Site icon Vistara News

BMTCಯಿಂದ ವಜಾಗೊಂಡ ಚಾಲಕರ ಪ್ರತಿಭಟನೆ: ದಯಾಮರಣ ಕೋರಿ ಪತ್ರ

ಬೆಂಗಳೂರು: ತಮಗೆ ದಯಾಮರಣ ನೀಡಿ ಎಂದು ರಾಷ್ಟ್ರಪತಿ, ಪ್ರಧಾನಮಂತ್ರಿ, ಹಾಗೂ ರಾಜ್ಯದ ಮುಖ್ಯಮಂತ್ರಿ, ಸಾರಿಗೆ ಸಚಿವರಿಗೆ BMTCಯ 60 ಜನ ಚಾಳಕರು ಪತ್ರ ಬರೆದಿದ್ದಾರೆ. ತಿನ್ನಲು ಅನ್ನವಿಲ್ಲ. ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ಮನೆ ಬಾಡಿಗೆ ಕಟ್ಟಲು ಆಗುತ್ತಿಲ್ಲ. ನಾನು ಮುಷ್ಕರದಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಿದರೂ ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎಂದು ಶಂಬುಲಿಂಗಯ್ಯ ಚಿಕ್ಕಮಠ ತಿಳಿಸಿದ್ದಾರೆ.

ಒಂದು ವರ್ಷದಿಂದ ಮಾಡಲು ಕೆಲಸವಿಲ್ಲ. ಈಗಾಗಲೇ ವಜಾಗೊಂಡ 5-10 ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ವಜಾಗೊಂಡ ನೌಕರರನ್ನು ಮತ್ತೆ ಕೆಲಸಕ್ಕೆ ನೇಮಿಸಿಕೊಳ್ಳುತ್ತಿಲ್ಲ. ಪ್ರತಿಭಟನೆಗೆ ಕರೆ ಕೊಟ್ಟವರು ಮತ್ತು ಭಾಗಿಯಾದವರಿಗೆ ಮಾತ್ರ ಪುನಃ ಕೆಲಸಕ್ಕೆ ಕರೆಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಸಾರಿಗೆ ಸಚಿವರಿಗೆ ಮನವಿ ಮಾಡಿದರೂ ನನಗೆ ನ್ಯಾಯ ಕೊಡಿಸಲಿಲ್ಲ. ನಾನು ಮತ್ತು ನನ್ನ ಹೆಂಡತಿ ಮಕ್ಕಳಿಗೆ ದಯಮರಣ ಕೊಡಿ ಎಂದು ಮೊದಲು ಶಂಬುಲಿಂಗಯ್ಯ ಚಿಕ್ಕಮಠ ಪತ್ರ ಬರೆದಿದ್ದಾರೆ.

ಇದೀಗ ಬಿಎಂಟಿಸಿಯ 60 ನೌಕರರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಸಾರಿಗೆ ಸಚಿವ ಶ್ರೀ ರಾಮುಲುಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದ್ದನು ಓದಿ | ₹3.5ಲಕ್ಷದ ಚೆಕ್‌ ಹಿಂದಿರುಗಿಸಿದ ಬಸ್‌ ಕಂಡಕ್ಟರ್‌ !

Exit mobile version