Congress Protest : ಜಂತರ್‌ ಮಂತರ್‌ ಹೋರಾಟಕ್ಕೆ ನೀವೂ ಬನ್ನಿ; ಬಿಜೆಪಿ ನಾಯಕರು, ಸಂಸದರಿಗೆ ಸಿಎಂ ಆಹ್ವಾನ - Vistara News

ಬೆಂಗಳೂರು

Congress Protest : ಜಂತರ್‌ ಮಂತರ್‌ ಹೋರಾಟಕ್ಕೆ ನೀವೂ ಬನ್ನಿ; ಬಿಜೆಪಿ ನಾಯಕರು, ಸಂಸದರಿಗೆ ಸಿಎಂ ಆಹ್ವಾನ

Congress Protest : ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿ ನಾಯಕರಿಗೂ ಆಹ್ವಾನ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಿದ್ದರೆ ಅವರೆಲ್ಲ ಬರ್ತಾರಾ?

VISTARANEWS.COM


on

Congress Protest Jantar Mantar CM siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ (Protest Against Central Government) ಫೆಬ್ರವರಿ 7ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ (Jantar Mantar Protest) ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ (Congress Protest) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ ನಡೆಯುತ್ತಿದೆ ಎಂದ ಸಿದ್ದರಾಮಯ್ಯ

ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದರು. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: CM Siddaramaiah: 5 ವರ್ಷದಲ್ಲಿ 73 ಸಾವಿರ ಕೋಟಿ ರೂ. ಕಡಿತ; ಕೇಂದ್ರದ ವಿರುದ್ಧ ಸಿಎಂ ಗರಂ

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ , ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹ ವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7ನೇ ಪರಿಚ್ಛೇದ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15ನೇ ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ.

14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದನ್ನೂ ಓದಿ: BJP Karnataka : ಯುಪಿಎ V/S ಮೋದಿ ಕಾಲದ ಅನುದಾನ ಲೆಕ್ಕ ನೀಡಿ ಬಿಜೆಪಿ ಕೌಂಟರ್

ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ

ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71ರಿಂದ ಶೇ 3.74ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ.

ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು 3000 ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ.

ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು ಎಂದರು.

ರಾಜ್ಯದಿಂದ ನಾವು ಕೊಡುವ 100 ರೂ. ಗಳಲ್ಲಿ 12 ರೂ. ಮಾತ್ರ ನಮಗೆ ವಾಪಸ್!

ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ 4, 30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ 37, 252 ಕೋಟಿ ಬರುವುದು. ಕೇಂದ್ರ ಪುರಸ್ಕ್ರುತ ಯೋಜನೆಯಲ್ಲಿ 13,005 ಕೋಟಿ ಎರಡೂ ಸೇರಿ ಕೇವಲ 50,257 ಕೋಟಿ ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು.

ಒಟ್ಟು ಲೆಕ್ಕದಲ್ಲಿ ರಾಜ್ಯದಿಂದ 100 ರೂ. ಕೇಂದ್ರಕ್ಕೆ ಹೋದರೆ ಅದರಲ್ಲಿ ನಮಗೆ 12- 13 ರೂ.ಗಳು ಮಾತ್ರ ವಾಪಾಸ್ ಬರುತ್ತಿದೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರವೇ ಒದಗಿಸಿದ ಅಂಕಿ ಅಂಶಗಳನ್ನು ಮುಂದಿಟ್ಟು ವಿವರಿಸಿದರು.

2017-18 ರಲ್ಲಿ ಕೇಂದ್ರದ ಬಜೆಟ್ ಗಾತ್ರ 21,46,735 ಕೋಟಿ ಇತ್ತು. ಆಗ ರಾಜ್ಯಕ್ಕೆ 31908 ಕೋಟಿ, ಗ್ರಾಂಟ್ಸ್ ಹಾಗೂ ನಗದು ಹಂಚಿಕೆ 16072 ಕೋಟಿ,,ಎರಡೂ ಸೇರಿಸಿ 47990 ಕೋಟಿ ಸಿಕ್ಕಿತ್ತು. 2018-19 ರಲ್ಲಿ ಕೇಂದ್ರ ಬಜೆಟ್ ಗಾತ್ರ 24,42,213 ಕೋಟಿಗೆ ವೃದ್ಧಿಸಿತು. ಆಗ ನಗದು ಹಂಚಿಕೆ ಸಿಕ್ಕಿದ್ದು 36215 ಕೋಟಿ. ಇಲ್ಲಿ 2000 ಕೋಟಿ ಕಡಿಮೆ ಆಯಿತು. 2023-24 ಸಾಲಿನಲ್ಲಿ 45,03,097 ಕೋಟಿ ಕೇಂದ್ರ ಬಜೆಟ್ ಆಗಿದ್ದು, ರಾಜ್ಯಕ್ಕೆ 50257 ಕೋಟಿ ಮಾತ್ರ ಸಿಗುವ ಅಂದಾಜಿದೆ. Devolution 2.2 ಯಿಂದ 2024-25 ಕ್ಕೆ 1.23 ಗೆ ಇಳಿದಿದೆ. ಇದರಿಂದಾಗಿ ರಾಜ್ಯಕ್ಕೆ ಆಗುವ ಅನ್ಯಾಯದ ಪ್ರಮಾಣ ಹೆಚ್ಚುತ್ತಲೇ ಇದೆ ಎಂದರು ಸಿದ್ದರಾಮಯ್ಯ.

ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು

ಬಜೆಟ್ ಗಾತ್ರ ಡಬಲ್ ಆದಾಗ, ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು. ಆದರೆ ಈಗ ಅರ್ಧಕ್ಕಿಂತ ಹೆಚ್ಚು ಕಡಿಮೆ ಆಗಿದೆ. ಸೆಸ್, ಸರ್ ಚಾರ್ಜ್ ಪ್ರತೀ ವರ್ಷ ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ. ಸರ್, ಸರ್ ಚಾರ್ಜ್ ಮೂಲಕ ಕೇಂದ್ರ ವಸೂಲಿ ಮಾಡುವ ತೆರಿಗೆಯಲ್ಲಿ ರಾಜ್ಯಗಳಿಗೆ ನಯಾ ಪೈಸೆ ವಾಪಾಸ್ ಬರಲ್ಲ. ಆದರೆ ಸೆಸ್, ಸರ್ ಚಾರ್ಜ್ ಎರಡೂ ಕೊಡೋದು ರಾಜ್ಯಗಳೇ. ಆದ್ದರಿಂದ 16 ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ. ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲಿದ್ದೇವೆ. ಇದರ ಜತೆಗೆ ಶೇ 1 ರಷ್ಟು ರಕ್ಷಣಾ ಇಲಾಖೆಗೆ ಇಟ್ಟುಕೊಳ್ಳುತ್ತಾರೆ ಎಂದು ವಿವರಿಸಿದರು.

ಹೀಗೆ ಮೋದಿ ಅವರು ಬಂದ ನಂತರ ರಚನೆಯಾದ 15 ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ 1,87,867 ಕೋಟಿ ರೂ. ಅನ್ಯಾಯವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು. ಇಷ್ಟು ದೊಡ್ಡ ಮೊತ್ತ ನಮಗೆ ಬಾರದಿರುವುದು ರಾಜ್ಯಕ್ಕೆ ಆಗಿರುವ ಭಾರೀ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನೀರಾವರಿ ಯೋಜನೆಗಳಲ್ಲೂ ಭೀಕರ ಅನ್ಯಾಯ ಒತ್ತಾಯ

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ತಿಳಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂ.ಬಂದಿಲ್ಲ . ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ ಎಂದರು.

ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ ಎಂದರು.

ಇದನ್ನೂ ಓದಿ: BJP Karnataka : ಯುಪಿಎ V/S ಮೋದಿ ಕಾಲದ ಅನುದಾನ ಲೆಕ್ಕ ನೀಡಿ ಬಿಜೆಪಿ ಕೌಂಟರ್

ಬರ ಪರಿಹಾರ ಸಭೆಗೆ ಶಬರಿಯಂತೆ ಕಾದರೂ ಪ್ರಯೋಜನವಿಲ್ಲ

ಸೆಪ್ಟೆಂಬರ್ 23ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ. ಇವರು ಸಭೆ ಕರೆದೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17901 ಕೋಟಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. NDRF ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ CM ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ NDRF ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ ಎಂದರು.

ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು

ಕೇಂದ್ರ ಸರ್ಕಾರ 2021 ರಲ್ಲಿ ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ. ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಮಂತ್ರಿಗಳಿಗೆ ಭೇಟಿಗೆ ಅವಕಾಶವಿಲ್ಲದಿರುವುದು, ಬರಗಾಲಕ್ಕೆ ಹಣಕಾಸು ಬಿಡುಗಡೆ ಮಾಡದಿರುವುದು, ಹಂಚಿಕೆಯಲ್ಲಿ ಅನ್ಯಾಯವಾಗಿರುವುದು ನೋಡಿದರೆ ಇದು ಒಕ್ಕೂಟ ವ್ಯವಸ್ಥೆಯ ಅಪಮಾನ ಅಲ್ಲವೇ ಎಂದು ಪ್ರಶ್ನಿಸುತ್ತಿದ್ದೇವೆ. ಉತ್ತರ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದರು.

ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ

ಯಡಿಯೂರಪ್ಪ, ಬೊಮ್ಮಾಯಿಯವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ. ಪ್ರಹ್ಲಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. 11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದರು.

ಪ್ರತಿಭಟನೆಗೆ ಪ್ರತಿಪಕ್ಷದವರಿಗೂ ಕರೆ

ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿ ಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ , ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದಿದ್ದರೆ ಕನ್ನಡಿಗರಿಗೆ ದ್ರೋಹ ಉಂಟಾಗಲಿದೆ ಎಂದರು

ಧರಣಿ ಮಾಡಿದರೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆಯೇ ಎಂಬ ಪ್ರಶ್ನೆಗೆ ನರೇಂದ್ರ ಮೋದಿಯವರು ಸೂಕ್ಷ್ಮ ಇದ್ದಾರೆ, ಪ್ರತಿಭಟನೆ ಬಳಿಕವಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ ಕರ್ನಾಟಕದ ಪಾಲಿನ ಹಣವನ್ನು ವಾಪಾಸ್ ಕೊಡಬಹುದು ಎಂಬ ಆಶಾಭಾವನೆ ಇದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಹೋಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ ಇದು ಶುದ್ದ ತಪ್ಪು ಎಂದರು. ಬರಲಿರುವ ಅಧಿವೇಶನದಲ್ಲಿ ಶ್ವೇತ ಪತ್ರ ಹೊರಡಿಸಲು ರಾಜ್ಯ ಸರ್ಕಾರದ ಚಿಂತನೆ ಸರ್ಕಾರ ನಡೆಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

By

Hc grants interim bail to actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

By

Doctors at Fortis Hospital remove fish bone from man's stomach for 5 years
Koo

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years
Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

By

Koo

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure
Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading

ಬೆಂಗಳೂರು

Assault case: ಕರ್ನಾಟಕದ ಲಾರಿ ಡ್ರೈವರ್‌ಗೆ ಕಪಾಳಮೋಕ್ಷ ಮಾಡಿದ ತಮಿಳುನಾಡು ಟ್ರಾಫಿಕ್‌ ಪೊಲೀಸ್‌!

Assault case: ಕರ್ನಾಟಕದ ಲಾರಿ ಡ್ರೈವರ್‌ ಮೇಲೆ ತಮಿಳುನಾಡು ಟ್ರಾಫಿಕ್‌ ಪೊಲೀಸ್‌ ಮನಸೋ ಇಚ್ಛೆ ಹಲ್ಲೆ ಮಾಡಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

By

assault case
Koo

ಬೆಂಗಳೂರು: ಕರ್ನಾಟಕದ ಲಾರಿ ಡ್ರೈವರ್ ಮೇಲೆ ತಮಿಳುನಾಡು ಟ್ರಾಫಿಕ್ ಪೊಲೀಸ್ ಪೇದೆ ಮನಸೋ ಇಚ್ಛೆ ಹಲ್ಲೆ (Assault case) ಮಾಡಿದ್ದಾರೆ. ಕರ್ನಾಟಕ- ತಮಿಳುನಾಡಿನ ಹೊಸೂರು ಗಡಿಭಾಗದಲ್ಲಿ ಭಾನುವಾರ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ರ‍್ಯಾಶ್‌ ಡ್ರೈವಿಂಗ್‌ ಮಾಡುತ್ತಿದ್ದೀಯಾ ಎಂದು ಆರೋಪಿಸಿ ಲಾರಿ ಚಾಲಕನ ಅಡ್ಡಗಟ್ಟಿ ಕಪಾಳ, ಮುಖ ಅಂತ ನೋಡದೆ ಹಲ್ಲೆ ನಡೆಸಿದ್ದಾರೆ. ಬಿಟ್ಬಿಡಿ ಸರ್ ಎಂದು ಚಾಲಕ ಅಂಗಲಾಚಿದರೂ ಬಿಡದೆ ಟ್ರಾಫಿಕ್‌ ಪೊಲೀಸ್‌ ಪೇದೆ ಹಲ್ಲೆ ನಡೆಸಿದ್ದಾರೆ. ಹೊಸೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಾರು ಚಾಲಕನೊರ್ವ ಹಲ್ಲೆ ಮಾಡುತ್ತಿರುವ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಬಳಿಕ ಕಾರು ಚಾಲಕನಿಗೂ ಅವಾಜ್ ಹಾಕಿ ತಮಿಳುನಾಡು ಪೊಲೀಸ್ ವಿಡಿಯೊ ಡಿಲೀಟ್ ಮಾಡಿಸಿದ್ದಾರೆ.

Car Fire Accident
Car Fire Accident

ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಸ್ವಿಪ್ಟ್ ಡಿಸೈರ್ ಕಾರಿನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ರಸ್ತೆಯಲ್ಲಿ ಧಗ-ಧಗನೆ ಹೊತ್ತಿ ಉರಿದಿದೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕಾರು ಚಲಿಸುತ್ತಿದ್ದಾಗ ಬಾನೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾನೆಟ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ಕಾರಿನಿಂದು ಇಳಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯಪ್ರಜ್ಙೆಯಿಂದ ಕೂದಲೆಳೆ ಅಂತರದಲ್ಲಿ ಎಲ್ಲರೂ ಪಾರಾಗಿದ್ದಾರೆ.

ಕರೆಂಟ್‌ ಶಾಕ್‌ನಿಂದ ನಾಲ್ವರು ಕಾರ್ಮಿಕರಿಗೆ ಗಾಯ

ಶಾರ್ಟ್ ಸರ್ಕ್ಯುಟ್‌ನಿಂದಾಗಿ ಕರೆಂಟ್‌ ಶಾಕ್‌ ಹೊಡೆದು ನಾಲ್ವರು ಕಾರ್ಮಿಕರಿಗೆ ಗಾಯವಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಕಟ್ಟಡದ ಬಳಿ ವಾಸ ಮಾಡಲು ಚಿಕ್ಕ ರೂಂ ನಿರ್ಮಿಸಿಕೊಂಡಿದ್ದರು. ರಾತ್ರಿ ರೂಂ ಗೆ ಪಡೆದಿದ್ದ ಕರೆಂಟ್‌ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮಲಗಿದ್ದ ನಾಲ್ವರಿಗೆ ಗಾಯವಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ

ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಘಟನೆ ನಡೆದಿದೆ. ಶಿವಗಂಗೇಗೌಡ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಗ್ಯಾಂಗ್‌ವೊಂದು ಮದ್ಯ ಸೇವಿಸುತ್ತಿತ್ತು. ಇದನ್ನು ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ಇದಕ್ಕೆ ಸಿಟ್ಟಾದ ಕಿಡಿಗೇಡಿಗಳು ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಸಿಮೆಂಟ್ ಇಟ್ಟಿಗೆಯಿಂದ ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳನ್ನು ಓಡಿಸಲು ಪ್ರಯತ್ನಿಸಿದಾಗ ಅಟ್ಯಾಕ್ ಮಾಡಿದ್ದಾರೆ. ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ3 ಗಂಟೆಗಳು ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ22 ಗಂಟೆಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ2 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ2 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು3 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು3 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು3 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ3 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

Murder case
ಉತ್ತರ ಕನ್ನಡ4 ದಿನಗಳು ago

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Medical negligence
ಪ್ರಮುಖ ಸುದ್ದಿ4 ದಿನಗಳು ago

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌