚುನಾವಣೆ ಪೂರ್ವದಲ್ಲಿ ಬಂದು ಸುಳ್ಳು ಆಶ್ವಾಸನೆ ಕೊಡ್ತಿದ್ದಾರೆ. ಅದಕ್ಕಾಗಿ ಇದರ ಬಗ್ಗೆ ಕ್ರಮ ಆಗಬೇಕೆಂದು ಚುನಾವಣಾ ಆಯುಕ್ತರಿಗೆ ದೂರು ಕೊಟ್ಟಿದ್ದೇವೆ.
ಆಯುಕ್ತರು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಕೊಡೋದಾಗಿ ಭರವಸೆ ಕೊಟ್ಟಿದ್ದಾರೆ. ಗೂಗಲ್ ಪೇ,ಫೋನ್ ಪೇ ಮೂಲಕ ಮತದಾರರರಿಗೆ ಹಣ ತಲುಪಿಸುವ ಕೆಲಸ ಮಾಡ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮತ ಸೆಳೆಯಲು ಅಕ್ರಮವಾಗಿ ಮತದಾರರ ಹಣದ ಆಮೀಷ ಕಟ್ಟಲು ಸಂಚು ರೂಪಿಸಿದ್ದಾರೆ ಎಂದರು.