ಬೆಂಗಳೂರು: ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು (Car accident) ಚಾಲನೆ ಮಾಡಿದ್ದರಿಂದ ಅದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ನಗರದ ಒರಾಯನ್ ಮಾಲ್ ಮುಂಭಾಗ ಸೋಮವಾರ ರಾತ್ರಿ 8.30ಕ್ಕೆ ಈ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಮಲ್ಲೇಶ್ವರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸಿದಾಗ ಪಾದಚಾರಿ ವೆಂಕಟೇಶ್(60) ಎಂದು ತಿಳಿದು ಬಂದಿದೆ. ಕಾರು ಚಾಲಕ ಧೀರಜ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತ ಪಾದಚಾರಿ ವೆಂಕಟೇಶ್ ಕುಟುಂಬಸ್ಥರು ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ | Bike Accident | ಮೂರು ಪ್ರತ್ಯೇಕ ಅಪಘಾತ; ಮೂವರು ಸ್ಥಳದಲ್ಲೇ ಸಾವು