Child death : ಪ್ರಿಸ್ಕೂಲ್‌ನ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗು ಸಾವು - Vistara News

ಬೆಂಗಳೂರು

Child death : ಪ್ರಿಸ್ಕೂಲ್‌ನ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗು ಸಾವು

Child death : ಬೆಂಗಳೂರಿನ ಡೆಲ್ಲಿ ಪ್ರಿಸ್ಕೂಲ್‌ನಲ್ಲಿ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಪುಟ್ಟ ಮಗು ಮೃತಪಟ್ಟಿದೆ. ತಲೆಗೆ ಗಾಯಗೊಂಡಿದ್ದ ಮಗುವಿಗೆ ಮೂರು ದಿನ ಚಿಕಿತ್ಸೆ ನೀಡಿದರೂ ಫಲ ಸಿಕ್ಕಿಲ್ಲ.

VISTARANEWS.COM


on

Child death : Bangalore child dies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೆಣ್ಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಡೇ ಕೇರ್‌ ಸೆಂಟರ್‌ (Day Care Centre) ಒಂದರ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡ ಪುಟ್ಟ ಮಗು (Child death) ಬದುಕುಳಿಯಲಿಲ್ಲ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಮಗು ಮೂರು ದಿನಗಳ ಕಾಲ (Preschool Child dies after falling from third floor) ಜೀವನ್ಮರಣ ಹೋರಾಟ ನಡೆಸಿದ ಬಳಿಕ ಮೃತಪಟ್ಟಿದೆ.

ಹೆಣ್ಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಡಿ ಬರುವ ಖಾಸಗಿ ಪ್ರಿ ಸ್ಕೂಲ್‌ ನಲ್ಲಿ ಕಲಿಯುತ್ತಿದ್ದ ಜೀನಾ ಎಂಬ ಮಗುವೇ ಮೃತಪಟ್ಟ ದುರ್ದೈವಿ. ಈಕೆ ಕೇರಳ ಮೂಲದ ಟೆಕ್ಕಿ ದಂಪತಿ ಜಿಟೋ ಟಾಮಿ ಜೋಸೆಫ್, ಬಿನಿಟೋ ಥಾಮಸ್ ಪುತ್ರಿ. ಜನವರಿ 22ರ ಮಧ್ಯಾಹ್ನ ಜೀನಾ ಮಹಡಿ ಮೇಲೆ ಆಡುತ್ತಿದ್ದಾಗ ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಮಗುವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮೂರು ದಿನಗಳ ಕಾಲ ಚಿಕಿತ್ಸೆ ನೀಡಿದರೂ ಅದು ಫಲ ನೀಡದೆ ಮಗು ಪ್ರಾಣವನ್ನೇ ಕಳೆದುಕೊಂಡಿದೆ.

ಖಾಸಗಿ ಡೆಲ್ಲಿ ಪ್ರಿ ಸ್ಕೂಲ್‌ನ ನರ್ಸರಿ ವಿಭಾಗದಲ್ಲಿ ಈ ಘಟನೆ ನಡೆದಿದೆ. ಪುಟ್ಟ ಮಕ್ಕಳ ಶಾಲೆಯನ್ನು ಮೂರನೇ ಮಹಡಿಯಲ್ಲಿ ನಡೆಸಿದ್ದು, ಮಕ್ಕಳು ಮಹಡಿಯಿಂದ ತಡೆ ಗೋಡೆ ಹತ್ತಿ ಹೊರಗೆ ಬಿದ್ದರೂ ಗಮನಿಸದೆ ಇರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಮಗು ಬಿದ್ದು ಗಾಯಗೊಂಡ ನಿಜವಾದ ಕಾರಣವನ್ನು ಕೂಡಾ ಶಾಲೆ ಮುಚ್ಚಿಟ್ಟಿತ್ತು ಎನ್ನಲಾಗಿದೆ. ಹೀಗಾಗಿ ನಿರ್ಲಕ್ಷ್ಯ ಮತ್ತು ಸರಿಯಾದ ಮಾಹಿತಿ ನೀಡದೆ ವಾಸ್ತವಾಂಶ ಮುಚ್ಚಿಟ್ಟಿದ್ದಕ್ಕಾಗಿ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Child Death: ಆಟವಾಡುತ್ತಿದ್ದ ಮಗುವಿನ ಜೀವ ತೆಗೆದ ಜೆಸಿಬಿ

ಮಗನನ್ನೇ ಗುಂಡು ಹಾರಿಸಿ ಕೊಂದ ತಂದೆ

ಬೆಂಗಳೂರು: ವ್ಯಕ್ತಿಯೊಬ್ಬರು ತನ್ನ ಬೆಳೆದು ನಿಂತ ಮಗನನ್ನೇ ಗುಂಡು ಹಾರಿಸಿ ಕೊಲೆ ಮಾಡಿ ಘಟನೆ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯಲ್ಲಿ ವಾಸವಾಗಿರುವ ಸುರೇಶ್ ಎಂಬವರೇ ತಮ್ಮ ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದವರು.

ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಮಾತಿಗೆ ಮಾತು ಬೆಳೆದು ತಂದೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಅವರು ಗುಂಡು ಹಾರಿಸಿದ್ದು ಬಂದೂಕಿನಿಂದಲೋ, ರೈಫಲ್‌ನಿಂದಲೋ ಎನ್ನುವುದು ಇನ್ನೂ ಸ್ಪಷ್ಟವಿಲ್ಲ.

ಮನೆಯಿಂದ ಕೇಳಿದ ಗುಂಡಿನ ಸದ್ದು ಮತ್ತು ಬಳಿಕದ ಆಕ್ರಂದನವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ದೌಡಾಯಿಸಿದಾಗ ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ಕೂಡಲೇ ಆತನನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ. ಈ ಕೊಲೆಗೆ ಕಾರಣ ಏನು ಎನ್ನುವುದು ಸ್ಪಷ್ಟವಾಗಿ ತಿಳಿದಿಲ್ಲ. ತಂದೆಯ ಕೈಯಲ್ಲಿ ಬಂದೂಕು ಅಥವಾ ರೈಫಲ್‌ ಎಲ್ಲಿಂದ ಬಂತು, ಅದಕ್ಕೆ ಲೈಸನ್ಸ್‌ ಇದೆಯಾ ಎಂದು ಗೊತ್ತಾಗಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shakti Scheme: ಸಿಎಂ ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಣೆ; ಕಾನೂನು‌ ವಿದ್ಯಾರ್ಥಿನಿಯಿಂದ ವಿಭಿನ್ನವಾಗಿ ಕೃತಜ್ಞತೆ

Shakti Scheme: ಅರಸೀಕೆರೆಯಲ್ಲಿ ಸಾರಿಗೆ ಬಸ್‌ಗಳಲ್ಲಿ ತಾನು ಪ್ರಯಾಣಿಸುವಾಗ ಸಂಗ್ರಹಿಸಿದ್ದ ಉಚಿತ ಟಿಕೆಟ್‌ಗಳಿಂದ ಹಾರ ಮಾಡಿ, ವಿನೂತನ ಶೈಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿ ಧನ್ಯವಾದ ತಿಳಿಸಿದ್ದಾಳೆ.

VISTARANEWS.COM


on

Shakti Scheme
Koo

ಬೆಂಗಳೂರು: ಶಕ್ತಿ ಯೋಜನೆಯಿಂದ (Shakti Scheme) ರಾಜ್ಯದ ಕೋಟ್ಯಂತರ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದು, ಯೋಜನೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ನಡುವೆ ಶಕ್ತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯೊಬ್ಬರು, ಉಚಿತ ಪ್ರಯಾಣದ ಟಿಕೆಟ್‌ಗಳಿಂದ ಮಾಡಿದ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಭಿನ್ನ ರೀತಿಯಲ್ಲಿ ಸನ್ಮಾನಿಸಿರುವುದು ಗಮನ ಸೆಳೆದಿದೆ.

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ, ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿ ಗೌರವಿಸಿದ್ದಾರೆ. ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಾಟೀಲ್ ಪರ ಅರಸೀಕೆರೆಯಲ್ಲಿ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳಿದ್ದಾಗ ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ ಫ್ರೀ ಟಿಕೆಟ್ ಹಾರವನ್ನು ಸಿಎಂ ಅವರಿಗೆ ಅರ್ಪಿಸಿದ್ದಾರೆ.

ಇದನ್ನೂ ಓದಿ | Drought Relief: ಬರ ಪರಿಹಾರ ನೀಡಲು ಕೇಂದ್ರ ಒಪ್ಪಿಗೆ; ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಎಂದ ಸಿಎಂ

ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದಕೊಂಡರು.

ಸಿಎಂ ಸಿದ್ದರಾಮಯ್ಯ ಸಂತಸ

ವಿದ್ಯಾರ್ಥಿನಿ ಉಚಿತ ಟಿಕೆಟ್‌ಗಳ ಹಾರ ಹಾಕಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದು, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.

‘’ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು.

‘ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು’ ಎಂದು ಹಾರೈಸಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Car Accident: ಬೆಂಗಳೂರಿನ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ಅಪಘಾತ ನಡೆದಿದೆ. ಕಾರಿನ ಡೋರ್ ಬಳಿ ಮಗು ನಿಂತಿದ್ದನ್ನು ನೋಡದೆ ಕಾರನ್ನು ತಂದೆ ಚಾಲನೆ ಮಾಡಿದ್ದರಿಂದ ದುರ್ಘಟನೆ ಸಂಭವಿಸಿದೆ.

VISTARANEWS.COM


on

Car Accident
Koo

ಬೆಂಗಳೂರು: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಅಪಘಾತದ (Car Accident) ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನ ಡೋರ್ ಬಳಿಯೇ ಮಗು ನಿಂತಿದ್ದನ್ನು ನೋಡದೆ ತಂದೆ ಮುಂದೆ ಸಾಗಿದ್ದರಿಂದ ದುರಂತ ನಡೆದಿದೆ.

ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು. ಭಾನುವಾರ ರಾತ್ರಿ 11.30ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ತಂದೆ ಹಿಂದೆಯೇ ಬಂದಿದ್ದ ಮಗು ಡೋರ್‌ ಬಳಿ ನಿಂತಿತ್ತು. ಅದನ್ನು ಗಮನಿಸದೇ ಕಾರು ಮುಂದೆ ಚಲಿಸಿದಾಗ ಮಗುವಿನ ಮೇಲೆ ಹರಿದಿದೆ. ಕಾರು ಹರಿದಿದ್ದರಿಂದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಎಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Cake Tragedy: ಕೇಕ್‌ ತಿಂದು ಬಾಲಕಿ ಸಾವಿನ ಪ್ರಕರಣ; ಸಾವಿಗೆ ನಿಖರ ಕಾರಣ ಬಯಲು

ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

Love Case

ಬೀದರ್: ಪ್ರಿಯತಮೆಯ ಮದುವೆ ದಿನವೇ ಪ್ರಿಯತಮ ಮಸಣ (love case) ಸೇರಿದ್ದಾನೆ. ರೈಲ್ವೆ ಹಳಿ ಮೇಲೆ ರುಂಡ-ಮುಂಡ ತುಂಡರಿಸಿ ಬಿದ್ದ ಸ್ಥಿತಿಯಲ್ಲಿ ಯುವಕನ ಶವ (dead body found) ಪತ್ತೆಯಾಗಿದೆ. ಬೀದರ್‌ ನಗರದ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಬೀದರ್ ತಾಲೂಕಿನ ನಿಜಾಂಪೂರ್ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ದುರ್ದೈವಿ.

ಬೀದರ್ ತಾಲೂಕಿನ ರಂಜೋಳ ಖೇಣಿ ಗ್ರಾಮದ ವೆಂಕಟೇಶ್‌ ನಿಜಾಂಪುರ ಗ್ರಾಮದ ಅಜ್ಜಿಯ‌ ಮನೆಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯೊಂದರಲ್ಲಿ‌ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎರಡು ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಕುಟುಂಬಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಯುವತಿಯ ಮದುವೆ ದಿನವೇ ಯುವಕನ ಕೊಲೆ‌ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿ ಬೈಕ್ ಇದೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿ, ರೈಲ್ವೆ ಟ್ರ್ಯಾಕ್‌ ಮೇಲೆ ಬಿಸಾಡಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಡುಗಿಯ‌ ವಿಚಾರಕ್ಕೆ ಕೊಲೆಯಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಹೀಗಾಗಿ ಈ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

CET 2024: ಸಿಇಟಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ; ಪರಿಶೀಲನೆಗೆ ತಜ್ಞರ ಸಮಿತಿ ರಚಿಸಿದ ಸರ್ಕಾರ

CET 2024: ಈ ಬಾರಿಯ ಸಿಇಟಿಯ 4 ವಿಷಯಗಳಿಂದ ಸುಮಾರು 40ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳು ಕೇಳಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಪ್ರಶ್ನೆ ಪತ್ರಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ತಜ್ಞರ ಸಮಿತಿ ರಚಿಸಲಾಗಿದೆ.

VISTARANEWS.COM


on

CET 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ತಜ್ಞರ ಸಮಿತಿಯು ವರದಿಯನ್ನು ತಕ್ಷಣವೇ ನೀಡುವಂತೆ ಇಲಾಖೆ ಸೂಚನೆ ನೀಡಿದೆ.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದಾರೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ | CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ ಏ.27ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸುವಂತೆ ‘ಕೆಇಎ’ ಗೆ ಸೂಚಿಸಲಾಗಿದೆ. ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸಿದೆ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಲಾಗಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದಾರೆ.

Continue Reading

ಕರ್ನಾಟಕ

Drought Relief: ಬರ ಪರಿಹಾರ ನೀಡಲು ಕೇಂದ್ರ ಒಪ್ಪಿಗೆ; ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಎಂದ ಸಿಎಂ

Drought Relief: ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Drought Relief
Koo

ಬೆಂಗಳೂರು: ಒಂದು ವಾರದಲ್ಲೇ ಕರ್ನಾಟಕಕ್ಕೆ ಬರ ಪರಿಹಾರ (Drought Relief) ನೀಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಇದು, ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರ ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ. ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕಕ್ಕೆ ನ್ಯಾಯಯುತ ಜಯ ಸಿಕ್ಕಿದೆ ಎಂದು ದಿನೇಶ್‌ ಗುಂಡೂರಾವ್

ಬೆಂಗಳೂರು: ಬರ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಆಗಿರುವ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರದ ಪ್ರಯತ್ನಕ್ಕೆ ನ್ಯಾಯಯುತವಾದ ಜಯ ಸಿಕ್ಕಿದೆ. ಪರಿಹಾರ ಕೊಡುವಂತೆ ಮೂರು ಬಾರಿ ನಾವು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರ ಒಂದು ತಿಂಗಳ ಒಳಗೆ ಪರಿಹಾರ ಕೊಡಬೇಕಾಗಿತ್ತು. ಆದ್ರೆ ಪರಿಹಾರ ಕೊಟ್ಟಿರಲಿಲ್ಲ, ಹೀಗಾಗಿ ನಾವು ಅನಿವಾರ್ಯವಾಗಿ ಕೋರ್ಟ್‌ಗೆ ಹೋಗಿದ್ದೇವೆ. ನಾವು ಕೋರ್ಟ್‌ಗೆ ಹೋಗಿದ್ದು, ಕೇಂದ್ರದ ವಿರುದ್ಧ ಸಂಘರ್ಷಕ್ಕಲ್ಲ, ಬೇರೆ ದಾರಿ ಇಲ್ಲದೇ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬರ ಪರಿಹಾರದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿ, ಪರಿಹಾರ ನೀಡುವ ಕುರಿತು ಒಂದು ವಾರ ಕೇಂದ್ರ ಸಮಯ ತೆಗೆದುಕೊಂಡಿದೆ. ಇದರಿಂದ ಕೇಂದ್ರಕ್ಕೆ ಮುಖಭಂಗವಾಗಿದ್ದು, ಕರ್ನಾಟಕಕ್ಕೆ ನ್ಯಾಯಯುತ ಜಯ ಸಿಕ್ಕಿದೆ. ಇದು ಕರ್ನಾಟಕದ ಜನತೆಗೆ ಸಿಕ್ಕ ಜಯವಾಗಿದೆ ಎಂದರು.

ಕೇಂದ್ರದ ಬರ ಅಧ್ಯಯನ ತಂಡ ಬಂದು ವರದಿ ಕೂಡ ಕೊಟ್ಟಿತ್ತು. ವರದಿ ಕೊಟ್ಟ ಮೇಲೆ ಒಂದು ತಿಂಗಳಲ್ಲಿ ಪರಿಹಾರ ಕೊಡಬೇಕಿತ್ತು, ಆದರೆ ಕೊಟ್ಟಿರಲಿಲ್ಲ. ನಮ್ಮ ಮಾತಿಗೆ ಕೇಂದ್ರ ಕಿವಿಗೊಡಲಿಲ್ಲ, ನಾವು ಸಂಘರ್ಷ ಮಾಡಲು ಕೋರ್ಟ್‌ಗೆ ಹೋಗಿಲ್ಲ, ಕರ್ನಾಟಕದ ಜನರ ಪರವಾಗಿ ಕೋರ್ಟ್‌ಗೆ ಹೋಗಬೇಕಾಯ್ತು. ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಹೀಗಾಗಿ ಇನ್ನಷ್ಟು ಮುಖಭಂಗ ಆಗಬಾರದು ಅಂತ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದರು.

ಇದನ್ನೂ ಓದಿ Drought Relief: ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ; ಸುಪ್ರೀಂಗೆ ಕೇಂದ್ರ ಮಹತ್ವದ ಮಾಹಿತಿ

ನಮ್ಮ ಬೇಡಿಕೆ 18 ಸಾವಿರ ಕೋಟಿ ಪರಿಹಾರ ಬರಬೇಕು. ಅದರಲ್ಲಿ ಎಷ್ಟು ಕೊಡುತ್ತಾರೋ ನೋಡಬೇಕು. ಇವರು ನಮಗೆ ಖಾಲಿ ಚೊಂಬನ್ನು ಕೊಟ್ಟಿದ್ರಲ್ಲ ಅದರಲ್ಲಿ ಸ್ವಲ್ಪ ತುಂಬಿಸುವಂಥ ಕೆಲಸ ಸುಪ್ರೀಂ ಕೋರ್ಟ್ ಮಾಡಿದೆ. ಇನ್ನೂ ಅನೇಕ ವಿಚಾರಗಳಲ್ಲಿ ನ್ಯಾಯ ಒದಗಿಸುವ ಕೆಲಸ ಸರ್ಕಾರ ಮಾಡಲಿದೆ. ಮುಂದೆ ಯಾವುದೇ ಹೋರಾಟಕ್ಕೂ ನಾವು ರೆಡಿ ಇದ್ದೇವೆ, ಯಾವುದೇ ತ್ಯಾಗಕ್ಕೂ ಸಿದ್ಧ ಇದ್ದೇವೆ ಎಂದು ಹೇಳಿದರು.

Continue Reading
Advertisement
Shakti Scheme
ಕರ್ನಾಟಕ3 hours ago

Shakti Scheme: ಸಿಎಂ ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಣೆ; ಕಾನೂನು‌ ವಿದ್ಯಾರ್ಥಿನಿಯಿಂದ ವಿಭಿನ್ನವಾಗಿ ಕೃತಜ್ಞತೆ

IPL 2024
ಕ್ರೀಡೆ3 hours ago

IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

Gurulinga Shivacharya Swamiji
ಕರ್ನಾಟಕ3 hours ago

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Actor Darshan election campaign for Mandya Lok Sabha constituency Congress candidate star Chandru
ಮಂಡ್ಯ4 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಮತ ನೀಡಿ, ಗೆಲ್ಲಿಸಿ: ನಟ ದರ್ಶನ್ ಮನವಿ

Tulsi Gowda
ಪ್ರಮುಖ ಸುದ್ದಿ4 hours ago

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

IPL 2024
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

Terrorist Attack
ದೇಶ4 hours ago

Terrorist Attack: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು; ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿ

Reliance Industries net profit of Rs 18,951 crore, declares interim dividend of Rs 10 per share
ದೇಶ4 hours ago

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ಗೆ 18,951 ಕೋಟಿ ರೂ. ನಿವ್ವಳ ಲಾಭ; ಷೇರಿಗೆ 10 ರೂ. ಮಧ್ಯಂತರ ಲಾಭಾಂಶ

Hardik Pandya
ಪ್ರಮುಖ ಸುದ್ದಿ4 hours ago

Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

Rain News
ಕರ್ನಾಟಕ5 hours ago

Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru karaga 2024
ಬೆಂಗಳೂರು10 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ11 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು14 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು15 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ22 hours ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20242 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಟ್ರೆಂಡಿಂಗ್‌