Site icon Vistara News

BJP Karnataka : ಬಿಜೆಪಿ ಕಾರ್ಯಕಾರಿಣಿ ಆರಂಭ; 28ಕ್ಕೆ 28 ಗೆಲ್ಲಲೇ ಬೇಕು ಎಂದ ಬಿಎಸ್‌ವೈ

BJP Karnataka BS Yediyurappa

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಗೆ (Parliament Election 2024) ಸಿದ್ಧವಾಗುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ (BJP State Executive Meeting) ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರಂಭವಾಗಿದೆ (BJP Karnataka). ಕೇಂದ್ರ ಸಚಿವ ಭೂಪೇಂದ್ರ ಯಾದವ್, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.‌ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ಇತರ ನಾಯಕರು ಭಾಗವಹಿಸಿದ್ದಾರೆ. ವೇದಿಕೆಯ ಮೇಲೆ ಇಟ್ಟ ಶ್ರೀರಾಮ ಚಂದ್ರನ ಕಂಚಿನ ಮೂರ್ತಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಕಾರ್ಯಕಾರಿಣಿ ಸಭೆಯ ಉದ್ಘಾಟನೆ ನಡೆಯಿತು. ನಾಯಕರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

BJP Karnataka BJP Executive Meet

BJP Karnataka: ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ: ಯಡಿಯೂರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು, ಮುಂದಿನ ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಹೇಳಿದರು.

2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಹೇಳಿದರು.

BJP Karnataka BJP Executive Meet

ಜನರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಕಲಹದಲ್ಲಿ ತೊಡಗಿದೆ. ಇವರ ಕಚ್ಚಾಟದಿಂದ ಅಧಿಕಾರ ಕುಸಿದುಬಿದ್ದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದರು. ಇದರ ನಡುವೆಯೂ ಅವರು ದುರ್ಮಾರ್ಗದಲ್ಲಿ ಮತ ಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ಮನವರಿಕೆ ಮಾಡಿಕೊಡುವ ಸವಾಲು ನಮ್ಮ ಮುಂದಿದೆ ಎಂದು ತಿಳಿಸಿದರು.

BJP Karnataka BJP Executive Meet

ಜನರು ಈ ಸರಕಾರದ ಬಗ್ಗೆ ಬೇಸತ್ತು ಹಿಡಿಶಾಪ ಹಾಕುತ್ತಿದ್ದಾರೆ. ಈ ಸರಕಾರಕ್ಕೆ ಬರಗಾಲದಲ್ಲಿ ರೈತರ ಕಣ್ಣೀರು ಒರೆಸಲು ಆಗಿಲ್ಲ. ಹೆಣ್ಮಕ್ಕಳ ಮಾನ ರಕ್ಷಿಸಲು ಸಾಧ್ಯವಾಗಿಲ್ಲ. ಅರಾಜಕತೆ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇದೆಲ್ಲವನ್ನು ನೋಡುತ್ತ ಸುಮ್ಮನಿರಲು ಅಸಾಧ್ಯ. ಜನರ ಪರವಾಗಿ, ರಾಜ್ಯದ ಪರವಾಗಿ ನಿಂತು ಹೋರಾಟ ಮಾಡೋಣ ಎಂದು ತಿಳಿಸಿದರು.

ಬಿಜೆಪಿಗೆ ಜಗದೀಶ ಶೆಟ್ಟರ್ ಸೇರಿದ್ದು, ನಮಗೊಂದು ದೊಡ್ಡ ಶಕ್ತಿಯನ್ನು ಕೊಟ್ಟಿದೆ. ಅವರಿಗೆ ವಿಶೇಷ ಸ್ವಾಗತ ಎಂದರು. ನೂತನ ರಾಜ್ಯ, ಜಿಲ್ಲಾ ಪದಾಧಿಕಾರಿಗಳನ್ನು ಅವರು ಅಭಿನಂದಿಸಿದರು.

BJP Karnataka BJP Executive Meet

BJP Karnataka: ಕಾರ್ಯಕಾರಿಣಿಯಲ್ಲಿ ಮಿಂಚಿದ ಜಗದೀಶ್‌ ಶೆಟ್ಟರ್‌

ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಇದಾಗಿದ್ದು, ಇದಕ್ಕೆ ಎರಡು ದಿನಗಳ ಹಿಂದಷ್ಟೇ ಮರಳಿ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕೂಡಾ ಆಗಮಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿದ್ದಂತೆಯೇ ಶಾಸಕರು ಮತ್ತು ಕಾರ್ಯಕರ್ತರು ಅವರನ್ನು ಅಭಿನಂದಿಸಲು ಮುಗಿಬಿದ್ದರು. ಶಾಸಕ ಪ್ರಭು ಚೌಹಾಣ್, ಶರಣು ಸಲಗಾರ್ ಅವರು ಶೆಟ್ಟರ್‌ ಕಾಲಿಗೆ ಬಿದ್ದರು. ಶೆಟ್ಟರ್ ಜೊತೆಯಲ್ಲಿ ಶಿಷ್ಯ ಶಂಕರ್ ಪಾಟೀಲ್ ಮುನೇನಕೊಪ್ಪ ಕೂಡಾ ಇದ್ದರು.

ಇದನ್ನೂ ಓದಿ: BJP Karnataka: ಫೆ.9ರಿಂದ ಗ್ರಾಮ ಚಲೋ ಅಭಿಯಾನ; ಹೇಗಿರಲಿದೆ ಕಾರ್ಯತಂತ್ರ?

BJP Karnataka: ಯಾರೆಲ್ಲ ಪ್ರಮುಖ ನಾಯಕರು ಭಾಗಿ

ರಾಜ್ಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್. ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಮಾಜಿ ಡಿಸಿಎಂಗಳಾದ ಈಶ್ವರಪ್ಪ, ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಮಾಜಿ ಸಚಿವ ಸಿ.ಟಿ ರವಿ ಭಾಗವಹಿಸಿದ್ದಾರೆ.

BJP Karnataka BJP Executive Meet

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ ಅವರೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ನಿಕಟ ಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಉಪಸ್ಥಿತರಿದ್ದಾರೆ.

Exit mobile version