Site icon Vistara News

CM Siddaramaiah : ಶೀಘ್ರವೇ ಸರ್ಕಾರಿ ನೌಕರರ ವೇತನ ಪರಿಷ್ಕರಣೆ?: ಸಿದ್ದರಾಮಯ್ಯ ಭರವಸೆ ಏನು?

Sidddaramaiah-CM-CS-Shadakshari-Meeting1

ಬೆಂಗಳೂರು: ಏಳನೇ ವೇತನ ಆಯೋಗದ (Seventh Pay Commission) ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ (Govt Employees Pay Hike) ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State govt Employees Association) ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ (CS Shadakshari) ಅವರ ನೇತೃತ್ವದ ನಿಯೋಗವು ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು.

ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ನಿಯೋಗ ಕೋರಿಕೆ ಸಲ್ಲಿಸಿತು.

Sidddaramaiah CM CS Shadakshari Meeting

ತೀವ್ರತರವಾದ ಏಳು ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ ಕುಟುಂಬದವರಿಗೆ ಉಚಿತ ಆರೋಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಮನವಿ ಮಾಡಿದರು.

ಇದನ್ನು ಓದಿ : Vijayanagara News: 7ನೇ ವೇತನ ಆಯೋಗ ಜಾರಿ, ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಮನವಿ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗದ ವರದಿ ಬಂದ ಬಳಿಕ ವೇತನ ಪರಿಷ್ಕರಣೆಯ ಬಗ್ಗೆ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಜೆಟ್‌ನಲ್ಲಿ ಘೋಷಣೆಯಾಗುತ್ತಾ?

ರಾಜ್ಯ ಸರ್ಕಾರ ಹಲವಾರು ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ವ್ಯಸ್ತವಾಗಿರುವುದರಿಂದ ಏಳನೇ ವೇತನ ಆಯೋಗವು ವರದಿ ನೀಡಿದರೂ ಈ ಬಾರಿ ವೇತನ ಹೆಚ್ಚಳ ಆಗುವುದು ಖಚಿತವಿಲ್ಲ ಎಂಬ ಅಭಿಪ್ರಾಯ ನೌಕರರ ವಲಯದಲ್ಲಿದೆ. ಆದರೆ ಈಗ ಸಿದ್ದರಾಮಯ್ಯ ಅವರು ನೀಡಿರುವ ಭರವಸೆಯಿಂದ ಸಣ್ಣಮಟ್ಟಿಗಿನ ಆಶಾವಾದ ಕುದುರಿದೆ. ಹಾಗಿದ್ದರೆ ಬಜೆಟ್‌ನಲ್ಲಿ ವೇತನ ಹೆಚ್ಚಳ ಪ್ರಕಟಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

Exit mobile version