ಬೆಂಗಳೂರು: ಕಲಬುರಗಿಯ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಉದಯ ಪ್ರಕಾಶನದ ಸಹಯೋಗದಲ್ಲಿ ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜೇಂದ್ರ ಪರಿಷನ್ಮಂದಿರದಲ್ಲಿ ಇದೇ ಜೂ. 5ರಂದು ಬುಧವಾರ ಸಂಜೆ 5.30ಕ್ಕೆ ಜ್ಞಾನಸಿಂಧು ಚಿದಾನಂದಾವಧೂತರ ವೇದಾಂತ ಕಾವ್ಯ (ಸಂ.: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ) ಗ್ರಂಥ ಲೋಕಾರ್ಪಣೆ (Book Release) ಮತ್ತು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಧಾರವಾಡದ ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಗುರುಗಳು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ಮತ್ತು ಗ್ರಂಥ ಲೋಕಾರ್ಪಣೆ ಮಾಡುವರು. ಬೆಂಗಳೂರಿನ ಕರ್ನಾಟಕ ಗಾಂಧಿಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಪ್ರಶಸ್ತಿ ಪ್ರದಾನ ಮಾಡುವರು. ಹುಬ್ಬಳ್ಳಿ ಸಿದ್ಧಾರೂಢ ಆಶ್ರಮದ ಟ್ರಸ್ಟಿ ಶಾಮಾನಂದ ಪೂಜೇರಿ ಗ್ರಂಥ ಪರಿಚಯ ಮಾಡುವರು.
ಇದನ್ನೂ ಓದಿ: Samsung: ಸ್ಯಾಮ್‌ಸಂಗ್‌ನ ʼಬಿಗ್ ಟಿವಿ ಡೇಸ್ʼ ಸೇಲ್; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್!
ಬೆಂಗಳೂರಿನ ಕೃಷ್ಣರಾಜಪುರದಲ್ಲಿರುವ ಸಿಲಿಕಾನ್ ಸಿಟಿ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಎಚ್.ಎಸ್. ಗೋವರ್ಧನ ಅವರು ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಸ್ವೀಕರಿಸುವರು. ಬೆಂಗಳೂರಿನ ವರ್ತೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಚಂದ್ರಪ್ಪ, ಪ್ರೊ. ಮಲ್ಲೇಪುರಂ ಪುಸ್ತಕ ಬಹುಮಾನ (ದಿ. ಬಸಲಿಂಗಪ್ಪ ಮಲ್ಕಪ್ಪ ಕಟ್ಟಿ ಸ್ಮರಣಾರ್ಥ) ಸ್ವೀಕರಿಸುವರು.
ಇದನ್ನೂ ಓದಿ: Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ
ಮುಖ್ಯ ಅತಿಥಿಯಾಗಿ ಬೆಂಗಳೂರಿನ ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಪಾಲ್ಗೊಳ್ಳುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಗ್ರಂಥ ಸಂಪಾದಕರ ನುಡಿಗಳನ್ನಾಡಲಿದ್ದಾರೆ.