CM Siddaramaiah : ಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಉಪಾಯ ಹೇಳಿದ ಸಿದ್ದರಾಮಯ್ಯ! - Vistara News

ಕರ್ನಾಟಕ

CM Siddaramaiah : ಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಉಪಾಯ ಹೇಳಿದ ಸಿದ್ದರಾಮಯ್ಯ!

CM Siddaramaiah : ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂಘರ್ಷ ತಡೆಯುವುದು ತುರ್ತು ಅಗತ್ಯ. ಆದರೆ, ಅದನ್ನು ಹೇಗೆ ಮಾಡಬಹುದು ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

VISTARANEWS.COM


on

Human- Animal Conflict
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ (Human-animal Conflict) ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ (Forest Department) ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಜತೆಗೆ ಇದನ್ನು ಹೇಗೆ ತಡೆಯಬಹುದು ಎಂಬ ಬಗ್ಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು (Barricade Construction) ಹೆಚ್ಚಿನ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಅದಕ್ಕಿಂತಲೂ ಹೆಚ್ಚಾಗಿ ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವ ಮೂಲಕ ಅವರು ನಾಡಿಗೆ ಬರದಂತೆ ತಡೆಯುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಶುಕ್ರವಾರ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ ʻಮುಖ್ಯಮಂತ್ರಿಗಳ ಪದಕ ಪ್ರದಾನʼ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಕಾಡು ಬೆಳೆಸುವ ಕೆಲಸವಾಗಬೇಕು. ಅರಣ್ಯ ಪ್ರದೇಶದ ವಿಸ್ತೀರ್ಣಗೊಂಡರೆ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದ ಸಿದ್ದರಾಮಯ್ಯ ಕಾಡುಗಳಲ್ಲಿ ಹುಲಿ, ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಸಂತೋಷದ ವಿಷಯ ಎಂದರು. ಆದರೆ ಕಾಡುಪ್ರಾಣಿಗಳು ಜನರಿರುವ ಪ್ರದೇಶಕ್ಕೆ ಬರುತ್ತಿದ್ದು, ಅರಣ್ಯ ಇಲಾಖೆಯವರು ಹಾಗೂ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಅರಣ್ಯ ಪ್ರದೇಶ ಹೆಚ್ಚಳದಿಂದ ಹವಾಮಾನ ವೈಪರೀತ್ಯಗಳಿಗೆ ತಡೆ

ʻʻಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಜವಾಬ್ದಾರಿ. ಅರಣ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗ ಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯʼʼ ಎಂದು ಸಿದ್ದರಾಮಯ್ಯ ಹೇಳಿದರು.

ʻʻಈ ವರ್ಷ ಮಳೆಯಿಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಕಾವೇರಿ ನೀರು, ಬರಗಾಲ, ಆಹಾರ ಉತ್ಪತ್ತಿ ಕೊರತೆಗಳನ್ನು ತಲೆದೋರುತ್ತದೆ. ಈ ಪರಿಸ್ಥಿತಿ ರಾಜ್ಯದ ಜಿಡಿಪಿ, ತಲಾವಾರು ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ 40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ. 50ರಷ್ಟು ಬೆಳೆ ಹಾನಿಯಾಗಿದೆ. ಪ್ರತಿ ನಾಲ್ಕೈದು ವರ್ಷಕ್ಕೊಮ್ಮೆ ಇಂತಹ ಬರಗಾಲ ಪರಿಸ್ಥಿತಿ ಎದುರಾಗುತ್ತಿದ್ದು, ಅರಣ್ಯ ಪ್ರದೇಶ ಹೆಚ್ಚಿದರೆ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಸಾಧ್ಯವಿದೆʼʼ ಎಂದು ಅಭಿಪ್ರಾಯಪಟ್ಟರು.

ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರು ಅತ್ಯಂತ ಕ್ಲಿಷ್ಟ ಪರಿಸ್ಥಿತಿ ಯಲ್ಲಿ ಕಾರ್ಯನಿರ್ವಹಿಸುತ್ತಾ ಅರಣ್ಯ ಸಂರಕ್ಷಣೆ ಮಾಡುತ್ತಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವುದಲ್ಲದೆ ಕಾಡು ಬೆಳೆಸುವ ಕೆಲಸವನ್ನೂ ಮಾಡುತ್ತಾರೆ. ಅಸಾಧಾರಣ ಸೇವೆ ಮಾಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ನೀಡಿ ಉತ್ತೇಜಿಸುವ ಕೆಲಸವನ್ನು 2017 ರಿಂದ ಮಾಡಲಾಗುತ್ತಿದೆ. 2017, 2018, 2019 ರಲ್ಲಿ ನೀಡಲಾಗಿದೆ. ಎರಡು ವರ್ಷಗಳಿಂದ ಪದಕ ವಿತರಣಾ ಸಮಾರಂಭ ನಡೆದಿರಲಿಲ್ಲ. 2020 ಹಾಗೂ 21ನೇ ಸಾಲಿನ ಪದಕ ವಿತರಣೆಯನ್ನು ಅರಣ್ಯ ಇಲಾಖೆ ವತಿಯಿಂದ 50 ಪದಕಗಳನ್ನು ವಿತರಣೆ ಮಾಡಿದೆ.

2- 3 ವರ್ಷಗಳ ಪದಕಗಳನ್ನು ಒಟ್ಟಿಗೆ ನೀಡುವ ಪರಿಪಾಠ ಇರಬಾರದು. ಪ್ರಶಸ್ತಿ ವಿಜೇತರ ಆಯ್ಕೆಯ ನಂತರ ಎರಡು ಮೂರು ವರ್ಷ ಕಾಯುವ ಅಗತ್ಯವಿಲ್ಲ. ಪ್ರತಿ ವರ್ಷವೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಬೇಕೆಂದು ಅರಣ್ಯ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವ ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ , ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜಲುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ (District commissioners) ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜ್ಯದಲ್ಲಿ ಕೂಡಲೇ ಡೆಂಗ್ಯು (Dengue Fever) ನಿಯಂತ್ರಣಕ್ಕೆ ತರದಿದ್ದರೆ ಮೇಲಿನ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಠಿಣ ಎಚ್ಚರಿಕೆ ನೀಡಿದರು.

ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ. ಜಿಲ್ಲಾಧಿಕಾರಿಗಳಿಗೆ ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ಸಮರೋಪಾದಿಯಲ್ಲಿ ಕೆಲಸ ಮಾಡಿ

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್‌ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಲೇಬೇಕು

ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ. DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು. DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು

ಜನಸಂಪರ್ಕ ಸಭೆಗೆ ಅಧಿಕಾರಿಗಳ ವೈಫಲ್ಯ ಕಾರಣ

ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿದರು. DC, CEOಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು

ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDOಗಳು, VAಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು. ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು.

ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು. ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು.

ಪ್ರಕರಣಗಳನ್ನು ಬಾಕಿ ಇಡಬೇಡಿ

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಗಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DCಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್‌ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಕೆಲವು DCಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DCಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೈಂ

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Actor Darshan: ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

VISTARANEWS.COM


on

Actor Darshan Will Attend The Court Hearing From Online
Koo

ಬೆಂಗಳೂರು: ನಟ ದರ್ಶನ್‌ (Actor Darshan) ಭಾಗಿ ಆಗಿರುವ ರೇಣುಕಾ ಸ್ವಾಮಿ ಕೊಲೆ (Ranuka Swamy Murder) ಪ್ರಕರಣದಲ್ಲಿ, ಸಾಕ್ಷಿಗಳು (Witness) ಮೂವರು ಆರೋಪಿಗಳನ್ನು ಐಡೆಂಟಿಫಿಕೇಶನ್‌ ಸಂದರ್ಭದಲ್ಲಿ ನಿಖರವಾಗಿ ಪತ್ತೆ ಹಚ್ಚಿದ್ದಾರೆ. ಜೈಲಿನಲ್ಲಿ ನಡೆದ ಈ ಐಡೆಂಟಿಫಿಕೇಶನ್‌ ಪರೇಡ್‌ನಲ್ಲಿ (Identification parade) ಹತ್ತಾರು ಇತರ ಕೈದಿಗಳ ನಡುವೆ ಆರೋಪಿಗಳನ್ನು ಸಾಕ್ಷಿಗಳು ಖಚಿತವಾಗಿ ಕಂಡು ಹಿಡಿದರು.

ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

ಈ ಪರೇಡ್‌ನಲ್ಲಿ ಆರೋಪಿಗಳನ್ನು ಜೈಲಿನಲ್ಲಿರುವ ಇತರ ಕೈದಿಗಳ ನಡುವೆ ನಿಲ್ಲಿಸಿ, ತಾನು ನೋಡಿದ ಆರೋಪಿಯ ಗುರುತು ಹಿಡಿಯಲು ಸಾಕ್ಷಿಗೆ ಸೂಚಿಸಲಾಗುತ್ತದೆ. ಈ ವೇಳೆ ತಾಲೂಕು ದಂಡಾಧಿಕಾರಿಗಳು ಹಾಜರಿರುತ್ತಾರೆ. ಈ ರೀತಿಯಾಗಿ ಕಾರ್ತಿಕ್, ನಿಖಿಲ್ ನಾಯಕ್ ಹಾಗೂ ರಘುಗೆ ಐಡೆಂಟಿಫಿಕೇಶನ್ ಪೆರೇಡ್ ನಡೆಸಲಾಯಿತು. ತುಮಕೂರು ಜೈಲಲ್ಲಿ ಕಾರ್ತಿಕ್ ಹಾಗೂ ನಿಖಿಲ್‌ಗೆ, ಪರಪ್ಪನ ಆಗ್ರಹಾರ ಜೈಲಿನಲ್ಲಿ ರಘುಗೆ ಐಡೆಂಟಿಫಿಕೇಶನ್ ಪರೇಡ್ ನಡೆಯಿತು. ಈ ಐಡೆಂಟಿಫಿಕೇಶನ್ ಪರೇಡ್‌ನಲ್ಲಿ ಪತ್ತೆ ಹಚ್ಚಿದ್ದು ಐ ವಿಟ್ನೆಸ್ ಆಗಿ ಪರಿಗಣನೆ ಆಗಲಿದೆ.

ದರ್ಶನ್ ಕೇಸಲ್ಲೂ ಎರಡು ಪೆನ್ ಡ್ರೈವ್

ಈ ಪ್ರಕರಣದಲ್ಲೂ ದರ್ಶನ್‌ (Actor Darshan) ವಿರುದ್ಧ ಎರಡು ಪೆನ್ ಡ್ರೈವ್‌ಗಳು ಪ್ರಮುಖ ಸಾಕ್ಷಿಗಳಾಗಿವೆ. ಆದರೆ ಇವು ಆರೋಪಿ ಮಾಡಿದ್ದಲ್ಲ, ಬದಲಾಗಿ ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿದ್ಧಪಡಿಸಿರುವ ಪೆನ್ ಡ್ರೈವ್.

8 ಜಿಬಿಯ ಎರಡು ಪೆನ್ ಡ್ರೈವ್ ಸಿದ್ಧಪಡಿಸಿರುವ ಪೊಲೀಸರು, ಆರೋಪಿಗಳಾದ ದೀಪಕ್ ಹಾಗೂ ನಂದೀಶ್ ಇವರ ಗೂಗಲ್ ಟೈಮ್ ಲೈನ್ ಡಾಟಾವನ್ನು ಅದರಲ್ಲಿ ಸಂಗ್ರಹಿಸಿದ್ದಾರೆ. ದೀಪಕ್ ಶಾಸಕರ ಸಂಬಂಧಿ, ನಂದೀಶ್ ದರ್ಶನ್ ಮನೆಯ ಕೆಲಸದವನು. ಇಬ್ಬರ ಮೊಬೈಲ್‌ನಲ್ಲೂ ಗೂಗಲ್ ಟೈಮ್ ಲೈನ್ ಇತ್ತು. ಅಪರಾಧ ನಡೆದ ಪ್ರತಿ ಜಾಗಕ್ಕೂ ಇವರಿಬ್ಬರು ಓಡಾಡಿದ್ದಾರೆ. ಹೀಗಾಗಿ ಇದನ್ನು ಎರಡು ಪೆನ್ ಡ್ರೈವ್‌ಗಳಲ್ಲಿ ಪೊಲೀಸರು ಶೇಖರಿಸಿಟ್ಟಿದ್ದಾರೆ. ಆರೋಪಿಗಳು ಘಟನಾ ಸ್ಥಳದಲ್ಲಿ ಇದ್ದರು ಎನ್ನುವುದಕ್ಕೆ ಈ ಎರಡು ಪೆನ್ ಡ್ರೈವ್ ನಲ್ಲಿರುವ ಡಾಟಾ ಮಹತ್ವದ ಸಾಕ್ಷಿಯಾಗಿದೆ.

ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading

ಬೆಂಗಳೂರು

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Murder case : ಬೆಂಗಳೂರಲ್ಲಿ ಯುವಕನೊಬ್ಬ ಕುಡಿದ ನಶೆಯಲ್ಲಿ ತನ್ನ ಸ್ನೇಹಿತರಿಂದಲೇ ಕೊಲೆಯಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ‌ ನಡೆಸಿ ಯುವಕನೊಬ್ಬನ ಕೊಲೆ (Murder case) ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನೇಪಾಳಿ ಮೂಲದ ಬಾಲಾಜಿ ಮೃತ ದುರ್ದೈವಿ.

ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ ಸ್ನೇಹಿತರೊಂದಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಅಮಲಿನಲ್ಲಿ ಕ್ಯಾತೆ ತೆಗೆದು ಸ್ನೇಹಿತರೊಟ್ಟಿಗೆ ಜಗಳ ಶುರು ಮಾಡಿದ್ದ. ಜಗಳವು ವಿಕೋಪಕ್ಕೆ ತಿರುಗಿದ್ದು, ಬಾಲಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ.

ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka weather Forecast
ಮಳೆ3 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜಾಯ‌!

Deepika Padukone
Latest6 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ8 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ26 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್28 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ55 mins ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ1 hour ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್1 hour ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು1 hour ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್2 hours ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌