Quiz Competition: ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ; ಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಪ್ರಥಮ ಸ್ಥಾನ Vistara News

ಬೆಂಗಳೂರು

Quiz Competition: ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ; ಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಪ್ರಥಮ ಸ್ಥಾನ

Quiz Competition: ಬೆಂಗಳೂರಿನಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮತ್ತು ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್ ಸಹಯೋಗದಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು.

VISTARANEWS.COM


on

quiz competition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮತ್ತು ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್ ಸಹಯೋಗದಲ್ಲಿ ನಗರದ ಸಿಲ್ವರ್ ಜ್ಯೂಬಿಲಿ ಭವನದಲ್ಲಿ ಮಂಗಳವಾರ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ (Quiz Competition) ಆಯೋಜಿಸಲಾಗಿತ್ತು. 14 ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ನೆಲಮಂಗಲದ ಬೊಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮಕ್ಕಳಲ್ಲಿ 7 ತಂಡಗಳ ಎರಡು ಸೆಮಿ ಫೈನಲ್ ಅನ್ನು ನಡೆಸಿ 8 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು. ಇದರಲ್ಲಿ ನೆಲಮಂಗಲದ ಬೊಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶಾಲೆ ಪ್ರಥಮ ಸ್ಥಾನ (27,000 ನಗದು ಬಹುಮಾನ), ಯಲಹಂಕದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ದ್ವಿತೀಯ ಸ್ಥಾನ (21,000 ನಗದು ಬಹುಮಾನ) ಹಾಗೂ ಯಾದಗಿರಿ ಆದರ್ಶ ವಿದ್ಯಾಲಯ ತೃತೀಯ ಸ್ಥಾನ (15,000 ನಗದು ಬಹುಮಾನ) ಪಡೆದಿವೆ.

ಇದನ್ನೂ ಓದಿ | Robotics Challenge: ಇಸ್ರೋದಿಂದ ವಿದ್ಯಾರ್ಥಿಗಳಿಗೆ ರೊಬೋಟಿಕ್ಸ್ ಚಾಲೆಂಜ್; ಗೆದ್ದವರಿಗೆ 5 ಲಕ್ಷ ರೂ.

ಕಾರ್ಯಕ್ರಮದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕ (ಗುಣಮಟ್ಟ) ಮಾರುತಿ ಎಂ.ಆರ್, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್ ನಿರ್ದೇಶಕಿ ತನುಜ ಸಿಂಗ್, ಅಗಸ್ತ್ಯ ಸಂಸ್ಥೆ ಕಾರ್ಯನಿರ್ವಾಹಕ ತ್ಯಾಗರಾಜನ್, ಟೆಕ್ಸಾಸ್ ಇನ್‌ಸ್ಟ್ರುಮೆಂಟ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಅರಿಂದಮ್ ಚಟರ್ಜಿ, ಕರ್ನಾಟಕದ ಬೇರೆ ಬೇರೆ ಜಿಲ್ಲೆಯ ಮಕ್ಕಳು ಮತ್ತು ಶಿಕ್ಷಕರು ಮತ್ತು ಅಗಸ್ತ್ಯ ಸಂಸ್ಥೆ ಸಿಬ್ಬಂದಿ ಭಾಗವಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shirshendu Mukhopadhyay: ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆ

Shirshendu Mukhopadhyay: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ನೀಡುವ 2023ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಬಂಗಾಳಿ ಸುಪ್ರಸಿದ್ಧ ಬರಹಗಾರ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆಯಾಗಿದ್ದಾರೆ.

VISTARANEWS.COM


on

Shirshendu Mukhopadhyay
Koo

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ನೀಡುವ ʼಕುವೆಂಪು ರಾಷ್ಟ್ರೀಯ ಪುರಸ್ಕಾರ-2023ʼ ಕ್ಕೆ ಬಂಗಾಳಿ ಭಾಷೆಯ ಸುಪ್ರಸಿದ್ಧ ಬರಹಗಾರರಾದ ಶೀರ್ಷೇಂಧು ಮುಖ್ಯೋಪಧ್ಯಾಯ (Shirshendu Mukhopadhyay) ಆಯ್ಕೆ ಆಗಿದ್ದಾರೆ. ನವೆಂಬರ್ 17ರಂದು ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಶೀರ್ಷೇಂಧು ಮುಖ್ಯೋಪಧ್ಯಾಯ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪ್ರತಿಷ್ಠಾನದ ಸಹಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸಂಚಾಲಕರಾಗಿದ್ದ ಆಯ್ಕೆ ಸಮಿತಿಯಲ್ಲಿ ನಿರ್ಮಲ್ ಕಾಂತಿ ಭಟ್ಟಾಚಾರ್ಯ, ಗೀತಾ ವಿಜಯಕುಮಾರ್ ಹಾಗೂ ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿಗಳಾದ ಅಗ್ರಹಾರ ಕೃಷ್ಣಮೂರ್ತಿಯವರು ತೀರ್ಪುಗಾರರಾಗಿದ್ದರು.

ಬಂಗಾಳಿ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಮಹತ್ವದ ಕೃತಿಗಳ ಮೂಲಕ ಹೆಚ್ಚಿಸಿದ, ವರ್ತಮಾನದ ಬಹು ಮಹತ್ವದ ಮತ್ತು ಜನಪ್ರಿಯ ಲೇಖಕರಾದ ಶೀರ್ಷೇಂಧು ಮುಖ್ಯೋಪಧ್ಯಾಯ ಅವರನ್ನು 2023ರ “ಕುವೆಂಪು ರಾಷ್ಟ್ರೀಯ ಪುರಸ್ಕಾರ’ಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ | Raja Marga Column: ಇವರು ಡಾ. ಪ್ರದೀಪ್‌ ಕುಮಾರ್‌ ಹೆಬ್ರಿ; 511 ಪುಸ್ತಕ, 19 ಮಹಾಕಾವ್ಯ!

ಜನಪ್ರಿಯ ಬರಹಗಾರರಾಗಿರುವ ಶೀರ್ಷೇಂಧು ಅವರು ತಮ್ಮ ಹೊಸತನದ ಬರವಣಿಗೆಗಳಿಂದ ಬಂಗಾಳಿ ಭಾಷಾ ಸಾಹಿತ್ಯವನ್ನೂ, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ. ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳು ಇದುವರೆಗೆ ಪ್ರಕಟವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನವೂ ಸೇರಿದಂತೆ ಹಲವಾರು ಪುರಸ್ಕಾರಗಳು ಶೀರ್ಷೇಂಧು ಅವರಿಗೆ ದೊರೆತಿವೆ.

ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನವಾದ ಡಿಸೆಂಬರ್‌ 29ರಂದು ಶೀರ್ಷೇಂಧು ಮುಖ್ಯೋಪಧ್ಯಾಯ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಐದು ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕಗಳನ್ನು ಒಳಗೊಂಡಿರುತ್ತದೆ.

ಶೀರ್ಷೇಂಧು ಮುಖ್ಯೋಪಧ್ಯಾಯ ಪರಿಚಯ

ಬಂಗಾಳಿ ಭಾಷೆಯ ಮಹತ್ವದ ಕಥೆಗಾರರಾದ ಶೀರ್ಷೇಂದು ಮುಖ್ಯೋಪಧ್ಯಾಯ ಅವರು, ಬ್ರಿಟಿಷ್ ಇಂಡಿಯಾದ (ಪ್ರಸ್ತುತ ಬಾಂಗ್ಲಾದೇಶದ) ಮೈಮೆನ್ಸಿಂಗ್ ಎಂಬಲ್ಲಿ 1935ರ ನವೆಂಬರ್ 9ರಂದು ಜನಿಸಿದರು. ಭಾರತ ವಿಭಜನೆಯ ಸಂದರ್ಭದಲ್ಲಿ ಅವರ ಕುಟುಂಬ ಕೋಲ್ಕತ್ತಾಗೆ ವಲಸೆ ಬಂದಿತ್ತು. ಆಗ ಶೀರ್ಷೇಂಧು 2 ವರ್ಷದ ಬಾಲಕ. ಅವರ ತಂದೆ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದರಿಂದ, ಶೀರ್ಷೇಂಧು ಅವರ ಬಾಲ್ಯ ಮತ್ತು ಪ್ರಾರಂಭದ ಶಿಕ್ಷಣ ಅವಿಭಜಿತ ಬಂಗಾಳ, ಅಸ್ಸಾಂ ಮತ್ತು ಬಿಹಾರದಲ್ಲಿ ಕಳೆಯಿತು. ಕೂಚ್‌ಬಿಹಾರ್‌ನ ವಿಕ್ಟೋರಿಯಾ ಕಾಲೇಜಿನಲ್ಲಿ ಇಂಟರ್‌ಮಿಡಿಯೇಟ್ ಪಾಸಾದ ಅವರು, ಕೋಲ್ಕೊತಾ ವಿಶ್ವವಿದ್ಯಾಲಯದಿಂದ ಬಂಗಾಳಿ ಭಾಷೆಯಲ್ಲಿ ಸ್ನಾತಕ ಪದವಿ ಪಡೆದರು.

ಶಾಲಾಶಿಕ್ಷಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಶೀರ್ಷೇಂಧು ಅವರು, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ‘ದೇಶ್’ ಎಂಬ ಬಂಗಾಳಿ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಈಗಲೂ ಆನಂದ ಬಜಾರ್ ಪತ್ರಿಕೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ. 1959ರಲ್ಲಿ ಶೀರ್ಷೇಂಧು ಅವರ ಮೊದಲ ಕಥೆ ‘ದೇಶ್’ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಅವರ ಮೊದಲ ಕಾದಂಬರಿ ಘುನ್ಫೋಕ (Ghunpoka) 1967ರಲ್ಲಿ ದೇಶ್ ಪತ್ರಿಕೆಯ ‘ಪೂಜಾ’ ವಾರ್ಷಿಕ ಸಂಪುಟದಲ್ಲಿ ಪ್ರಕಟವಾಗಿತ್ತು. ಮೊದಲ ಮಕ್ಕಳ ಪುಸ್ತಕ ಮನೋಜ್‌ದೇರ್ ಅದ್ಭುತ್ ಬಾರಿ (Manojader Adbhut Bari) 1978ರಲ್ಲಿ ಪ್ರಕಟವಾಯಿತು. ಬರಹಗಾರರಾಗಿ ಜನಪ್ರಿಯರಾಗಿರುವ ಶೀರ್ಷೇಂಧು ಅವರು, ಇಲ್ಲಿಯವರೆಗೆ 90ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ 50 ಕೃತಿಗಳು ಮಕ್ಕಳಿಗಾಗಿ ಬರೆದ ಪುಸ್ತಕಗಳೇ ಆಗಿರುವುದು ವಿಶೇಷ.

ಇವರ ಹಲವಾರು ಕತೆಗಳು, ಮಕ್ಕಳಿಗಾಗಿ ಕಾಮಿಕ್ ರೂಪದಲ್ಲಿ ಪ್ರಕಟವಾಗಿವೆ. ಜೊತೆಗೆ, ಹೊಸತಲೆಮಾರಿನ ಓದುಗರಿಗೆ ಸುಲಭವಾಗಿ ಲಭ್ಯವಾಗುವಂತೆ ಇವರ ಹಲವಾರು ಕತೆ ಕಾದಂಬರಿಗಳು ಈ ಪುಸ್ತಕಗಳಾಗಿಯೂ ಆನ್‌ಲೈನ್‌ನಲ್ಲಿ ಲಭ್ಯವಿವೆ. ಆದ್ದರಿಂದ ಬಂಗಾಳಿಯಲ್ಲಿ ಶೀರ್ಷೇಂದು ಅವರು ಅಬಾಲಾವೃದ್ಧರಾದಿಯಾಗಿ ಎಲ್ಲರಿಗೂ ಚಿರಪರಿಚಿತರಾಗಿರುವ ಅತ್ಯಂತ ಜನಪ್ರಿಯ ಲೇಖಕ ಎನ್ನಬಹುದು.

ಪಾರ್ತಿಬೊ (Parthibo), ನಯನ್‌ ಶ್ಯಾಮ್ (Nayan Shyama), ಪರಪರ್ (Parapar), ದುರ್ಬೀನ್ (Durbin), ಏಕಾದಶಿ ಓ ಭೂತ್ (Ekadashi O Bhoot) ಮೊದಲಾದ ಕೃತಿಗಳು ಅವರಿಗೆ ಅತ್ಯಂತ ಜನಪ್ರಿಯತೆಯನ್ನು ತಂದುಕೊಟ್ಟಿವೆ. ಭ್ರಮಣ್ ಸಮಗ್ರ (BHRAMAN SAMAGRA) ಅವರ ಪ್ರವಾಸ ಕಥನ, ಬಂಗಾಳಿಯಲ್ಲಿ ಅತ್ಯಂತ ಹೆಚ್ಚು ಮಾರಾಟವಾದ ಕೃತಿಯೂ ಹೌದು.

ಇವರ ಕತೆಗಳ ಗಟ್ಟಿತನದಿಂದಾಗಿ, ಸಿನಿಮಾ ಕ್ಷೇತ್ರದ ಸಂಪರ್ಕವೂ ಅನಾಯಾಸವಾಗಿ ದೊರೆತಿರುತ್ತದೆ. 1992ರಲ್ಲಿ ರಿತುಪರ್ಣೋ ಅವರ ನಿರ್ದೇಶನದಲ್ಲಿ ತಯಾರಾಗಿ ಬಿಡುಗಡೆಯಾದ, ಶೀರ್ಷೇಂಧು ಅವರ ಹೈರೇರ್ ಅಂಗ್ತಿ (Hirer Angti ) ಕಥೆಯಾಧಾರಿತ, ಅದೇ ಹೆಸರಿನ ಸಿನಿಮಾದಿಂದ ಪ್ರಾರಂಭಿಸಿ, ಇದುವರೆಗೆ 17 ಸಿನಿಮಾಗಳು ಇವರ ಕಥೆ-ಕಾದಂಬರಿಯನ್ನು ಆಧರಿಸಿ ಬಂದಿವೆ. ಬಹುತೇಕ ಬಂಗಾಳಿಯ ಎಲ್ಲ ಪ್ರಮುಖ ಸಿನಿಮಾ ನಿರ್ದೇಶಕರೂ ಇವರ ಕಥೆ ಕಾದಂಬರಿಗಳನ್ನು ಆಧರಿಸಿ ಸಿನಿಮಾ ಮಾಡಿರುವುದು ವಿಶೇಷ.

ಇದನ್ನೂ ಓದಿ | Mallepuram G Venkatesh: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಆತ್ಮಕಥನ ʼದಿಟದ ದೀವಟಿಗೆʼ ಲೋಕಾರ್ಪಣೆ

ಜನಪ್ರಿಯ ಕತೆಗಾರರಾಗಿರುವ ಶೀರ್ಷೇಂಧು ಅವರನ್ನು ಸಹಜವಾಗಿ ಹಲವಾರು ಸಾಹಿತ್ಯ ಪುರಸ್ಕಾರಗಳೂ ಹುಡುಕಿಕೊಂಡು ಬಂದಿವೆ. ಮುಖ್ಯವಾಗಿ, ಮಕ್ಕಳ ಸಾಹಿತ್ಯಕ್ಕಾಗಿ ವಿದ್ಯಾಸಾಗರ ಪುರಸ್ಕಾರ (1985), ಎರಡು ಬಾರಿ ಆನಂದ ಪುರಸ್ಕಾರ (1973 ಮತ್ತು 1990), ಮನಬ್ಜಮಿನ್ (Manahjamin) ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಬಹುಮಾನ (19689), ಬಂಗಬಿಭೂಷಣ್ ಪ್ರಶಸ್ತಿ (2012), ಎ.ಬಿ.ಪಿ. ಆನಂದ ಸೆರ ಬಂಗಾಳಿ ಪ್ರಶಸ್ತಿ ಮೊದಲಾದವು ಸೇರಿವೆ. ಇದಲ್ಲದೆ. 2021ರಲ್ಲಿ ಸಾಹಿತ್ಯ ಅಕಾಡೆಮಿಯ ಫೆಲೋಶಿಪ್ ಕೂಡಾ ದೊರೆತಿರುತ್ತದೆ. ಅಶೋಕ್ ವಿಶ್ವನಾಥನ್‌ ಎಂಬುವವರು, ಸಾಹಿತ್ಯ ಅಕಾಡೆಮಿಗಾಗಿ ಶೀರ್ಷೇಂದು ಮುಖ್ಯೋಪಧ್ಯಾಯ್ ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

Continue Reading

ಕರ್ನಾಟಕ

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

Dasara Elephant Arjuna: ಕಾರ್ಯಾಚರಣೆ ವೇಳೆ ಕಾಡಾನೆ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ದಸರಾ ಆನೆ ಅರ್ಜುನ ಸಾವಿಗೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.

VISTARANEWS.COM


on

Dasara Elephant Arjuna
Koo

ಬೆಂಗಳೂರು: ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಒಂಟಿ ಸಲಗದ ವಿರುದ್ಧ ಹೋರಾಡಿ ಮೃತಪಟ್ಟ ದಸರಾ ಆನೆ ಅರ್ಜುನನ (Dasara Elephant Arjuna) ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಸೇರಿ ಗಣ್ಯರು ಕಂಬನಿ ಮಿಡಿದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ನಟ ದರ್ಶನ್‌ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ (Dasara Elephant Arjuna) ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ಸಕಲೇಶಪುರ ತಾಲೂಕಿನ‌ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಮೃತಪಟ್ಟಿದೆ. ಒಂಟಿ ಸಲಗ ದಾಳಿ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡು ಅರ್ಜುನ (Dasara Elephant Arjuna) ಕೊನೆಯುಸಿರೆಳೆದಿದೆ. ಹೀಗಾಗಿ ಜನರ ಪ್ರೀತಿಪಾತ್ರವಾಗಿದ್ದ ದಸರಾ ಆನೆಯ ಸೇವೆಯನ್ನು ಗಣ್ಯರು ಸ್ಮರಿಸಿದ್ದಾರೆ.

‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ಎಂದ ಸಿಎಂ

ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು. ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ.‌

ಇದನ್ನೂ ಓದಿ | Dasara Elephant Arjuna: 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು; ಒಂಟಿ ಸಲಗ ದಾಳಿಯಿಂದ ದುರ್ಘಟನೆ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಂತಾಪ

ದಸರಾ ಆನೆ ಅರ್ಜುನ ಸಾವಿಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದು ಹೇಳಿದ್ದಾರೆ.

ಅರ್ಜುನ ಮರಣದ ಸುದ್ದಿ ತೀವ್ರ ನೋವುಂಟು ಮಾಡಿದೆ: ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ, ಆನೆಗಳ ಕಾರ್ಯಾಚರಣೆ ವೇಳೆ ವೀರ ಮರಣರಾಗಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ

ಮರೆಯಲಾರದ ನೆನಪುಗಳನ್ನು ಬಿಟ್ಟುಹೋದ: ಡಿಕೆಶಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ ಎಂದು ತಿಳಿಸಿದ್ದಾರೆ.

ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ ಎಂದ ದರ್ಶನ್

‌ನಟ ದರ್ಶನ್‌ ಪ್ರತಿಕ್ರಿಯಿಸಿ, 8 ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ! ಓಂ ಶಾಂತಿ!

ಇದನ್ನೂ ಓದಿ | ಕಾರ್ಯಾಚರಣೆಗೆ ಅರ್ಜುನ ಬಳಕೆ ಕಾನೂನುಬಾಹಿರ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್‌ ಗೂಳಿಗೌಡ ಆಗ್ರಹ

ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ: ಬಿ.ವೈ. ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಂದಿಸಿ, ವಿಶ್ವ ವಿಖ್ಯಾತ ನಾಡಹಬ್ಬ ದಸರೆಯ ಮುಖ್ಯ ಆಕರ್ಷಣೆ ಜಂಬೂಸವಾರಿಯಲ್ಲಿ ಸತತ ಎಂಟು ಬಾರಿ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಸಾಗುತ್ತಿದ್ದ ಗಜರಾಜ ಅರ್ಜುನ ಸಾವನ್ನಪ್ಪಿರುವ ಸಂಗತಿ ಬೇಸರ ತರಿಸಿದೆ.
ಅರ್ಜುನ ನಾಡಿನ ಜನರ ನೆನಪಲ್ಲಿ ಬಹುಕಾಲ ಉಳಿಯಲಿದ್ದಾನೆ ಎಂದು ತಿಳಿಸಿದ್ದಾರೆ.

ಅತ್ಯಂತ ದುರಾದೃಷ್ಟಕರ ಘಟನೆ: ಈಶ್ವರ್‌ ಖಂಡ್ರೆ

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯಿಸಿ, ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು. ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

BY Vijayendra : ಪೃಥ್ವಿ ಸಿಂಗ್‌ಗೆ ಇರಿತ ಪ್ರಕರಣ; ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಆಗ್ರಹ

BY Vijayendra : ಬಿಜೆಪಿ ನಾಯಕ ಪೃಥ್ವಿ ಸಿಂಗ್‌ ಅವರಿಗೆ ಚೂರಿಯಿಂದ ಇರಿದ ಆರೋಪ ಎದುರಿಸುತ್ತಿರುವ ಚನ್ನರಾಜ್‌ ಹಟ್ಟಿಹೊಳಿ ಬಂಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

VISTARANEWS.COM


on

BY Vijayendra Channaraj Hattiholi
ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್‌ ಅವರನ್ನು ಭೇಟಿ ಮಾಡಿದ ಚನ್ನರಾಜ್‌ ಹಟ್ಟಿಹೊಳಿ
Koo

ಬೆಳಗಾವಿ: ಬಿಜೆಪಿ ಕಾರ್ಯಕಾರಿಣಿ ಸದಸ್ಯ, ರಮೇಶ್‌ ಜಾರಕಿಹೊಳಿ (Ramesh Jarakiholi) ಆಪ್ತ ಪೃಥ್ವಿ ಸಿಂಗ್‌ (Attack on Prithvi singh) ಅವರಿಗೆ ಚೂರಿಯಿಂದ ಇರಿದಿದ್ದಾರೆ ಎನ್ನಲಾದ ಎಂಎಲ್‌ಸಿ ಚನ್ನರಾಜ್‌ ಹಟ್ಟಿಹೊಳಿ (Channaraj Hattiholi), ಅವರ ಇಬ್ಬರು ಗನ್‌ ಮ್ಯಾನ್‌ಗಳು ಮತ್ತು ಇತರ ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಬೆಳಗಾವಿಯ ಜಯನಗರದಲ್ಲಿರುವ ಮನೆಯಲ್ಲಿದ್ದ ಪೃಥ್ವಿ ಸಿಂಗ್‌ ಅವರನ್ನು ಹಟ್ಟಿಹೊಳಿ ಮತ್ತು ಬೆಂಬಲಿಗರು ಹೊರಗೆ ಕರೆದು ಚಾಕುವಿನಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೈ ಮತ್ತು ಬೆನ್ನಿಗೆ ಚೂರಿ ಇರಿತದ ಗಾಯಕ್ಕೆ ಒಳಗಾಗಿರುವ ಪೃಥ್ವಿ ಸಿಂಗ್‌ ಕೆಎಲ್ ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್‌ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ ಅವರು, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಗನ್ ಮ್ಯಾನ್‌ಗಳು ಹಲ್ಲೆ ಮಾಡಿದ್ದಾರೆ. ಗನ್‌ ಮ್ಯಾನ್‌ ಸುಜೀತ್ ಜಾಧವ್, ಎಂಎಲ್‌ಸಿ ಅವರ ಪಿಎ ಸದ್ದಾಂ ಅವರು ಪೃಥ್ವಿ ಮನೆಗೆ ಹೋಗಿ ಚೂರಿಯಿಂದ ಇರಿದ್ದಾರೆ. ಮೊದಲು ಮನೆಯಲ್ಲಿದ್ದ ಪೃಥ್ವಿ ಸಿಂಗ್‌ ಅವರನ್ನು ಹೊರಗಡೆ ಕರೆಸಿ ಹಲ್ಲೆ ಮಾಡಲಾಗಿದೆ. ಈ ದೃಶ್ಯವನ್ನು ಪೃಥ್ವಿ ಸಿಂಗ್ ವಿಡಿಯೋ ರೆಕಾರ್ಡ್ ಮಾಡುವ ಪ್ರಯತ್ನ ಮಾಡಿದ್ದಾರೆ. ಬ್ಲಾಕ್ ಕಲರ್ ಕ್ರಿಷ್ಟಾ ಇನ್ನೊವಾ ಕಾರಿನಲ್ಲಿ ಚನ್ನರಾಜ್ ಹಟ್ಟಿಹೊಳಿ ಅವರೂ ಬಂದಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಪೃಥ್ವಿ ಸಿಂಗ್‌ ಅವರನ್ನು ಹೊರಗೆ ಕರೆದು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಚಿವರ ಪ್ರಭಾವದಿಂದ ಹಾಡಹಗಲೇ ಹಲ್ಲೆ

ಚನ್ನರಾಜ ಹಟ್ಟಿಹೊಳಿ ಅವರು ಸಚಿವರಾಗಿರುವ ಮತ್ತು ಪ್ರಭಾವಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸಹೋದರ. ಇಷ್ಟು ಪ್ರಭಾವ ಇದ್ದಿದ್ದರಿಂದಲೇ ಹಾಡು ಹಗಲೇ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯ. ರಾಜ್ಯ ಸರ್ಕಾರ ಇಡೀ ವ್ಯವಸ್ಥೆಯೇ ಇಲ್ಲಿದೆ. ಮುಖ್ಯಮಂತ್ರಿಗಳೂ ಇಲ್ಲಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರು ದರ್ಪ ತೋರಿದ್ದಾರೆ. ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿದ್ದಾರೆʼʼ ಎಂದು ವಿಜಯೇಂದ್ರ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ಪೊಲೀಸರು ತಡ ಮಾಡದೆ ಎಫ್‌ಐಆರ್‌ ಹಾಕಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಗನ್ ಮ್ಯಾನ್, ಪಿಎ ಮತ್ತು ವಿಧಾನ ಪರಿಷತ್ ಸದಸ್ಯನನ್ನು ಬಂಧಿಸಬೇಕುʼʼ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ʻʻಇಲ್ಲಿರುವ ಪೊಲೀಸ್ ವ್ಯವಸ್ಥೆಯ ಬಗ್ಗೆ ನನಗೆ ನಂಬಿಕೆ ಇಲ್ಲ, ನಮ್ಮ ಮನೆಗೆ ರಾತ್ರೋರಾತ್ರಿ ನುಗ್ತಾರೆ, ಕೊಲೆ ಮಾಡ್ತಾರೆ ಎಂದು ಪ್ರಥ್ವಿ ಸಿಂಗ್ ಭಯದಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ನಮಗೆ ಎಳ್ಳಷ್ಟೂ ನಂಬಿಕೆಯಿಲ್ಲ, ಅಧಿಕಾರದ ದರ್ಪದಿಂದ ಸಚಿವರ ತಮ್ಮ ಯಾವ ರೀತಿ ನಡೆದುಕೊಂಡಿದ್ದಾನೆ ಎಂದು ಎಲ್ಲರೂ ನೋಡ್ತಿದ್ದಾರೆ. ಅಧಿಕಾರದ ಸೊಕ್ಕಿನಿಂದ ಮೆರೆಯುತ್ತಿರುವವರಿಗೆ ತಕ್ಕ ಪಾಠ ಆಗಬೇಕು,ʼʼ ಎಂದು ಹೇಳಿದ ವಿಜಯೇಂದ್ರ ಅವರು, ಎಂಎಲ್ಸಿ ಆದಿಯಾಗಿ ಎಲ್ಲರ ಬಂಧನಕ್ಕೆ ಆಗ್ರಹಿಸಿದರು.

ʻʻಘಟನೆಯನ್ನು ಗಂಬೀರವಾಗಿ ಪರಿಗಣಿಸಬೇಕು, ಎಲ್ಲಾ ದುಷ್ಟರನ್ನೂ ಬಂಧಿಸಬೇಕು, ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ, ಮೊದಲು ಎಫ್ ಐ ಆರ್ ಆಗಲಿʼʼ ಎಂದು ವಿಜಯೇಂದ್ರ ಆಗ್ರಹಿಸಿದರು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

Prtithvi singh attacked

ಮಣಿಕಂಠ ರಾಥೋಡ್‌ ಹಲ್ಲೆ ನೆನಪಿಸಿದ ವಿಜಯೇಂದ್ರ

ʻʻಗುಲ್ಬರ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್ ಮೇಲೆ ಇದೇ ರೀತಿ ಹಲ್ಲೆಯಾಗಿತ್ತು. ಗುಲ್ಬರ್ಗದಲ್ಲಿ ನಡೆದ ಘಟನೆ ರಾಜ್ಯಕ್ಕೆ ವ್ಯಾಪಿಸುತ್ತಿದೆʼʼ ಎಂದು ಹೇಳಿದ ವಿಜಯೇಂದ್ರ, ಎಂಎಲ್‌ಸಿ ಹಟ್ಟಿಹೊಳಿ ಅವರನ್ನು ಬಂಧಿಸದೆ ಇದ್ದರೆ ರಾಜ್ಯದ ಪ್ರತಿ ಬಿಜೆಪಿ ಕಾರ್ಯಕರ್ತರು ರಸ್ತೆಗೆ ಇಳಿಯುತ್ತಾರೆ ಎಂದು ಎಚ್ಚರಿಸಿದರು.

ʻʻಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಕ್ಕೆ ಪೃಥ್ವಿ ಸಿಂಗ್‌ಗೆ ಬೆದರಿಕೆ ಹಾಕಲಾಗಿತ್ತು.ʼʼ ಎಂದು ಹೇಳಿದ ವಿಜಯೇಂದ್ರ ಅವರು ಪೃಥ್ವಿ ಸಿಂಗ್‌ ಅವರ ಮೇಲೆ ಇನ್ನೂ ಹಲವು ಪ್ರಕರಣಗಳಿವೆ, ಅವರ ಹೆಸರು ಬರೆದಿಟ್ಟು ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆಯನ್ನು ಆಕ್ಷೇಪಿಸಿದರು.

ʻʻಒಬ್ಬ ಜವಾಬ್ದಾರಿಯುತ ಸಚಿವರು ಈ ರೀತಿ ಹೇಳಿಕೆ ಕೊಡಬಾರದು, ನಿಮ್ಮ ತಮ್ಮ ಎಲ್ಲಿದ್ದಾನೆ ಹುಡುಕಿ ಮೊದಲು ಪೊಲೀಸರಿಗೆ ಕೊಡಿʼʼ ಎಂದರು ವಿಜಯೇಂದ್ರ.

Continue Reading

ಕರ್ನಾಟಕ

Lakshmi Hebbalkar : ಜಾರಕಿಹೊಳಿ ಆಪ್ತನಿಗೆ ಹೆಬ್ಬಾಳ್ಕರ್‌ ಸೋದರನ ಗ್ಯಾಂಗ್‌ನಿಂದ ಚೂರಿ ಇರಿತ

Lakshmi Hebbalkar : ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್‌ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಇದನ್ನು ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಸೋದರನ ಗ್ಯಾಂಗ್‌ ನಡೆಸಿದೆ ಎಂದು ಆರೋಪಿಸಲಾಗಿದೆ.

VISTARANEWS.COM


on

Prtithvi singh attacked
ಗಾಯಗೊಂಡಿರುವ ಪೃಥ್ವಿ ಸಿಂಗ್‌
Koo

ಬೆಳಗಾವಿ: ಬೆಳಗಾವಿಯ ಬಿಜೆಪಿ ಮುಖಂಡ (Belagavi BJP Leader), ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್‌ (55) (Attack on Prithvi singh) ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರ ಸಹೋದರ ಚನ್ನರಾಜ ಹಟ್ಟಿಹೊಳಿಯ (Channaraja Hattiholi) ಆಪ್ತರು ಹಲ್ಲೆ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ. ಪೃಥ್ವಿ ಸಿಂಗ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarakiholi) ಅವರ ಅತ್ಯಾಪ್ತರಲ್ಲಿ ಒಬ್ಬರು.

ಚನ್ನರಾಜ್‌ ಹಟ್ಟಿಹೊಳಿ ಅವರ ಗ್ಯಾಂಗ್‌ ಪೃಥ್ವಿ ಸಿಂಗ್‌ ಅವರ ಮನೆಗೇ ಹೋಗಿ ಹಲ್ಲೆ ಮಾಡಿದೆ ಎಂದು ಆಪಾದಿಸಲಾಗಿದೆ. ಈ ಬಗ್ಗೆ ವಿಡಿಯೊ ದಾಖಲೆಯನ್ನೂ ನೀಡಿರುವ ಪೃಥ್ವಿ ಸಿಂಗ್‌ ಅವರು, ಪ್ರಸಕ್ತ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದಾರೆ.

Prtithvi singh attacked
ಹಲ್ಲೆಗೊಳಗಾದ ಪೃಥ್ವಿ ಸಿಂಗ್

ಚನ್ನರಾಜ್‌ ಹಟ್ಟಿಹೊಳಿ ಅವರ ಬಾಡಿಗಾರ್ಡ್‌ಗಳು ಮತ್ತು ಆಪ್ತರಾದ ಸದ್ದಾಂ, ಸುಜಯ್‌ ಜಾಧವ್‌ ಅವರ ಪೃಥ್ವಿ ಸಿಂಗ್‌ ಮನೆಗೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ತಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಪೃಥ್ವಿ ಸಿಂಗ್‌. ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಪೊಲೀಸರಿಗೆ ನೀಡಲಾಗಿದೆ.

Prtithvi singh attacked
ಪೃಥ್ವಿ ಸಿಂಗ್‌ ಕೈಗೆ ಗಾಯವಾಗಿರುವುದು

ಕೈಗಳಿಗೆ ಚಾಕು ಇರಿತ

ಬೆಳಗಾವಿಯ ಜಯ ನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ. ಅವರನ್ನು ಅವರ ಪುತ್ರ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ಹೋಗುವ ಮುನ್ನ ಪೃಥ್ವಿ ಸಿಂಗ್‌ ಅವರು ವಿಡಿಯೊ ಒಂದನ್ನು ಬಿಡುಗಡೆ ಮಾತನಾಡಿ, ಚನ್ನರಾಜ್‌ ಹಟ್ಟಿಹೊಳಿ ಅವರ ತಂಡ ತನಗೆ ಹಲ್ಲೆ ಮಾಡಿದೆ ಎಂದು ಆಪಾದಿಸಿದ್ದಾರೆ.

ಇದನ್ನೂ ಓದಿ: ವಿಶೇಷಚೇತನರ ಬೇಡಿಕೆ ಶೀಘ್ರ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಆಸ್ಪತ್ರೆಗೆ ದೌಡಾಯಿಸಿದ ಬಿಜೆಪಿ ನಾಯಕರು

ಈ ನಡುವೆ, ಅಧಿವೇಶನಕ್ಕಾಗಿ ಬೆಳಗಾವಿಯಲ್ಲಿರುವ ಬಿಜೆಪಿ ನಾಯಕರು ಕೆಎಲ್‌ಇ ಆಸ್ಪತ್ರೆಗೆ ಭೇಟಿ ನೀಡಿ ಪೃಥ್ವಿ ಸಿಂಗ್‌ ಅವರ ಆರೋಗ್ಯ ವಿಚಾರಿಸಿದ್ದಾರೆ. ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಅವರು ಪೃಥ್ವಿ ಸಿಂಗ್‌ ಅವರಿಗೆ ಧೈರ್ಯ ತುಂಬಿದ್ದಾರೆ ಮತ್ತು ಹಲ್ಲೆಕೋರರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಯಾರೇ ಹಲ್ಲೆ ಮಾಡಿದರೂ ಕಠಿಣ ಕ್ರಮ ಎಂದ ಪರಮೇಶ್ವರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರನ ಆಪ್ತರು ಪೃಥ್ವಿ ಸಿಂಗ್‌ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು, ʻʻಏನೇ ಇದ್ದರೂ ನಮ್ಮ‌ ಪೊಲೀಸರು ನೋಡಿಕೊಳ್ತಾರೆ.. ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುತ್ತಾರೆ.. ನಾನು ಈಗಷ್ಟೇ ಅಧಿವೇಶನ‌ ಮುಗಿಸಿ ಬಂದಿದ್ದೇನೆ ನೋಡ್ತೀನಿʼʼ ಎಂದು ಪರಮೇಶ್ವರ್ ಹೇಳಿದರು.

ದುರುದ್ದೇಶಪೂರ್ವಕ ಆರೋಪ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ಪೃಥ್ವಿ ಸಿಂಗ್ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ ಶರ್ಟ್‌ ಹಾಕಿದ್ದು ಸೆರೆಯಾಗಿದೆ. ಆದರೆ ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈತ ದುರದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುವುದು ಪತ್ತೆ ಹಚ್ಚಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಚನ್ನರಾಜ್‌ ಹಟ್ಟಿಹೊಳಿ ಆಪ್ತರು ಪೃಥ್ವಿ ಸಿಂಗ್‌ ಮನೆಗೆ ಬಂದಿರುವ ದೃಶ್ಯ

Continue Reading
Advertisement
dina bhavishya read your daily horoscope predictions for December 5 2023
ಪ್ರಮುಖ ಸುದ್ದಿ29 mins ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

Shirshendu Mukhopadhyay
ಕರ್ನಾಟಕ5 hours ago

Shirshendu Mukhopadhyay: ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಶೀರ್ಷೇಂಧು ಮುಖ್ಯೋಪಧ್ಯಾಯ ಆಯ್ಕೆ

Bangalore Bulls
ಕ್ರೀಡೆ6 hours ago

Pro Kabaddi : ಬೆಂಗಳೂರು ತಂಡಕ್ಕೆ ಸತತ ಎರಡನೇ ಸೋಲು

Siddaramaiah
ಕರ್ನಾಟಕ6 hours ago

CM Siddaramaiah: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿದ್ದರಾಮಯ್ಯ

WhatsApp new feature lets you search users by their username Says Report
ಗ್ಯಾಜೆಟ್ಸ್6 hours ago

WhatsApp: ವಾಟ್ಸಾಪ್‍ನಲ್ಲಿ ಬಳಕೆದಾರರನ್ನು ಅವರ ಯೂಸರ್‌ನೇಮ್ ಮೂಲಕವೇ ಹುಡುಕಬಹುದು!

Top 10 news
ಕರ್ನಾಟಕ7 hours ago

VISTARA TOP 10 NEWS : ಮೋದಿ ಗೆಲ್ಲಿಸಿದ ಮಹಿಳೆಯರು, ಭವಾನಿ ದರ್ಪಕ್ಕೆ ಎಲ್ಲೆಡೆ ಆಕ್ರೋಶ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Dasara Elephant Arjuna
ಕರ್ನಾಟಕ8 hours ago

Dasara Elephant Arjuna: ಅರ್ಜುನನ ನಿಧನಕ್ಕೆ ಸಿಎಂ, ಡಿಸಿಎಂ, ನಟ ದರ್ಶನ್ ಸೇರಿ ಗಣ್ಯರ ಸಂತಾಪ

]cashless medical treatment for accident victims by central Government
ದೇಶ8 hours ago

ರಸ್ತೆ ಅಪಘಾತದ ಗಾಯಾಳುಗಳಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ! ಕೇಂದ್ರದಿಂದ ರಾಷ್ಟ್ರಾದ್ಯಂತ ಜಾರಿ

Cricket news
ಕ್ರಿಕೆಟ್8 hours ago

ind vs aus : ಆಸ್ಟ್ರೇಲಿಯಾ- ಭಾರತ ಟಿ20 ಪಂದ್ಯದ ಅಂಪೈರ್​ ಮೇಲೆ ಮೋಸದ ಅರೋಪ!

Hori festival in maavali at soraba taluk
ಶಿವಮೊಗ್ಗ8 hours ago

Shivamogga News: ಮಾವಲಿ ಗ್ರಾಮದಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ29 mins ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌