ಬೆಂಗಳೂರು: ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್‌ನ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚೇತನ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಗುರುವಾರ ಸಂಜೆ 7 ಗಂಟೆ ಸುಮಾರಿಗೆ ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದ್ದು, ಕುಟುಂಬದವರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ರಾಜಗೋಪಾಲನಗರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.