Site icon Vistara News

Co-Op Bank Scam : ಶ್ರೀ ಗುರು ರಾಘವೇಂದ್ರ ಕೋ ಆಪರೇಟೀವ್ ಬ್ಯಾಂಕ್ ಹಗರಣ; ಸಾಲಗಾರ ರಾಜೇಶ್‌ ಬಂಧಿಸಿದ ಇಡಿ

Guru Raghavendra co-op bank scam

ಶ್ರೀ ಗುರು ರಾಘವೇಂದ್ರ ಬ್ಯಾಂಕ್‌

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಕೋ ಆಪರೇಟೀವ್ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಲಿಮಿಟೆಡ್‌ನ ಠೇವಣಿದಾರರ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ (Co-Op Bank Scam) ಸಂಬಂಧಿಸಿದಂತೆ ಸರಿಯಾದ ದಾಖಲೆಗಳನ್ನು ನೀಡದೇ ಸಾಲ ಪಡೆದಿದ್ದ ರಾಜೇಶ್ ವಿ.ಆರ್. ಎಂಬಾತನನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರು ಸಿಟಿ ಸೆಷನ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆತನ್ನನು ಮೂರು ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ ಎಂದು ಇಡಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜೇಶ್‌ ಅವರನ್ನು ಬಂಧಿಸಲಾಗಿದೆ. ಅವರು ಸುಮಾರು 44.40 ರೂ.ಗಳನ್ನು ಸರಿಯಾದ ದಾಖಲೆ ನೀಡದೇ ಬ್ಯಾಂಕ್‌ನಿಂದ ಅಕ್ರಮವಾಗಿ ಪಡೆದುಕೊಂಡಿದ್ದರು. ಈ ಸಂಬಂಧ ಈಗಾಗಲೇ ಪಕ್ರರಣ ದಾಖಲಿಸಿಕೊಂಡಿದ್ದ (ಇಸಿಐಆರ್) ಜಾರಿ ನಿರ್ದೇಶನಾಲಯ ಈಗ ಆತನನ್ನು ವಶಕ್ಕೆ ಪಡೆದುಕೊಂಡಿದೆ.

ರಾಜೇಶ್‌ ಬಂಧನದ ಕುರಿತು ಇಡಿ ನೀಡಿದ ಪ್ರಕಟಣೆ

ಸುಮಾರು ಎರಡು ವರ್ಷಗಳ ಹಿಂದೆ ಈ ಬ್ಯಾಂಕ್‌ನ ಹಗರಣ ಬೆಳಕಿಗೆ ಬಂದಿದ್ದು, ಈಗಾಗಲೇ ಇದರ ತನಿಖೆಯನ್ನು ರಾಜ್ಯ ಸರ್ಕಾರವು ಸಿಬಿಐಗೆ ಒಪ್ಪಿಸಿದೆ. ಇಡಿ ಕೂಡ ತನಿಖೆ ನಡೆಸುತ್ತಿದೆ. ಒಟ್ಟು 1,290 ಕೋಟಿ ರೂ. ಹಗರಣ ನಡೆದಿದೆ ಎಂದು ಅಂದಾಜಿಸಲಾಗಿದ್ದು, ಈಗಾಗಲೇ ತನಿಖೆ ನಡೆಸಿರುವ ಸಿಐಡಿಯು ಬ್ಯಾಂಕ್‌ನ ಅವ್ಯವಹಾರದಲ್ಲಿ ಭಾಗಿಯಾದ ಅಧ್ಯಕ್ಷ ಮತ್ತು ನಿರ್ದೇಶಕರು ಸೇರಿದಂತೆ ಹಲವರನ್ನು ಬಂಧಿಸಿದೆ.

ಇಡಿಯು ಸಾಲ ಪಡೆದಿರುವವರ ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ? ಯಾರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುತ್ತಿದೆ. ಇದರ ವರದಿಯನ್ನಾಧರಿಸಿ, ಸಿಬಿಐಯು ಮುಂದಿನ ತನಿಖೆ ನಡೆಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ರಾಜೇಶ್‌ ಬಂಧನ ಬಹಳ ಪ್ರಾಮುಖ್ಯತೆ ಪಡೆದಿದೆ. ಇಡಿ ವಶದಲ್ಲಿರುವ ರಾಜೇಶ್‌ ಈ ಹಗರಣದ ಸಂಪೂರ್ಣ ಮಾಹಿತಿ ನೀಡಬಹುದೆಂದು ನಿರೀಕ್ಷಿಸಲಾಗುತ್ತಿದೆ.

ಇಡಿಯು ಕಳೆದ ಸೆಪ್ಟೆಂಬರ್‌ನಲ್ಲಿ ಈ ಹಗರಣಕ್ಕೆ ಸಂಬಂಧಿಸಿದಂತೆ 45.32 ಕೋಟಿ ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಎರಡೂ ಬ್ಯಾಂಕ್‌ಗಳ ಅಧ್ಯಕ್ಷ ಕೆ. ರಾಮಕೃಷ್ಣ, ಉಪಾಧ್ಯಕ್ಷರಾಗಿದ್ದ ದಿವಂಗತ ಟಿ.ಎಸ್‌. ಸತ್ಯನಾ ರಾಯಣ, ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವಿ. ಮಯ್ಯ, ಹಾಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್‌ ಕುಮಾರ್‌ ಎ. ಹಾಗೂ ಇತರ ಸಿಬ್ಬಂದಿಯ ಬ್ಯಾಂಕ್‌ ಖಾತೆಗಳಲ್ಲಿದ್ದ 7.16 ಕೋಟಿ ರೂ. ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕೃಷಿ ಜಮೀನು, ಅಪಾರ್ಟ್‌ಮೆಂಟ್‌ಗಳು, ಮನೆಗಳು ಸೇರಿದಂತೆ 29 ಸ್ಥಿರಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿಯು ಆಗ ಪ್ರಕಟಣೆಯಲ್ಲಿ ಹೇಳಿತ್ತು.

ಶೇ 12ರಿಂದ 16ರಷ್ಟು ಬಡ್ಡಿ ನೀಡುವ ಆಮಿಷವೊಡ್ಡಿ ಗ್ರಾಹಕರಿಂದ ಸುಮಾರು 1,500 ಕೋಟಿಗೂ ಹೆಚ್ಚು ಠೇವಣಿ ಸಂಗ್ರಹಿಸಿ ವಂಚಿಸಲಾಗಿದೆ. “ಬ್ಯಾಂಕ್‌ನ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇರಿಕೆʼʼಯು ವಂಚನೆಗೊಳಗಾದವರ ಠೇವಣಿದಾದರ ಪರವಾಗಿ ಹೋರಾಟ ನಡೆಸುತ್ತಿದೆ.

ಇದನ್ನೂ ಓದಿ : ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣದ ತನಿಖೆ ಚುರುಕುಗೊಳಿಸಲು ಒತ್ತಾಯ

Exit mobile version