ಬೆಂಗಳೂರು: ಉತ್ತರ ಹಾಗೂ ಮಧ್ಯ ಕರ್ನಾಟಕದ ಅನೇಕ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ಬಗೆಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಬೃಹತ್ ಪ್ರಮಾಣದ ಹಣವನ್ನು ಒದಗಿಸಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, “ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು” ಎಂದಿದ್ದಾರೆ.
ನವೆಂಬರ್‌ನಲ್ಲಿ ದೆಹಲಿಗೆ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದರು. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದ್ದರು.
ಇದನ್ನೂ ಓದಿ : Union budget 2023 : ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5200 ಕೋಟಿ ರೂ.
ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದ್ದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದ್ದರುರು.