Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು - Vistara News

ಬೆಂಗಳೂರು

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Blast In Bengaluru : ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಕ್ಕೂ ಮುನ್ನ ಶಂಕಿತ ಪೊಲೀಸರಿಗೆ ಚಾಲೆಂಜ್‌ ಹಾಕಿದ್ದನ್ನಾ? ಕ್ಯಾಶ್‌ ಕೌಂಟರ್‌ ಬಳಿ ಬಂದು ಕೈ ಸನ್ನೆ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Rameshwaram Cafe Blast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡ ತನಿಖೆಯನ್ನು (Blast In Bengaluru) ಚುರುಕುಗೊಳಿಸುತ್ತಿದೆ. ಈಗಾಗಲೇ ಕೆಫೆಯಲ್ಲಿರುವ ಸಿಸಿಟಿವಿ ಫೋಟೇಜ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆ ವೇಳೆ ಬಾಂಬ್ ಇಟ್ಟವನ ವರ್ತನೆ ಪೊಲೀಸರಿಗೆ ಚಾಲೆಂಜ್ ಹಾಕುವ ರೀತಿಯಲ್ಲಿದೆ ಎನ್ನಲಾಗಿದೆ.

ಇಡ್ಲಿ ತೆಗೆದುಕೊಳ್ಳಲು ಕ್ಯಾಶ್ ಕೌಂಟರ್ ಬಳಿ ಹೋಗಿದ್ದ ಆರೋಪಿಯು ಸಿಸಿ ಕ್ಯಾಮೆರಾ ನೋಡುತ್ತಾ ಕೈ ಸನ್ನೆ ಮಾಡಿದ್ದಾನೆ. ತನ್ನ ಮೊಬೈಲ್‌ ಅನ್ನು ಟೇಬಲ್ ಮೇಲೆ ಇಟ್ಟು, ಸಿಸಿ ಕ್ಯಾಮೆರಾಗೆ ತೋರಿಸಿದ್ದಾನೆ. ಬಳಿಕ ಸಿಬ್ಬಂದಿಗೆ ಹಣ ಕೊಟ್ಟು ಮೊಬೈಲ್‌ ಅನ್ನು ಜೇಬಿನಲ್ಲಿ ಹಾಕಿಕೊಂಡಿದ್ದಾನೆ. ನಂತರ ಆರ್ಡರ್‌ ಮಾಡಿದ್ದ ರವೆ ಇಡ್ಲಿಯನ್ನು ತಿನ್ನುವಾಗ ಮೊಬೈಲ್‌ನಲ್ಲಿ ಮಾತನಾಡುವಂತೆ ಆ್ಯಕ್ಟ್ ಮಾಡಿದ್ದಾನೆ. ಇದೆಲ್ಲ ದೃಶ್ಯವು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

ಟವರ್ ಲೊಕೇಶನ್ ಮೂಲಕ ತನ್ನನ್ನು ಪತ್ತೆ ಹಚ್ಚಿ ನೋಡೊಣ ಎಂಬ ರೀತಿಯಲ್ಲಿ ಸನ್ನೆ ಮಾಡಿರುವಂತೆ ಕಾಣುತ್ತಿದೆ. ಕೆಫೆಯ ವಾಷಿಂಗ್‌ ಬೇಸನ್‌ ಬಳಿ ಬಾಂಬ್ ಇಟ್ಟು ಹೊರಗೆ ಹೊರಡುವಾಗ, ಸಿಸಿಟಿವಿ ಇಲ್ಲದ ರಸ್ತೆಗಳಲ್ಲಿ ಸಂಚಾರ ಮಾಡಿದ್ದಾನೆ. ಇದನ್ನೆಲ್ಲ ಗಮನಿಸಿದರೆ ಹಲವಾರು ದಿನದಿಂದ ಪ್ಲ್ಯಾನ್‌ ಮಾಡಿ ಕೃತ್ಯ ಎಸಗಿರುವುದು ಗೊತ್ತಾಗಿದೆ. ಸದ್ಯ ಸಿಸಿಬಿ ಪೊಲೀಸರು ಇದುವರೆಗೂ ಆರೋಪಿಯ ಸುಳಿವು ಸಿಕ್ಕಿಲ್ಲ ಎಂದಿದ್ದಾರೆ. ಪೊಲೀಸರು ಟವರ್ ಡಂಪ್ ಮಾಡಿ ಹುಡುಕಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ 500ಕ್ಕೂ ಹೆಚ್ಚು ನಂಬರ್‌ಗಳು ಆ್ಯಕ್ವಿವ್ ಆಗಿದ್ದು, ಪ್ರತಿಯೊಂದು ನಂಬರ್‌ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದ ಪೊಲೀಸ್‌ ಕಮಿಷನರ್‌

ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ 3 ತಿಂಗಳಿಂದಲೇ ಸ್ಕೆಚ್‌?

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಆಯಾಮದಲ್ಲಿ ತನಿಖೆಯನ್ನು (Blast In Bengaluru) ನಡೆಸುತ್ತಿದ್ದಾರೆ. ಈ ಕೃತ್ಯವು ಶಂಕಿತರ ಟಾರ್ಗೆಟಾ ಅಥವಾ ಬ್ಯುಸಿನೆಸ್‌ ಕಾರಣಕ್ಕೆ ವಿರೋಧಿಗಳು ಬಾಂಬ್‌ ಬ್ಲಾಸ್ಟ್‌ ಮಾಡಿದ್ದರಾ ಎಂಬುದರ ಕುರಿತು ತನಿಖೆ (rameshwaram cafe blast) ಮುಂದುವರಿದಿದೆ.

ಈ ನಡುವೆ ಶಂಕಿತರು ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ 3 ತಿಂಗಳಿಂದ ಸ್ಕೆಚ್‌‌ ಹಾಕಿದ್ದಾರೆ ಎನ್ನಲಾಗಿದೆ. ಕೆಫೆಯಲ್ಲಿ ಯಾವಾಗ ಹೆಚ್ಚು ಜನರು ಇರುತ್ತಾರೆ. ಕೆಫೆಗೆ ಸುತ್ತಮುತ್ತ ಎಲ್ಲೆಲ್ಲಿ ಸಿಸಿ ಕ್ಯಾಮೆರಾ ಇದೆ. ಸಿಸಿ ಕ್ಯಾಮೆರಾ ಇದ್ದರೂ ಕೃತ್ಯದ ಬಳಿಕ ಹೇಗೆ ಸೇಫ್‌ ಆಗಿ ಎಕ್ಸಿಟ್‌ ಆಗಬೇಕು. ಈ ನಡುವೆ ಎಲ್ಲೆಲ್ಲಿ ಪೊಲೀಸ್ ಠಾಣೆಗಳು ಸಿಗುತ್ತವೆ ಎನ್ನುವ ಮಾಹಿತಿಯನ್ನು ಈ ಮೊದಲೇ ಸಂಗ್ರಹಿಸಿದ್ದಾರೆ.

ಜತೆಗೆ ನಗರದಲ್ಲಿ ಎಲ್ಲೆಲ್ಲಿ ಇಂಟೆಲಿಜೆನ್ಸಿ ಐಬಿ ಹೆಚ್ಚಾಗಿ ಸಕ್ರಿಯವಾಗಿದೆ ಎಂಬುದರ ಬಗ್ಗೆಯೂ ರೆಕ್ಕಿ ಮಾಡಿದ್ದಾರೆ. ಇನ್ನೂ ಕೃತ್ಯದಲ್ಲಿ ಒಬ್ಬನಲ್ಲ ಬದಲಿದೆ ಒಂದು ಗ್ಯಾಂಗ್‌ ಕೆಲಸ ಮಾಡಿದೆ ಎಂಬ ಅನುಮಾನ ಮೂಡಿದೆ. ಶಂಕಿತರು ಯಾವುದೇ ಮೊಬೈಲ್‌ ಬಳಸದೇ ಕೃತ್ಯ ಎಸಗಿದ್ದಾರೆ.

ಇಂದೊಂದು ಫ್ರೀ ಪ್ಲಾನ್ಡ್‌ ಬ್ಲಾಸ್ಟಾ?

ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೃತ್ಯವಾ ಎಂಬ ಅನುಮಾನ ಮೂಡುತ್ತಿದೆ. ದಿ ರಾಮೇಶ್ವರಂ ಕೆಫೆ ಸ್ಫೋಟವನ್ನು ಬ್ಯುಸಿನೆಸ್ ವಿಚಾರಕ್ಕೆ ಟಾರ್ಗೆಟ್‌ ಮಾಡಿಲ್ಲ. ಬದಲಿಗೆ ಸಾವು-ನೋವುಗಳನ್ನು ಮಾಡಲೇಬೇಕೆಂಬ ಕಾರಣಕ್ಕೆ ಸ್ಫೋಟ ನಡೆಸಲಾಗಿದೆ ಎನ್ನಲಾಗುತ್ತಿದೆ. ಕೆಫೆಯಲ್ಲಿ ಮಧ್ಯಾಹ್ನ ಹೊತ್ತು ಗ್ರಾಹಕರು ಅತಿ ಹೆಚ್ಚಾಗಿ ಬರುತ್ತಾರೆ ಎಂಬ ಮಾಹಿತಿ ಮೊದಲೇ ಸಂಗ್ರಹಿಸಿದ್ದರು. ಸ್ಫೋಟಕ್ಕೂ ಮುನ್ನ ಶಂಕಿತರು ಸಾಕಷ್ಟು ರಿಸರ್ಚ್‌ ಮಾಡಿದ್ದಾರೆ. ಹೀಗಾಗಿ ಯಾವ ಬಸ್‌ನಲ್ಲಿ ಬಂದು ಇಳಿಬೇಕು, ಯಾವ ಬಸ್‌ ಮೂಲಕ ವಾಪಸ್ ಹೋಗಬೇಕೆಂದು ಮೊದಲೇ ಮಾಹಿತಿಯನ್ನು ಸಂಗ್ರಹಿಸಿದ್ದರು ಎನ್ನಲಾಗಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಸಿಸಿ ಕ್ಯಾಮೆರಾಗಳ ಕೈ ಸಿಗದಂತೆ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಕ್ಯಾಪ್, ಕೈ ರೇಖೆ ಗುರುತು ಸಿಗದಂತೆ ಹ್ಯಾಂಡ್ ಗ್ಲೌಸ್ ಬಳಕೆ ಮಾಡಲಾಗಿದೆ. ಸುಮಾರು 25ರ ಆಸುಪಾಸಿನ ಶಂಕಿತ ಎಂದು ಗುರುತಿಸಲಾಗಿದೆ. ವೋಲ್ವೋ ಬಸ್ ಹತ್ತಿ ರಾಮೇಶ್ವರಂ ಕೆಫೆಯಿಂದ ಎರಡು ಸ್ಟಾಪ್ ನಂತರ ಇಳಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 500 ಎಫ್ ವೋಲ್ವೋ ಬಸ್‌ನ ಕೊನೆಯ ನಿಲ್ದಾಣವಾಗಿದ್ದು, ಅಲ್ಲಿಂದ ಬೇರೆ ಕಡೆಗೆ ಬಸ್‌ ಮೂಲಕವೇ ಹೋಗಲು ಪ್ಲಾನ್‌ ಇತ್ತು ಎನ್ನಲಾಗಿದೆ.

ಇನ್ನೂ ಕೃತ್ಯಕ್ಕೆ ಸ್ವಂತ ವಾಹನ ಬಳಕೆ ಮಾಡಿಲ್ಲ, ಸಾರ್ವಜನಿಕ ಸಾರಿಗೆಯಲ್ಲೇ ಓಡಾಡಿದ್ದಾನೆ. ಮತ್ತೊಂದು ಕಡೆ ತಾನು ಬಂದ ಬಸ್‌ನಲ್ಲಿ ಬಾಂಬ್ ಬಿಟ್ಟು ಹೋಗಬಹುದಿತ್ತು, ಆದರೆ ರಾಮೇಶ್ವರಂ ಕೆಫೆನೇ ಯಾಕೆ ಎಂಬ ಪ್ರಶ್ನೆಯು ಉದ್ಭವಿಸಿದೆ. ಇದೆಲ್ಲವೂ ಪೊಲೀಸರ ತನಿಖೆಯಿಂದಲೇ ಹೊರಬಾರಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
ಪ್ರಮುಖ ಸುದ್ದಿ14 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest14 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest3 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌