Site icon Vistara News

Blast in Bengaluru : ರಾಮೇಶ್ವರಂ ಕೆಫೆಯಲ್ಲಿ ನಿಜಕ್ಕೂ ಆಗಿದ್ದೇನು?; ಸ್ಫೋಟದ ವಿಡಿಯೊ

Blast-in-Bangalore-Rameshwaram-Cafe-cc-tv

ಬೆಂಗಳೂರು: ಬೆಂಗಳೂರಿನ (Bangalore News) ವೈಲ್ಡ್‌ಫೀಲ್ಡ್‌‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwara Cafe) ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಪೋಟದ ಸಿಸಿಟಿವಿ ಫೂಟೇಜ್‌ (CC TV Footage) ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಇಲ್ಲಿ ನಡೆದ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಇಲ್ಲಿ ದೊಡ್ಡ ಸದ್ದಿನೊಂದಿಗೆ ಸ್ಫೋಟ (Blast in Bengaluru) ಸಂಭವಿಸುತ್ತದೆ. ಒಮ್ಮೆಗೇ ಹೊಗೆ ಆವರಿಸಿಕೊಳ್ಳುತ್ತದೆ. ಜನರು ಭಯದಿಂದ ಓಡಿ ಹೋಗುತ್ತಾರೆ.

ಮಧ್ಯಾಹ್ನ 12.55 ರ ಹೊತ್ತಿಗೆ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸುತ್ತಿದ್ದಂತೆಯೇ ಆ ಜಾಗದಲ್ಲಿದ್ದ ಸುಮಾರು ಎಂಟು ಮಂದಿ ಗಾಯಗೊಂಡಿದ್ದಾರೆ. ಒಬ್ಬ ಮಹಿಳೆಯಂತೂ ಗಂಭೀರ ಗಾಯಗೊಂಡಿದ್ದಾರೆ.

ಇದು ಒಂದು ಕಸದ ತೊಟ್ಟಿಯಲ್ಲಿ ಸಂಭವಿಸಿದ ಬ್ಲಾಸ್ಟ್‌ ನಂತೆ ಕಾಣಿಸುತ್ತದೆ.

ಘಟನೆಯ ಎರಡು ಸಿಸಿ ಟಿವಿ ಫೂಟೇಜ್‌ ಗಳು ವಿಸ್ತಾರಕ್ಕೆ ಲಭ್ಯವಾಗಿವೆ. ಎರಡನೇ ಫೂಟೇಜ್‌ನಲ್ಲಿ ದೂರದಿಂದ ಸ್ಫೋಟ ಸಂಭವಿಸಿ ಬೆಂಕಿ ಮತ್ತು ಹೊಗೆ ಎರಡೂ ಒಟ್ಟಿಗೆ ಕಾಣಿಸಿಕೊಳ್ಳುತ್ತದೆ. ಜತೆಗೆ ಅಲ್ಲಿ ಕಂಬಗಳು ಉರುಳಿ ಬೀಳುತ್ತವೆ.

ಟೈಮರ್‌ ಇಟ್ಟು ಬಾಂಬ್‌ ಸ್ಫೋಟ ?

ಬೆಂಗಳೂರಿನ ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟವು (Blast in Rameshwaram Cafe) ತಲ್ಲಣಗೊಳಿಸಿದೆ. ಸ್ಫೋಟಗೊಂಡ ಸ್ಥಳದಲ್ಲಿ ಬ್ಯಾಟರಿ ಪತ್ತೆಯಾಗಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ಟೈಮರ್ ಇಟ್ಟು ಬಾಂಬ್ ಸ್ಫೋಟ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸ್ಪೋಟದ ಬಳಿಕ ಸಿಕ್ಕ ವಸ್ತುಗಳಿಂದ ಟೈಮರ್ ಅಳವಡಿಕೆ ಮಾಡಲಾಗಿದೆಯೆ ಎಂಬ ಶಂಕೆ ವ್ಯಕ್ತವಾಗಿದೆ. ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇದು ಆತಂಕವನ್ನು ಹೆಚ್ಚು ಮಾಡಿದೆ.

Blast in Bangalore Rameshwaram Cafe cc tv1

ಸ್ಥಳಕ್ಕೆ ಬೆಂಗಳೂರು ನಗರ ಆಯುಕ್ತ ದಯಾನಂದ ದೌಡಾಯಿಸಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಅಧಿಕಾರಿಗಳು ಸ್ಥಳಕ್ಕಾಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಫೋಟ ಸಂಬಂಧ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

Blast in Bangalore Rameshwaram Cafe cc tv1

ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಾಳುಗಳ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವ್ಯಾ (25), ಶ್ರೀನಿವಾಸ್ (67), ನಾಗಶ್ರೀ (25), ಬಾಲಮುರುಳಿ (34), ಮೋನಿ (30), ಶಂಕರ್ (41) ಎಂಬುವವರು ಗಾಯಗೊಂಡ ಕೆಲವರು ಎನ್ನಲಾಗಿದೆ. ಇವರಲ್ಲಿ ನಾಗಶ್ರಿ ಅವರ ಕಣ್ಣಿಗೆ ಏಟಾಗಿದೆ. ಮೋನಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

Exit mobile version