ನೆಲಮಂಗಲ: ಬೆಂಗಳೂರು ಉತ್ತರ ತಾಲೂಕು ಹುಸ್ಕೂರು ಗ್ರಾಮದ ರೈಲ್ವೆ ಹಳಿ ಬಳಿ ಯುವ ಪ್ರೇಮಿಗಳ ಮೃತದೇಹಗಳು(Dead Bodies Found) ಅನುಮಾಸ್ಪದವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಅಥವಾ ಕೊಲೆಯೇ ಎಂಬುದು ತಿಳಿದುಬಂದಿಲ್ಲ.
ಮೃತ ಯುವಕನ ಹೆಸರು ನಾಗೇಂದ್ರ (21) ಎನ್ನಲಾಗಿದ್ದು, ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣದ ಸಮೀಪ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಕೆಲ ತಿಂಗಳುಗಳಿಂದ ಪರಸ್ಪರ ಪ್ರೀತಿಸ್ತಿದ್ದ ಯುವಕ-ಯುವತಿ, ಕಳೆದ ಒಂದು ವಾರದ ಹಿಂದೆ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ಸೋಮವಾರ ಮದುವೆಯಾಗಿದ್ದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ನಂತರ ಇದ್ದಕ್ಕಿದ್ದಂತೆಯೇ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ನಂತರ ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಮೃತದೇಹಗಳು ಪತ್ತೆಯಾಗಿವೆ.
ಮೇಲ್ನೋಟಕ್ಕೆ ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಪ್ರಕರಣವನ್ನು ಕೊಲೆ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Car Catches Fire | ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಾಣಾಪಾಯದಿಂದ ನಾಲ್ವರು ಪಾರು