Book Release: ಫೆ.29ರಂದು ಎಚ್‌.ಡಿ.ದೇವೇಗೌಡರ ಕುರಿತ ʼಮಣ್ಣಿನ ಮಗʼ ಕೃತಿ ಲೋಕಾರ್ಪಣೆ - Vistara News

ಬೆಂಗಳೂರು

Book Release: ಫೆ.29ರಂದು ಎಚ್‌.ಡಿ.ದೇವೇಗೌಡರ ಕುರಿತ ʼಮಣ್ಣಿನ ಮಗʼ ಕೃತಿ ಲೋಕಾರ್ಪಣೆ

Book Release: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿಯ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಫೆ.29ರಂದು ʼಮಣ್ಣಿನ ಮಗʼ ಕೃತಿ ಬಿಡುಗಡೆಯಾಗಲಿದೆ.

VISTARANEWS.COM


on

HD Deve Gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುರಿತು ನೇ.ಭ.ರಾಮಲಿಂಗ ಶೆಟ್ಟಿ ಅವರು ಬರೆದಿರುವ ಹಾಗೂ ಸ್ನೇಹ ಬುಕ್‌ ಹೌಸ್‌ ಪ್ರಕಟಿಸಿರುವ ʼಮಣ್ಣಿನ ಮಗʼ ಕೃತಿಯ (Book Release) ಲೋಕಾರ್ಪಣೆ ಕಾರ್ಯಕ್ರಮವನ್ನು ಫೆ.29ರಂದು ಸಂಜೆ 5 ಗಂಟೆಗೆ ನಗರದ ಚಾಮರಾಜಪೇಟೆಯ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ. ನಾಡೋಜ ಡಾ.ಮಹೇಶ ಜೋಶಿ ಅವರು ʼಮಣ್ಣಿನ ಮಗʼ ಕೃತಿ ಬಿಡುಗಡೆ ಮಾಡಲಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ನಾಡೋಜ ಹಂ.ಪ.ನಾಗರಾಜಯ್ಯ ಅವರು ಕೃತಿ ಬಗ್ಗೆ ಶುಭನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಡಾ.ಸಿ.ಎನ್‌.ಮಂಜುನಾಥ್‌, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಭಾಗವಹಿಸಲಿದ್ದು, ಕೃತಿಯ ಲೇಖಕ ನೇ.ಭ.ರಾಮಲಿಂಗಾರೆಡ್ಡಿ, ಸ್ನೇಹ ಬುಕ್‌ ಹೌಸ್‌ ಪ್ರಕಾಶಕ ಕೆ.ಬಿ.ಪರಶಿವಪ್ಪ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಶತಮಾನದಾಚೆಗೆ ವಿಸ್ತರಿಸಿದ ಪ್ರತಿಭೆ ಪ್ರೊ || ಎಲ್.ಎಸ್. ಶೇಷಗಿರಿರಾವ್

ʼಮಣ್ಣಿನ ಮಗʼ ಎಚ್.ಡಿ. ದೇವೇಗೌಡರು: ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಪುಸ್ತಕ ಬಿಡುಗಡೆಯಾಗುತ್ತಿರುವುದಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಂತಸ ವ್ಯಕ್ತಪಡಿಸಿದ್ದು, ʼಮಣ್ಣಿನ ಮಗʼ ಕೃತಿಗಾಗಿ ಶ್ರೀಗಳು ಬರೆದ ಶುಭನುಡಿ ಲೇಖನದ ಆಯ್ದ ಭಾಗ ಇಲ್ಲಿ ನೀಡಲಾಗಿದೆ.

ಎಚ್.ಡಿ. ದೇವೇಗೌಡರು ನಾಡಷ್ಟೇ ಅಲ್ಲ, ದೇಶ ಕಂಡ ಅಪರೂಪದ ರಾಜಕಾರಣಿ. ಸಾಮಾಜಿಕ ಬದ್ಧತೆ ಹೊಂದಿರುವ ರಾಜಕೀಯ ಮುತ್ಸದ್ದಿ. ರಾಜ್ಯದ ಜನಪ್ರಿಯ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನ ಮಂತ್ರಿಯಾಗಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವುದು ಕರ್ನಾಟಕದ ಹೆಮ್ಮೆ. ದೇಶದ ಪ್ರಧಾನ ಮಂತ್ರಿಯಾಗಿ ಸಮರ್ಥವಾಗಿ ಹಾಗೂ ದಕ್ಷತೆಯಿಂದ ಆಡಳಿತ ನಡೆಸಿ ಹತ್ತಾರು ವರ್ಷಗಳಲ್ಲಿ ಸಾಧಿಸಬೇಕಾದ್ದನ್ನು ಕೇವಲ ಹತ್ತು ತಿಂಗಳಲ್ಲಿ ಸಾಧಿಸಿದ ಖ್ಯಾತಿ ಇವರದು. ಜಾತಿ ಮತಗಳ ಎಲ್ಲೆಯನ್ನು ಮೀರಿ ಸರ್ವಜನರ ಕಲ್ಯಾಣಕ್ಕೆ ದುಡಿದವರು. ನಿಸ್ಪೃಹತೆ ಹಾಗೂ ಪ್ರಾಮಾಣಿಕತೆಯಿಂದ ತಾವು ನಿರ್ವಹಿಸಿದ ಹುದ್ದೆಗೆ ಮೆರುಗನ್ನು ತಂದವರು. ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಚಿವರಾಗಿ, ಮುಖ್ಯಮಂತ್ರಿಗಳಾಗಿ, ಪ್ರಧಾನಮಂತ್ರಿಗಳಾಗಿ ಸಮಷ್ಟಿಯ ಹಿತಕ್ಕಾಗಿ ಅವರು ಸಾಧಿಸಿದ್ದು ಅಪಾರ, ವಿರೋಧಿಗಳು ಬೆರಗಾಗುವಂತೆ ಆಡಳಿತ ನಡೆಸಿ ದಕ್ಷ ಆಡಳಿತಗಾರ ಎಂಬ ಹಿರಿಮೆಗೆ ಪಾತ್ರರಾದವರು.

ಗೌಡರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ದೇವತೆಗಳಲ್ಲಿ ಅಪಾರ ಶ್ರದ್ಧೆ ಹಾಗೂ ಭಕ್ತಿ. ಇಂದಿಗೂ ನಮ್ಮ ಶ್ರೀಮಠದ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಮಠವು ಕೈಗೊಳ್ಳುವ ಲೋಕಸೇವಾ ಕೈಂಕರ್ಯಗಳಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಜೊತೆಗೆ ಶ್ರೀಮಠವು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತಿರುವುದು ನಮಗೆ ಬಹಳ ಸಂತಸವನ್ನುಂಟು ಮಾಡಿದೆ.

ಗೌಡರು ಸರಳತೆ, ಸೌಜನ್ಯ, ಕ್ರಿಯಾಶೀಲತೆಗೆ ಹಾಗೂ ದೃಢ ನಿಲುವಿಗೆ ಖ್ಯಾತನಾಮರು. ಜನಸಾಮಾನ್ಯರ ಬದುಕುಬವಣೆಗಳನ್ನು ಸ್ವತಃ ಅನುಭವಿಸಿ ಜೀವನಾನುಭವ ಹೊಂದಿರುವ ಗೌಡರು ಜನಸಾಮಾನ್ಯರ ಕ್ಷೇಮಕ್ಕಾಗಿಯೇ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟು ಜನನಾಯಕರೆನಿಸಿಕೊಂಡರು. ನಾಡು, ನುಡಿ, ನೆಲ, ಜಲ ರಕ್ಷಣೆಯ ವಿಷಯದಲ್ಲಿ ಗೌಡರದು ನಿಲ್ಲದ ಪಯಣ. ಮೊದಲ ಬಾರಿಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದ ಕೀರ್ತಿ ದೇವೇಗೌಡರದು.

ದೇವೇಗೌಡರನ್ನು ಕುರಿತು ಈಗಾಗಲೇ ಹಲವು ಕೃತಿಗಳು, ಅಭಿನಂದನಾ ಗ್ರಂಥಗಳು ಪ್ರಕಟನೆಗೊಂಡಿವೆ. ಪ್ರಸ್ತುತ ವಿವಿಧ ಸಂಘಸಂಸ್ಥೆಗಳಲ್ಲಿ ಹಾಗೂ ಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಲೇಖಕರಾದ ನೇ.ಭ. ರಾಮಲಿಂಗಶೆಟ್ಟಿ ಅವರು ಎಚ್.ಡಿ. ದೇವೇಗೌಡರ ಜೀವನ ಹಾಗೂ ಸಾಧನೆಯನ್ನು ದಾಖಲಿಸುವ ನಿಟ್ಟಿನಲ್ಲಿ ‘ಮಣ್ಣಿನ ಮಗ’ ಎಂಬ ಕೃತಿಯನ್ನು ರಚಿಸಿರುವುದು ಸ್ತುತ್ಯಾರ್ಹ. ಗೌಡರ ಬದುಕಿನ ಸಾರವನ್ನು ಹಾಗೂ ಅವರ ಸಾಧನೆಗಳನ್ನು ತನ್ನೊಡಲಿನೊಳಗೆ ಇರಿಸಿಕೊಂಡಿರುವ ಈ ಕೃತಿಯು ಮುಂದಿನ ತಲೆಮಾರಿನ ಹೃನ್ಮನದಲ್ಲಿ ಗೌಡರ ಜೀವನಾದರ್ಶವನ್ನು ಬಿತ್ತಲು ಸಹಕಾರಿಯಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Traffic Advisory : ಜೂನ್‌ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಅಂದು ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಮುತ್ತ ಬೆಂಗಳೂರಿನಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅದರ ಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Traffic Advisory
Koo

ಬೆಂಗಳೂರು: ಜೂನ್‌ 4ರ ಮಂಗಳವಾರದಂದು ಲೋಕಸಭಾ ಚುನಾವಣೆ 2024ರ (Lok sabha election 2024) ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ನಡೆಯುವ ಕೇಂದ್ರಗಳ ಸುತ್ತಮುತ್ತ ನಿಷೇಧ (Traffic Advisory) ಹೇರಲಾಗಿದೆ. ಜೂ.4 ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೂ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಬೆಂಗಳೂರಿನ ಸೇಂಟ್‌ ಜೋಸೆಪ್‌ ಕಾಲೇಜು, ಎಸ್ಎಸ್ಎಂಆರ್‌ವಿ ಕಾಲೇಜು ಹಾಗೂ ಮೌಂಟ್ ಕಾರ್ಮೆಲ್ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಸಂಚಾರವನ್ನು (Traffic Advisory) ನಿರ್ಬಂಧಿಸಲಾಗಿದೆ.

ಸೇಂಟ್‌ ಜೋಸೆಫ್‌ ಕಾಲೇಜು ಸುತ್ತಮುತ್ತ ಪಾರ್ಕಿಂಗ್ ನಿಷೇಧ

ವಿಠಲ್‌ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್‌ ಕಾಲೇಜಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಮಾಡುವಂತಿಲ್ಲ. ಸಾರ್ವಜನಿಕರು ರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದೇ ಬದಲೀ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಲು ಕೋರಲಾಗಿದೆ. ವಾಹನಗಳ ಪಾರ್ಕಿಂಗ್ ಮಾಡಲು ನಿಷೇಧಿಸಿರುವ ರಸ್ತೆಗಳು ಹೀಗಿವೆ.
-ವಿಠಲ್ ಮಲ್ಯ ರಸ್ತೆ :- ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಚಂಡ್ ಜಂಕ್ಷನ್‌ವರೆಗೆ
-ಆರ್.ಆರ್.ಎಂ.ಆರ್ ರಸ್ತೆ- ರಿಚ್ಚಂಡ್ ಸರ್ಕಲ್‌ನಿಂದ ಹಡ್ರನ್ ಜಂಕ್ಷನ್‌ವರೆಗೆ
-ಎನ್ ಆರ್ ರಸ್ತೆ: ಹಡ್ನನ್ ಸರ್ಕಲ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ
-ಕೆ ಬಿ ರಸ್ತೆ: ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವೀನ್ಸ್ ಜಂಕ್ಷನ್‌ವರೆಗೆ
-ಕೆ ಜಿ ರಸ್ತೆ ಪೊಲೀಸ್ ಕಾರ್ನರ್ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ಜಂಕ್ಷನ್‌ವರೆಗೆ
-ನೃಪತುಂಗ ರಸ್ತೆ : ಕೆ ಆರ್ ಜಂಕ್ಷನ್‌ನಿಂದ ಪೊಲೀಸ್ ಕಾರ್ನರ್‌ವರೆಗೆ
-ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಸಿ.ಟಿ.ಓ ಸರ್ಕಲ್‌ವರೆಗೆ
-ಸೆಂಟ್ರಲ್‌ ಸ್ಟ್ರೀಟ್‌ ರಸ್ತೆ- ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್‌ ಕುಂಬ್ಳೆ ವೃತ್ತದ ವರೆಗೆ
-ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ಜಂಕ್ಷನ್‌ವರೆಗೆ

ಸವಾರರು ವಾಹನಗಳನ್ನು ಪಾರ್ಕಿಂಗ್ ಮಾಡಬೇಕಾದರೆ ಸೇಂಟ್ ಜೋಸೆಫ್ ಕಾಲೇಜು ಮೈದಾನ, ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬಹುದು.

ಜಯನಗರ ಟಿ ಬ್ಲ್ಯಾಕ್‌ ಸಂಚಾರ ನಿರ್ಬಂಧ

ಮೈಕೋಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಲೋಕಸಭೆ ಚುನಾವಣೆ-2024ರ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಯ ಸ್ಥಳದಲ್ಲಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸುವ ಸಲುವಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ.

ಜೂನ್‌ 4 ರಂದು ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಬೆಳಗ್ಗೆ 06 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೆ ಜಯನಗರ ಟಿ ಬ್ಲಾಕ್‌ ನಿರ್ಬಂಧಿಸಲಾಗಿದೆ. 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್ ಹಾಗೂ 32ನೇ ಇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

-ಈಸ್ಟ್ ಎಂಡ್ ಮುಖ್ಯ ರಸ್ತೆ, 39ನೇ ಕ್ರಾಸ್ ರಸ್ತೆ, 18ನೇ ಮುಖ್ಯ ರಸ್ತೆ, 32ನೇ ಇ ಕ್ರಾಸ್ ರಸ್ತೆಗಳನ್ನು ಬಳಸಬಹುದಾಗಿರುತ್ತದೆ.

ಮೌಂಟ್‌ ಕಾರ್ಮೆಲ್‌ ಕಾಲೇಜು ಸುತ್ತಮುತ್ತ ಸಂಚಾರ ನಿರ್ಬಂಧ

ಬೆಂಗಳೂರಿನ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಕೇಂದ್ರದಲ್ಲಿ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅರಮನೆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತಿದೆ.

ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ ಹಾಗೂ ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ವರೆಗೆ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು

-ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು- ಪ್ಯಾಲೇಸ್ ರಸ್ತೆ- ಎಡ ತಿರುವು ಪಡೆದು ಚಕ್ರವರ್ತಿ ಲೇಔಟ್- ಮುಖ್ಯ ಪ್ಯಾಲೇಸ್- ವಸಂತನಗರ ಅಂಡರ್ ಬ್ರಿಡ್ಜ್ ಎಡ ತಿರುವು ಪಡೆದು ಎಂ.ವಿ.ಜಯರಾಮ ರಸ್ತೆ, ಹಳೆ ಉದಯ ಟಿವಿ ಜಂಕ್ಷನ್-ಎಡ ತಿರುವು-ಕಂಟೋನ್ಸೆಂಟ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಬಸವೇಶ್ವರ ಜಂಕ್ಷನ್ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸುವವರು ಬಸವೇಶ್ವರ ಜಂಕ್ಷನ್ – ಓಲ್ಡ್ ಹೈಗೌಂಡ್ ಜಂಕ್ಷನ್, ಕಲ್ಪನಾ ಜಂಕ್ಷನ್ ಬಲ ತಿರುವು-ಚಂದ್ರಿಕಾ ಜಂಕ್ಷನ್-ಎಡ ತಿರುವು ಅಯ್ಯಪ್ಪಸ್ವಾಮಿ ಟೆಂಪಲ್ ಉದಯ ಟಿವಿ ಜಂಕ್ಷನ್ ಕಡೆಯಿಂದ ಎಡ ತಿರುವು-ಎಂ ವಿ ಜಯರಾಂ ರಸ್ತೆ, ಅಥವಾ ನೇರ -ಜಯಮಹಲ್ ರಸ್ತೆ ಅಥವಾ ಬಲ ತಿರುವು ರೈಲ್ವೆ ಸ್ಪಷನ್ ರಸ್ತೆ-ಕಂಟೋನ್ಮಂಟ್ ಮೂಲಕ ಫ್ರೀಜರ್ ಟೌನ್ ಅಥವಾ ಕ್ವೀನ್ಸ್‌ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Karnataka rain : ವಾರದವರೆಗೂ ಬಿಡುವು ನೀಡಿದ್ದ ವರುಣ ನಿನ್ನೆ ಶನಿವಾರದಿಂದ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾದರೆ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ, ವಿಜಯನಗರ ಮತ್ತು ಹಾವೇರಿಯ ಬಹುತೇಕ ಕಡೆಗಳಲ್ಲಿ ಮಳೆಯು ಅಬ್ಬರಿಸಲಿದೆ.

ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ರಾಜಧಾನಿಯಲ್ಲಿ ಅಬ್ಬರದ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲಿನಿಂದ ಕಂಗೆಟ್ಟ ಸಿಟಿ ಮಂದಿಗೆ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ವಾತಾವರಣವೂ ಕೂಲ್‌ ಆಗಿದೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

ಮೈಸೂರಿನಲ್ಲಿ ಗಾಳಿ-ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ

ಮೈಸೂರಿನಲ್ಲಿ ವಿವಿಧೆಡೆ ಭಾರಿ ಮಳೆ ಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿದೆ. ಮಳೆ, ಗಾಳಿಯು ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಮಾಡಿದೆ. ಶನಿವಾರ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳಿ ಗಿಡ ನೆಲಕ್ಕುರುಳಿದ್ದು ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ವ್ಯಾಪ್ತಿಯಲ್ಲಿ ಮಳೆಗೆ ಅಪಾರ ಪ್ರಮಾಣದ ತಂಬಾಕು ಹಾಗೂ ಶುಂಠಿ ಬೆಳೆ ನಾಶವಾಗಿದೆ. ಪೆಂಜಹಳ್ಳಿ, ಹರಳಹಳ್ಳಿ, ಕಿರಂಗೂರು, ಹಿಂಡಗೂಡ್ಲು ಸುತ್ತ ಮುತ್ತ ಸಾಕಷ್ಟು ಮಳೆ ಅವಾಂತರವೇ ಸೃಷ್ಟಿಯಾಗಿತ್ತು. ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದ ಜಮೀನಿನಲ್ಲಿ ಮಳೆಯ ನೀರು ನಿಂತು ಬೆಳೆ ಹಾನಿಯಾಗಿತ್ತು. ಹರಳಹಳ್ಳಿ ಮಾದಳ್ಳಿಕಟ್ಟೆ, ಹುಲಿಕೆರೆ, ಆದ್ವಾಳಕೆರೆ, ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ.

ಕೆಜಿಎಫ್‌ನಲ್ಲಿ ಭರ್ಜರಿ ಮಳೆ

ಕೋಲಾರ ಜಿಲ್ಲೆಯ ವಿವಿಧಡೆ ತಡರಾತ್ರಿ ಗುಡುಗು ಸಿಡಿಲ ಧಾರಾಕಾರ ಮಳೆಯಾಗಿದೆ. ಕೆಜಿಎಫ್‌ನಲ್ಲಿ 6.4 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಬಂಗಾರಪೇಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಜಿಎಫ್‌ನ ಬೆಮಲ್ ಬಡಾವಣೆಯಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರಲಿದೆ. ತಡರಾತ್ರಿ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಗಂಭೀರ

ಇನ್ನೂ ವಿಜಯನಗರದ ನಿವಾಸಿ ಬೈಕ್‌ನಲ್ಲಿ ಬರುವಾಗ ಗಾಳಿ ಮಳೆಗೆ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಇಮ್ಯುನಿಯಲ್ ಎಂಬಾತ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ನ ಮಾರಿಕೊಪ್ಪ ಮತ್ತು ಆಂಧ್ರದ ಕುಪ್ಪಂ ರಾಮಕುಪ್ಪಂ ಬಂಗಾರಪೇಟೆ ಮಾಲೂರು ಕಡೆ ಬಿರುಸಿನ ಮಳೆಯಾಗಿದೆ .ಹಳ್ಳ ಕೊಳ್ಳಗಳು ತುಂಬಿ ನೀರು ಹರಿದಿದೆ. ಇನ್ನು ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ವಿಜಯಪುರದಲ್ಲಿ ಗಾಳಿ ರಭಸ

ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಭಾಗದಲ್ಲಿ ಭಾರಿ ಮಳೆ ಸುರಿದಿದೆ. ಭೀಕರ ಬರಗಾಲದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಭಸವಾಗಿ ಸುರಿದ ಮಳೆಯಿಂದಾಗಿ ಕೆರೆ ಹಾಗೂ ರಸ್ತೆಗಳು ತುಂಬಿ ಹರಿದಿದ್ದವು. ಭಾರಿ ಗಾಳಿ ಸಮೇತವಾಗಿ ಸತತ ಮೂರು ಗಂಟೆ ಸುರಿದ ಮಳೆಗೆ ಮರಗಳು‌ ಹಾಗೂ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Hassan MP Prajwal Revanna case:ಇಂದು ಎಸ್‌ಐಟಿ ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ಎಮ್ ಪಿ ಚುನಾವಣಾ ಎಕ್ಸಿಟ್ ಪೋಲ್ ನಡೀತಿದ್ದು, ಪ್ರಜ್ವಲ್ ರೇವಣ್ಣ ಗೆಲ್ಲುವ ಸಾಧ್ಯತೆ ಎಂಬ ಮಾತಿರುವ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಗರು, ಅಭಿಮಾನಿಗಳು ಸೇರಬಹುದಾದ ಸಂಭವವಿದೆ. ಹೀಗಾಗಿ ಹೀಗಾಗಿ ಇವತ್ತು ಅಥವಾ ನಾಳೆ ಸ್ಥಳ ಮಹಜರು ಮಾಡಿದ್ರೆ ಮುಂದಿನ ಹಂತದ ಪ್ರಕ್ರಿಯೆ ಸುಲಭವಾಗುತ್ತದೆ ಎಂದು ಪ್ಲ್ಯಾನ್‌ ಮಾಡಿರೋ ಎಸ್‌ಐಟಿ, ಸ್ಥಳ ಮಹಜರು ನಂತರ ಮತ್ತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆಸಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ (physical abuse) ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna case) ಮೂರನೇ ದಿನದ ಕಸ್ಟಡಿ ಮುಂದುವರೆದಿದ್ದು, ಇಂದೇ ಸ್ಥಳ ಮಹಜರಿಗೆ ಎಸ್ಐಟಿ ಪ್ಲಾನ್ ಮಾಡಿದೆ. ಕಳೆದ ಎರಡು ದಿನಗಳಿಂದ ವಿಚಾರಣೆ ವೇಳೆ ಪ್ರಜ್ವಲ್‌ ಏನನ್ನೂ ಬಾಯ್ಬಿಡದಿರುವುದ ಎಸ್‌ಐಟಿಗೆ ಭಾರೀ ತಲೆನೋವಾಗಿದೆ. ಎಸ್‌ಐಟಿ (SIT) ಹಲವಾರು ಪ್ರಶ್ನೆಗಳ ಮೂಲಕ ಗ್ರಿಲ್‌ ಮಾಡಿದ್ದರೂ ಎಲ್ಲವೂ ಷಡ್ಯಂತರ.. ನಾನೇನು ಮಾಡಿಲ್ಲ ಅಂತಲೇ ಪ್ರಜ್ವಲ್‌ ಉತ್ತರ ನೀಡಿದ್ದಾರೆ.

ಇಂದು ಎಸ್‌ಐಟಿ ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸದ್ಯ ಎಮ್ ಪಿ ಚುನಾವಣಾ ಎಕ್ಸಿಟ್ ಪೋಲ್ ನಡೀತಿದ್ದು, ಪ್ರಜ್ವಲ್ ರೇವಣ್ಣ ಗೆಲ್ಲುವ ಸಾಧ್ಯತೆ ಎಂಬ ಮಾತಿರುವ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಗರು, ಅಭಿಮಾನಿಗಳು ಸೇರಬಹುದಾದ ಸಂಭವವಿದೆ. ಹೀಗಾಗಿ ಹೀಗಾಗಿ ಇವತ್ತು ಅಥವಾ ನಾಳೆ ಸ್ಥಳ ಮಹಜರು ಮಾಡಿದ್ರೆ ಮುಂದಿನ ಹಂತದ ಪ್ರಕ್ರಿಯೆ ಸುಲಭವಾಗುತ್ತದೆ ಎಂದು ಪ್ಲ್ಯಾನ್‌ ಮಾಡಿರೋ ಎಸ್‌ಐಟಿ, ಸ್ಥಳ ಮಹಜರು ನಂತರ ಮತ್ತೆ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರೆಸಲಿದೆ.

ವಿಚಾರಣೆ ವೇಳೆ ಮೊಂಡಾಟ

ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ವೇಳೆ ಭಾರೀ ಮೊಂಡಾಟ ತೋರಿದ್ದಾರೆ ಎನ್ನಲಾಗಿದೆ. ಎಷ್ಟು ವಿಚಾರಣೆ ಮಾಡಿದ್ರೂ ಪ್ರಜ್ವಲ್‌ ಸರಿಯಾಗಿ ಬಾಯಿ ಬಿಡ್ತಿಲ್ಲ. ವಿಚಾರಣೆ ವೇಳೆ ಎದ್ದೇಳೋದು.. ಆಕಡೆ ಈಕಡೆ ಓಡಾಡೋದು.. ಏನೂ ಗೊತ್ತಿಲ್ಲ ಅಂತಾನೆ ಉತ್ತರ ನೀಡುತ್ತಾ ಎಸ್ಐಟಿ ಅಧಿಕಾರಿಗಳಿಗೆ ತಲೆ ಕೆಡಿಸಿದ್ದಾರೆ. ಏನು ಕೇಳಿದ್ರೂ ನಂಗೆ ಗೊತ್ತಿಲ್ಲ.. ನಾನೇನು ಮಾಡಿಲ್ಲ ಅಂತಿರುವ ಪ್ರಜ್ವಲ್‌ರನ್ನು ಮೊಬೈಲ್ ಬಗ್ಗೆ ಮತ್ತೆ ಬಾಯಿ ಬಿಡಿಸಲು ಎಸ್ಐಟಿ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಯಾವ ಮೊಬೈಲ್..? ಇರುವ ಮೊಬೈಲ್ ಏರ್ಪೋರ್ಟ್ ನಲ್ಲೇ ಕೊಟ್ಟೆ.. ಯಾವ ಮೊಬೈಲ್ ಬಗ್ಗೆ ಮಾತನಾಡ್ತಿದೀರಾ..? ಹಳೆ ಮೊಬೈಲ್ ಕಳೆದೋಗಿದೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ರ ಈಗಿನ ಮೊಬೈಲ್‌ನಲ್ಲಿ ಯಾವುದೇ ರೀತಿ ವಿಡಿಯೋಗಳು, ಮೆಸೇಜ್ ಗಳು ಪತ್ತೆಯಾಗಿಲ್ಲ. ಸದ್ಯ ಡಿಜಿಟಲ್ ಎವಿಡೆನ್ಸ್ ಕಲೆ ಹಾಕಲು ಎಸ್ಐಟಿ, ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದೆ.

ಈಗಾಗಲೇ ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ:Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Continue Reading
Advertisement
Aaron Jones
ಕ್ರಿಕೆಟ್4 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್9 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202417 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು29 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್33 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ38 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ54 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ58 mins ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ1 hour ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌