CM Siddaramaiah: 5 ವರ್ಷದಲ್ಲಿ 73 ಸಾವಿರ ಕೋಟಿ ರೂ. ಕಡಿತ; ಕೇಂದ್ರದ ವಿರುದ್ಧ ಸಿಎಂ ಗರಂ - Vistara News

ಬೆಂಗಳೂರು

CM Siddaramaiah: 5 ವರ್ಷದಲ್ಲಿ 73 ಸಾವಿರ ಕೋಟಿ ರೂ. ಕಡಿತ; ಕೇಂದ್ರದ ವಿರುದ್ಧ ಸಿಎಂ ಗರಂ

CM Siddaramaiah : ‌ ರಾಜ್ಯ ಸರ್ಕಾರದ ಪಾಲನ್ನು ನೀಡದೆ‌ ಅನ್ಯಾಯ ಮಾಡುತ್ತಿರುವ ಕೇಂದ್ರದ ವಿರುದ್ಧ ನೇರ ಹೋರಾಟಕ್ಕೆ ರಾಜ್ಯ ಸರ್ಕಾರ ಅಣಿಯಾಗಿದೆ. ಇದರ ಮೊದಲ ಭಾಗ ಫೆ. 7ರಂದು ದಿಲ್ಲಿಯಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

VISTARANEWS.COM


on

CM Siddaramaiah and DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ, ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ (Central Government) ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನೇರ ಆರೋಪ ಮಾಡಿದ್ದಾರೆ. ರಾಜ್ಯಕ್ಕೆ ಕಳೆದ 5 ವರ್ಷದಲ್ಲಿ 73 ಸಾವಿರ ಕೋಟಿ ನಮಗೆ ಕಡಿತವಾಗಿದೆ ಎಂದು ಹೇಳಿರುವ ಅವರು ಈ ಅನ್ಯಾಯದ ವಿರುದ್ಧ, ಕೇಂದ್ರ ಸರ್ಕಾರದ ಧೋರಣೆಗಳನ್ನು ಖಂಡಿಸಿ ಫೆಬ್ರವರಿ 7ರಂದು ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ (Protest against Central Government on February 7) ನಡೆಸಲಾಗುವುದು ಎಂದು ಅವರು ಪ್ರಕಟಿಸಿದರು.

ಕೇಂದ್ರ ಸರ್ಕಾರವು ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ರಚನೆಯಾದ 14 ಮತ್ತು 15ನೇ ಹಣಕಾಸು ಆಯೋಗ ಶಿಫಾರಸುಗಳಂತೆ ಹಣ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಅದು ಹಣ ನೀಡದೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ಸೋಮಾರ ವಿಧಾನಸೌಧದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಡೀ ಸರ್ಕಾರದಿಂದಲೇ ಜತೆಯಾಗಿ ಫೆ. 7ರಂದು ಪ್ರತಿಭಟನೆ

ಫೆಬ್ರವರಿ 7ರಂದು ಬೆಳಗ್ಗೆ 11 ಗಂಟೆಗೆ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ನಮ್ಮ ಇಡೀ ಸರ್ಕಾರವೇ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.

ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ, ಹಕ್ಕಿಗಾಗಿ ನಡೆಸುವ ಹೋರಾಟ ಎಂದು ಹೇಳಿದ ಸಿದ್ದರಾಮಯ್ಯ ಅವರು, ಫೆಬ್ರವರಿ 6ರಂದು ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ ಎಂದರು.

ಸಿದ್ದರಾಮಯ್ಯ ನೀಡಿದ ದಾಖಲೆ ಮಾಹಿತಿ, ಆಗ್ರಹ

1.ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ.

2. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು.

3.14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು.

ಇದನ್ನೂ ಓದಿ : CM Siddaramaiah: ಕುಂಕುಮ ನಿರಾಕರಿಸಿದ ಸಿದ್ದರಾಮಯ್ಯಗೆ ಬಿಜೆಪಿ ನಾಯಕರ ತರಾಟೆ

4.ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5498 ಕೋಟಿ ರೂಪಾಯಿ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದ್ದರು. ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ.

5.ಪೆರಿಫರಲ್‌ ರಿಂಗ್ ರಸ್ತೆಗೆ 3000 ಕೋಟಿ ರೂಪಾಯಿ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸು ಮಾಡಲಾಗಿತ್ತು. ಒಟ್ಟು ಕೇಂದ್ರ ಸರ್ಕಾರದಿಂದ 11,495 ಕೋಟಿ ರೂಪಾಯಿ ರಾಜ್ಯಕ್ಕೆ ಬರಬೇಕಿತ್ತು. ಒಟ್ಟು 5 ವರ್ಷದಲ್ಲಿ 73 ಸಾವಿರ ಕೋಟಿ ನಮಗೆ ಕಡಿಮೆಯಾಗಿದೆ.

6. ಜಿಎಸ್‌ಟಿಯಿಂದ ತೆರಿಗೆ ಹೆಚ್ಚಳವಾಗುತ್ತದೆ. ರಾಜ್ಯಗಳಿಗೆ ನಷ್ಟವಾದರೆ ಪರಿಹಾರ ರೂಪದಲ್ಲಿ ಹಣ ನೀಡ್ತೇವೆ ಎಂದಿದ್ರು. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡ್ತೇವೆ ಎಂದಿದ್ದರು. ಆದರೆ, ಬಿಡುಗಡೆ ಮಾಡಿಲ್ಲ. ಹಲವು ಬಾರಿ ಮನವಿ ಮಾಡಿದ್ರೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest14 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest18 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌