Site icon Vistara News

ಬೆಂಗಳೂರಿನಲ್ಲಿ ಮಂಗಗಳ ಕಾಟವೇ? ಕೂಡಲೇ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ!

ಬಿಬಿಎಂಪಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವನ್ಯಜೀವಿಗಳ (ಮಂಗಗಳು, ಹಾವುಗಳು, ಪಕ್ಷಿಗಳು) ಹಾವಳಿ ತಡೆಗೆ ಬಿಬಿಎಂಪಿ ಕ್ರಮ ತೆಗೆದುಕೊಂಡಿದ್ದು, ವನ್ಯಜೀವಿಗಳಿಂದ ಯಾವುದೇ ರೀತಿಯ ತೊಂದರೆಯಾಗುತ್ತಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ-1533ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಹೈಕೋರ್ಟ್‌ ಆದೇಶದಂತೆ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಹಿಂಸೆ ಆಗದಂತೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ- 1972 ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆ-1960 ಉಲ್ಲಂಘನೆಯಾಗದಂತೆ, ಸಾರ್ವಜನಿಕರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ಗಾಯಗೊಂಡ, ರೋಗಗ್ರಸ್ಥ ಹಾಗೂ ಜನರಿಗೆ ಹಾನಿಯುಂಟುಮಾಡುವ ಕೋತಿಗಳನ್ನು ಸೂಕ್ತ ಆವಾಸ ಅಥವಾ ಪುನರ್ವಸತಿ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ಇದನ್ನೂ ಓದಿ | ಈದ್ಗಾ ಮೈದಾನದಲ್ಲೇ ಗಣೇಶೋತ್ಸವ: ಶಾಸಕ ಜಮೀರ್‌ ಖಾನ್‌ಗೆ ಸವಾಲು ಹಾಕಿದ ಮುತಾಲಿಕ್

Exit mobile version