BSRNS Vidyaniketan 2 | ಆತ್ಮನಿರ್ಭರ ಮೂಲಕ ಭಾರತ ಕಟ್ಟಲು ಗೆಹ್ಲೋಟ್‌ ಕರೆ - Vistara News

ಬೆಂಗಳೂರು

BSRNS Vidyaniketan 2 | ಆತ್ಮನಿರ್ಭರ ಮೂಲಕ ಭಾರತ ಕಟ್ಟಲು ಗೆಹ್ಲೋಟ್‌ ಕರೆ

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಬೆಂಗಳೂರು ಬಂಟರ ಸಂಘ ನೂತನವಾಗಿ ನಿರ್ಮಿಸಿದ್ದ ಬಿಎಸ್‌ಆರ್‌ಎನ್‌ಎಸ್ ವಿದ್ಯಾನಿಕೇತನ -2 (BSRNS Vidyaniketan 2) ಶಾಲಾ ಸಂಕೀರ್ಣವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

VISTARANEWS.COM


on

ಥಾವರ್ ಚಂದ್ ಗೆಹ್ಲೋಟ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಆ್ಯಂಡ್ ಸ್ಟ್ಯಾಂಡ್‌ಅಪ್ ಮುಂತಾದ ಮಹತ್ವದ ಯೋಜನೆಗಳ ಸಹಾಯದಿಂದ ಶಕ್ತಿಶಾಲಿ ಭಾರತವನ್ನು ಕಟ್ಟಬಹುದಾಗಿದೆ. ಇವೆಲ್ಲವುಗಳ ಒಟ್ಟು ಫಲಿತಾಂಶವೇ “ಆತ್ಮನಿರ್ಭರ ಭಾರತ”ವಾಗಿದೆ. ಶಿಕ್ಷಣದ ಮೂಲಕ (BSRNS Vidyaniketan 2) ಭವಿಷ್ಯದ ಭಾರತವನ್ನು ನಿರ್ಮಾಣ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಬೆಂಗಳೂರು ಬಂಟರ ಸಂಘ ನೂತನವಾಗಿ ನಿರ್ಮಿಸಿದ್ದ ಬಿಎಸ್‌ಆರ್‌ಎನ್‌ಎಸ್ ವಿದ್ಯಾನಿಕೇತನ -2 ಶಾಲಾ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿ, ಮಹಿಳಾ ಸಶಕ್ತೀಕರಣ ಹಾಗೂ ಪರಸ್ಪರ ಸಹಭಾಗಿತ್ವದ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಬಿಎಸ್‌ಆರ್‌ಎನ್‌ಎಸ್‌ ವಿದ್ಯಾಸಂಸ್ಥೆ ಒಂಬತ್ತು ಎಕರೆ ವಿಸ್ತೀರ್ಣದಲ್ಲಿ ಅತ್ಯುತ್ತಮ ವ್ಯವಸ್ಥೆಯುಳ್ಳ ಶೈಕ್ಷಣಿಕ ಸಂಕೀರ್ಣವನ್ನು ನಿರ್ಮಾಣ ಮಾಡಿದೆ. ನಗರದ ಜಂಜಾಟಗಳಿಂದ ದೂರವಿರುವ ಈ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಅನುಕೂಲಕರ ಪ್ರಶಾಂತ ವಾತಾವರಣವನ್ನು ಸೃಷ್ಟಿಸಿಕೊಟ್ಟಿದೆ. ಇಂಥದ್ದೊಂದು ಪ್ರಯತ್ನ ಮಾಡಿರುವ ಈ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ವಿದ್ಯಾಸಂಸ್ಥೆ ಶಿಕ್ಷಣದ ಜತೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗೂ ಆದ್ಯತೆ ನೀಡುವಂತಾಗಲಿ ಎಂದು ನಾನು ಬಯಸುತ್ತೇನೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಬಲಾಢ್ಯರಾಗುತ್ತಾರೆ. ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ದೇಶದ ಉನ್ನತಿಗೆ ಹೆಚ್ಚಿನ ಮಹತ್ವಪೂರ್ಣ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಗೆಹ್ಲೋಟ್‌ ಹೇಳಿದರು.

ಹೊಸ ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕ ಶಿಕ್ಷಣದ ಜತೆ ನಮ್ಮ ಪಾರಂಪರಿಕ ಪ್ರತಿಭೆ-ಕೌಶಲ್ಯಗಳೂ ನಿರ್ಣಾಯಕ ಪಾತ್ರ ವಹಿಸುತ್ತವೆ. ಹೊಸ ಶಿಕ್ಷಣ ವ್ಯವಸ್ಥೆಯ ಸಹಾಯದಿಂದ ನಮ್ಮ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ ದೊರಕಲಿದೆ. ಬಂಟರ ಸಂಘದ ಆರ್‌ಎನ್‌ಎಸ್ ವಿದ್ಯಾನಿಕೇತನ ಸಂಸ್ಥೆಯೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ ಎಂಬ ನಂಬಿಕೆ ನನಗಿದೆ ಎಂದು ಗೌರವಾನ್ವಿತ ರಾಜ್ಯಪಾಲರು ಭರವಸೆ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮ – ಶ್ರೀ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ

ದೇಶದ ಉನ್ನತಿಗೆ ಶಿಕ್ಷಣ ಅತ್ಯಗತ್ಯ- ಶ್ರೀ ಸುಭುದೇಂದ್ರ ತೀರ್ಥರು

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿ, ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣ ಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮವಾಗಿದೆ. ಯಾರು ಅಕ್ಷರದಿಂದ ದೂರ ಆಗಿರುತ್ತಾರೆ. ಅವರು ಲೋಕ ಕಂಟಕರಾಗಿ ಜನರನ್ನು ಪೀಡಿಸುತ್ತಾರೆ. ಹೀಗಾಗಿ ದೇಶದ ಉನ್ನತಿಗೆ ಶಿಕ್ಷಣ ಅತ್ಯಗತ್ಯವಾಗಿದೆ ಎಂದರು.

ಈಚೆಗೆ ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಹಣವನ್ನು ಗಳಿಸುವ ಶಿಕ್ಷಣ ಸಂಸ್ಥೆಗಳಿವೆ. ಜತೆಗೆ ಶಿಕ್ಷಣ ಸಂಸ್ಥೆಯನ್ನೇ ಹಿಡನ್ ಅಜೆಂಡಾದಂತೆ ಇಟ್ಟುಕೊಂಡು ಸಮಾಜಕ್ಕೆ ಕಂಟಕವಾಗುವಂತಹ ಸಂಸ್ಥೆಗಳೂ ಇವೆ. ಆದರೆ, ಶಿಕ್ಷಣ ಸಂಸ್ಥೆಗಳು ಜಗತ್ತಿನ ಉನ್ನತಿಗೆ ಉತ್ತಮ ವ್ಯಕ್ತಿತ್ವವನ್ನ ರೂಪಿಸುವಂತೆ ಇರಬೇಕು. ಅಂಥಹ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬೆಂಗಳೂರು ಬಂಟ ಸಂಘದ ಮೊದಲನೇ ಘಟಕ ಬೆಳೆದು ನಿಂತಿದೆ. ಅದರ ಭಾಗವಾಗಿ ಇಂದು ಎರಡನೇ ಘಟಕ ಲೋಕಾರ್ಪಣೆಗೊಂಡಿದೆ. ಶಿಕ್ಷಣ ಸಂಸ್ಥೆ ಬೆಳೆದು ನಿಂತರೆ ಲೋಕಕ್ಕೆ ಉತ್ತಮ ಪೌರರನ್ನು ಕೊಡುಗೆಯಾಗಿ ನೀಡುತ್ತದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಭಾಗದಲ್ಲಿ ಬಂಟ ಸಮುದಾಯದವರು ಕೃಷಿಯನ್ನು ಪ್ರಧಾನವಾಗಿಟ್ಟುಕೊಂಡವರು. ಕೃಷಿ ಕ್ಷೇತ್ರದಿಂದ ದೇಶಕ್ಕೆ ಅನ್ನದಾತರಾಗಿ ಬೆಳೆದಂತಹ ಈ ಸಮುದಾಯ, ಇಂದು ಶಿಕ್ಷಣ ಕ್ಷೇತ್ರದಲ್ಲಿ ಹೆಜ್ಜೆ ಇಡುತ್ತಿದೆ. ಅದೇ ರೀತಿ ಈ ಶಿಕ್ಷಣ ಸಂಸ್ಥೆ ರಾಜ್ಯಕ್ಕೆ, ದೇಶಕ್ಕೆ ಅಷ್ಟೇ ಅಲ್ಲದೆ, ಇಡೀ ವಿಶ್ವಕ್ಕೆ ಮಾದರಿಯಾಗಿ ಬೆಳಿಯಲಿ ಎಂದು ಆಶೀರ್ವದಿಸಿದರು.

ಸೇವೆ, ತ್ಯಾಗದ ಮನೋಭಾವನೆಯ ಶಿಕ್ಷಣ ನೀಡಬೇಕು- ಸಿ.ಟಿ. ರವಿ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ, ಶಿಕ್ಷಣ ಎನ್ನುವುದು ಬದುಕನ್ನು ಬದಲಾಯಿಸುವಂತಹ ಸಾಧನವಾಗಿದೆ. ಬಂಟರ ಸಂಘ ತಾನು ಮಾಡುತ್ತಿರುವ ಹತ್ತಾರು ಕಾರ್ಯಗಳ ನಡುವೆ ಶಿಕ್ಷಣ ಕ್ಷೇತ್ರವನ್ನು ಆದ್ಯತೆಯಾಗಿ ತೆಗೆದುಕೊಂಡು ಸಮಾಜದಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣವನ್ನ ಬಿಟ್ಟು ದೇಶ ಕಟ್ಟೋಕೆ ಸಾಧ್ಯ ಇಲ್ಲ. ದುರ್ದೈವದ ಸಂಗತಿ ಹತ್ತಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುಸಂಸ್ಕೃತ ಸಭ್ಯ ರಾಷ್ಟ್ರವಾಗಿದ್ದ ಭಾರತವನ್ನು ಪರಕೀಯರ ಆಕ್ರಮಣದಿಂದ ನಮ್ಮ ಸಂಪತ್ತು ಮತ್ತು ಸಭ್ಯತೆಗಳನ್ನು ಕಳೆದುಕೊಂಡಿದ್ದೆವು. ಸಾತಂತ್ರ್ಯದ ನಂತರವೂ ನಮಗೆ ಭಾರತದ ಸೋಲಿನ ಇತಿಹಾಸವನ್ನೇ ಬೋಧನೆ ಮಾಡಲಾಗಿದೆ. ಆದರೆ ಈಗ ಭಾರತ ಬದಲಾಗಿದೆ. ಶಿಕ್ಷಣದ ಮೂಲಕ ಭಾರತವನ್ನು ಮತ್ತೆ ಕಟ್ಟಬೇಕು ಅನ್ನುವಂತಹ ಸಂಕಲ್ಪದೊಂದಿಗೆ ನಾವು ಜಗತ್ತಿನ ಸವಾಲನ್ನು ಎದುರಿಸುವುದಕ್ಕೆ ತಯಾರಾಗಿದ್ದೇವೆ ಎಂದರು.

ಇದನ್ನೂ ಓದಿ | ಗೋವಿಂದ ದೇವಾಲಯ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ಕೋವಿಂದ

ಈ ನಿಟ್ಟಿನಲ್ಲಿ ಬಿಎಸ್‌ಆರ್‌ಎನ್‌ಎಸ್‌ ವಿದ್ಯಾನಿಕೇತನ ಸಂಸ್ಥೆ ಕೇವಲ ಶಿಕ್ಷಣ ಮಾತ್ರ ಕೊಡುವುದಲ್ಲ. ಶೀಲವಂತ ಮತ್ತು ಚಾರಿತ್ರ್ಯವಂತ ಸಮಾಜವನ್ನ ನಿರ್ಮಾಣ ಮಾಡುವುದಕ್ಕೆ ಬೇಕಾದಂತಹ ಶಿಕ್ಷಣವನ್ನ ನೀಡಬೇಕು. ಕಾರಣ, ಭಾರತೀಯರು ಗೌರವಿಸಿದ್ದು, ಪೂಜಿಸಿದ್ದು ಸಂಪತ್ತನ್ನಲ್ಲ, ಚಾರಿತ್ರ್ಯವಂತರನ್ನು ಎಂಬುದನ್ನು ನಾವು ಮರೆಯಬಾರದು. ಈ ರೀತಿಯ ಮನೋಭಾವೆನೆಯನ್ನು ಬೆಳೆಸುವಂತಹ ಶಿಕ್ಷಣವನ್ನು ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಲೋಕಾಯುಕ್ತ ಜಸ್ಟಿಸ್ ಪಿ. ವಿಶ್ವನಾಥ ಶೆಟ್ಟಿ, ಬಿ.ಎಸ್.ಆರ್.ಎನ್.ಎಸ್ ವಿದ್ಯಾನಿಕೇತನದ ಆಡಳಿತ ಮಂಡಳಿ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ, ಗೌರವ ಆತಿಥಿಗಳಾಗಿ ಬೆಂಗಳೂರು ವಿವಿ ಉಪಕುಲಪತಿ ಡಾ. ಜಯಕರ ಶೆಟ್ಟಿ ಎಂ, ಉದ್ಯಮಿ ಶಶಿಕಿರಣ್ ಶೆಟ್ಟಿ, ಹಾಗೂ ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಉಪಸ್ಥಿತರಿದ್ದರು.

ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಕಾರ್ಯದರ್ಶಿ ಮಧುಕರ ಶೆಟ್ಟಿ, ಕೋಶಾಧಿಕಾರಿ ದೀಪಕ್ ಶೆಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ಕ್ರಮ; ಸ್ವರ್ಣವಲ್ಲಿಯಲ್ಲಿ ಶಿಕ್ಷಣ ಸಚಿವ ನಾಗೇಶ್‌ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Prajwal Revanna Case: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಹೆಚ್.ಡಿ ರೇವಣ್ಣ- ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ. ಅಲ್ಲದೇ ತಮ್ಮನ್ನು ಭೇಟಿಯಾಗಲು ಬಂದಿದ್ದ ಹೆಚ್‌.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗದೇ ವಾಪಾಸ್‌ ಕಳುಹಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ನಿನ್ನೆ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದ ಅಮಿತ್‌ ಶಾ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಮಧ್ಯೆ ರಾತ್ರಿ ಅಮಿತ್‌ ಶಾ ಭೇಟಿಗೆಂದು ಹೆಚ್‌ ಡಿ ಕುಮಾರಸ್ವಾಮಿಯವರು ತಾಜ್‌ ವೆಸ್ಟ್‌ ಲ್ಯಾಂಡ್‌ ಹೊಟೇಲ್‌ಗೆ ತೆರಳಿದ್ದರು. ಕುಮಾರಸ್ವಾಮಿಯವರ ಭೇಟಿಗೆ ಅಮಿತ್‌ ಶಾ ಒಪ್ಪದ ಕಾರಣ ಸುಮಾರು ಒಂದು ಗಂಟೆ ನಂತರ ಹೆಚ್‌ಡಿಕೆ ವಾಪಾಸಾಗಿದ್ದಾರೆ.

VISTARANEWS.COM


on

Prawal Revanna Case
Koo

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಹೆಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ(SIT) ಅಧಿಕಾರಿಗಳು ವಶಪಡಿಸಿಕೊಂಡಿರರುವ ವಿಚಾರ ಮೈತ್ರಿ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ತಂದಿದೆ. ಈಗಾಗಲೇ ಈ ಪ್ರಕರಣದಿಂದ ಅಂತರ ಕಾಪಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಖಡಕ್‌ ಸೂಚನೆ ನೀಡಿದೆ. ಇದೀಗ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit Shah) ಅವರೇ ಹೆಚ್.ಡಿ ರೇವಣ್ಣ- ಪ್ರಜ್ವಲ್ ಪ್ರಕರಣದಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ. ಅಲ್ಲದೇ ತಮ್ಮನ್ನು ಭೇಟಿಯಾಗಲು ಬಂದಿದ್ದ ಹೆಚ್‌.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗದೇ ವಾಪಾಸ್‌ ಕಳುಹಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ನಿನ್ನೆ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದ ಅಮಿತ್‌ ಶಾ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಮಧ್ಯೆ ರಾತ್ರಿ ಅಮಿತ್‌ ಶಾ ಭೇಟಿಗೆಂದು ಹೆಚ್‌ ಡಿ ಕುಮಾರಸ್ವಾಮಿಯವರು ತಾಜ್‌ ವೆಸ್ಟ್‌ ಲ್ಯಾಂಡ್‌ ಹೊಟೇಲ್‌ಗೆ ತೆರಳಿದ್ದರು. ಕುಮಾರಸ್ವಾಮಿಯವರ ಭೇಟಿಗೆ ಅಮಿತ್‌ ಶಾ ಒಪ್ಪದ ಕಾರಣ ಸುಮಾರು ಒಂದು ಗಂಟೆ ನಂತರ ಹೆಚ್‌ಡಿಕೆ ವಾಪಾಸಾಗಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಹೆಚ್‌ಡಿಕೆ ಕೈಸನ್ನೆ ಮಾಡಿ ಹೊರಟಿದ್ದಾರೆ.

ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ ಹೆಚ್‌ ಡಿ ರೇವಣ್ಣ ಬಂಧನ ಆಗಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Karnataka Weather Forecast : ಗಂಟೆಗಳ ಕಾಲ ಮಳೆ ಸುರಿದರೂ ವಾತಾವರಣ ಮಾತ್ರ ಕಾದ ಕೆಂಡವಾಗಿಯೇ ಇದೆ. ರಾಜ್ಯಾದ್ಯಂತ ಕೆಲವೆಡೆ ಮಳೆ ಸೂಚನೆ (Rain News) ಇದ್ದರೂ, ಮುಕ್ಕಾಲು ಭಾಗದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ (Rain News) ಮಳೆಯಾಗಲಿದ್ದು, ಹವಾಮಾನ ಇಲಾಖೆ (Karnataka Weather Forecast) ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೊಂದೆಡೆ ತುಮಕೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ರಾಯಚೂರು,ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನೂ ರಾಜಧಾನಿ ಬೆಂಗಳೂರಲ್ಲಿ ಮಳೆ ಇದ್ದರೂ ಬಿಸಿಲ ಧಗೆ ಕಡಿಮೆ ಆಗುವುದಿಲ್ಲ. ಹೀಗಾಗಿ ಬೆಂಗಳೂರು ನಗರವು ಸೇರಿ ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ.

ತಾಪಮಾನ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿಯಂದು ವಾತಾವರಣ ಬೆಚ್ಚಗೆ ಇರಲಿದ್ದು, ಬಿಸಿಗಾಳಿ ಬೀಸಲಿದೆ. ಶಾಖ ತರಂಗ ಎಚ್ಚರಿಕೆಯನ್ನು ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಹೀಟ್‌ ವೇವ್‌ ಇರಲಿದೆ.

ಇದನ್ನೂ ಓದಿ: Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Prajwal Revanna Case: ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಭದ್ರತೆ ಇದ್ದರೂ, ಅವರನ್ನು ಬೆಂಗಳೂರಿಗೆ ಕರೆಸಿಕೊಂಡರೂ, ರೇವಣ್ಣ ಕುಟುಂಬಸ್ಥರ ದೌರ್ಜನ್ಯದ ಕುರಿತು ಅವರು ಯಾವುದೇ ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದಿದೆ. ಇದರ ಬೆನ್ನಲ್ಲೇ, ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ.

ಹೌದು, ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬಣ್ಣ ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರು ತನಿಖಾಧಿಕಾರಿಗಳ ಎದುರು ಎಲ್ಲವನ್ನೂ ಹೇಳಲು ಆಗುತ್ತಿಲ್ಲ. ಇದರಿಂದಾಗಿ ಪ್ರಕರಣದಲ್ಲಿ ಮಹತ್ವದ ಪ್ರಗತಿ ಸಾಧಿಸಲು ಎಸ್‌ಐಟಿ ಅಧಿಕಾರಿಗಲು ಹೆಣಗಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯನ್ನು ಅಪಹರಿಸಿ ಇರಿಸಲಾಗಿದ್ದ ಹುಣಸೂರಿನ ತೋಟದ ಮನೆ.

“ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

ಕರ್ನಾಟಕ

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Bangalore To Belagavi Train: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು.

VISTARANEWS.COM


on

Bangalore To Belagavi Train
Koo

ಹುಬ್ಬಳ್ಳಿ: ಮೇ 6ರಂದು ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿಗೆ ವಿಶೇಷ ರೈಲು (Bangalore To Belagavi Train) ಸಂಚರಿಸಲಿದ್ದು, ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ 9.55ಕ್ಕೆ ರೈಲು ನಂ. 07319/07320 ಬೆಂಗಳೂರಿನ ಯಶವಂತಪುರದಿಂದ ಹೊರಟು ತುಮಕೂರು-ಅರಸೀಕೆರೆ-ದಾವಣಗೆರೆ-ಹಾವೇರಿ ಮಾರ್ಗವಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. ನಂತರ ಗೋಕಾಕ್‌-ಘಟಪ್ರಭಾ-ರಾಯಭಾಗ-ಕುಡಚಿ ಮಾರ್ಗವಾಗಿ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ.

ಮೇ 7ರಂದು ರಾತ್ರಿ 9.10ಕ್ಕೆ ಧಾರವಾಡದಿಂದ 9.55ಕ್ಕೆ ಹುಬ್ಬಳ್ಳಿಯಿಂದ ಮರಳಿ ಬೆಂಗಳೂರಿಗೆ ಹೊರಡಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ | Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

Mantralaya Tour

ಬೆಂಗಳೂರು: ಮಂತ್ರಾಲಯ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳ. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿರುವ ತುಂಗಾಭದ್ರಾ ನದಿಯ ದಡದಲ್ಲಿದೆ. ಇಲ್ಲಿಗೆ ಹೋಗಿ ಶ್ರೀ ಗುರುರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಪ್ರತಿಯೊಬ್ಬರೂ ತವಕಿಸುತ್ತಾರೆ. ನೀವು ಒಂದೇ ದಿನದಲ್ಲೂ ಮಂತ್ರಾಲಯಕ್ಕೆ ಹೋಗಿಬರಲು ಸಾಧ್ಯವಿದೆ. ಆದರೆ ಎಲ್ಲಾ ಟ್ರೈನ್‌ಗಳು ಒಂದೇ ದಿನದಲ್ಲಿ ಮಂತ್ರಾಲಯಕ್ಕೆ (Mantralaya Tour) ಹೋಗಿ ಬರಲು ಅನುಕೂಲಕರವಾಗಿಲ್ಲ. ಹಾಗಾಗಿ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಹೋಗಿ ಬರಲು ಯಾವ ಟ್ರೈನ್ ಸೂಕ್ತ ಎಂಬ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ʼಬಸವ ಎಕ್ಸ್ ಪ್ರೆಸ್ʼ ಬಹಳ ಸೂಕ್ತ. ಇದು ಬೆಂಗಳೂರು ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 4.49ಕ್ಕೆ ಹೊರಟು ಮಧ್ಯರಾತ್ರಿ 12.09ಕ್ಕೆ ಮಂತ್ರಾಲಯಕ್ಕೆ ತಲುಪುತ್ತದೆ.

ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 11.39ಕ್ಕೆ ಹೊರಟು ಬೆಳಗ್ಗೆ 7.09ಕ್ಕೆ ಮಂತ್ರಾಲಯ ತಲುಪುತ್ತದೆ.

ಕರ್ನಾಟಕ ಎಕ್ಸ್ ಪ್ರೆಸ್  ಟ್ರೈನ್ ಕೆಂಪೇಗೌಡ ರೈಲು ನಿಲ್ದಾಣದಿಂದ ಸಂಜೆ 7.20ಕ್ಕೆ ಹೊರಟು ಬೆಳಗಿನ ಜಾವ 2.24ರ ಹೊತ್ತಿಗೆ ಮಂತ್ರಾಲಯ ತಲುಪಲಿದೆ.

ಲಾತೂರ್ ಎಕ್ಸ್ ಪ್ರೆಸ್ ಟ್ರೈನ್ ಯಶವಂತಪುರ ಟ್ರೈನ್ ಸ್ಟೇಷನ್ ನಿಂದ ಸಂಜೆ 7.15ಕ್ಕೆ ಹೊರಟು ಬೆಳಗಿನ ಜಾವ 1.20ಕ್ಕೆ ಮಂತ್ರಾಲಯ ತಲುಪಲಿದೆ.

ಎಲ್ಲೆಲ್ಲಿ ಹೋಗಬಹುದು?

ಈ ಎಲ್ಲಾ ಟ್ರೈನ್ ಗಳು ಮಂತ್ರಾಲಯ ರೋಡ್ ರೈಲ್ವೇ ಸ್ಟೇಷನ್ ತಲುಪುತ್ತದೆ. ಅಲ್ಲಿಂದ ಮಂತ್ರಾಲಯ ಮಠಕ್ಕೆ 15 ಕಿ.ಮೀ ದೂರವಿದೆ. ಹಾಗಾಗಿ ನೀವು  ರೈಲ್ವೇ ಸ್ಟೇಷನ್ ನಿಂದ ಆಟೋ, ಕ್ಯಾಬ್ ಮಾಡಿಕೊಂಡು ಮಂತ್ರಾಲಯದ ಮಠಕ್ಕೆ ತಲುಪಬಹುದು. ಹಾಗೇ ಮಂತ್ರಾಲಯದಲ್ಲಿ ನಿಮಗೆ ವಿಶ್ರಾಂತಿ ಪಡೆಯಲು ರೂಂಗಳ ವ್ಯವಸ್ಥೆ ಇದೆ. ಹಾಗಾಗಿ ನೀವು ರೂಂ ಬುಕ್ ಮಾಡಿ ಅಲ್ಲಿ ಸ್ನಾನಾದಿಗಳನ್ನು ಮುಗಿಸಿ ನಂತರ ರಾಯರ ದರ್ಶನ ಪಡೆಯಬಹುದು. ಅಲ್ಲಿ ರಾಯರ ಬೃಂದಾವನ ದರ್ಶನ ಮಾಡಿ. ಮಂತ್ರಾಲಯದಿಂದ ಸ್ವಲ್ಪ ದೂರದಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಬಹುದು.

ವಾಪಸ್‌ ಬರಲು ಯಾವ ರೈಲು?:

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿದ ಬಳಿಕ ವಾಪಸ್ ಬೆಂಗಳೂರು ತಲುಪಲು ಮಂತ್ರಾಲಯದಿಂದ ಟ್ರೈನ್ ವ್ಯವಸ್ಥೆ ಇದೆ. ನಾಂದೇಡ್ ಎಕ್ಸ್ ಪ್ರೆಸ್ ರೈಲು ರಾತ್ರಿ 8.45ಕ್ಕೆ ಮಂತ್ರಾಲಯದಿಂದ ಹೊರಟು ಬೆಳಗ್ಗೆ 4 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣವನ್ನು ತಲುಪಲಿದೆ. ಅಲ್ಲದೇ ಉದ್ಯಾನ ಎಕ್ಸ್ ಪ್ರೆಸ್ ರಾತ್ರಿ 8.45ಕ್ಕೆ ಮಂತ್ರಾಲಯ ರೈಲ್ವೇ ಸ್ಟೇಷನ್ ನಿಂದ ಹೊರಟು ಬೆಳಗ್ಗೆ 6 ಗಂಟೆಗೆ ಕೆಂಪೇಗೌಡ ರೈಲು ನಿಲ್ದಾಣ ತಲುಪುತ್ತದೆ.

ಇದನ್ನೂ ಓದಿ:

ಹಾಗಾಗಿ ನೀವು ಈ ರೈಲುಗಳ ಮೂಲಕ ಒಂದೇ ದಿನದಲ್ಲಿ ಮಂತ್ರಾಲಯಕ್ಕೆ ಪ್ರಯಾಣ ಮಾಡಬಹುದು. ರಜಾ ದಿನಗಳಲ್ಲಿ ನಿಮ್ಮ ಕುಟುಂಬದವರು, ಸ್ನೇಹಿತರ ಜೊತೆಯಲ್ಲಿ ಮಂತ್ರಾಲಯದ ರಾಯರ ದರ್ಶನ ಪಡೆಯಬಹುದು.

Continue Reading
Advertisement
Tips To Prevent Curd
ಆಹಾರ/ಅಡುಗೆ6 mins ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ25 mins ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ32 mins ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Prawal Revanna Case
ಕರ್ನಾಟಕ1 hour ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Summer Health Tips
ಆರೋಗ್ಯ1 hour ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Vistara Editorial
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

Drinking Water Before Meals
ಆರೋಗ್ಯ2 hours ago

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

World Laughter Day
ಆರೋಗ್ಯ3 hours ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌