ದೇವನಹಳ್ಳಿ/ಬೆಂಗಳೂರು: ವೈಟ್‌ಫೀಲ್ಡ್‌ನ ಬ್ರೂಕ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಫೋಟವು (Blast in Rameshwaram Cafe) ನಾಗರಿಕರನ್ನು ತಲ್ಲಣಗೊಳಿಸಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈ ನಡುವೆ ಬೆಂಗಳೂರು ಸೇರಿದಂತೆ ಹಲವೆಡೆ ಪೊಲೀಸರು ನಿಗಾವಹಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್‌ನಲ್ಲಿದೆ. ಸಿಐಎಸ್ಎಫ್ ಸಿಬ್ಬಂದಿ ಪ್ರತಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಏರ್‌ಪೋರ್ಟ್‌ಗೆ ಬರುವ ಪ್ರತಿ ಪ್ರಯಾಣಿಕರ ಲಗೇಜ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.
ಈಗಾಗಲೇ ಏರ್‌ಪೋರ್ಟ್‌ನ ಆಡಳಿತ ಮಂಡಳಿಗೆ ಪೊಲೀಸರು ಸಿಸಿಟಿವಿ ವಿಡಿಯೊವನ್ನು ಕಳಿಸಿದ್ದಾರೆ. ಈ ನಿಟ್ಟಿನಲ್ಲಿ ಏರ್‌ಪೋರ್ಟ್ ಇಂಟಲಿಜೆನ್ಸ್ ಸಿಬ್ಬಂದಿ ಕೂಡ ಅಲರ್ಟ್ ಆಗಿದ್ದಾರೆ. ಬೇರೆ ಬೇರೆ ರಾಜ್ಯ- ದೇಶದಿಂದ ಬರುವ ಪ್ರಯಾಣಿಕರಿಗೆ ಪ್ರತಿನಿತ್ಯಕ್ಕಿಂತ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.
ಮೆಜೆಸ್ಟಿಕ್‌ನಲ್ಲಿ ಹೋಂ ಗಾರ್ಡ್ಸ್ ಹೆಚ್ಚಳ
ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ನೈರುತ್ಯ ರೈಲ್ವೆ ಹಾಗೂ ನಮ್ಮ ಮೆಟ್ರೋ ಒಟ್ಟು ನಾಲ್ಕು ಸಾರ್ವಜನಿಕ ಸಾರಿಗೆಗಳು ಒಂದೇ ಜಾಗದಲ್ಲಿರುವ ಮೆಜೆಸ್ಟಿಕ್‌ನಲ್ಲಿ ಹೋಂ ಗಾರ್ಡ್ಸ್ ಫುಲ್ ಅಲರ್ಟ್ ಆಗಿದ್ದಾರೆ. ದಿನನಿತ್ಯದ ಹೋಂ ಗಾರ್ಡ್ಸ್ ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಕಂಡರೆ ವಿಚಾರಣೆ ನಡೆಸಲಾಗುತ್ತಿದೆ. ಕೈ ಚೀಲ, ಬ್ಯಾಗ್ ಎಲ್ಲ ಕಡೆಗೂ ನಿಗಾ ವಹಿಸಲು ಸೂಚನೆ ಬಂದಿದೆ. ಜತೆಗೆ ಕುಡಿದು ಟೈಟಾಗಿ ರಸ್ತೆ ಬದಿ ಮಲಗಿದವರಿಗೆಲ್ಲಾ ಹೋಂ ಗಾರ್ಡ್ಸ್ ಬಿಸಿ ಮುಟ್ಟಿಸುತ್ತಿದ್ದಾರೆ.
ಸಿಕ್ಕಿಬಿದ್ರು ಆರೋಪಿಗಳು!
ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ (Blast in Bengaluru) ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಸಿಸಿಟಿಟಿಯಲ್ಲಿ (CCTV) ಅನುಮಾನಾಸ್ಪದ ಓಡಾಟದೊಂದಿಗೆ ಕಂಡುಬಂದಿದ್ದ, ಕ್ಯಾಪ್ ಧರಿಸಿದ ವ್ಯಕ್ತಿಯನ್ನೂ ವಶಕ್ಕೆ ಪಡೆಯಲಾಗಿದೆ.
ಮಾ.1ರ ಮಧ್ಯಾಹ್ನ ಸ್ಫೋಟದ ಕ್ಷಣದಿಂದಲೇ ಮಿಂಚಿನ ಕಾರ್ಯಾಚರಣೆಗೆ ಇಳಿದಿರುವ ಸಿಸಿಬಿ ಪೊಲೀಸರು, ಕ್ಯಾಪ್ ಹಾಕಿರುವ ವ್ಯಕ್ತಿ ಸೇರಿ ಒಟ್ಟು ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿ ಇವರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಶಂಕಿತ ವ್ಯಕ್ತಿ ಖತರ್ನಾಕ್ ಪ್ಲಾನ್ ಮಾಡಿದ್ದು, ಘಟನೆಯುದ್ದಕ್ಕೂ ಕೈಗೆ ಹ್ಯಾಂಡ್ ಗ್ಲೌಸ್ ಹಾಕಿಕೊಂಡಿದ್ದ ಎಂದು ಗೊತ್ತಾಗಿದೆ. ಫಿಂಗರ್ ಪ್ರಿಂಟ್ ಎಲ್ಲಿಯೂ ಉಳಿಯಬಾರದು ಎಂಬ ಕಾರಣಕ್ಕೆ ಹ್ಯಾಂಡ್ ಗ್ಲೌಸ್ ಬಳಸಿದ್ದ. ಹ್ಯಾಂಡ್ ಗ್ಲೌಸ್ ಹಾಕಿಕೊಂಡೇ ಕೆಫೆಯೊಳಗೆ ಎಂಟ್ರಿ ನೀಡಿದ್ದು, ಅದರ ಜೊತೆಗೇ ಹೋಗಿದ್ದಾನೆ.
ಕೆಫೆಯಲ್ಲಿ ಬಾಂಬ್ ಇಟ್ಟು ನಾಪತ್ತೆಯಾದ ವ್ಯಕ್ತಿಯ ಚಲನವಲನಗಳ ಎಕ್ಸ್‌ಕ್ಲೂಸಿವ್ ದೃಶ್ಯಗಳು ಸಿಸಿಟಿವಿ ಫೂಟೇಜ್‌ನಿಂದ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿವೆ. ಕೆಫೆಯಿಂದ ಹೊರ ಬಂದು ವೇಗವಾಗಿ ಹೋಗುತ್ತಿರುವ ವ್ಯಕ್ತಿಯ ಓಡಾಟವನ್ನು ಸಿಸಿಟಿವಿ ಸೆರೆಹಿಡಿದಿತ್ತು. ಆರೋಪಿ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದು, ತಲೆಗೆ ಕ್ಯಾಪ್ ಧರಿಸಿದ್ದಾನೆ. ಈತನ ಅನುಮಾನಾಸ್ಪದ ಓಡಾಟದ ದಾಖಲಾಗಿದೆ. ನಿನ್ನೆ 11:50ಕ್ಕೆ ಕೆಫೆಯಿಂದ ಹೊರ ಬಂದಿರುವ ಈತ ವೇಗವಾಗಿ ಹೊರಟುಹೋಗಿದ್ದಾನೆ.
ರಾಮೇಶ್ವರಂ ಕೆಫೆ ಮುಂದೆಯೇ ಬಿಎಂಟಿಸಿ ಬಸ್ ನಿಲ್ದಾಣವಿದೆ. ಅಲ್ಲೇ ಇರುವ ಹೋಟೆಲ್‌ನ ಹೊರ ಭಾಗದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ. ಬರುವಾಗ ಈತ ಬಸ್ಸಿನಲ್ಲಿ ಬಂದು ಇಳಿದಿದ್ದ. ಹೋಗುವಾಗ ಅವಸರದಲ್ಲಿ ನಡೆದುಕೊಂಡು ಹೋಗಿದ್ದಾನೆ.
ಆರೋಪಿ ಸೈಡ್ ಬ್ಯಾಗ್ ಹಾಕಿಕೊಂಡು ಬ್ಯಾಗ್ ಒಳಗೆ ಮತ್ತೊಂದು ಬ್ಯಾಗ್‌ನಲ್ಲಿ ಸ್ಫೋಟಕ ತಂದಿರುವುದು ಇನ್ನೊಂದು ಸಿಸಿಟಿವಿ ಫೂಟೇಜ್‌ನಲ್ಲಿ ಪೊಲೀಸರಿಗೆ ಲಭ್ಯವಾಗಿದೆ. ಜನರ ಕಣ್ಣಿಗೆ ಮತ್ತು ಸಿಸಿ ಕ್ಯಾಮರದಲ್ಲಿ ಸೆರೆಯಾಗದ ಜಾಗಕ್ಕೆ ಈತ ಹುಡುಕಾಟ ನಡೆಸಿದ್ದು, ಕೊನೆಗೆ ಕೈ ತೊಳೆಯುವ ಜಾಗದಲ್ಲಿದ್ದ ಡೆಸ್ಟ್ ಬಿನ್‌ನಲ್ಲಿ ಬ್ಯಾಗ್ ಬಿಸಾಡಿ ಎಸ್ಕೇಪ್ ಆಗಿದ್ದಾನೆ.
ಎಫ್‌ಐಆರ್ ದಾಖಲು
ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಕುರಿತು ಹೆಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 307, 471 ಮತ್ತು ಯುಎಪಿಎ ಕಾಯ್ದೆಯ 16, 18, 38 ಹಾಗೂ explosive substance’s act 3ಮತ್ತು 4 ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.
ನಿನ್ನೆ ಮಧ್ಯಾಹ್ನ 12.55ಕ್ಕೆ ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡು ಒಟ್ಟು ಹತ್ತು ಜನ ಗಾಯಗೊಂಡಿದ್ದರು. ಎನ್ಎಸ್‌ಜಿ ಬಾಂಬ್ ಸ್ಕ್ವಾಡ್ ವಿಂಗ್‌ನಿಂದಲೂ ಕಾರ್ಯಾಚರಣೆ ತೀವ್ರಗೊಂಡಿದ್ದು, ಸ್ಪೋಟ ನಡೆದ ಸ್ಥಳದಲ್ಲಿ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ