ಬೆಂಗಳೂರು
ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಅನೇಕ ದಿನಗಳಿಂದ ಡಿ.ಕೆ. ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಯಕ್ತಿಕವಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ಇದೀಗ ಪಕ್ಷಗಳ ನಡುವಿನ ಕದನವಾಗಿ ಮಾರ್ಪಟ್ಟಿದೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಮುಖಂಡ ಮನೋಹರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯೆದುರು ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಮೇಶ್ ಜಾರಕಿಹೊಳಿ ಫೋಟೊಗೆ ಪಾದರಕ್ಷೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ
Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ
Cauvery Water Dispute: ರಾಜ್ಯದ ಸ್ಥಿತಿ ಬಗ್ಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರು: ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು. ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) (Cauvery Water Dispute) ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ‘ಗಾಯದ ಮೇಲೆ ಬರೆ’ ಎಳೆದಂತೆ ಸಿಡಬ್ಲ್ಯುಆರ್‌ಸಿಯಿಂದ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು, ಸರ್ಕಾರವು ಕರ್ನಾಟಕದ ಪಾಲಿಗೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ. ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಠ ಕಾಳಜಿಯೂ ತೋರದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ. ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ…
— Vijayendra Yediyurappa (@BYVijayendra) September 26, 2023
ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್‌ವೈ
CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.
ಕಳೆದ ಸೆಪ್ಟೆಂಬರ್ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿಹಿಡಿಯಲಾಗಿತ್ತು.
ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.
ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ.
CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ
ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು.
25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.
ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.
ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್
ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು.
ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು.
ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ.
ಕಲೆ/ಸಾಹಿತ್ಯ
Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ
Yakshagana Show: ಮದರ್ ಫೌಂಡೇಶನ್ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಬೆಂಗಳೂರು: ರಾಜ್ ಭಟ್ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.
ಮದರ್ ಫೌಂಡೇಶನ್ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್ ಚಾನೆಲ್ ಮಾಧ್ಯಮ ಸಹಯೋಗ ನೀಡಿದೆ.
ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್, ಶಶಾಂಕ್, ಶ್ರೀನಿವಾಸ್ ಪ್ರಭು, ಸುಜನ್ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.
ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್ ವಿಶ್ವನಾಥ್, ಹಾಸ್ಯ ಪಾತ್ರಗಳಲ್ಲಿ ರಮೇಶ್ ಭಂಡಾರಿ, ಸಿತಾರಾಮ ಕುಮಾರ್ ಅಭಿನಯಿಸಲಿದ್ದಾರೆ.
ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!
ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್, ರುಚಿಮತಿಯಾಗಿ ಸಂತೋಷ್ ಹಿಲಿಯಾಣ, ದೂತನಾಗಿ ಸೀತಾರಾಮ್ ಕುಮಾರ್, ಬ್ರಾಹ್ಮಣನಾಗಿ ಶ್ರೀಧರ್ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್, ಪಾಸ್ತಿಯಾಗಿ ಹರೀಶ್ ಜಪ್ತಿ, ದೃಮಿಳ ಆಗಿ ಕಾರ್ತಿಕ್ ಕಣ್ಣಿ ಬಣ್ಣ ಹಚ್ಚಲಿದ್ದಾರೆ.
ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್ ಭಂಡಾರಿ, ಪ್ರಕಾಶ್ ಕಿರಾಡಿ, ವಿಶ್ವನಾಥ್ ಹೆನ್ನಾಬೈಲ್ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್ ಹೆಗಡೆ, ಶ್ರೀಕಾಂತ್ ರಟ್ಟಾಡಿ, ನಾಗರಾಜ್ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.
ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್ ಬುಕಿಂಗ್‌ಗಾಗಿ ರಾಜ್ ಭಟ್ ಮೊ.9019776411 ಸಂಪರ್ಕಿಸಿ.
ಕರ್ನಾಟಕ
Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್; ಸೆಕ್ಷನ್ 144 ಹಾಕಿದ್ರೆ ಹುಷಾರ್ ಎಂದು ಗುಡುಗಿದ ವಾಟಾಳ್
Bangalore News : ಸೆ. 29ರಂದು ನಡೆಯಲಿರುವ ಕರ್ನಾಟಕ ಬಂದ್ ವೇಳೆ ನಿಷೇಧಾಜ್ಞೆ ಹಾಕುವಂತಿಲ್ಲ ಎಂದು ವಾಟಾಳ್ ನಾಗರಾಜ್ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.
ಬೆಂಗಳೂರು: ಮಂಗಳವಾರ ನಡೆದ ಬೆಂಗಳೂರು ಬಂದ್‌ನ್ನು (Bangalore Bandh) ಸರ್ಕಾರ ಪೊಲೀಸ್ ಬಲ ಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ ಸೆಪ್ಟೆಂಬರ್ 29ರಂದು ನಡೆಯಲಿರುವ ಕನ್ನಡದ ಒಕ್ಕೂಟ ಕರೆ ನೀಡಿರುವ ಅಖಿಲ ಕರ್ನಾಟಕ ಬಂದ್‌ನ್ನು (Karnataka Bandh) ತಡೆಯಲು ಯತ್ನಿಸಿದರೆ ಹುಷಾರ್ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಸರ್ಕಾರವನ್ನು ಎಚ್ಚರಿಸಿದ್ದಾರೆ.
ಅವರು ಮಂಗಳವಾರ ನಡೆದ ಬೆಂಗಳೂರು ಬಂದ್ ನಡುವೆಯೇ ತಮ್ಮ ತಂಡವನ್ನು ಕೂಡಿಕೊಂಡು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದರು. ಇದೂ ಸೇರಿದಂತೆ ಹೋರಾಟಗಾರರ ಹಕ್ಕನ್ನು ಕಸಿಯಲಾಗಿದೆ ಎಂದು ಅವರು ಸಂಜೆ ಆಪಾದಿಸಿದರು.
ರಾಜ್ಯ ಸರ್ಕಾರ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ವಿಧಿಸಿ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಮಾರ್ಗ ಕಂಡುಕೊಂಡಿದೆ. ಆದರೆ, ಶುಕ್ರವಾರ ಈ ತಂತ್ರವನ್ನು ಪ್ರಯೋಗಿಸಿದರೆ ಎಚ್ಚರಿಕೆ ಎಂದು ಹೇಳಿದರು ವಾಟಾಳ್ ನಾಗರಾಜ್
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಸೆ. 27ರ ಬುಧವಾರ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಪ್ರತಿಭಟನೆ ನಡೆಸಲಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ ಎಂದು ಅವರು ಹೇಳಿದರು. ವಾಟಾಳ್ ನಾಗರಾಜ್, ಕನ್ನಡ ಹೋರಾಟಗಾರರ ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಸೇರಿದಂತೆ 50ಕ್ಕೂ ಅಧಿಕ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: Bangalore Bandh : ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಶುಕ್ರವಾರ ಏನಿರುತ್ತೆ ಏನಿರಲ್ಲ: ವಾಟಾಳ್ ಕೊಟ್ಟ ಲಿಸ್ಟ್
-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ಬಸ್, ಓಲಾ, ಉಬರ್, ಟ್ಯಾಕ್ಸಿ, ಆಟೋ ಗೂಡ್ಸ್ ವಾಹನ ಸೇವೆ ಇರುವುದಿಲ್ಲ
-ಶುಕ್ರವಾರ ಮಾಲ್, ಹೋಟೆಲ್, ರೆಸ್ಟೊರೆಂಟ್, ಮಾಲ್, ಮಲ್ಟಿಪ್ಲೆಕ್ಸ್
-ಯಶವಂತಪುರ, ದಾಸನಪುರ ಎಪಿಎಂಸಿ ಮಾರುಕಟ್ಟೆ, ಕೆ.ಆರ್ ಮಾರ್ಕೆಟ್ ಬಂದ್
– ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಬಂದ್.
ವಾಟಾಳ್ ನಾಗರಾಜ್ ನೇತೃತ್ವದ ಬಂದ್‌ಗೆ ಮಂಗಳವಾರದ ಬಂದ್‌ಗೆ ಕರೆ ಕೊಟ್ಟ ಸಂಘಟನೆಗಳಲ್ಲದೆ ಹೋಟೆಲ್ ಅಸೋಸಿಯೇಷನ್, ಓಲಾ ಊಬರ್ ಚಾಲಕರ ಸಂಘಟನೆ, ಆದರ್ಶ ಆಟೋ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬಂದ್ ಇನ್ನಷ್ಟು ಪ್ರಖವಾಗುವ ನಿರೀಕ್ಷೆ ಇದೆ. ಆದರೆ, ರಾಜ್ಯದ ಎಲ್ಲ ಭಾಗಗಳಲ್ಲಿ ಯಶಸ್ವಿಯಾಗುವುದು ಡೌಟ್. ಕರಾವಳಿ, ಉತ್ತರ ಕರ್ನಾಟಕದಲ್ಲಿ ಕಾವೇರಿ ಹೋರಾಟದ ಕಾವು ಅಷ್ಟಾಗಿ ತಟ್ಟುವುದಿಲ್ಲ. ಆದರೆ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಭಾಗದಲ್ಲಿ ಹೆಚ್ಚು ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಆಗ್ರಹ
ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯದ ಸಂಸದರು ಸಂಪೂರ್ಣ ನಾಯಪತ್ತೆಯಾಗಿದ್ದಾರೆ. ಅವರಿಗೆ ಕಾವೇರಿ ನೀರು ಬೇಡ್ವಾ ಎಂದು ಕೇಳಿದರು. ಶುಕ್ರವಾರ ಸಂಪೂರ್ಣ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕರ್ನಾಟಕ
Bangalore Bandh : ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
Bangalore bandh : ಬೆಂಗಳೂರು ಬಂದ್ ಯಶಸ್ವಿಯಾಗಿ ಮುಕ್ತಾಯವಾಗಿದೆ. ಎಲ್ಲ ವ್ಯವಸ್ಥೆಗಳು ಇದ್ದರೂ ಜನರೇ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿದ್ದು ಕಂಡುಬಂತು.
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು.
ಈ ಬಂದ್ ನೂರಾರು ಸಾಮಾಜಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ವ್ಯಾಪಾರಿಗಳು, ವಾಹನ ಮಾಲೀಕರೇ ಆದರೂ ಅಂತಿಮವಾಗಿ ಇದನ್ನು ಯಶಸ್ವಿಗೊಳಿಸಿದ್ದು ಜನ ಬೆಂಬಲ. ಯಾಕೆಂದರೆ, ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಇರುವುದರಿಂದ ಬೆಂಬಲ ನೀಡುವ ಸಂಘಟನೆಗಳಲ್ಲಿ ವಿಭಜನೆಯಾಗಿತ್ತು. ಕೆಲವರು ತಾವು ಈ ಬಂದ್‌ಗೆ ಬೆಂಬಲ ಕೊಡುವುದಿಲ್ಲ, ಸೆ. 29ರ ಬಂದ್‌ಗೆ ಬೆಂಬ ಕೊಡುವುದಾಗಿ ಪ್ರಕಟಿಸಿದ್ದರು. ಆದರೂ ಒಟ್ಟಾರೆ ಪರಿಣಾಮದಲ್ಲಿ ವ್ಯತ್ಯಾಸವಾಗಲಿಲ್ಲ. ಯಾಕೆಂದರೆ ಸಂಘಟನೆಗಳ ಹಂಗನ್ನು ಮೀರಿ ಜನರು ಈ ಬಂದ್‌ಗೆ ಮೌನ ಬೆಂಬಲವನ್ನು ಸೂಚಿಸಿದ್ದರು.
ಮುಂಜಾನೆಯಿಂದಲೇ ರಾಜಧಾನಿಯಲ್ಲಿ ಬಂದ್‌ನ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅಲ್ಲಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನೆಗೆ ಕರೆ ನೀಡಿದ ಸಂಘಟನೆಯ ಮುಖ್ಯಸ್ಥರಲ್ಲಿ ಒಬ್ಬರಾದ ಕುರುಬೂರು ಶಾಂತ ಕುಮಾರ್ ಅವರನ್ನೂ ಪೊಲೀಸರು ವಶಕ್ಕೆ ಪಡೆದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಅಲ್ಲಿ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸಲಾಯಿತು. ಸರ್ಕಾರದ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮನವಿ ಸ್ವೀಕರಿಸಿದರು. ಈ ಭರವಸೆಗಳ ಈಡೇರಿಕೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿದೆ.
ಎಲ್ಲ ವ್ಯವಸ್ಥೆಗಳಿದ್ದರೂ ಜನರೇ ರಸ್ತೆಗೆ ಬಂದಿಲ್ಲ
ನಿಜವೆಂದರೆ, ರಾಜಧಾನಿಯಲ್ಲಿ ಬಂದ್ ಘೋಷಣೆಯಾಗಿದ್ದರೂ ಬಸ್, ಮೆಟ್ರೋ ರೈಲು, ಆಟೊಗಳು, ಓಲಾ, ಊಬರ್ ಟ್ಯಾಕ್ಸಿಗಳು, ಹೋಟೆಲ್‌ಗಳು ತೆರೆದಿದ್ದವು. ಆದರೆ, ಅದನ್ನು ಬಳಸುವ ಜನರೇ ಇರಲಿಲ್ಲ.
ಬಿಎಂಟಿಸಿ ಬಸ್‌ಗಳು ಓಡಾಡಿದರೂ ಖಾಲಿಯಾಗಿದ್ದವು. ಮೆಟ್ರೋ ರೈಲು ಬಹುಭಾಗ ಖಾಲಿಯಾಗಿಯೇ ಓಡಾಡಿತು. ಆಟೊಗಳಲ್ಲಿ ಹೋಗುವವರು ಕಡಿಮೆ ಇದ್ದರು. ರೆಸ್ಟೋರೆಂಟ್‌ಗಳಲ್ಲಿ ಜನ ಸಂದಣಿ ಇರಲಿಲ್ಲ. ಅಂದರೆ ಇಷ್ಟೆಲ್ಲ ವ್ಯವಸ್ಥೆ ಇದ್ದರೂ ಜನರೇ ಮಂಗಳವಾರ ಕಾವೇರಿಗಾಗಿ ಒಂದು ದಿನ ಬಂದ್ ಎಂಬ ತೀರ್ಮಾನಕ್ಕೆ ಬಂದಿದ್ದರು. ಹೀಗಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಜನ ಇರಲಿಲ್ಲ.
ಇದನ್ನೂ ಓದಿ: Bangalore Bandh : 13 ವಿಮಾನ ಸಂಚಾರ ಕ್ಯಾನ್ಸಲ್, ಮೆಟ್ರೋ ಫುಲ್ ಖಾಲಿ, ಬಿಎಂಟಿಸಿ ಬಸ್‌ಗಳಿವೆ, ಜನರೇ ಇಲ್ಲ
ವಿಶೇಷವೆಂದರೆ ಬೆಂಗಳೂರಿನಲ್ಲಿ ಮಂಗಳವಾರ ಬಂದ್ ನಡೆದೇ ನಡೆಯುತ್ತದೆ. ಅಲ್ಲಿ ಹೋಗಿ ಕಷ್ಟಕ್ಕೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂದು ವಿಮಾನ ಪ್ರಯಾಣಿಕರು ನಿರ್ಧಾರ ಮಾಡಿದ ಪರಿಣಾಮವಾಗಿ ಬೆಂಗಳೂರಿಗೆ ಮಂಗಳವಾರ ಬರಬೇಕಾಗಿದ್ದ 13 ವಿಮಾನಗಳ ಸಂಚಾರವೇ ರದ್ದಾಗಿತ್ತು.
ಶಾಲೆ, ಕಾಲೇಜು ಬಂದ್; ಮಾಲ್, ಥಿಯೇಟರ್‌ಗಳ ಬೆಂಬಲ
ಈ ನಡುವೆ, ಬಂದ್ ನಿಮಿತ್ತ ಬೆಂಗಳೂರಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೀಗಾಗಿ ಮಕ್ಕಳು ಮತ್ತು ಮನೆಯವರು ನಿರಾಳರಾಗಿದ್ದರು. ಇತ್ತ ದೊಡ್ಡ ದೊಡ್ಡ ಮಾಲ್‌ಗಳು ಬಂದ್‌ಗೆ ಬೆಂಬಲ ನೀಡಿದ್ದರು. ಚಿತ್ರೋದ್ಯಮದ ಬೆಂಬಲ ಇದ್ದಿದ್ದರಿಂದ ಸಿನಿಮಾ ಥಿಯೇಟರ್‌ಗಳು ಸಂಜೆವರೆಗೆ ಓಪನ್ ಆಗಲಿಲ್ಲ.
ಪೊಲೀಸ್ ಬಲ ಪ್ರಯೋಗದ ಆರೋಪ
ಇದರ ನಡುವೆ ಬಂದ್‌ನ್ನು ವಿಫಲಗೊಳಿಸಲು ಪೊಲೀಸ್ ಬಲ ಪ್ರಯೋಗ ಮಾಡಿದ ಆರೋಪ ಎದುರಾಗಿದೆ. ಬಲವಂತದ ಬಂದ್‌ಗೆ ಅವಕಾಶವಿಲ್ಲ, ಮೆರವಣಿಗೆ ನಡೆಸುವಂತಿಲ್ಲ, ಬಹಿರಂಗ ಪ್ರತಿಭಟನೆಗೆ ಅವಕಾಶವಿಲ್ಲ ಎಂಬ ನಿರ್ಬಂಧಗಳನ್ನು ಹಾಕಿದ ಪೊಲೀಸರು ಬಂದ್‌ನ ಮುನ್ನಾ ದಿನವೇ 1000ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದರು. ಇಷ್ಟೆಲ್ಲ ಮಾಡಿದರೂ ಬಂದ್ ಸಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ಗಳು ಸಂಘಟನೆಗಳನ್ನು ಅಭಿನಂದಿಸಿವೆ.
ಇನ್ನು ಸೆ. 29ರ ಬಂದ್. ಈಗ ಈ ಬಂದ್ ಮುಕ್ತಾಯವಾಗಿರುವಂತೆಯೇ ಸೆಪ್ಟೆಂಬರ್ 29ರ ಕರ್ನಾಟಕ ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಅಂದು ಪೂರ್ಣವಾಗಿ ಕರ್ನಾಟಕ ಬಂದ್ ಆಗಲಿದೆ ಎಂದಿದ್ದಾರೆ ವಾಟಾಳ್ ನಾಗರಾಜ್.
ಇದನ್ನೂ ಓದಿ: Bangalore Bandh: ಬೆಂಗಳೂರು ಬಂದ್ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ನಡೆಯಿತೇ? ಕಮಿಷನರ್ ಹೇಳಿದ್ದೇನು?
-
Live News21 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ11 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ4 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema14 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ15 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್11 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ11 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್15 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ