brand bengaluru suggesstion portal launched from karnataka govt - Vistara News

ಪ್ರಮುಖ ಸುದ್ದಿ

Brand Bengaluru: ನಿಮ್ಮ ಬೆಂಗಳೂರು ಹೇಗಿರಬೇಕು ನೀವೇ ತಿಳಿಸಿ: ಸರ್ಕಾರಕ್ಕೆ ಸಲಹೆ ನೀಡಲು ಇನ್ನು 9 ದಿನ ಮಾತ್ರ ಬಾಕಿ!

ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಜನಹಿತ ಬೆಂಗಳೂರು, ಸ್ವಚ್ಛ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಜಲ ಸಂರಕ್ಷಾ ಬೆಂಗಳೂರು, ಟೆಕ್ ಬೆಂಗಳೂರು ವಿಭಾಗಗಳಲ್ಲಿ ಬ್ರ್ಯಾಂಡ್‌ ಬೆಂಗಳೂರು (Brand Bengaluru) ಸಲಹೆಗೆ ಅವಕಾಶ ನೀಡಲಾಗಿದೆ.

VISTARANEWS.COM


on

Brand Bengaluru portal 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದ್ದರೂ ಇಲ್ಲಿನ ಸಮಸ್ಯೆಗಳಿಗೆ ಲೆಕ್ಕವಿಲ್ಲ. ಮಳೆ ಬಂದರೆ ಸಾಕು ತುಂಬಿಕೊಳ್ಳುವ ನೀರು, ಸದಾ ಸಂಚಾರ ದಟ್ಟಣೆ, ರಿಯಲ್‌ ಎಸ್ಟೇಟ್‌ ಸಮಸ್ಯೆ ಸೇರಿ ಅನೇಕ ದೋಷಗಳಿಂದ ಜನರು ಬಸವಳಿದಿದ್ದಾರೆ. ಬೆಂಗಳೂರು ಹೇಗಿರಬೇಕು (Brand Bengaluru) ಎಂಬ ಮಾಸ್ಟರ್‌ ಪ್ಲಾನ್‌ ರೂಪಿಸುವ ಮುನ್ನ ಸಾರ್ವಜನಿಕರಿಂದ ಸಲಹೆಗಳನ್ನು ಸರ್ಕಾರ ಆಹ್ವಾನಿಸಿದೆ.

ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಸಲಹೆ ನೀಡಲು ಈಗಾಗಲೆ ಉದ್ಯಮಿಗಳು ಸಂಘ ಸಂಸ್ಥೆಗಳು, ಸೆಲೆಬ್ರಿಟಿಗಳು, ತಜ್ಞರು, ಕ್ರೀಡಾಪಟುಗಳಿಂದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಲಹೆ ಪಡೆದಿದ್ದಾರೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರಿಂದಲೂ ಸಲಹೆಗಳನ್ನು ಪಡೆಯಲು ಸರ್ಕಾರ ಮುಂದಾಗಿದೆ. ಬೆಂಗಳೂರಿನ ನಾಗರಿಕರು ಸೇರಿ ಹಾಗೂ ವಿದೇಶದಲ್ಲಿರುವ ಕನ್ನಡಿಗರು ಸಹ ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು ನೀಡಲು www.brandbengaluru.karnataka.gov.in ವೆಬ್‌ಸೈಟ್‌ ರೂಪಿಸಲಾಗಿದೆ. ಇಲ್ಲಿ ಜೂನ್ 30ರ ಒಳಗಾಗಿ ಸಲಹೆ ನೀಡಲು ಅವಕಾಶವಿದೆ. ಈ ಲಿಂಕ್‌ ಒತ್ತಿದರೆ ಅಲ್ಲಿ ಮೊಬೈಲ್‌ ಸಂಖ್ಯೆ ನಮೂದಿಸಲು ತಿಳಿಸಲಾಗುತ್ತದೆ. ಮೊಬೈಲ್‌ಗೆ ಆಗಮಿಸಿದ ಒಟಿಪಿ ನಮೂದಿಸಿದರೆ ಸಲಹೆಗಳ ಪುಟ ತೆರೆದುಕೊಳ್ಳುತ್ತದೆ.

ಅದರಲ್ಲಿ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಜನಹಿತ ಬೆಂಗಳೂರು, ಸ್ವಚ್ಛ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಜಲ ಸಂರಕ್ಷಾ ಬೆಂಗಳೂರು, ಟೆಕ್ ಬೆಂಗಳೂರು ವಿಭಾಗಗಳಲ್ಲಿ ಸಲಹೆಗೆ ಅವಕಾಶ ನೀಡಲಾಗಿದೆ. ಕೆಲವು ಆಯ್ಕೆಗಳನ್ನು ನೀಡಲಾಗಿದ್ದು, ಅದರ ಜತೆಗೆ ನೂತನ ಸಲಹೆಗಳನ್ನೂ ನೀಡಲು ಸಾಧ್ಯವಿದೆ.

ವಾಹನ ಸಂಚಾರ ದಟ್ಟಣೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು ಮಾಡುವುದು, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣದಂತಹ ಅನೇಕ ಸಲಹೆಗಳೂ ಈಗಾಗಲೆ ತಜ್ಞರ ಸಭೆಯಿಂದ ಹೊರಹೊಮ್ಮಿವೆ.

ಸ್ವಚ್ಛತೆ, ಪರಿಸರ ವಿಚಾರದಲ್ಲಿ ಕಸ ವಿಲೇವಾರಿ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಕೊಳಗೇರಿ ಪ್ರದೇಶ ಅಭಿವೃದ್ಧಿ ಸೇರಿದಂತೆ ದಕ್ಷ ಆಡಳಿತ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆಯೂ ಅನೇಕರು ಸಲಹೆ ನೀಡಿದ್ದಾರೆ.

ಪೋರ್ಟಲ್‌ ಉದ್ಘಾಟನೆ ಮಾಡಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌,ಕೆಲವು ದೊಡ್ಡ ನಾಯಕರ ಮನೆಗೆ ಹೋಗಿ ಚರ್ಚೆ ಮಾಡಲು ತೀರ್ಮಾನಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಇನ್ನು ಕೆಲವರನ್ನು ಭೇಟಿ ಮಾಡಬೇಕು. ಬೊಮ್ಮಾಯಿ ಅವರ ಸಮಯ ಕೇಳಿದ್ದು, ಅವರು ಬ್ಯುಸಿ ಇದ್ದ ಕಾರಣ ಭೇಟಿ ಮಾಡಿಲ್ಲ. ಅವರ ವಿಚಾರಧಾರೆಗಳನ್ನು ತಿಳಿಯಬೇಕು. ಬೆಂಗಳೂರಿನ ಸಂಚಾರದಟ್ಟಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಬೇರೆ ನಗರಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾರಣ ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ.

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಗಮನ ಹರಿಸಬೇಕು. ಸಂಚಾರ ದಟ್ಟಣೆ ವಿಚಾರವಾಗಿ ನಿವೃತ್ತ ಟ್ರಾಫಿಕ್ ಪೊಲೀಸರ ಅಭಿಪ್ರಾಯ ಪಡೆಯುತ್ತೇನೆ. ಅನುಭವದ ಆಧಾರದ ಮೇಲೆ ಬರುವ ಸಲಹೆಗಳಿಗೆ ಹೆಚ್ಚಿನ ತೂಕ ಇರುತ್ತದೆ. ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಸಲಹೆ ಬಂದಿದ್ದು, ನಮ್ಮ ರಾಜ್ಯದವರು ಮುಂಬೈನಲ್ಲಿ ಸುರಂಗ ರಸ್ತೆ ನಿರ್ಮಿಸುತ್ತಿದ್ದಾರೆ. ಪಕ್ಕದ ರಾಜ್ಯದವರು ಕಾಶ್ಮೀರದಲ್ಲಿ ಸುರಂಗ ಮಾರ್ಗ ನಿರ್ಮಿಸುತ್ತಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಮುಖ್ಯ.

ರಸ್ತೆ ಗುಂಡಿ ವಿಚಾರವಾಗಿ ಪ್ರತ್ಯೇಕ ಯೋಜನೆ ರೂಪಿಸುತ್ತೇವೆ. ತ್ಯಾಜ್ಯ ವಿಲೇವಾರಿ ಕುರಿತು ಅಧಿಕಾರಿಗಳ ಸಭೆ ಮಾಡಿದ್ದೇನೆ. ಈ ಬಗ್ಗೆ ಉತ್ತಮ ನಿರ್ವಹಣೆ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಲು ತೀರ್ಮಾನಿಸಿದ್ದೇವೆ. ಚೆನ್ನೈ, ಇಂದೋರ್ ಸೇರಿದಂತೆ ಅನೇಕ ಕಡೆಗಳಲ್ಲಿ ಉತ್ತಮ ತ್ಯಾಜ್ಯ ನಿರ್ವಹಣೆ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾವು ಈ ವಿಚಾರದಲ್ಲಿ ದೀರ್ಘಾವಧಿಯ ಯೋಜನೆ ರೂಪಿಸಿಕೊಳ್ಳಬೇಕು. ಕಾನೂನು ಮಿತಿ, ಭೂಪ್ರದೇಶದ ಮಿತಿಯಲ್ಲಿ ನಾವು ಯೋಜನೆ ರೂಪಿಸಬೇಕು.

ಕೇವಲ ಕಸ ತೆಗೆದುಕೊಂಡು ಹೋಗಿ ಸುರಿದರೆ ಆಗುವುದಿಲ್ಲ. ತ್ಯಾಜ್ಯದ ಬೆಟ್ಟ ನಿರ್ಮಿಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇದು ಒಂದು ದಿನ ಅಥವಾ ವರ್ಷದಲ್ಲಿ ಬದಲಾವಣೆ ತರಲು ಆಗುವುದಿಲ್ಲ. ಆದರೂ ಕಾಲಮಿತಿ ನಿಗದಿ ಮಾಡಿಕೊಂಡು ಕೆಲಸ ಮಾಡಬೇಕಿದೆ. ಬೆಂಗಳೂರಿನ ಜನಸಂಖ್ಯೆ 1.30 ಕೋಟಿ ಇದೆ. 50 ಲಕ್ಷದಷ್ಟು ಮಂದಿ ಬೆಂಗಳೂರಿಗೆ ಬಂದು ಹೋಗುತ್ತಿದ್ದಾರೆ. ರಾಜ್ಯ ಹಾಗೂ ದೇಶಕ್ಕೆ ಬೆಂಗಳೂರಿನಿಂದ ಹೆಚ್ಚಿನ ಪ್ರಮಾಣದ ಹಣ ತೆರಿಗೆ ರೂಪದಲ್ಲಿ ಹೋಗುತ್ತಿದೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದವರು ಮತ್ತೆ ತಮ್ಮ ಊರಿಗೆ ಹೋಗುತ್ತಿಲ್ಲ. ಇಲ್ಲೇ ನೆಲೆಸುತ್ತಿದ್ದಾರೆ.

ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ಬೆಂಗಳೂರಿನ ಹೊರೆ ತಪ್ಪಿಸಲು 2-3ನೇ ದರ್ಜೆ ನಗರಗಳ ಅಭಿವೃದ್ಧಿ, ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇವೆ. ಕಳೆದ ಬಾರಿಯ ಬಜೆಟ್ ಅನ್ನು ಹೆಚ್ಚಿನ ಬದಲಾವಣೆ ಮಾಡಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಸ ರೂಪ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಾಲಿಕೆ ಮಟ್ಟದಲ್ಲಿ ಸಂಪನ್ಮೂಲ ಕ್ರೂಢೀಕರಣದ ಬಗ್ಗೆ ಪ್ರಶ್ನಿಸಿದಾಗ, ‘ನಾನು ಈ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೆಲವರು ತೆರಿಗೆ ವಂಚನೆ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಏನು ಮಾಡಬಹುದು ಎಂದು ಚರ್ಚೆ ಮಾಡುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Blast in Bengaluru: ಗೃಹ ಸಚಿವರೇ ನೀವು ಅನ್‌ಫಿಟ್‌! ರಾಜೀನಾಮೆ ಕೊಟ್ಟು ಹೊರಡಿ ಎಂದ ಬಿಜೆಪಿ

Blast in Bengaluru: ಇಡೀ ದೇಶವೇ ಕೇಳುವಂತೆ ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ್ದ ದೇಶ ದ್ರೋಹಿಗಳನ್ನು ರಕ್ಷಣೆ ಮಾಡಲು ಸದನದಲ್ಲಿ ತನಿಖೆಗೆ ಮೊದಲೇ ಕ್ಲೀನ್‌ಚಿಟ್‌ ಕೊಟ್ಟಿದ್ದಾರೆ ಈ ಅಪ್ರಬುದ್ಧ ಗೃಹ ಸಚಿವರು ಎಂದು ಬಿಜೆಪಿ ಟೀಕೆ ಮಾಡಿದೆ.

VISTARANEWS.COM


on

Blast in Bengaluru BJP demands resignation of Home Minister Dr Parameshwara
Koo

ಬೆಂಗಳೂರು: ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ ಪ್ರಕರಣಕ್ಕೆ (Blast in Bengaluru) ಸಂಬಂಧಪಟ್ಟಂತೆ ರಾಜ್ಯ ಬಿಜೆಪಿ ಘಟಕವು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಗೃಹ ಸಚಿವ ಸ್ಥಾನಕ್ಕೆ ನೀವು ಅನ್‌ಫಿಟ್‌ ಆಗಿದ್ದು, ಕೂಡಲೇ ರಾಜೀನಾಮೆ ಕೊಡಿ ಎಂದು “ResignParameshwar” ಹ್ಯಾಷ್‌ಟ್ಯಾಗ್‌ನಡಿ ಕಿಡಿಕಾರಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕವು, ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಹಲವು ಪ್ರಕರಣಗಳನ್ನು ಉಲ್ಲೇಖಿಸಿ, ಈಗ ನಡೆದಿರುವ “ಪಾಕಿಸ್ತಾನ್‌ ಜಿಂದಾಬಾದ್‌” ಪ್ರಕರಣದಲ್ಲಿನ ಹೇಳಿಕೆಯನ್ನು ಆಧರಿಸಿ ವಾಗ್ದಾಳಿ ನಡೆಸಿದೆ.

ಬಿಜೆಪಿ ಪೋಸ್ಟ್‌ನಲ್ಲೇನಿದೆ?

“ಬಂಧಿತ ಉಗ್ರನನ್ನು ಈಗಲೇ ಭಯೋತ್ಪಾದಕರು ಎನ್ನಲಾಗದು ಎನ್ನುವ ಮೂಲಕ ಅಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಕ್ಲೀನ್‌ಚಿಟ್‌ ಕೊಡುವುದಕ್ಕೆ ಮುಂದಾಗಿದ್ದರು.

ಇಡೀ ದೇಶವೇ ಕೇಳುವಂತೆ ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ್ದ ದೇಶ ದ್ರೋಹಿಗಳನ್ನು ರಕ್ಷಣೆ ಮಾಡಲು ಸದನದಲ್ಲಿ ತನಿಖೆಗೆ ಮೊದಲೇ ಕ್ಲೀನ್‌ಚಿಟ್‌ ಕೊಟ್ಟಿದ್ದಾರೆ ಅಪ್ರಬುದ್ಧ ಗೃಹ ಸಚಿವರು.

ಉಡುಪಿ ಕಾಲೇಜಿನ ಘಟನೆಯನ್ನು ಮಕ್ಕಳಾಟ ಎನ್ನುವುದು, ಪಿಎಫ್‌ಐ ಗಲಭೆಕೋರರನ್ನು ಅಮಾಯಕರು ಎನ್ನುವುದು ನೋಡಿದರೆ ಪರಮೇಶ್ವರ್‌ ಅವರು ಗೃಹ ಸಚಿವ ಸ್ಥಾನಕ್ಕೆ ಅನ್‌ಫಿಟ್‌.

ಭಯೋತ್ಪಾದಕರು, ದೇಶ ದ್ರೋಹಿಗಳ ವಿರುದ್ಧ ಮೃದು ಧೋರಣೆ ತೋರಿಸುತ್ತಿರುವುದಾದರೂ ಏಕೆ?

ಮಾನ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರೇ, ನಿಮಗೆ ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ, ದಯವಿಟ್ಟು ರಾಜೀನಾಮೆ ಕೊಟ್ಟು ಹೊರಡಿ” ಎಂದು ಬಿಜೆಪಿ ಆಕ್ರೋಶವನ್ನು ಹೊರಹಾಕಿದೆ.

ಬಾಂಬ್‌ ಬ್ಲಾಸ್ಟ್ ಕೇಸ್‌ ತನಿಖೆ NIA ಹೆಗಲಿಗೆ? ಇಂದೇ ಹಸ್ತಾಂತರ!

ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ ಪ್ರಕರಣವನ್ನು (Blast in Bengaluru) ಸಿಸಿಬಿಯಿಂದ ಎನ್‌ಐಎಗೆ ವರ್ಗಾವಣೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು (ಭಾನುವಾರ) ಸಂಜೆ ಅಧಿಕೃತವಾಗಿ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. .

ಈಗಾಗಲೇ ಕೇಸ್ ಬಗ್ಗೆ ನಗರ ಪೊಲೀಸರಿಂದ ಎನ್‌ಐಎ ಮಾಹಿತಿಯನ್ನು ಪಡೆದುಕೊಂಡಿದೆ. ಅಲ್ಲದೆ, ಈ ಬ್ಲಾಸ್ಟ್‌ ಅನ್ನು ವ್ಯವಸ್ಥಿತವಾಗಿ ಮಾಡಲಾಗಿದ್ದು, ಎಲ್ಲಿಯೂ ಸಹ ಹೆಚ್ಚಿನ ಚಹರೆಯಾಗಲಿ, ಸುಳಿವನ್ನಾಗಲೀ ಬಿಡದಂತೆ ಪ್ಲ್ಯಾನ್‌ ಮಾಡಿ ಬ್ಲಾಸ್ಟ್‌ ಮಾಡಲಾಗಿದೆ. ಜತೆಗೆ ಇದು ಒಬ್ಬ ಕೃತ್ಯವಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರ ಹಿಂದೆ ಒಂದು ಜಾಲವೇ ಇದ್ದು, ಆ ಬಗ್ಗೆ ತನಿಖೆ ನಡೆಸಬೇಕಿದೆ. ಅಲ್ಲದೆ, ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಬಳಸಿದ ವಸ್ತುಗಳಿಗೂ, ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಬಳಕೆ ಮಾಡಲಾಗಿರುವ ವಸ್ತುಗಳಿಗೂ ಸಾಮ್ಯತೆ ಇರುವುದರಿಂದ ತನಿಖೆ ಬೇರೆ ದಿಕ್ಕಿನಲ್ಲೇ ಸಾಗಬೇಕಿದೆ. ಹೀಗಾಗಿ ಎನ್‌ಐಎ ಮಧ್ಯಪ್ರವೇಶ ಮಾಡಿದೆ. ತನಿಖೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ

ಇದರ ಹಿಂದೆ ಉಗ್ರರ ಕೈವಾಡ ಇದೆಯೇ? ಅಥವಾ ವೈಯಕ್ತಿಕ ದ್ವೇಷಕ್ಕೆ ಮಾಡಲಾಗಿದೆಯೇ? ಇಲ್ಲವೇ ಬೇರೆ ಯಾವ ಕಾರಣಕ್ಕೆ ಯಾರು ಮಾಡಿರಬಹುದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಯಬೇಕು. ಇನ್ನು ಬಾಂಬ್‌ ಸ್ಫೋಟದಂತಹ ಪ್ರಕರಣಗಳಲ್ಲಿ ಹಲವು ತನಿಖೆಗಳನ್ನು ನಡೆಸಿರುವ ಎನ್‌ಐಎ ಜವಾಬ್ದಾರಿ ವಹಿಸಿಕೊಂಡರೆ ಜಾಲವನ್ನು ಭೇದಿಸುವುದು ಮತ್ತಷ್ಟು ಸುಲಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೇ ರಾಮೇಶ್ವರಂ ಬಾಂಬ್‌ ಬ್ಲಾಸ್ಟ್‌ ಪ್ರಕರಣವನ್ನು ಸಿಸಿಬಿಯಿಂದ ಎನ್‌ಐಎಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಈ ಮೊದಲು ಸಿಸಿಬಿಗೆ ವರ್ಗಾವಣೆಯಾಗಿತ್ತು. ಈ ಸಿಸಿಬಿಯಿಂದ ಎನ್‌ಐಎಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ.

Continue Reading

ಕರ್ನಾಟಕ

ಆರ್‌ಎಸ್‌ಎಸ್‌ನ ರುದ್ರೇಶ್‌ ಹತ್ಯೆ; ದಕ್ಷಿಣ ಆಫ್ರಿಕಾದಲ್ಲಿ ಆರೋಪಿ ಮೊಹಮ್ಮದ್‌ ಗೌಸ್‌ ಬಂಧನ

ಬೆಂಗಳೂರಿನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಆರ್.‌ ರುದ್ರೇಶ್‌ ಅವರ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊನೆಗೂ ಎನ್‌ಐಎ ಸಫಲವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಹತ್ಯೆಯ ಆರೋಪಿಯನ್ನು ಬಂಧಿಸಲಾಗಿದೆ.

VISTARANEWS.COM


on

RSS Worker R Rudresh
ಹತ್ಯೆಗೀಡಾದ ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್.‌ ಷʻ
Koo

ಬೆಂಗಳೂರು/ಕೇಪ್‌ಟೌನ್:‌ 2016ರಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಹತ್ಯೆಯ (RSS Worker Rudresh Murder Case) ಪ್ರಕರಣವನ್ನು ಭೇದಿಸುವಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರುದ್ರೇಶ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್‌ಸ್ಟರ್‌ ಮೊಹಮ್ಮದ್‌ ಗೌಸ್‌ ನಿಯಾಜಿಯನ್ನು (Mohammed Gaus Niyazi) ಎನ್‌ಐಎ ಅಧಿಕಾರಿಗಳು ದಕ್ಷಿಣ ಆಫ್ರಿಕಾದಲ್ಲಿ (South Africa) ಬಂಧಿಸಿದ್ದಾರೆ. ಇದು ಪ್ರಕರಣದಲ್ಲಿ ಎನ್‌ಐಎಗೆ ಸಿಕ್ಕ ಮಹತ್ವದ ಮುನ್ನಡೆ ಎಂದೇ ಹೇಳಲಾಗುತ್ತಿದೆ.

2014ರ ಮುಂಬೈ ಗಲಭೆಯ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್‌ ಗೌಸ್‌ ನಿಯಾಜಿಯು ರುದ್ರೇಶ್‌ ಹತ್ಯೆ ಬಳಿಕ ದೇಶ ಬಿಟ್ಟು ಪರಾರಿಯಾಗಿದ್ದ. ಆದರೆ, ಈತನ ಪತ್ತೆಗೆ ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳವು (Gujarat ATC) ನಿರಂತರವಾಗಿ ಪ್ರಯತ್ನಿಸಿತ್ತು. ಎಟಿಎಸ್‌ ಸತತ ಪ್ರಯತ್ನದ ಫಲವಾಗಿ ಮೊಹಮ್ಮದ್‌ ಗೌಸ್‌ ನಿಯಾಜಿಯು ದಕ್ಷಿಣ ಆಫ್ರಿಕಾದಲ್ಲಿದ್ದಾನೆ ಎಂಬುದನ್ನು ಪತ್ತೆಹಚ್ಚಿತ್ತು.

ಮೊಹಮ್ಮದ್‌ ಗೌಸ್‌ ನಿಯಾಜಿ

ಮೊಹಮ್ಮದ್‌ ಗೌಸ್‌ ನಿಯಾಜಿಯನ್ನು ಪತ್ತೆಹಚ್ಚಿದ್ದ ಎಟಿಎಸ್‌, ಈ ಕುರಿತು ಎನ್‌ಐಎಗೆ ಮಹತ್ವದ ಸುಳಿವು ನೀಡಿತ್ತು. ಇದಾದ ಬಳಿಕ, ಎನ್‌ಐಎ ಅಧಿಕಾರಿಗಳು ದಕ್ಷಿಣ ಆಫ್ರಿಕಾ ಅಧಿಕಾರಿಗಳಿಗೆ ಮೊಹಮ್ಮದ್‌ ಗೌಸ್‌ ನಿಯಾಜಿಯ ಕುರಿತು ಮಾಹಿತಿ ಒದಗಿಸಿತ್ತು. ಈಗ ದಕ್ಷಿಣ ಆಫ್ರಿಕಾ ಅಧಿಕಾರಿಗಳ ನೆರವಿನಿಂದ ಎನ್‌ಐಎ ಅಧಿಕಾರಿಗಳು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು.

ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (PFI) ಪ್ರಮುಖ ನಾಯಕನಾಗಿರುವ ಮೊಹಮ್ಮದ್‌ ಗೌಸ್‌ ನಿಯಾಜಿಯು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಕೂಡ ಎನಿಸಿದ್ದಾನೆ. ಈತನನ್ನು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆತರುವ ಪ್ರಕ್ರಿಯೆಗೆ ಎನ್‌ಐಎ ಅಧಿಕಾರಿಗಳು ಚಾಲನೆ ನೀಡಿದ್ದಾರೆ. ಮೊದಲು ಈತನನ್ನು ಮುಂಬೈಗೆ ಕರೆದುಕೊಂಡು ಬಂದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮೊಹಮ್ಮದ್‌ ಗೌಸ್‌ ನಿಯಾಜಿಯು ಪಿಎಫ್‌ಐನ ದಕ್ಷಿಣ ಭಾರತದ ಮುಖ್ಯಸ್ಥನಾಗಿದ್ದ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Sedition case: ಪಾಕ್‌ ಪರ ಘೋಷಣೆ ವಿವಾದ; ಬೀದಿಗಿಳಿದ ಜೆಡಿಎಸ್‌; ಬಂಧನಕ್ಕೆ ಪಟ್ಟು

ಏನಿದು ಪ್ರಕರಣ?

ಆರ್‌ಎಸ್‌ಎಸ್‌ ಮುಖಂಡ ಆರ್.‌ ರುದ್ರೇಶ್‌ ಅವರನ್ನು 2016ರ ಅಕ್ಟೋಬರ್‌ 16ರಂದು ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಇಬ್ಬರು ದುಷ್ಕರ್ಮಿಗಳು ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿ ರುದ್ರೇಶ್‌ ಮೇಲೆ ದಾಳಿ ನಡೆಸಿ, ಹತ್ಯೆಗೈದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 2016ರಲ್ಲಿಯೇ ಪಾಶಾ, ಅಹ್ಮದ್‌, ಸಾದಿಕ್‌, ಮುಜೀಬ್‌ ಉಲ್ಲಾ, ಷರೀಫ್‌ ಸೇರಿ ಪಿಎಫ್‌ಐನ ಹಲವು ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾದ ಬಳಿಕ ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದ ಪೊಲೀಸ್‌ ಕಮಿಷನರ್‌

Blast In Bengaluru : ದಿ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ನಗರ ಪೊಲೀಸ್‌ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

By

Rameswaram cafe bomb blast case No one has been arrested
Koo

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ. ಹೀಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ರಾಮೇಶ್ವರಂ ಬ್ರಾಂಚ್‌ಗಳ ಪರಿಶೀಲನೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಮೇಶ್ವರಂ ಮತ್ತೊಂದು ಬ್ರಾಂಚ್‌ಗಳಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತರ ಚಲನವಲನ ಇದೇಯಾ ಎಂದು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ (Blast In Bengaluru) ಬ್ಲಾಸ್ಟ್‌ ಪ್ರಕರಣದ ಬಳಿಕ ಬೆಂಗಳೂರಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ (rameshwaram cafe blast) ನೀಡಿದ್ದಾರೆ. ಜತೆಗೆ ಜನರು ಇಂತಹ ಸಮಯದಲ್ಲಿ ಆತಂಕಕ್ಕೆ ಒಳಗಾಗದೇ, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡರೆ, ಯಾವುದಾರೂ ವಸ್ತು ಅಥವಾ ಬ್ಯಾಗ್‌ ಇರುವುದು ಕಂಡರೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಯಾರ ಮೇಲಾದರೂ ಸಂಶಯ ಬಂದರೆ ಕೂಡಲೇ 122ಗೆ ಸಂಖ್ಯೆಗೆ ಕರೆ ಮಾಡಿ, ಪೊಲೀಸರಿಗೆ ವಿಚಾರವನ್ನು ಮುಟ್ಟಿಸಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ನ ಎಕ್ಸ್‌ ಖಾತೆಯಿಂದ ಮಾಹಿತಿ ನೀಡಿದ್ದಾರೆ.

ದಿ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಬಾಂಬ್‌ ಅನ್ನು ಸ್ಫೋಟಿಸಿರುವುದು ಹಲವು ಅನುಮಾನವನ್ನು ಮೂಡಿಸಿದೆ. ಪಕ್ಕಾ ನುರಿತ ಟೆರರಿಸ್ಟ್‌ಗಳಿಂದಲೇ ಈ ಕೃತ್ಯ ನಡೆದಿರುವ ಶಂಕೆ ಇದೆ. ನಗರ ಪೊಲೀಸರ ಗಮನವನ್ನು ಒಂದೇ ಕಡೆ ಕೇಂದ್ರಿಕೃತವಾಗುವಂತೆ ಈ ರೀತಿ ಹುನ್ನಾರ ಮಾಡಿದ್ದರಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಡಿಮೆ ತೀವ್ರತೆಯ ಬಾಂಬ್‌ ಬಳಸಿ ಗಮನ ಈ ಕಡೆ ಇರು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಮಾರ್ಚ್‌ 29.

VISTARANEWS.COM


on

thdc
Koo

ಬೆಂಗಳೂರು: ಎಂಜಿನಿಯರಿಂಗ್‌ ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ (Tehri Hydro Development Corporation India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (THDC Recruitment 2024). ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳಿಗೆ ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್‌ 29(Job Alert).

ಹುದ್ದೆಗಳ ವಿವರ

ಎಂಜಿನಿಯರಿಂಗ್‌ ಟ್ರೈನಿ-ಸಿವಿಲ್‌: 40, ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಿಕಲ್‌: 25, ಎಂಜಿನಿಯರಿಂಗ್‌ ಟ್ರೈನಿ-ಮೆಕ್ಯಾನಿಕಲ್‌: 30 ಮತ್ತು ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಾನಿಕ್ಸ್‌: 5 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಆಸಕ್ತ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಬಿ.ಇ. / ಬಿ.ಟೆಕ್‌. ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಾಜಿ ಸೈನಿಕ / ಡಿಪಾರ್ಟ್‌ಮೆಂಟಲ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATE 2023ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಗ್ರೂಪ್‌ ಡಿಸ್ಕಷನ್‌, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವವರಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ಲಭ್ಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ಅದಾದ ಬಳಿಕ ಉದ್ಯೋಗದ ಸ್ಥಳ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

THDC Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ವಿಳಾಸ https://www.thdc.co.in/ಕ್ಕೆ ಭೇಟಿ ನೀಡಿ.
  • Careers ಆಯ್ಕೆ ಕ್ಲಿಕ್‌ ಮಾಡಿ New Openings ಸೆಲೆಕ್ಟ್‌ ಮಾಡಿ ಬಳಿಕ Apply Online ಅನ್ನು ಆಯ್ಕೆ ಮಾಡಿ.
  • ನಿಮ್ಮ ಅಧಿಕೃತ ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ

Continue Reading
Advertisement
Blast in Bengaluru BJP demands resignation of Home Minister Dr Parameshwara
ಕರ್ನಾಟಕ15 seconds ago

Blast in Bengaluru: ಗೃಹ ಸಚಿವರೇ ನೀವು ಅನ್‌ಫಿಟ್‌! ರಾಜೀನಾಮೆ ಕೊಟ್ಟು ಹೊರಡಿ ಎಂದ ಬಿಜೆಪಿ

RSS Worker R Rudresh
ಕರ್ನಾಟಕ3 mins ago

ಆರ್‌ಎಸ್‌ಎಸ್‌ನ ರುದ್ರೇಶ್‌ ಹತ್ಯೆ; ದಕ್ಷಿಣ ಆಫ್ರಿಕಾದಲ್ಲಿ ಆರೋಪಿ ಮೊಹಮ್ಮದ್‌ ಗೌಸ್‌ ಬಂಧನ

Shoaib Akhtar
ಕ್ರೀಡೆ7 mins ago

Shoaib Akhtar: 48ನೇ ವಯಸ್ಸಿನಲ್ಲಿ ಮೂರನೇ ಮಗುವಿನ ತಂದೆಯಾದ ಪಾಕ್​ ಮಾಜಿ ವೇಗಿ ಅಖ್ತರ್‌

Rameswaram cafe bomb blast case No one has been arrested
ಬೆಂಗಳೂರು15 mins ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದ ಪೊಲೀಸ್‌ ಕಮಿಷನರ್‌

thdc
ಉದ್ಯೋಗ19 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Gadag Shivananda Mutt seer's appointment issue temporarily closed
ಕರ್ನಾಟಕ26 mins ago

Gadag News: ಗದಗ ಶಿವಾನಂದ ಮಠದ ಪೀಠಾಧಿಪತಿ ವಿವಾದಕ್ಕೆ ತಾತ್ಕಾಲಿಕ ತೆರೆ; ಇಬ್ಬರೂ ಸ್ವಾಮೀಜಿಗಳಿಂದ ಧ್ವಜಾರೋಹಣ

vrinda dinesh injury
ಕ್ರೀಡೆ39 mins ago

WPL 2024: ಭುಜದ ಗಾಯ; ಟೂರ್ನಿಯಿಂದಲ್ಲೇ ಹೊರಬಿದ್ದ ಕನ್ನಡತಿ ವೃಂದಾ

rameshwaram cafe bengaluru incident
ಬೆಂಗಳೂರು44 mins ago

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

Blast in Bengaluru Karnataka is becoming a haven for terrorists under Congress rule says Pralhad Joshi
ಕ್ರೈಂ44 mins ago

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Narendra Modi
ದೇಶ52 mins ago

ಮ್ಯಾಟ್ರಿಮೋನಿ ಸೇರಿ ಹಲವು ಆ್ಯಪ್‌ಗಳಿಗೆ ಗೂಗಲ್‌ ಕೊಕ್;‌ ಕೇಂದ್ರದ ಮುಂದಿನ ನಡೆ ಏನು?

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು3 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು22 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು1 day ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ1 day ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌