Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ - Vistara News

ಬೆಂಗಳೂರು

Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

Building Collapsed : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

building collapses in Bengaluru One dead another critical
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ‌ ಘಟನೆ ನಡೆದಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರನೆ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕದಳ ಸಿಬ್ಬಂದಿ ಸದ್ಯ ಕಾಂಕ್ರೀಕ್ ತೆರವು ಮಾಡುತ್ತಿದ್ದಾರೆ.

building collapses in Bengaluru One dead another critical
building collapses in Bengaluru One dead another critical

ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡವಾಗಿದೆ. ಐದನೇ ಫ್ಲೋರ್‌ನಿಂದ ಬಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಸೋಲದೇವಹಳ್ಳಿ ಬಳಿ ವಾಸವಿದ್ದರು. ಫ್ಲೋರಿಂಗ್ ಹಾಕುತ್ತಿದ್ದಾಗ ಈ ರೀತಿ ಅವಘಡ ಸಂಭವಿಸಿದೆ. ಮಾಲೀಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ನೇತಾಡಿದ ಲೈನ್‌ಮ್ಯಾನ್‌

ಲೈನ್‌ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಕಂಬದಲ್ಲೇ ಲೈನ್‌ ಮ್ಯಾನ್‌ ನೇತಾಡಿದ್ದಾರೆ. ಬಾಗಲಕೋಟೆಯ ಮದಲಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಲೈನ್‌ಮ್ಯಾನ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಹಿರೇಮಠ (30) ಕರೆಂಟ್‌ ಶಾಕ್‌ಗೆ ಒಳಗಾದವರು.

ರಬಕವಿ ಹೆಸ್ಕಾಂ ಕಚೇರಿಯಲ್ಲಿ ಲೈನ್‌ಮನ್ ಆಗಿರುವ ಪ್ರವೀಣ್ ಮೂಲತಃ ವಿಜಯಪುರ ಜಿಲ್ಲೆ ಬಬಲೇಶ್ವರ ನಿವಾಸಿಯಾಗಿದ್ದಾರೆ. 10 ವರ್ಷಗಳಿಂದ ಕೆಇಬಿಯಲ್ಲಿ ಲೈನ್‌ಮನ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರವೀಣ್‌ ವಿದ್ಯುತ್‌ ಸರಿಪಡಿಸಲು ಮುಂದಾಗಿದ್ದರು. ಈ ವೇಳೆ ವಿದ್ಯುತ್‌ ಪ್ರವಹಿಸಿದೆ, ಇದನ್ನು ಗಮನಿಸಿದ ಯುವಕರು ಕೂಡಲೇ ರಬಕವಿ ಹೆಸ್ಕಾಂಗೆ ಕಚೇರಿಗೆ ಕರೆ ಮಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಆನಂತರ ಏಣಿ ಮೂಲಕ ನೇತಾಡುತ್ತಿದ್ದ ಪ್ರವೀಣ್ ಕೆಳಗಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆ‌ಎಲ್‌ಇಗೆ ಸ್ಥಳಾಂತರ ಮಾಡಿದ್ದಾರೆ.

ಉಡುಪಿಯಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳು ಅಟ್ಯಾಕ್‌

ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ. ಉಡುಪಿಯ ಕೆಮ್ಮಣ್ಣು ಹೂಡೆಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾಗಿವೆ. ಇದನ್ನೂ ಗಮಿನಿಸಿದ ವಿದ್ಯಾರ್ಥಿನಿ ಕೂಗಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ಬಚಾವಾಗಿ ಓಡಿದ್ದಾಳೆ. ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಪ್ರಕಟ

KCET Mock Allotment 2024: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ.

VISTARANEWS.COM


on

By

KCET Mock Allotment 2024 Engineering mock seat allotment announced
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸತತ ಮುಂದೂಡಿಕೆ ಬಳಿಕ ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ಆಗಸ್ಟ್ 9ರ ಸಂಜೆ ಫಲಿತಾಂಶ (KCET Mock Allotment 2024) ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಆದರೆ, ಆ ಬಳಿಕವೂ ಒಂದು ದಿನ ಮುಂದೂಡಲಾಗಿತ್ತು. ಇದೀಗ ಆಗಸ್ಟ್‌ 10ರ ಸಂಜೆ 6 ಗಂಟೆಯೊಳಗೆ ಪ್ರಕಟವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಎಂಜಿನಿಯರಿಂಗ್ (Engineering) ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆ.10ರಂದು ಸಂಜೆ 6 ಗಂಟೆಗೊಳಗೆ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಎಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ।। ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಚೆ / ಆಯ್ಕೆಗಳ ಆಧಾರದ ಮೇಲೆ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 10-07-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 12-07-2024 ರ ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.13ರಂದು ಕರೆಂಟ್‌ ಇರಲ್ಲ

Bengaluru Power Cut: ಬೆಂಗಳೂರು ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ನಗರದ 66/11 ಕೆ.ವಿ ‘ಬಾಣಸವಾಡಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.13ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಹೊರಮಾವು, ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್, ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್,

ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ. ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನ ಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿ ರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ. ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Bangladesh Unrest: ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಹಿಂದು ಕಾರ್ಯಕರ್ತರು ವಶಕ್ಕೆ

Bangladesh Unrest: ಬಾಂಗ್ಲಾದೇಶದ ಹಿಂದುಗಳ ಮೇಲಿನ ಅಮಾನುಷ ದೌರ್ಜನ್ಯಕ್ಕೆ ಹಿಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಲಾಗಿದೆ.

VISTARANEWS.COM


on

Bangladesh Unrest
Koo

ಬೆಂಗಳೂರು: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ (Bangladesh Unrest) ಖಂಡಿಸಿ ಹಿಂದು ಸಂಘಟನೆಗಳಿಂದ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದರೂ ಹೋರಾಟ ಮುಂದುವರಿಸಿದ್ದರಿಂದ ಹಿಂದುಪರ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಬಾಂಗ್ಲಾದೇಶದ ಹಿಂದುಗಳ ಮೇಲಿನ ಅಮಾನುಷ ದೌರ್ಜನ್ಯಕ್ಕೆ ಹಿಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಸಿಲಿಕಾನ್ ಸಿಟಿಯ ಅನೇಕ ಕಡೆ ಪ್ರತಿಭಟಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಲಾಗಿದೆ.

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಫ್ರೀಡಂ ಪಾರ್ಕ್‌ಗೆ ಹೋಗಿ ಪ್ರತಿಭಟನೆ ಮಾಡಿ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಪೊಲೀಸರ ಮನವಿಗೆ ಹಿಂದುಪರ ಕಾರ್ಯಕರ್ತರು ಕ್ಯಾರೆ ಎನ್ನದೆ, ಕೇಸರಿ ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Bangladesh Unrest
ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ

ಬೆಂಗಳೂರು: ಬಾಂಗ್ಲಾದೇಶದ ಹಿಂದೂಗಳ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಭಾರತ ಸರ್ಕಾರವು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜನಜಾಗೃತಿ ಸಮಿತಿಯು (Bangladesh Unrest) ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಅವರು, ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಈಗ ಹಿಂದುಗಳ ವಿರುದ್ಧ ಪ್ರಾರಂಭವಾಗಿವೆ. ಉದ್ದೇಶಪೂರ್ವಕವಾಗಿ ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು, ಅವರನ್ನು ಬಹಿರಂಗವಾಗಿ ಹತ್ಯೆ ಮಾಡುವುದು, ಹಿಂದುಗಳ ಮನೆಯ ಮೇಲೆ ದಾಳಿ ಮಾಡುವುದು, ಹಿಂದೂಗಳ ಅಂಗಡಿಗಳನ್ನು ಲೂಟಿ ಮಾಡುವುದು, ಹಿಂದುಗಳ ದೇವಸ್ಥಾನಗಳು ಧ್ವಂಸಗೊಳಿಸುವುದು, ಬೆಂಕಿ ಹಚ್ಚುವುದು, ಹಿಂದು ಮಹಿಳೆಯರ ಮೇಲಿನ ದೌರ್ಜನ್ಯ, ಹಿಂದುಗಳನ್ನು ಸ್ಥಳಾಂತರಿಸುವುದು ಮುಂತಾದ ದೌರ್ಜನ್ಯಗಳು ನಡೆಯುತ್ತಿವೆ. ಇದರಿಂದಾಗಿ ಅಲ್ಲಿಯ ಅಲ್ಪಸಂಖ್ಯಾತ ಹಿಂದುಗಳಲ್ಲಿ ಭಯದ ವಾತಾವರಣ ಉದ್ಭವಿಸಿದೆ.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಸೈನ್ಯದಿಂದ ಹಿಂದುಗಳ ರಕ್ಷಣೆ ಮಾಡುವುದೆಂದು ಆಶ್ವಾಸನೆ ನೀಡಿದ್ದರೂ ಭಾರತ ಸರ್ಕಾರವು ಅವರ ಮೇಲೆ ಅವಲಂಬಿಸಿರದೇ ಹಿಂದು ಜನಾಂಗ ಮತ್ತು ದೇವಸ್ಥಾನ ರಕ್ಷಣೆಗಾಗಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜನಜಾಗೃತಿ ಸಮಿತಿಯ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದೆ.

ಬಾಂಗ್ಲಾದೇಶದಲ್ಲಿನ ಹಿಂದುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಮತ್ತು ಅವರಿಗೆ ತಕ್ಷಣ ರಕ್ಷಣೆ ನೀಡಬೇಕು. ಇಲ್ಲಿಯವರೆಗೆ ಅಲ್ಲಿಯ ಹಿಂದುಗಳ ಜೀವ ಮತ್ತು ಸಂಪತ್ತಿಯ ಏನೆಲ್ಲಾ ಹಾನಿ ಉಂಟಾಗಿದೆ, ಅದಕ್ಕೆ ತಕ್ಷಣ ಪರಿಹಾರ ನೀಡಬೇಕು. ಭಾರತ ಸರ್ಕಾರವು ಈ ವಿಷಯ ತ್ವರಿತವಾಗಿ ವಿಶ್ವಸಂಸ್ಥೆಯಲ್ಲಿ ಮಂಡಿಸಿ ಬಾಂಗ್ಲಾದೇಶದಲ್ಲಿನ ವಿಶ್ವಸಂಸ್ಥೆಯ ಸಂಘಗಳ ಜತೆಗೆ ಶಿಷ್ಟ ಮಂಡಳಿಗೆ ಭೇಟಿ ನೀಡಲು ಆಗ್ರಹಿಸಬೇಕು.

ಇದನ್ನೂ ಓದಿ: ಬ್ಯಾಂಕ್‌ ಖಾತೆಗೆ ನಾಲ್ವರು ನಾಮಿನಿಗಳನ್ನು ಸೇರಿಸಲು ಅವಕಾಶ; ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆಯಲ್ಲಿ ಏನೇನು ಬದಲಾವಣೆ?

ಬಾಂಗ್ಲಾದೇಶದಲ್ಲಿನ ಹಿಂಸಾಚಾರದಿಂದ ರೋಸಿ ಹಿಂದುಸ್ಥಾನಕ್ಕೆ ಬಂದಿರುವ ಹಿಂದುಗಳಿಗೆ ನಾಗರಿಕ ಸುಧಾರಣಾ ಕಾನೂನಿನ ಮೂಲಕ (ಸಿಎಎ) ಭಾರತ ಸರ್ಕಾರವು ಆಶ್ರಯ ನೀಡಬೇಕು ಹಾಗೂ ಈ ಹಿಂದೆ ಕೂಡ ಸುಮಾರು 5 ಕೋಟಿ ಬಾಂಗ್ಲಾದೇಶಿ ನುಸುಳುಕೋರರು ಭಾರತದಲ್ಲಿ ನುಸುಳಿದ್ದಾರೆ. ಈ ಘಟನೆಯ ನಂತರ ಅವರ ನುಸುಳುವಿಕೆ ಹೆಚ್ಚಾಗುವ ಸಾಧ್ಯತೆಯನ್ನು ಗಮನಿಸಿದರೆ ಭಾರತೀಯ ಗಡಿಯಲ್ಲಿ ಸರಿಯಾದ ಬಂದೋಬಸ್ತ್ ಮಾಡಬೇಕು ಎಂದು ಹಿಂದು ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Continue Reading

ಕರ್ನಾಟಕ

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

CDPO suspended: ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯಲ್ಲಿ ನಡೆದ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣದಲ್ಲಿ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇದೀಗ ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.

VISTARANEWS.COM


on

CDPO suspended
Koo

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು (CDPO suspended) ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದ್ದಾರೆ.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸ್‌ ಆ್ಯಪ್ ಗ್ರೂಪ್‌ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೊ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನು ಮಾಡಿದ್ರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರುಗಳ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸಿದರು.

ಇಲಾಖೆ ವತಿಯಿಂದ ಕರ್ನಾಟಕದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಇಲಾಖೆಯ ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಸಚಿವರು, ಜತೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಎಲ್ಲಾ ಅನುದಾನದ ಕುರಿತು ಮತ್ತೊಮ್ಮೆ ಸದರಿ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಇದನ್ನೂ ಓದಿ | CM Siddaramaiah: ಆರೋಪಗಳ ವಿರುದ್ಧ ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.

Continue Reading
Advertisement
KCET Mock Allotment 2024 Engineering mock seat allotment announced
ಬೆಂಗಳೂರು14 mins ago

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಪ್ರಕಟ

Viral News
ವೈರಲ್ ನ್ಯೂಸ್21 mins ago

Viral News: 5 ಕೆಜಿ ಆಲೂಗಡ್ಡೆ ಲಂಚ ಕೇಳಿ ಅಮಾನತುಗೊಂಡ ಸಬ್‌ ಇನ್ಸ್‌ಪೆಕ್ಟರ್ !

CM Siddaramaiah
ಚಾಮರಾಜನಗರ39 mins ago

CM Siddaramaiah: ನಮಗೆ ಮನೇಲಿ ತಂಗಳು ಇರ್ತಿತ್ತು, ಇಡ್ಲಿ-ದೋಸೆ ಇರ್ತಿಲಿಲ್ಲ ಎಂದ ಸಿಎಂ

High Calcium Foods
ಆರೋಗ್ಯ43 mins ago

High Calcium Foods: ದೇಹಕ್ಕೆ ಮುಖ್ಯವಾದ ಅಧಿಕ ಕ್ಯಾಲ್ಶಿಯಂ ಆಹಾರಗಳನ್ನು ಪಡೆಯುವುದು ಹೇಗೆ?

Narendra Modi
ದೇಶ44 mins ago

Narendra Modi: ಮಕ್ಕಳು, ಸ್ತ್ರೀಯರು ಸೇರಿ ವಯನಾಡು ಸಂತ್ರಸ್ತರನ್ನು ಸಂತೈಸಿದ ಮೋದಿ; Photos ಇಲ್ಲಿವೆ

Smriti Mandhana
ಪ್ರಮುಖ ಸುದ್ದಿ45 mins ago

Smriti Mandhana : ವಿರಾಟ್​ ಕೊಹ್ಲಿ ಜತೆ ನನ್ನನ್ನು ಹೋಲಿಕೆ ಮಾಡಬೇಡಿ; ಸ್ಮೃತಿ ಮಂದಾನ ಮನವಿ

Tharun Sudhir
ಸಿನಿಮಾ49 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ರಿಸೆಪ್ಶನ್‌ ಲೈವ್‌ ವಿಡಿಯೊ ಇಲ್ಲಿದೆ ನೋಡಿ

ಪ್ರಮುಖ ಸುದ್ದಿ1 hour ago

BJP-JDS Padayatra: ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಲ್ಲ: ಸಿಎಂ, ಡಿಸಿಎಂ ವಿರುದ್ಧ ಬಿಎಸ್‌ವೈ ಗುಡುಗು

Bengaluru Power Cut
ಕರ್ನಾಟಕ1 hour ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.13ರಂದು ಕರೆಂಟ್‌ ಇರಲ್ಲ

Saina Nehwal
ಪ್ರಮುಖ ಸುದ್ದಿ1 hour ago

Saina Nehwal : ನನ್ನ ಸ್ಮ್ಯಾಶ್​ ತಡೆಯಲು ಬುಮ್ರಾಗೆ ಸಾಧ್ಯವಿಲ್ಲ; ಕ್ರಿಕೆಟ್​ಗೆ ಹೆಚ್ಚು ಆದ್ಯತೆ ಬಗ್ಗೆ ತಕರಾರು ಎತ್ತಿದ ಸೈನಾ ನೆಹ್ವಾಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌