Site icon Vistara News

Blackmail Case: ಸಹಪಾಠಿಯಿಂದ 35 ಲಕ್ಷ ರೂ. ಚಿನ್ನಾಭರಣ ದೋಚಿದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರ ಬಂಧನ

Blackmail Case

ಬೆಂಗಳೂರು: ಸಹಪಾಠಿಗೆ ಬ್ಲ್ಯಾಕ್ ಮೇಲ್ (Blackmail Case) ಮಾಡಿ 35 ಲಕ್ಷ ರೂ.ಮೌಲ್ಯದ 700 ಗ್ರಾಂ ಚಿನ್ನಾಭರಣ ದೋಚಿದ ಆರೋಪದಲ್ಲಿ ನಗರದ ಖಾಸಗಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸಿಬಿಎಸ್ ವೃತ್ತದ ನಿವಾಸಿ ಎಸ್.ಸುನಿಲ್ (30), ಆರ್.ಆರ್.ನಗರದ ವೇಮನ್ ಎನ್, ಕೆಂಗೇರಿ ಸ್ಯಾಟಲೈಟ್ ಟೌನ್ನ ಆರ್.ವಿವೇಕ್ (19) ಬಂಧಿತ ಆರೋಪಿಗಳು. ಇವರು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಾಲಾಪರಾಧಿಗಳ ಆರೈಕೆಯಲ್ಲಿ ಇರಿಸಲಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಿವಿಲ್ ಗುತ್ತಿಗೆದಾರ ಮತ್ತು ಪಶ್ಚಿಮ ಬೆಂಗಳೂರಿನ ನಿವಾಸಿಯೊಬ್ಬರ ಮಗನನ್ನು ಆರು ತಿಂಗಳಿನಿಂದ ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ 400 ಗ್ರಾಂ ಚಿನ್ನಾಭರಣ ಹಾಗೂ 23 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಇನ್ನು ವಜ್ರದ ಹಾರವನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ಆರ್.ಆರ್.ನಗರ ಪೊಲೀಸರು ತಿಳಿಸಿದ್ದಾರೆ.

ಬಾಲಕನ ತಂದೆ 2 ವಾರಗಳ ಹಿಂದೆ ನೀಡಿದ ದೂರಿನಲ್ಲಿ, ತನ್ನ ಮಗ ಆನ್‌ಲೈನ್‌ ಗೇಮ್‌ಗಳಿಗೆ ವ್ಯಸನಿಯಾಗಿದ್ದಾನೆ. ಅದರ ಲಾಭವನ್ನು ಹುಡುಗನ ಸಹಪಾಠಿಗಳು ಪಡೆದುಕೊಂಡು, ಅವನನ್ನು ಬ್ಲ್ಯಾಕ್‌ ಮೇಲ್ ಮಾಡಿ, ಆನ್‌ಲೈನ್‌ ಗೇಮ್‌ ಬಗ್ಗೆ ಕುಟುಂಬಕ್ಕೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಮಗ ಹೆದರಿ, ಚಿನ್ನದ ಆಭರಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಸಹಪಾಟಿಗಳಿಗೆ ಹಸ್ತಾಂತರಿಸಿದ್ದಾನೆ.

ಇದನ್ನೂ ಓದಿ | Assault Case: ಶವದ ಮುಂದೆ ಎರಡು ಗುಂಪುಗಳ ಹೊಡಿಬಡಿ; 12 ಮಂದಿ ಅರೆಸ್ಟ್‌

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಎರಡನೇ ಮಗಳು ಮತ್ತು ಆಕೆಯ ಪತಿಗೆ ಸೇರಿದ ವಸ್ತುಗಳು ಕಾಣೆಯಾದಾಗ ಕಳ್ಳತನ ಬೆಳಕಿಗೆ ಬಂದಿದ್ದರಿಂದ, ಬಾಲಕನ ತಂದೆ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

ಕಲಬುರಗಿ: ಕಳೆದ ಜನವರಿಯಲ್ಲಿ ಕಲಬುರಗಿ ನಗರದ (Kalaburagi News) ಕೊಟನೂರ (ಡಿ) ಬಡಾವಣೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ (Ambedkar statue) ಅಪಮಾನ ಮಾಡಲಾಗಿತ್ತು. ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಎಂಬಾತನಿಗೆ ನಿನ್ನೆ ಮಂಗಳವಾರ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿದೆ.

ಆರೋಪಿ ಕುಟುಂಬಸ್ಥರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಜಖಂಗೊಳಿಸಿದ್ದಾರೆ. ಆರೋಪಿ ಸಂಗಮೇಶ್‌ ಮನೆಯಲ್ಲದೇ ಬಡಾವಣೆಯಲ್ಲಿರುವ ಇತರೆ ಮನೆಗಳ ಮೇಲೂ ದಾಳಿ ಮಾಡಿದ್ದಾರೆ. ಹಲವು ಬೈಕ್‌ಗಳ ಜಖಂಗೊಳಿಸಿ, ಕಾರುಗಳ ಗಾಜು ಪುಡಿ ಪುಡಿ ಮಾಡಿದ್ದಾರೆ.

ಇನ್ನೂ ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಜನರು ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಕಲಬುರಗಿ ಬಂದ್‌ಗೆ ಕರೆ ಕೊಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸದ್ಯ ಕಲಬುರಗಿ ವಿವಿ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಕಿಡಿಗೇಡಿಗಳು ಮನೆ ಮೇಲೆ ‌ದಾಳಿ ಮಾಡಿದ್ದನ್ನು ಖಂಡಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ‌ಹಚ್ಚಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದರು. ಇನ್ನೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮನವಿ ಮಾಡಿದರು.

ದಾಳಿ ಖಂಡಿಸಿ ಸಂಸದ ಡಾ.ಉಮೇಶ್ ಜಾಧವ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜಿಲ್ಲಾಧಿಕಾರಿ ‌ಫೌಜಿಯಾ ತರನ್ನುಮ್ ಆಗಮಿಸುವಂತೆ ಪಟ್ಟು ಹಿಡಿದರು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಆರ್. ಚೇತನ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿದ್ದು ಪ್ರತಿಭಟನಕಾರರ ಮನವೊಲಿಕೆ ಮಾಡಲು ಮುಂದಾದರು. ಆರೋಪಿ ಸಂಗಮೇಶ್ ಮನೆಗೆ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಾನೂನು ಪ್ರಕಾರ ಆರೋಪಿಗೆ ಶಿಕ್ಷೆಯಾಗಿದೆ. ಮೂರು ತಿಂಗಳು ಸಜೆಯಾಗಿತ್ತು, ಜಾಮೀನು ಪಡೆದು ಹೊರ ಬಂದಿದ್ದಾನೆ. ಶಿಕ್ಷೆ ಅನುಭವಿಸಿ ಬಂದ ಮೇಲೆ ಹಲ್ಲೆ ಮಾಡಿದ್ದು ತಪ್ಪು, ಯಾರೆ ಆಗಿರಲಿ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕೆಲವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

ಏನಿದು ಪ್ರಕರಣ

ಕಳೆದ ಜನವರಿ 22ರ ರಾತ್ರಿ ಕಲಬುರಗಿಯ ಕೋಟನೂರ ಬಡಾವಣೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಯಾರೋ ದುಷ್ಕರ್ಮಿಗಳು ಅಪಮಾನ (Desecration of Ambedkar statue) ಮಾಡಿದ್ದರಿಂದ ಈ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ದಲಿತ ಸಮುದಾಯದವರು ರಸ್ತೆ ತಡೆ (Road block in kalaburagi) ನಡೆಸಿ ಪ್ರತಿಭಟನೆ ನಡೆಸಿದ್ದರು. ಕಲಬುರಗಿಯ ಒಂದು ಪೆಟ್ರೋಲ್‌ ಪಂಪ್‌ಗೆ ಹಾನಿ ಮಾಡಲಾಗಿತ್ತು.

ಘಟನೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕೋಟನೂರ ಬಡಾವಣೆಯಲ್ಲಿರುವ ಪ್ರತಿಮೆಗೆ ಚಪ್ಪಲಿ ಹಾರ ಹಾಕಿರುವುದು ಮರುದಿನ ಬೆಳಗ್ಗೆ ಗಮನಕ್ಕೆ ಬಂದಿತ್ತು. ಇದನ್ನು ನೋಡಿ ಆಕ್ರೋಶಿತರಾದ ಜನರು ಪ್ರತಿಭಟನೆಗೆ ಇಳಿದರು. ರಸ್ತೆ ತಡೆಯ ವಿಷಯ ತಿಳಿಯುತ್ತಲೇ ಪೊಲೀಸರು ಆಗಮಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಕನ್ನಿಕಾ ಸಿಕ್ರಿವಾಲ್‌ ಅವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತಕ್ಕೆ ಸಫಲರಾದರೂ ಅದು ಬೇರೆ ಬೇರೆ ಭಾಗಗಳಿಗೆ ಹರಡಿತು.

ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ
Exit mobile version