ಬೆಂಗಳೂರು: ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯೊಳಗೆ ಬಿಎಂಟಿಸಿ ಸಿಬ್ಬಂದಿ (BMTC staff) ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಅಥಣಿ ಮೂಲದ ಮಹೇಶ್ ಆತ್ಮಹತ್ಯೆ ಮಾಡಿಕೊಂಡವರು.
ಡಿಪೋ ನಂಬರ್ 12ರಲ್ಲಿ ಮಹೇಶ್ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನಿನ್ನೆ ಸೋಮವಾರ ಬೆಳಗ್ಗೆ ರೆಕಾರ್ಡ್ ರೂಂ ಕೀ ಕೇಳಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ಸೆಕ್ಯೂರಿಟಿ ಗಾರ್ಡ್ ಬಳಿ ಮಹೇಶ್ ರೆಕಾರ್ಡ್ ಸೆಕ್ಷನ್ ಕೀ ಪಡೆದು, ಬೆಳಗ್ಗೆಯಿಂದಲ್ಲೂ ರೂಮಿನೊಳಗೆ ಓಡಾಟ ನಡೆಸಿದ್ದ. ಸಂಜೆ ಯಾರು ಇಲ್ಲದ ವೇಳೆ ವೈರ್ ಬಳಸಿ ಫ್ಯಾನ್‌ಗೆ ವೈರ್ ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಮುಂಜಾನೆ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್-ಮಲಗಿದ್ದ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್ ಮಿಸ್
ಗದಗದಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ
ಸೇತುವೆ ಮೇಲಿಂದ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ. ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಮಧ್ಯ ಸಂಪರ್ಕಿಸುವ ಸೇತುವೆ ಇದಾಗಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ. ಕರಿಬಸಪ್ಪ (30) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವನು. ಕರಿಬಸಪ್ಪ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೀರಾಕೊರಳಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಕರಿಬಸಪ್ಪ ನದಿಗೆ ಹಾರಿದ್ದನ್ನು ಗಮನಿಸಿದ ಕೊರ್ಲಹಳ್ಳಿ ಗ್ರಾಮದ ಪುನೀತ್, ಕೃಷ್ಣ, ಹನುಮಂತ ಎಂಬುವವರು ಕೂಡಲೇ ರಕ್ಷಣೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ