ಬೆಂಗಳೂರು: ಬಿಬಿಎಂಪಿ ಚುನಾವಣೆ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧಿಸುವ ಕಾಂಗ್ರೆಸ್‌ಗೆ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಅದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧ ನಗರಾಭಿವೃದ್ಧಿ ಇಲಾಖೆ ಕಚೇರಿಗೆ ನುಗ್ಗಿರುವುದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಶುಕ್ರವಾರ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಸೆಂಟರ್ ಆಫ್ ಎಕ್ಸಲೆನ್ಸ್ ಬಿಲ್ಡಿಂಗ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮೀಸಲಾತಿಯನ್ನು 2015ರ ಹೈಕೋರ್ಟ್ ತೀರ್ಪಿನ ಅನ್ವಯ ನಿಯಮಗಳನ್ನು ಅನುಸರಿಸಿ ಮಾಡಲಾಗಿದೆ. ಕಾಂಗ್ರೆಸ್ ಸಹ ಈ ಹಿಂದೆ ಇದನ್ನು ಮಾಡಿದ್ದಾಗ ಏನಾಗಿತ್ತು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲ ಶಾಸಕರ ಕ್ಷೇತ್ರದಲ್ಲಿ ಏನಾಗಿತ್ತು ಎನ್ನುವುದು ಗೊತ್ತೇ ಇದೆ ಎಂದರು.
ಇದನ್ನೂ ಓದಿ | BBMP ಮೀಸಲಾತಿ: ವಿಕಾಸಸೌಧಕ್ಕೆ ಮುತ್ತಿಗೆ, UD ಕಚೇರಿ ಬೋರ್ಡ್ ಬದಲಿಸಿದ ಕಾಂಗ್ರೆಸ್ ನಾಯಕರು