ಆನೇಕಲ್ (ಬೆಂಗಳೂರು) : ಇನ್ನೂ ಬದುಕಿನ ಬಗ್ಗೆ ಸ್ಪಷ್ಟ ಕಲ್ಪನೆಗಳು ಹುಟ್ಟುವ ಮೊದಲೇ ವೈವಾಹಿಕ ಬದುಕಿನ (Married Life) ಸಂಕೋಲೆಯಲ್ಲಿ (Child Marriage) ಸಿಲುಕಿದ ಬಾಲಕಿಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ (Girl Self Harming). ಆಕೆಯನ್ನು ಮದುವೆಯಾದ ಯುವಕನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಘಟನೆ ನಡೆದಿದೆ. ಮಾರ್ಚ್ 13ರಂದು ನೀಲಂ ಕುಮಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ತಡವಾಗಿ ದಾಖಲಾಗಿದೆ. ಬಾಲಕಿಯನ್ನು ಬಾಲ್ಯ ವಿವಾಹ ಮಾಡಿಕೊಂಡು ಆಕೆಯ ಮಾನಸಿಕ ತಲ್ಲಣಕ್ಕೆ ಕಾರಣವಾಗಿ, ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ಆಕೆಯನ್ನು ಬಾಲ್ಯವಿವಾಹವಾದ ಯುವಕ ವಿಶಾಲ್ ಕುಮಾರ್ ಸಹಾನಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.
ನೀಲಂ ಕುಮಾರ್ ಮತ್ತು ವಿಶಾಲ್ ಕುಮಾರ್ ಇಬ್ಬರೂ ಬಿಹಾರದವರು. ವಿಶಾಲ್ ಕುಮಾರ್ ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಅರಸಿಕೊಂಡು ಬಂದು ಇಲ್ಲೇ ನೆಲೆಸಿದ್ದ. ಯಶವಂತಪುರದಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಆತ ನೀಲಂ ಕುಮಾರಿ ಎಂಬಾಕೆಯನ್ನು ಬಾಲ್ಯ ವಿವಾಹವಾಗಿದ್ದ. ಕಳೆದ 2023ರ ಫೆಬ್ರವರಿಯಲ್ಲಿ ಅವರಿಬ್ಬರ ನಡುವೆ ಮದುವೆ ನಡೆದಿತ್ತು.
ಆದರೆ, ವಿಶಾಲ್ ಇದುವರೆಗೂ ನೀಲಂ ಕುಮಾರಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿರಲಿಲ್ಲ. ಬಿಹಾರದಿಂದ ಕಳೆದ ಇಪ್ಪತ್ತು ದಿನಗಳ ಹಿಂದೆ ವಿಶಾಲ್ ನೀಲಂ ಕುಮಾರಿಯನ್ನು ಕರೆದುಕೊಂಡು ಬಂದಿದ್ದ. ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಅವರಿಬ್ಬರೂ ವಾಸವಾಗಿದ್ದರು.
ಇದನ್ನೂ ಓದಿ : Self Harming: ಹಣ ಕದ್ದಳೆಂದು ಬಟ್ಟೆ ಬಿಚ್ಚಿಸಿ ಪರಿಶೀಲಿಸಿದ ಶಿಕ್ಷಕಿಯರು; ಮನನೊಂದ ವಿದ್ಯಾರ್ಥಿನಿ ನೇಣಿಗೆ ಶರಣು
ಕಳೆದ ಮಾರ್ಚ್ 13ರಂದು ನೀಲಂ ಕುಮಾರಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಬಾಲ್ಯವಿವಾಹವಾಗಿ ಲೈಂಗಿಕವಾಗಿ ಬಳಸಿಕೊಂಡು ಮಾನಸಿಕ ಹಿಂಸೆ ನೀಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ಇದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಶ್ರೀದೇವಿ ಎಂಬವರು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಪೊಲೀಸರು ವಿಶಾಲ್‌ನನ್ನು ವಶಕ್ಕೆ ಪಡೆದಿದ್ದಾರೆ.
ರಸ್ತೆ ಬದಿ ಲಾರಿ ನಿಲ್ಲಿಸಿ, ನೇಣಿಗೆ ಶರಣಾದ ಚಾಲಕ; ಆತ್ಮಹತ್ಯೆಗೆ ಯತ್ನಿಸಿದ ಅರ್ಚಕ
ಮೈಸೂರು: ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಲಾರಿ ಚಾಲಕ (Lorry Driver) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಮುತ್ತುರಾಯ ಸ್ವಾಮಿ ದೇವಸ್ಥಾನದ ಬಳಿ ಘಟನೆ ನಡೆದಿದೆ.
ತಮಿಳುನಾಡು ಮೂಲದ ಲಾರಿ ಡ್ರೈವರ್ ಎಂದು ಹೇಳಲಾಗಿದೆ. ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ, ಅಲ್ಲೇ ಇದ್ದ ಕೊಟ್ಟಿಗೆಗೆ ತೆರಳಿ ನೇಣು ಬಿಗಿದುಕೊಂಡಿದ್ದಾರೆ. ಬೆಳಗ್ಗೆ ಕೊಟ್ಟಿಗೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಲಾರಿ ಚಾಲಕನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಟ್ಟಿಗೆಯಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆದು, ಚಾಲಕನ ಗುರುತು ಪತ್ತೆ ಮಾಡುತ್ತಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.