BY Vijayendra : 28 ಸಾವಿರ ಹಳ್ಳಿ, 19 ಸಾವಿರ ನಗರ ಬೂತ್‌ಗಳಲ್ಲಿ ಬಿಜೆಪಿ ಗ್ರಾಮ ಚಲೋ: ಫೆ. 9ರಿಂದ ಶುರು - Vistara News

ಬೆಂಗಳೂರು

BY Vijayendra : 28 ಸಾವಿರ ಹಳ್ಳಿ, 19 ಸಾವಿರ ನಗರ ಬೂತ್‌ಗಳಲ್ಲಿ ಬಿಜೆಪಿ ಗ್ರಾಮ ಚಲೋ: ಫೆ. 9ರಿಂದ ಶುರು

BY Vijayendra : ಫೆಬ್ರವರಿ 9ರಿಂದ ಆರಂಭವಾಗಲಿರುವ ಮೂರ ದಿನಗಳ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಪ್ರತಿ ಗ್ರಾಮ ಗ್ರಾಮವನ್ನೂ ತಲುಪುತ್ತೇವೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BY Vijayendra Grama Chalo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಆಯೋಜಿಸಿರುವ ಬಿಜೆಪಿ ಗ್ರಾಮ ಚಲೋ (Grama Chalo) ಅಭಿಯಾನದಲ್ಲಿ ರಾಜ್ಯದ 28 ಸಾವಿರಕ್ಕೂ ಅಧಿಕ ಹಳ್ಳಿಗಳು, 19 ಸಾವಿರ ನಗರ ಬೂತ್‌ಗಳನ್ನು ಸಂಪರ್ಕಿಸಲಾಗುತ್ತದೆ. 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು.

ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ ಮತ್ತು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದರು.

BY Vijayendra Grama Chalo

ʻʻನಾನು ಇವತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ‘ವಿಕಸಿತ ಭಾರತ’ವಾಗಿ ಪರಿವರ್ತನೆ ಹೊಂದಬೇಕು; ಭಾರತವು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕನಸು ನನಸಾಗಲು ಗ್ರಾಮಗಳೂ ಅಭಿವೃದ್ಧಿ ಹೊಂದಬೇಕಿದೆ ಎಂದು ವಿಶ್ಲೇಷಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕುʼʼ ಎಂದು ವಿಜಯೇಂದ್ರ ಹೇಳಿದರು.

BY Vijayendra Grama Chalo

ಪ್ರತಿ ಮನೆ ಮನೆಗೂ ಕಾರ್ಯಕರ್ತರ ಭೇಟಿ

ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ‘ಮೋದಿ ಮತ್ತೊಮ್ಮೆ’ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದು ವಿಜಯೇಂದ್ರ ವಿವರಿಸಿದರು.

ಇದನ್ನೂ ಓದಿ : BY Vijayendra : ಬಿಜೆಪಿ ಸಂಸದರು ಗಂಡಸರಲ್ಲ ಎಂಬ ಹೇಳಿಕೆಗೆ ಇಂದಿರಾ ಫೋಟೊ ಮೂಲಕ ವಿಜಯೇಂದ್ರ ಉತ್ತರ

BY Vijayendra Grama Chalo3

ಅಮಿತ್‌ ಶಾ ಭೇಟಿ ಮೈಸೂರಿಗೆ ಮಾತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ. ಫೆಬ್ರವರಿ 10ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ತಲುಪುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದುಕೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿಜಯೇಂದ್ರ ಅವರು ಈ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟರು.

ಮಾಂಸ ತಿಂದು ಸುತ್ತೂರು ಜಗದ್ಗುರುಗಳ ಗದ್ದುಗೆ ಭೇಟಿ ತಪ್ಪು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಬುಧವಾರ ಮಧ್ಯಾಹ್ನ ದೆಹಲಿಯಲ್ಲಿ ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದರು. ‘ಇದು ಬಹಳ ದುರದೃಷ್ಟಕರ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಎಲ್ಲೋ ಒಂದು ಕಡೆ ಮರೆಯುತ್ತಿದ್ದಾರೆ ಎಂಬುದು ನನ್ನ ಭಾವನೆ. ಇದು ಮೊದಲ ಬಾರಿ ಏನಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದೇವರ ಬಗ್ಗೆ ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ಮಾತು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ. ಈ ಘಟನೆ ನಿಜವಾಗಿಯೂ ಖಂಡನೀಯ. ಅದರಲ್ಲೂ ಸುತ್ತೂರಿನ ಪವಿತ್ರ ಗದ್ದುಗೆಗೆ ಭೇಟಿ ಕೊಟ್ಟದ್ದು ನಿಜವಾಗಲೂ ಒಂದು ದುರಂತ’ ಎಂದು ತಿಳಿಸಿದರು.

ಯಾಕೆ ಪದೇಪದೇ ಇಂಥ ಘಟನೆ ನಡೆಯುತ್ತದೆ ಎಂದು ಅವರೇ ಉತ್ತರಿಸಬೇಕು. ಒಂದು ಕಡೆ ಭಾಷಣ ಮಾಡಿದ ಮುಖ್ಯಮಂತ್ರಿಯವರು ಅಣ್ಣ ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ. ಅಂದರೆ, ಅವರ ನಡೆಗೂ ನುಡಿಗೂ ಅಜಗಜಾÀಂತರ ವ್ಯತ್ಯಾಸವಿದೆ. ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

BY Vijayendra Grama Chalo3

ಲೋಕಸಭಾ ಚುನಾವಣೆ ಸಂಬಂಧ ಸರ್ವೇ ಫಲಿತಾಂಶವೊಂದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಇಡೀ ದೇಶದಲ್ಲಿ ನರೇಂದ್ರ ಮೋದಿ ಅವರ ಪರವಾದ ಅಲೆ ಇದೆ. ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನವರಿಕೆ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. 28 ಸೀಟುಗಳ ಮತ ಎಣಿಕೆ ಸಂದರ್ಭದಲ್ಲಿ ಒಂದೊಂದು ಸೀಟು ಗೆಲ್ಲಲು ಕೂಡ ಕಾಂಗ್ರೆಸ್‍ನವರು ಪರಿತಪಿಸುತ್ತಾರೆ. ಅಂಥ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ವಿಜಯೇಂದ್ರ ತಿಳಿಸಿದರು.

ರಾಜ್ಯದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದ್ರೆ, ಶರಣು ತಳ್ಳಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬಿಜೆಪಿ ಮುಖಂಡರು ರುದ್ರೇಶ್ ಅವರು ಈ ಸಂದರ್ಭದಲ್ಲಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Music Academy Bangalore : ಮ್ಯೂಜಿಗಲ್​ನಿಂದ ಅಮೃತಹಳ್ಳಿಯಲ್ಲಿ ಮ್ಯೂಸಿಕ್ ಅಕಾಡೆಮಿ ಪ್ರಾರಂಭ

Music Academy Bangalore : ಮ್ಯೂಜಿಗಲ್ ಸಂಗೀತ ಶಿಕ್ಷಣದಲ್ಲಿ 360-ಡಿಗ್ರಿ ಫ್ರೇಮ್ ವರ್ಕ್ ಅನ್ನು ಪೂರೈಸುತ್ತಿದ್ದು ಸಂಗೀತ ಕಲಿಕೆ ಮತ್ತು ಬೋಧನೆಯ ವ್ಯವಸ್ಥೆಯನ್ನು ಆನ್ಲೈನ್, ಆಫ್ಲೈನ್ ಮತ್ತು ಸಂಗೀತ ಸಾಧನಗಳ ಮಳಿಗೆಯನ್ನು ಒಂದೇ ಪ್ಲಾಟ್ ಫಾರಂಗೆ ಅಳವಡಿಸುವ ಮೂಲಕ ಸುವರ್ಣ ಮಾನದಂಡ ರೂಪಿಸುತ್ತಿದೆ.

VISTARANEWS.COM


on

Music Academy Bangalore
Koo

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಸಂಗೀತ ಶಿಕ್ಷಣದ ಪ್ಲಾಟ್ ಫಾರಂ ಮ್ಯೂಜಿಗಲ್, ಬೆಂಗಳೂರಿನ ಜಕ್ಕೂರು ಲೇಔಟಿನ ಅಮೃತಹಳ್ಳಿಯಲ್ಲಿ ತನ್ನ 11ನೇ ಅತ್ಯಾಧುನಿಕ ಮ್ಯೂಸಿಕ್ ಅಕಾಡೆಮಿ ಪ್ರಾರಂಭಿಸಿದೆ (Music Academy Bangalore). ಈ ಅಕಾಡೆಮಿಯು 2200 ಚದರ ಅಡಿ ವಿಸ್ತೀರ್ಣ ಹೊಂದಿದೆ ಮತ್ತು ಗಾಯನ ಮತ್ತು ಇನ್ಸ್ ಟ್ರುಮೆಂಟಲ್ ಸಂಗೀತ ಕಲಿಯಲು ಪೂರಕ ವಾತಾವರಣ ಹೊಂದಿದೆ. ಖ್ಯಾತ ಹಿನ್ನೆಲೆ ಗಾಯಕ ನಾಗರಂಜನಿ ರಘು ಮುಖ್ಯ ಅತಿಥಿಯಾಗಿದ್ದರು ಮತ್ತು ಮ್ಯೂಜಿಗಲ್ ಸಂಸ್ಥಾಪಕ ಡಾ.ಲಕ್ಷ್ಮೀನಾರಾಯಣ ಯೆಲೂರಿ ಗೌರವ ಅತಿಥಿಗಳಾಗಿದ್ದರು.

500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಹಲವು ಬ್ಯಾಚ್ ಗಳನ್ನು ಹೊಂದಿರುವ ಈ ಮ್ಯೂಸಿಕ್ ಅಕಾಡೆಮಿಯು ಪಿಯಾನೊ, ಕೀಬೋರ್ಡ್, ಗಿಟಾರ್, ಡ್ರಮ್ಸ್, ಕರ್ನಾಟಕ ಸಂಗೀತ, ಹಿಂದೂಸ್ಥಾನಿ, ಪಾಶ್ಚಿಮಾತ್ಯ, ವಯೊಲಿನ್ ಮತ್ತು ಉಕುಲೆಲೆಯಲ್ಲಿ ಪಾಠಗಳನ್ನು ನೀಡುತ್ತದೆ. ಉದ್ಘಾಟನಾ ತಿಂಗಳಲ್ಲಿ ಮ್ಯೂಜಿಗಲ್ ನೋಂದಾಯಿತರಾದ ಎಲ್ಲರಿಗೂ 1 ತಿಂಗಳು ಉಚಿತ ಸಂಗೀತ ಶಿಕ್ಷಣ ನೀಡುತ್ತದೆ.

ಮ್ಯೂಜಿಗಲ್ ಸಂಗೀತ ಶಿಕ್ಷಣದಲ್ಲಿ 360-ಡಿಗ್ರಿ ಫ್ರೇಮ್ ವರ್ಕ್ ಅನ್ನು ಪೂರೈಸುತ್ತಿದ್ದು ಸಂಗೀತ ಕಲಿಕೆ ಮತ್ತು ಬೋಧನೆಯ ವ್ಯವಸ್ಥೆಯನ್ನು ಆನ್ಲೈನ್, ಆಫ್ಲೈನ್ ಮತ್ತು ಸಂಗೀತ ಸಾಧನಗಳ ಮಳಿಗೆಯನ್ನು ಒಂದೇ ಪ್ಲಾಟ್ ಫಾರಂಗೆ ಅಳವಡಿಸುವ ಮೂಲಕ ಸುವರ್ಣ ಮಾನದಂಡ ರೂಪಿಸುತ್ತಿದೆ.

ಇದನ್ನೂ ಓದಿ: Olympic Day : 900 ಮಕ್ಕಳೊಂದಿಗೆ ಒಲಿಂಪಿಕ್ ದಿನ ಸಂಭ್ರಮಿಸಿದ ರಿಲಯನ್ಸ್​ಫೌಂಡೇಶನ್​

ಮ್ಯೂಜಿಗಲ್ ಅಕಾಡೆಮಿ ಪ್ರಾರಂಭ ಕುರಿತು ಅಕಾಡೆಮಿ ಸಂಸ್ಥಾಪಕ ಡಾ.ಲಕ್ಷ್ಮೀನಾರಾಯಣ ಯೆಲೂರಿ, “ಮ್ಯೂಜಿಗಲ್ ಅಕಾಡೆಮಿಯು ಸಂಗೀತ ಶಿಕ್ಷಣವನ್ನು ಅತ್ಯಾಧುನಿಕ ಕಲಿಕಾ ಕೇಂದ್ರದ ಮೂಲಕ ಪ್ರಜಾಸತ್ತೀಯಗೊಳಿಸುವ ಉದ್ದೇಶ ಹೊಂದಿದೆ. ಇದು ಸಂಗೀತದಲ್ಲಿ ಅತ್ಯುತ್ತಮ ಕಲಿಕೆ ಮತ್ತು ಬೋಧನೆಯ ಅನುಭವ ನೀಡುತ್ತದೆ. ಇದು ಪರಿಣಿತ ಶಿಕ್ಷಕರಿಂದ ಭಾರತೀಯ ಶಾಸ್ತ್ರೀಯ ಮತ್ತು ಪಾಶ್ಚಿಮಾತ್ಯ ಸಂಗೀತದಲ್ಲಿ ಕಲಿಕೆ ಮತ್ತು ಬೋಧನೆ ನೀಡುತ್ತದೆ. ಇದರೊಂದಿಗೆ ರಚನಾತ್ಮಕ ಪಠ್ಯಕ್ರಮ, ನಿಯಮಿತ ಮೌಲ್ಯಮಾಪನ, ಪ್ರಮಾಣೀಕರಣ, ಅನುಕೂಲಕರ ಶುಲ್ಕತ ಪಾವತಿ, ತರಬೇತಿ ಪಡೆದ ಶಿಕ್ಷಕರು ಮತ್ತು ಸುಲಭ ಲಭ್ಯತೆ ಇದನ್ನು ಕಲಿಯುವವರ ಕೇಂದ್ರವಾಗಿಸಿದೆ” ಎಂದರು.
ಭಾರತ, ಯು.ಎಸ್.ಎ., ಯು.ಕೆ., ಆಸ್ಟ್ರೇಲಿಯಾ ಮತ್ತು ಯು.ಎ.ಇ.ಗಳಲ್ಲಿ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ 400+ ತರಬೇತಿ ಪಡೆದ ಸಂಗೀತ ಶಿಕ್ಷಕರನ್ನು ಹೊಂದಿದ್ದು 40,000ಕ್ಕೂ ಹೆಚ್ಚು ತರಗತಿಗಳನ್ನು ಯಶಸ್ವಿಯಾಗಿ ಪೂರೈಸಿರುವ ಮ್ಯೂಜಿಗಲ್ ವಿದ್ಯಾರ್ಥಿಗಳಿಗೆ ಅವರ ಸಂಗೀತದ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ನೆರವಾಗುತ್ತದೆ.

ಭಾರತದಲ್ಲಿ ಸಾಂಪ್ರದಾಯಿಕ ಸಂಗೀತ ಶಿಕ್ಷಣವು ನರೆಹೊರೆಯ ಸಂಗೀತ ಶಿಕ್ಷಣ ಕೇಂದ್ರಗಳಿಗೆ ಸೀಮಿತವಾಗಿದೆ ಮತ್ತು ಕೆಲವೇ ಪ್ರದೇಶಗಳಿಗೆ ಮೀಸಲಾಗಿದೆ. ಮ್ಯೂಜಿಗಲ್ ಅದನ್ನು ಮೀರಿ ಎಲ್ಲರಿಗೂ ಸಂಗೀತ ಶಿಕ್ಷಣ ದೊರೆಯುವಂತೆ ಮಾಡುತ್ತಿದೆ. ಮ್ಯೂಜಿಗಲ್ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳಿಂದ ಮತ್ತು ಪರಿಣಿತ ಶಿಕ್ಷಕರಿಂದ ಸಮಗ್ರವಾದ ಸಂಗೀತ ಶಿಕ್ಷಣ ನೀಡುತ್ತದೆ.

Continue Reading

ಕರ್ನಾಟಕ

Suraj Revanna Case: ಸಲಿಂಗ ಕಾಮ ಕೇಸ್‌; ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

Suraj Revanna Case: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲು 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಜಡ್ಜ್‌ ಸೂಚಿಸಿದ್ದಾರೆ.

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಜೂನ್‌ 22ರಂದು ರಾತ್ರಿ ಎಫ್‌ಐಆರ್‌ ದಾಖಲಾಗಿತ್ತು. ನಂತರ ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು. ಇದೀಗ ಸೂರಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ!

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಬಳಿಕ ಜೂನ್‌ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಹಿತ್ತು.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದರು.

ಪ್ರತಿ ದೂರು

ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೂನ್‌ 21ರಂದು ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ | Suraj Revanna Case: ಸೂರಜ್ ಪ್ರಕರಣದ ತನಿಖೆ ಹೊಣೆಯೂ ಬಿ.ಕೆ. ಸಿಂಗ್ ಹೆಗಲಿಗೆ

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿತ್ತು. ಸದ್ಯ ಸೂರಜ್‌ ಪರ, ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್‌ ಕೂಡ ನಾಪತ್ತೆಯಾಗಿದ್ದಾನೆ. ಈತ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ.

Continue Reading

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mahindra Paddy Walker: ಮಹೀಂದ್ರಾ ಕಂಪನಿಯಿಂದ ʻ6ಆರ್‌ಒ ಪ್ಯಾಡಿ ವಾಕರ್ʼ ಭತ್ತ ನಾಟಿ ಯಂತ್ರ ಬಿಡುಗಡೆ

Mahindra Paddy Walker: : ಭತ್ತವನ್ನು ಪ್ರಮುಖ ಬೆಳೆಯುವ ಕರ್ನಾಟಕವು ವಿಶ್ವ ದರ್ಜೆಯ ಅಕ್ಕಿಗೆ ಹೆಸರುವಾಸಿಯಾಗಿದೆ ಮತ್ತು ಭತ್ತದ ಯಾಂತ್ರೀಕರಣ ತಂತ್ರಜ್ಞಾನಗಳನ್ನು ಆರಂಭಿಕವಾಗಿ ಅಳವಡಿಸಿಕೊಂಡ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬೆಳೆಯಲಾಗುತ್ತದೆ. ಹೊಸ ಪರಿಹಾರವು ನೀರಿನ ಸಂರಕ್ಷಣೆ, ಕಡಿಮೆ ಪರಿಸರ ಮಾಲಿನ್ಯ ತಡೆಯುತ್ತದೆ.

VISTARANEWS.COM


on

Mahindra Paddy Walker
Koo

ಬೆಂಗಳೂರು : ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ʻಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ʼನ ʻಕೃಷಿ ಉಪಕರಣಗಳ ವಿಭಾಗವುʼ (ಫಾರ್ಮ್‌ ಎಕ್ವಿಪ್‌ಮೆಂಟ್‌ ಸೆಕ್ಟರ್‌-ಎಫ್‌ಇಎಸ್) ಹೊಸ 6 ಸಾಲು ಭತ್ತದ ನಾಟಿ (Mahindra Paddy Walker) ಯಂತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ 4ಆರ್‌ಒ ವಾಕ್ ಬಿಹೈಂಡ್‌ ನಾಟಿಯಂತ್ರ (ಎಂಪಿ 461) ಮತ್ತು 4 ಆರ್​ಒ ರೈಡ್-ಆನ್ (ಪ್ಲಾಂಟಿಂಗ್ ಮಾಸ್ಟರ್ ಪ್ಯಾಡಿ 4 ಆರ್​ಒ) ಅನ್ನು ಯಶಸ್ವಿಯಾಗಿ ಪರಿಚಯಿಸಿದ ನಂತರ, ಮಹೀಂದ್ರಾ ಅವರ ಹೊಸ ʻ6ಆರ್​ಒ ಪ್ಯಾಡಿ ವಾಕರ್ʼ ಭತ್ತದ ನಾಟಿ ಯಂತ್ರವು ಭತ್ತ ನಾಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹೀಂದ್ರಾದ ಸ್ಥಿತಿಗತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

ಈ ವಿಭಾಗದಲ್ಲಿ ಕಂಪನಿಯು ಈಗಾಗಲೇ ಮುಂಚೂಣಿ ಸ್ಥಾನ ಹೊಂದಿದ್ದು, ಇದನ್ನು ಮತ್ತಷ್ಟು ಉತ್ತಮಗೊಳಿಸಲು ಹೊಸ ಯಂತ್ರ ನೆರವಾಗಲಿದೆ. ಭತ್ತವನ್ನು ಪ್ರಮುಖ ಬೆಳೆಯುವ ಕರ್ನಾಟಕವು ವಿಶ್ವ ದರ್ಜೆಯ ಅಕ್ಕಿಗೆ ಹೆಸರುವಾಸಿಯಾಗಿದೆ ಮತ್ತು ಭತ್ತದ ಯಾಂತ್ರೀಕರಣ ತಂತ್ರಜ್ಞಾನಗಳನ್ನು ಆರಂಭಿಕವಾಗಿ ಅಳವಡಿಸಿಕೊಂಡ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬೆಳೆಯಲಾಗುತ್ತದೆ. ಹೊಸ ಪರಿಹಾರವು ನೀರಿನ ಸಂರಕ್ಷಣೆ, ಕಡಿಮೆ ಪರಿಸರ ಮಾಲಿನ್ಯ ತಡೆಯುತ್ತದೆ. ಇದರ ಜೊತೆಗೆ, ಕಾರ್ಮಿಕ-ಕೇಂದ್ರಿತ ತಂತ್ರಗಳಿಗೆ ಹೋಲಿಸಿದರೆ ಕಡಿಮೆ ಕಾರ್ಮಿಕ ವೆಚ್ಚ ಸೇರಿದಂತೆ, ಭತ್ತದ ಕೃಷಿಗೆ ಸಂಬಂಧಿಸಿದ ಒಟ್ಟಾರೆ ಲಾಭದಾಯಕತೆ ನೀಡುತ್ತದೆ.

ಹೊಸ ʻಮಹೀಂದ್ರಾ 6 ಆರ್​ಒ ಪ್ಯಾಡಿ ವಾಕರ್ʼ ಭತ್ತ ನಾಟಿ ಯಂತ್ರವು ಅತ್ಯುತ್ತಮ ಆಪರೇಟರ್ ದಕ್ಷತೆ ಒದಗಿಸುತ್ತದೆ. ನಿಖರತೆ ಮತ್ತು ಪರಿಣಾಮಕಾರಿ ನಾಟಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಇದು ಭತ್ತದ ಕೃಷಿಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತದೆ. ಹಸ್ತಚಾಲಿತವಾಗಿ ನಿರ್ವಹಿಸಲ್ಪಡುವ ಹೊಸ ನಾಟಿ ಯಂತ್ರವು ವಿನ್ಯಾಸದಲ್ಲಿ ಚಿಕ್ಕದಾಗಿದೆ ಆಗಿದೆ ಮತ್ತು ಸೀಮಿತ ಸ್ಥಳಗಳಲ್ಲಿ ಸುಲಭವಾಗಿ ಇದನ್ನು ಕಾರ್ಯಾಚರಿಸಬಹುದಾಗಿದೆ.

ಆರು ಸಾಲುಗಳಲ್ಲಿ ಭತ್ತ ನಾಟಿ

ಏಕಕಾಲದಲ್ಲಿ ಆರು ಸಾಲುಗಳಲ್ಲಿ, ಒಂದೇ ಪಾಸ್ ನಲ್ಲಿ ಏಕರೂಪದ ನಾಟಿ ಮಾಡಲು ಇದು ಅವಕಾಶ ಕಲ್ಪಿಸಲಿದೆ. ಶಕ್ತಿ, ವಿಶ್ವಾಸಾರ್ಹತೆ ಮತ್ತು ಕಾರ್ಯಕ್ಷಮತೆಯ ಮೇಲೆ ಗಮನ ಕೇಂದ್ರೀಕರಿಸಿ, ಹೊಸ ಭತ್ತ ನಾಟಿ ಯಂತ್ರವನ್ನು ತಯಾರಿಸಲಾಗಿದ್ದು, ಇದು ಹೆಚ್ಚು ಬಾಳಿಕೆ ಬರುವ ಗೇರ್‌ಬಾಕ್ಸ್ ಮತ್ತು 4-ಲೀಟರ್ ಸಾಮರ್ಥ್ಯದೊಂದಿಗೆ ಶಕ್ತಿಯುತ ಎಂಜಿನ್ ಅನ್ನು ಹೊಂದಿದೆ. ಇದು ಹೆಚ್ಚಿನ ಉತ್ಪಾದನೆ ಮತ್ತು ಕಡಿಮೆ ಇಂಧನ ಬಳಕೆಯನ್ನು ಖಾತರಿಪಡಿಸುತ್ತದೆ, ಭತ್ತದ ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ, ಜೊತೆಗೆ ಸರ್ವೀಸ್‌ ಅಂತರ ಹೆಚ್ಚಿರುವ ಕಾರಣದಿಂದ ಸೇವಾ ವೆಚ್ಚವನ್ನು ಕಡಿಮೆ ಮಾಡುತ್ತದೆ.

2 ವರ್ಷಗಳ ಮರುಪಾವತಿ ಅವಧಿ ಮತ್ತು ಕೇವಲ 200 ಎಕರೆಗಳ ಕನಿಷ್ಠ ಕಾರ್ಯಾಚರಣಾ ಪ್ರದೇಶದೊಂದಿಗೆ, ಹೊಸ ಭತ್ತ ನಾಟಿ ಯಂತ್ರವು ಬಾಡಿಗೆ ವ್ಯವಹಾರಗಳಿಗೆ ಅತ್ಯುತ್ತಮ ಭವಿಷ್ಯ ಒದಗಿಸುತ್ತದೆ. ಕರ್ನಾಟಕದಲ್ಲಿ ಲಭ್ಯವಿರುವ ಮಹೀಂದ್ರಾದ ವ್ಯಾಪಕವಾದ ಕೃಷಿ ಯಂತ್ರೋಪಕರಣಗಳ ಡೀಲರ್ ನೆಟ್‌ವರ್ಕ್‌ ಮೂಲಕ ರೈತರು ಮನೆ ಬಾಗಿಲಿಗೆ ಸೇವೆ ಪಡೆಯಬಹುದು. ಇದನ್ನು ‘ಮಹೀಂದ್ರಾ ಸಾಥಿ’ ಎಂಬ ಹೊಸ ಬಳಕೆದಾರ-ಸ್ನೇಹಿ ಅಪ್ಲಿಕೇಶನ್ ಮೂಲಕ ಮೇಲ್ವಿಚಾರಣೆ ಮಾಡಬಹುದು. ಹೊಸ ಮಹೀಂದ್ರಾ ʻ6 ಆರ್ಒ ಪ್ಯಾಡಿ ವಾಕರ್ʼ ಮತ್ತು ಮಹೀಂದ್ರಾದ ಸಂಪೂರ್ಣ ಶ್ರೇಣಿಯ ಭತ್ತದ ನಾಟಿ ಯಂತ್ರಗಳನ್ನು ಮಹೀಂದ್ರ ಫೈನಾನ್ಸ್ ಮತ್ತು ಶ್ರೀರಾಮ್ ಫೈನಾನ್ಸ್‌ನಿಂದ ಅತ್ಯುತ್ತಮ ದರ್ಜೆಯ ಹಣಕಾಸು ಆಯ್ಕೆಗಳೊಂದಿಗೆ ನೀಡಲಾಗುವುದು.

Continue Reading
Advertisement
Surrogacy Leaves
ಪ್ರಮುಖ ಸುದ್ದಿ1 hour ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ4 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ5 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ5 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು7 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌