ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ರಾಜಾಜಿನಗರ ಕ್ಷೇತ್ರದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಸೋಮವಾರ ಭರ್ಜರಿ ಪ್ರಚಾರ ನಡೆಸಿದರು.
ರಾಜಾಜಿನಗರ ಕ್ಷೇತ್ರ ವ್ಯಾಪ್ತಿಯ ಮಂಜುನಾಥನಗರ, ಪ್ರಕಾಶನಗರ ವಾರ್ಡ್, ಕಾಮಾಕ್ಷಿಪಾಳ್ಯ ವಾರ್ಡ್‌ನ ಕೆಎಚ್‌ಬಿ ಕಾಲೋನಿ, ಮರಿಯಪ್ಪನಪಾಳ್ಯದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಜತೆಗೆ ಮನೆಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ನಾಗರಿಕರಿಂದ ಉತ್ತಮ ಸ್ಪಂದನೆ ದೊರೆಯಿತು.
ಬಸವೇಶ್ವರನಗರದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಪುಟ್ಟಣ್ಣ ಅವರು, ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಹಾಲಿ ಶಾಸಕರು ಗೊಡ್ಡು ಭರವಸೆಗಳನ್ನು ನೀಡುತ್ತ ಬಂದಿದ್ದಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯ ಸಮಸ್ಯೆಗಳು ಸಾಕಾಷ್ಟಿವೆ. ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ, ನಡೆದರೂ ಗುಣಮಟ್ಟದಿಂದ ಕಾಮಗಾರಿಗಳನ್ನು ನಡೆಸಿಲ್ಲ. ಕ್ಷೇತ್ರದಲ್ಲಿ ಬದಲಾವಣೆಯ ಅಲೆ ಬೀಸುತ್ತಿದೆ. ಅಭಿವೃದ್ಧಿಗಾಗಿ ತಮಗೆ ಬೆಂಬಲ ನೀಡಬೇಕು ಎಂದು ಜನರಿಗೆ ಮನವಿ ಮಾಡಿದರು.
ಇದನ್ನೂ ಓದಿ | Karnataka Election: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಕೇಳಿದ 3 ಪ್ರಶ್ನೆ ಏನು?; ಭಾಷಣ ಕಡಿಮೆ ಮಾಡಲು ಹೇಳಿದ್ದೇಕೆ?
ಕಾಮಾಕ್ಷಿಪಾಳ್ಯ ವಾರ್ಡ್‌ನ ಕೆಎಚ್‌ಬಿ ಕಾಲೋನಿಯಲ್ಲಿ ವಿವಿಧ ಪಕ್ಷಗಳ ಮುಖಂಡರಾದ ಶ್ರೀನಿವಾಸ್, ಚೇತನ್, ಗಂಗ, ಧನುಷ್, ಸಾಯಿನಾರಾಯಣ, ಮದನ್, ಹನುಮಂತ ರಾಜು, ಗೌತಮ್ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆಯಾದರು. ಅದೇ ರೀತಿ ಮರಿಯಪ್ಪನಪಾಳ್ಯದಲ್ಲಿ ಕೂಡ ವಿವಿಧ ಪಕ್ಷಗಳಿಂದ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಬಿಎಂಪಿಯ ಮಾಜಿ ಮೇಯರ್ ಜಿ. ಪದ್ಮಾವತಿ, ಮಾಜಿ ಸದಸ್ಯ ಪದ್ಮರಾಜ್, ಮುಖಂಡರಾದ ರಾಕೇಶ್, ಕುಮಾರ್ ಮತ್ತಿತರರು ಇದ್ದರು. ಪ್ರಚಾರದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.