HSRP Number Plate: ನೀವೇ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬುಕ್‌ ಮಾಡಿ; ಇಲ್ಲಿದೆ ಸರಳ ಟಿಪ್ಸ್! - Vistara News

ಬೆಂಗಳೂರು

HSRP Number Plate: ನೀವೇ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬುಕ್‌ ಮಾಡಿ; ಇಲ್ಲಿದೆ ಸರಳ ಟಿಪ್ಸ್!

HSRP Number Plate: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ದ್ವಿಚಕ್ರ, ತ್ರಿಚಕ್ರ ಸೇರಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ. ಬದಲಾವಣೆಗೆ ಇನ್ನು 12 ಬಾಕಿ ಇದ್ದು, ತಪ್ಪಿದರೆ ಭಾರಿ ದಂಡವನ್ನು ತೆರಬೇಕಾದೀತು. ಅಲ್ಲದೆ, ಹೇಗೆ ನೋಂದಣಿ ಮಾಡಿಸಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

HSRP Number Plate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ – High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದಿದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ಫೆ. 17 ಕೊನೇ ದಿನ ಎಂದು ತಿಳಿಸಲಾಗಿದೆ. ಆದರೆ, ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೇ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಆದರೆ, ಇದಕ್ಕೆ ಸರಳ ವಿಧಾನವಿದೆ. ಅಲ್ಲದೆ, ಯಾವುದ್ಯಾವುದೋ ವೆಬ್‌ಸೈಟ್‌ಗೆ ಹೋಗಿ ಬುಕ್‌ ಮಾಡದೆ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್‌ ಮಾಡುವುದು ಒಳಿತು.

ಒಂದು ವೇಳೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಬುಕಿಂಗ್‌ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡದೇ ಹೋದರೆ, ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ ದಂಡ ಕಟ್ಟಬೇಕಾಗುತ್ತದೆ. 500 ರೂಪಾಯಿಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ವಿಧಿಸಬಹುದು ಇಲ್ಲವೇ ಇನ್ನೂ ಹೆಚ್ಚಿನ ಮೊತ್ತವನ್ನು ಸಹ ನಿಗದಿ ಮಾಡಬಹುದು. ಆದರೆ, ಈ ಬಗ್ಗೆ ಇನ್ನೂ ಯಾವುದೇ ರೀತಿಯಾದಂತಹ ಸ್ಪಷ್ಟತೆ ಇಲ್ಲ. ಹೀಗಾಗಿ ಈಗ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಬುಕ್‌ ಮಾಡಲು ಇರುವುದು 12 ದಿನ ಮಾತ್ರ.

ಅಧಿಸೂಚನೆ ಹೊರಡಿಸಿದ್ದ ಸರ್ಕಾರ

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು (High Security Registration Plate-ಎಚ್‌ಎಸ್‌ಆರ್‌ಪಿ) ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

ಅರ್ಜಿ ಸಲ್ಲಿಕೆಗೆ ನವೆಂಬರ್‌ 17 ಕೊನೇ ದಿನವಾಗಿತ್ತು

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ನ. 17ರೊಳಗೆ ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಬಗ್ಗೆ ಈಚೆಗೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎ.ಎಂ ಮಾಹಿತಿ ನೀಡಿದ್ದರು. ಈ ಅವಧಿಯನ್ನು ಫೆ. 17ರವರೆಗೆ ವಿಸ್ತರಣೆ ಮಾಡಲಾಗಿತ್ತು. ಆದರೆ, ಪುನಃ ವಿಸ್ತರಣೆಯಾಗುವುದು ಖಾತ್ರಿ ಇಲ್ಲ.

ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು? ಇಲ್ಲಿದೆ ವಿಡಿಯೊ

ಹೆಚ್ಚುವರಿ ಹಣ ವಸೂಲಿ ಮಾಡಿದರೆ ದೂರು ನೀಡಿ: ರಾಮಲಿಂಗಾ ರೆಡ್ಡಿ

HSRP ಅಳವಡಿಸಲು ಹೆಚ್ಚುವರಿ ಹಣ ವಸೂಲಿ ವಿಚಾರ ಸರ್ಕಾರದ ಗಮನಕ್ಕೆ ಬರುತ್ತಿದೆ. ಈ ಬಗ್ಗೆ ದೂರುಗಳು ಸಹ ಕೇಳಿ ಬಂದಿವೆ. ಅಲ್ಲದೆ, ಸರಿಯಾಗಿ ಅಳವಡಿಸದೇ ಇದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಾಗರಿಕರು ಹೆಚ್ಚುವರಿ ಹಣ ವಸೂಲಿ ಮಾಡುವಂತಹ ಡೀಲರ್‌ಗಳ ಮೇಲೆ ದೂರು ನೀಡಬೇಕು. ಸಾರಿಗೆ ಇಲಾಖೆಯ ಆಯುಕ್ತರಿಗೆ ದೂರು ನೀಡಿದರೆ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಪದೇ ಪದೆ ಗ್ರಾಹಕರಿಗೆ ಕಿರಿಕಿರಿ ಮಾಡಿದರೆ ಅಂತಹ ಡೀಲರ್‌ಗಳನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
  2. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
  7. ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
  9. ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

  1. ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
  5. HSRP ಅಳವಡಿಕೆಗೆ ನವೆಂಬರ್‌ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ | Gruha Lakshmi: ಗೃಹಲಕ್ಷ್ಮಿ ಹಣ ಯಾರಿಗೆ ಬಂತು? ತಿಳಿಯುವ ಸರಳ ಉಪಾಯ ಇಲ್ಲಿದೆ!

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

  1. HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
  2. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
  3. ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
  4. ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
  5. ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
  6. ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest11 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌