ಬೆಂಗಳೂರು: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ (TA Sharavana) ಅಭಿನಂದಿಸಿದ್ದಾರೆ.
ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರ ಪ್ರದೇಶವು ಆಮೂಲಾಗ್ರವಾಗಿ ಅಭಿವೃದ್ಧಿ ಕಾಣಲಿ ಹಾಗೂ ಜನತೆಗೆ ತಮ್ಮಿಂದ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಹಾರೈಸಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್ ಕಲ್ಯಾಣ್ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.
ಇದನ್ನೂ ಒದಿ: IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್-8 ಪ್ರವೇಶ
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ರಾಮ್‌ದಾಸ್ ಅಥವಾಳೆ, ಅನುಪ್ರಿಯಾ ಪಟೇಲ್, ಚಿರಾಗ್ ಪಾಸ್ವಾನ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಎನ್‌ಚಿಪಿ ನಾಯಕರಾದ ಪ್ರಫುಲ್ ಪಟೇಲ್, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.
ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ಮಂಗಳವಾರ ತಡರಾತ್ರಿ ಅಮರಾವತಿಯ ತಮ್ಮ ನಿವಾಸದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ತಮ್ಮ ಸಚಿವರ ತಂಡವನ್ನು ಅಂತಿಮಗೊಳಿಸಿದ್ದರು. ಸತ್ಯ ಕುಮಾರ್ ಯಾದವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಏಕೈಕ ಶಾಸಕ. ಜನಸೇನಾ ಪಾರ್ಟಿಯಿಂದ ಪವನ್ ಕಲ್ಯಾಣ್, ನಾದೆಂಡ್ಲಾ ಮನೋಹರ್ ಮತ್ತು ಕಂದುಲಾ ದುರ್ಗೇಶ್ ಮೂವರು ಸಚಿವರಾಗಿ ಆಯ್ಕೆಯಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿವೆ. ಸಂಪುಟದಲ್ಲಿ ಮೂವರು ಮಹಿಳೆಯರಿದ್ದಾರೆ.
ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ
ಚಂದ್ರಬಾಬು ನಾಯ್ಡು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಅವರು 2019ರ ಚುನಾವಣೆಯಲ್ಲಿ ಸೋತು 2024ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಇದೀಗ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಮರಳಿದ್ದಾರೆ. ಮಂಗಳವಾರ ವಿಜಯವಾಡದ ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್ ಕಲ್ಯಾಣ ಪ್ರಸ್ತಾಪಿಸಿದ್ದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.