ಬೆಂಗಳೂರು: ಬೆಂಗಳೂರಿನ ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿಯೊಂದು ಪತ್ತೆಯಾಗಿದ್ದು, ಇದು ಪೂರ್ವನಿಯೋಜಿತಾ ಸ್ಫೋಟನಾ ಎಂಬ ಶಂಕೆ ಇದೆ.
ಸ್ಥಳಕ್ಕೆ ಬೆಂಗಳೂರು ನಗರ ಆಯುಕ್ತ ದಯಾನಂದ ದೌಡಾಯಿಸಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಅಧಿಕಾರಿಗಳು ಸ್ಥಳಕ್ಕಾಗಮಿಸುವ ಸಾಧ್ಯತೆ ಇದೆ. ಸ್ಫೋಟ ಸಂಬಂಧ ಅಗ್ನಿಶಾಮಕ ದಳ ಸಿಬ್ಬಂದಿಗೆ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.
ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯವಿಲ್ಲ ಎಂದು ಖಚಿತ ಪಡಿಸಿದ್ದಾರೆ. ಜಿಲೇಟಿನ್ ಕಡ್ಡಿಗಳಿಂದ ಸ್ಪೋಟವಾಗಿದ್ಯಾ? ಮೈಕ್ರೊ ಓವನ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ಯಾ ಎಂಬುದನ್ನೂ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಫ್‌ಎಸ್‌ಎಲ್ ಅಧಿಕಾರಿಗಳಿಂದಲೇ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಬಯಲಾಗಬೇಕಿದೆ. ಇತ್ತ ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ