Site icon Vistara News

Actor Chetan Ahimsa : ಹಿಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್‌; ನಟ ಚೇತನ್‌ ಅಹಿಂಸಾ ಅರೆಸ್ಟ್‌

Chetan ahimsa

#image_title

ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್‌ ಅಹಿಂಸಾ (Actor Chetan Ahimsa) ಅವರನ್ನು ಮಂಗಳವಾರ ಮುಂಜಾನೆ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಅವರು ಹಿಂದು ಧರ್ವವನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಡಿ ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಪೊಲೀಸರು ಮಂಗಳವಾರ ಬೆಳಗ್ಗಿನ ಜಾವ ಮನೆಯಿಂದ ಬಂಧಿಸಿದರು.

ಚೇತನ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಹಿಂದು ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಬಜರಂಗ ದಳ ಮುಖಂಡರು ನೀಡಿದ ದೂರಿನಂತೆ ಪೊಲೀಸರು ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು‌ ಮಾಡುವುದು (295a), ಯಾವುದೇ ಧರ್ಮದ ಆಚರಣೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು (505 b) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೇತನ್‌ ಅಹಿಂಸಾ ಅವರನ್ನು ಬಂಧಿಸಿ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

ನಟ ಚೇತನ್‌ ಅವರು ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ್ದಾರೆ, ಜಾತಿ ಜಾತಿಗಳ ನಡುವೆ ವೈಮನಸ್ಸು ಉಂಟುಮಾಡಿ ಕೋಮುಗಲಭೆಗೆ ಪ್ರಚೋದನೆಯನ್ನು ನೀಡಿರುತ್ತಾರೆ ಹಾಗೂ ಸಮಾಜದ ಶಾಂತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಇಂತಹ ಪ್ರಚೋದನಾಕಾರಿ ಹೇಳಿಕೆಯಿಂದ ವಿವಿಧ ಕೋಮುಗಳ ನಡುವೆ ಘರ್ಷಣೆಗೆ ಪ್ರೇರಣೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಿವಾದಾತ್ಮಕ ಪೋಸ್ಟ್‌ 1

ಚೇತನ್‌ ಅವರು ಹಿಂದುವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಹೇಳಿ ಪೋಸ್ಟ್‌ ಮಾಡಲಾಗಿದೆ.
ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು- ಇದು ಒಂದು ಸುಳ್ಳು

1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮ ಭೂಮಿ’ -> ಇದು ಒಂದು ಸುಳ್ಳು,
ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇ ಗೌಡರು ಟಿಪ್ಪುವನ್ನು ಕೊಂದರು -> ಇದೂ ಕೂಡ ಒಂದು ಸುಳ್ಳು

ವಿವಾದಾತ್ಮಕ ಪೋಸ್ಟ್‌ 2

20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅವರೆಲ್ಲರು ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ವಿರೋಧಿಸಿದರು

2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು.

ಇದನ್ನೂ ಓದಿ :

Exit mobile version