Site icon Vistara News

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.28 ಮತ್ತು 29ರಂದು ಎರಡು ದಿನಗಳ ಕಾಲ 14 ಸಂಪುಟಗಳ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು (Book Release) ಮತ್ತು ʼತೇಜಸ್ವಿ ಎಂಬ ವಿಸ್ಮಯʼ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ, ʼಪೂರ್ಣಚಂದ್ರʼ ಚಿತ್ರ ಸಂಪುಟ ಬಿಡುಗಡೆ ಹಾಗೂ ತೇಜಸ್ವಿ ಸಾಹಿತ್ಯ: ಸಾಂಸ್ಕೃತಿಕ ಹಬ್ಬ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಮೆ.ಮುನಿಸ್ವಾಮಿ ಅಂಡ್‌ ಸನ್ಸ್‌, ಎಂ. ಚಂದ್ರಶೇಖರ್‌ ಪ್ರತಿಷ್ಠಾನ ಬೆಂಗಳೂರು, ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಬೆಂಗಳೂರು ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಜು.28ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಸಾಹಿತಿ ಪ್ರೊ. ಬಿ.ಎನ್‌.ಶ್ರೀರಾಮ್‌ ಉದ್ಘಾಟಿಸುವರು. ಶಾಸಕ ಸಿ.ಎನ್‌. ಅಶ್ವತ್ಥ್‌ ನಾರಾಯಣ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳ ಕುರಿತ ಬೃಹತ್‌ ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ ಮಾಡುವರು.

ಇದನ್ನೂ ಓದಿ: Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಂ.ಚಂದ್ರಶೇಖರ್‌ ಪ್ರತಿಷ್ಠಾನದ ಸದಸ್ಯೆ ಸರೋಜ ಎಂ.ಚಂದ್ರಶೇಖರ್‌, ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಡಾ.ಕೆ. ಚಿದಾನಂದಗೌಡ, ನಾಡೋಜ ಡಾ. ವೂಡೇ ಪಿ. ಕೃಷ್ಣ, ಪ್ರೊ.ಎಸ್‌.ಜಿ. ಸಿದ್ಧರಾಮಯ್ಯ, ಹಂಪಿ ಕನ್ನಡ ವಿವಿಯ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಂ. ಚಂದ್ರಶೇಖರ್‌ ಪ್ರತಿಷ್ಠಾನದ ಅಧ್ಯಕ್ಷ ನ್ಯಾಯಮೂರ್ತಿ ಎ.ಜೆ. ಸದಾಶಿವ ಅಧ್ಯಕ್ಷತೆ ವಹಿಸುವರು.

ಜು.29ರಂದು ಸೋಮವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 14 ಸಂಪುಟಗಳ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು ಲೋಕಾರ್ಪಣೆ ಮಾಡುವರು. ಬೆಂಗಳೂರಿನ ಎಂ. ಚಂದ್ರಶೇಖರ್‌ ಪ್ರತಿಷ್ಠಾನದ ಸದಸ್ಯೆ ಸರೋಜ ಎಂ.ಚಂದ್ರಶೇಖರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಇದನ್ನೂ ಓದಿ: Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್‌. ಶಂಕರ್‌, ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಡಾ.ಕೆ. ಚಿದಾನಂದಗೌಡ, ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ, ಲೇಖಕಿ ತಾರಿಣಿ ಚಿದಾನಂದ, ಜಯರಾಮ್‌ ರಾಯ್‌ಪುರ ಅವರು ಪಾಲ್ಗೊಳ್ಳುವರು. ಎರಡು ದಿನಗಳ ಕಾಲ ವಿಶೇಷ ಉಪನ್ಯಾಸ, ಸಂವಾದ ಹಾಗೂ ನಾಲ್ಕು ಗೋಷ್ಠಿಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version