Crime News: ಮ್ಯಾಟ್ರಿಮೋನಿಯಲ್‌ ಸೈಟಿನಲ್ಲಿ ಸಿಕ್ಕಿದ ಸಲಿಂಗಪ್ರೇಮಿ ಗಂಡನಿಂದ ಹೆಂಡತಿಗೆ ಕಿರುಕುಳ, ದೂರು - Vistara News

ಕ್ರೈಂ

Crime News: ಮ್ಯಾಟ್ರಿಮೋನಿಯಲ್‌ ಸೈಟಿನಲ್ಲಿ ಸಿಕ್ಕಿದ ಸಲಿಂಗಪ್ರೇಮಿ ಗಂಡನಿಂದ ಹೆಂಡತಿಗೆ ಕಿರುಕುಳ, ದೂರು

ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಪ್ರಣವ್ ಕುಮಾರ್‌ನನ್ನು ವನುಷಾ ಒಪ್ಪಿದ್ದಳು. ಆದರೆ ಆತ ಸಲಿಂಗಪ್ರೇಮಿ ಎಂಬುದು ಬಳಿಕ ಬಯಲಾಗಿತ್ತು.

VISTARANEWS.COM

on

Sexual harassment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಲಿಂಗಪ್ರೇಮಿಯಾಗಿದ್ದ ಗಂಡ ಪತ್ನಿಗೆ ವರದಕ್ಷಿಣೆ ಪೀಡನೆ ನೀಡಿದ್ದು, ಹೆಂಡತಿ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ವಿಶೇಷವೆಂದರೆ ಈ ದಂಪತಿ ಪರಸ್ಪರ ನೋಡಿ ಜೋಡಿಯಾದದ್ದು ಮ್ಯಾಟ್ರಿಮೋನಿಯಲ್‌ ಸೈಟ್‌ನಲ್ಲಿ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ವನುಷಾ ಎಂಬ ಮಹಿಳೆ ತನ್ನ ಗಂಡ ಪ್ರಣವ್‌ಕುಮಾರ್‌ ಎಂಬವನ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಂಡ ಲಿಪ್‌ಸ್ಟಿಕ್ ಹಚ್ಚಿಕೊಂಡು, ಮಹಿಳೆಯರ ಉಡುಪು ಧರಿಸಿಕೊಂಡು ಇರುತ್ತಿದ್ದ. ಮದುವೆಯಾದ ಮೊದಲ ರಾತ್ರಿಯೇ ತುಟಿಗೆ ಲಿಪ್‌ಸ್ಟಿಕ್ ಬಳಿದುಕೊಂಡು ಮಹಿಳೆಯರ ಉಡುಪು ಧರಿಸಿ ಬಂದ ಈತನನ್ನು ಕಂಡು ದಿಗಿಲುಬಿದ್ದ ಪತ್ನಿ, ಇದನ್ನು ಪ್ರಶ್ನಿಸಿದ್ದಾರೆ. ʼನನಗೆ ಗಂಡಸರೆಂದರೆ ಇಷ್ಟʼ ಎಂದು ಈತ ಉತ್ತರಿಸಿದ್ದ ಹಾಗೂ ಪದೇ ಪದೆ ಅದನ್ನೇ ಹೇಳುತ್ತಿದ್ದನಂತೆ.

ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಪ್ರಣವ್ ಕುಮಾರ್‌ನನ್ನು ವನುಷಾ ಒಪ್ಪಿದ್ದಳು. ಒಳ್ಳೆ ಕೆಲಸದಲ್ಲಿದ್ದಾನೆಂಬ ಕಾರಣಕ್ಕೆ ಕುಟುಂಬದವರು ಸೇರಿ ಪ್ರಣವ್ ಜೊತೆ ವನುಷಾಳಿಗೆ ಮಲ್ಲೇಶ್ವರಂನ ಟಿಟಿಡಿ ಕಲ್ಯಾಣ ಮಂಟಪದಲ್ಲಿ ಮದುವೆ ಮಾಡಿಸಿದ್ದರು. ಮದುವೆಯ ಮೊದಲ ರಾತ್ರಿಯೇ ಗಂಡನ ವಿಚಿತ್ರ ವರ್ತನೆಗೆ ವನುಷಾ ಶಾಕ್ ಆಗಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪ್ರಣವ್‌ ಕಿರಿಕ್ ಮಾಡಿದ್ದ. ನಂತರ ತನ್ನ ತಂದೆ ತಾಯಿ ಜತೆ ಸೇರಿ ಆಕೆಗೆ ವರದಕ್ಷಿಣೆ ಕಿರುಕುಳ ನೀಡಿದ್ದ. ಇದಕ್ಕೆ ಪ್ರಣವ್‌ನ ತಂದೆ ತಾಯಿ ಕೂಡ ಸಪೋರ್ಟ್ ಮಾಡಿ, ವನುಷಾಳಿಗೆ ಹಲ್ಲೆ ನಡೆಸಿದ್ದರು. ಪ್ರಣವ್‌ನ ವರ್ತನೆಗೆ ಚಿಕಿತ್ಸೆ ಕೊಡಿಸಲು 10 ಲಕ್ಷ ರೂ. ಹಣದ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ವನುಷಾ ಈಗ ಗಂಡ ಪ್ರಣವ್, ಮಾವ ಮೂರ್ತಿ, ಅತ್ತೆ ಶ್ರೀದೇವಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Suspicious death : ಮಹಿಳೆ ಶವ ಬಾವಿಯಲ್ಲಿ ಪತ್ತೆ, ವರದಕ್ಷಿಣೆಗಾಗಿ ಕೊಲೆ ಮಾಡಿ ಬಾವಿಗೆ ತಳ್ಳಿದ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

Murder Case : ಕೊಡಿಗೆಹಳ್ಳಿಯಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಇದೀಗ ಹಂತಕನನ್ನು ಪೊಲೀಸರು ಬಂಧಿಸಿದ್ದು, ಮಹಿಳೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಹತ್ಯೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.

VISTARANEWS.COM

on

By

Murder Case In Bengaluru
ಆರೋಪಿ ನವೀನ್‌ ಕೊಲೆಯಾದ ಶೋಭಾ
Koo

ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್‌ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.

ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್‌ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

ರಾಯಚೂರು: ರಾಯಚೂರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ (Murder Case) ನಡೆದಿದೆ. ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಆರೋಪಿಯಾಗಿದ್ದಾನೆ.

ಪತ್ನಿ‌ ಮೇಲೆ ಕಣ್ಣು ಹಾಕಿದ ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನು ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.

ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Murder Case : ಪತ್ನಿ ಮೇಲೆ ಕಣ್ಣು ಹಾಕಿ ಮೆಸೇಜ್‌ ಮಾಡಿದ್ದಕ್ಕೆ ಸಿಟ್ಟಾದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ.

VISTARANEWS.COM

on

By

Murder Case in raichur

ಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ಮುಖಂಡ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ (Political rivalry) ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ (Chintamani) ಜೆಡಿಎಸ್‌ (JDS) ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ (Threat Case) ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಯಚೂರು

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Road Accident: ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

VISTARANEWS.COM

on

bolero hit 3 death road accident raichur
Koo

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Continue Reading

ಕ್ರೈಂ

Smuggling Case: ಬ್ಯಾಂಕಾಕ್‌ನಿಂದ ಸ್ಮಗ್ಲಿಂಗ್‌ ಮಾಡುತ್ತಿದ್ದ 10 ಹಳದಿ ಅನಕೊಂಡ ವಶಕ್ಕೆ, ಆರೋಪಿ ಬಂಧನ

Smuggling Case: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ.

VISTARANEWS.COM

on

anaconda smuggling case
Koo

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ (Air Customs) ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ (Bangkok) ಅಕ್ರಮವಾಗಿ (Smuggling Case) ಕದ್ದು ತರಲಾಗುತ್ತಿದ್ದ 10 ಅನಕೊಂಡ ಹಾವುಗಳು (Anakonda Snake) ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIL) ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ʻಚುನಾವಣೆ ಪ್ರಚಾರ ಮಾಡಿದ್ರೆ ಹುಷಾರ್!‌ʼ ಎಂದು ಲಾಂಗ್‌ ಝಳಪಿಸಿದ ಜೆಡಿಎಸ್‌ ನಾಯಕ

ಚಿಕ್ಕಬಳ್ಳಾಪುರ: ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ‌ ಚಿಂತಾಮಣಿಯಲ್ಲಿ ಜೆಡಿಎಸ್‌ ನಾಯಕನೊಬ್ಬ ಎದುರಾಳಿಗಳ ಮುಂದೆ ಲಾಂಗ್‌ ಝಳಪಿಸಿ ಆವಾಜ್ ಹಾಕಿದ್ದಾನೆ. ಚುನಾವಣೆ ಪ್ರಚಾರ, ಮತದಾನದಲ್ಲಿ ಪಾಲ್ಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಕೋನಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಜೆಡಿಎಸ್ ಮುಖಂಡನಿಂದ ಕಾಂಗ್ರೆಸ್ ಬೆಂಬಲಿಗರಿಗೆ ಬೆದರಿಕೆ ಹಾಕಿದ ಆರೋಪವಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಪಲ್ಲಕ್ಕಿ ಉತ್ಸವದಲ್ಲಿ ಲಾಂಗು ಹಿಡಿದು ಬೆದರಿಕೆ ಹಾಕಿದ್ದಾನೆ. ಇದರ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಕೋದಂಡಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ನಡೆಯುತಿದ್ದ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಕೆ.ವಿ‌ ಶ್ರೀನಿವಾಸರೆಡ್ಡಿ (ಕೆವಿಎಸ್) ಎಂಬಾತ ಲಾಂಗ್‌ ತೋರಿಸಿ ಬೆದರಿಕೆ ಹಾಕಿದ್ದಾನೆ. “ಏ ನನ್ನ ಮಕ್ಳಾ, ಚುನಾವಣಾ ಪ್ರಚಾರ ಅಥವಾ ಮತದಾನದಲ್ಲಿ ಪಾಲ್ಗೊಂಡರೆ‌ ಕತ್ತರಿಸುತ್ತೇನೆ” ಎಂದು ಬೆದರಿಕೆ‌ ಹಾಕಿದ್ದಾನೆ ಎನ್ನಲಾಗಿದೆ. ಎದುರಾಳಿಗಳಾದ ಕಲ್ಯಾಣ್‌ ರೆಡ್ಡಿ ಹಾಗು ಆತನ ಕುಟುಂಬದವರನ್ನು ಅಟ್ಟಾಡಿಸಿ ಬೆದರಿಸಿದ್ದಾನೆ.

ಈ ಕುರಿತು ಶ್ರೀನಿವಾಸರೆಡ್ಡಿ ವಿರುದ್ಧ ಕಲ್ಯಾಣ್ ಕುಮಾರ್ ಪ್ರಾಣಬೆದರಿಕೆ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಕುಮಾರ್ ಹಾಲಿ ಸಚಿವ ಡಾ. ಎಂ. ಸಿ‌ ಸುಧಾಕರ್ ಬೆಂಬಲಿಗರಾಗಿದ್ದು, ಚಿಂತಾಮಣಿ‌ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್‌; ಕೊಲೆಯೋ? ಆತ್ಮಹತ್ಯೆಯೋ?

Love Case

ಬೀದರ್: ಪ್ರಿಯತಮೆಯ ಮದುವೆ ದಿನವೇ ಪ್ರಿಯತಮ ಮಸಣ (love case) ಸೇರಿದ್ದಾನೆ. ರೈಲ್ವೆ ಹಳಿ ಮೇಲೆ ರುಂಡ-ಮುಂಡ ತುಂಡರಿಸಿ ಬಿದ್ದ ಸ್ಥಿತಿಯಲ್ಲಿ ಯುವಕನ ಶವ (dead body found) ಪತ್ತೆಯಾಗಿದೆ. ಬೀದರ್‌ ನಗರದ ಹೊರವಲಯದ ನೌಬಾದ್ ಹೈವೇ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಬೀದರ್ ತಾಲೂಕಿನ ನಿಜಾಂಪೂರ್ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ದುರ್ದೈವಿ.

ಬೀದರ್ ತಾಲೂಕಿನ ರಂಜೋಳ ಖೇಣಿ ಗ್ರಾಮದ ವೆಂಕಟೇಶ್‌ ನಿಜಾಂಪುರ ಗ್ರಾಮದ ಅಜ್ಜಿಯ‌ ಮನೆಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯೊಂದರಲ್ಲಿ‌ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎರಡು ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಕುಟುಂಬಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಯುವತಿಯ ಮದುವೆ ದಿನವೇ ಯುವಕನ ಕೊಲೆ‌ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ 1 ಕಿ.ಮೀ. ದೂರದಲ್ಲಿ ಬೈಕ್ ಇದೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿ, ರೈಲ್ವೆ ಟ್ರ್ಯಾಕ್‌ ಮೇಲೆ ಬಿಸಾಡಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯೂಟೌನ್ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಡುಗಿಯ‌ ವಿಚಾರಕ್ಕೆ ಕೊಲೆಯಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಹೀಗಾಗಿ ಈ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case: ಯಾದಗಿರಿ ಹಿಂದು ಯುವಕನ ಕೊಲೆ ಪ್ರಕರಣ; ಇಬ್ಬರ ವಿರುದ್ಧ ಎಫ್‌ಐಆರ್‌

Continue Reading
Advertisement
Modi in Karnataka PM Narendra Modi to visit from April 28 and 29
Lok Sabha Election 202410 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು16 mins ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ34 mins ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ44 mins ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ44 mins ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

baba ramdev supreme court
ಪ್ರಮುಖ ಸುದ್ದಿ45 mins ago

Patanjali Case: ಜಾಹೀರಾತು ಗಾತ್ರದಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್‌ದೇವ್‌ ಬೆವರಿಳಿಸಿದ ಸುಪ್ರೀಂ ಕೋರ್ಟ್‌

Murder Case in raichur
ರಾಯಚೂರು49 mins ago

Murder Case : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ

Lok Sabha Election-2024
Latest54 mins ago

Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

Lok Sabha Election 2024 KP Nanjundi resigns from Legislative Council
Lok Sabha Election 20241 hour ago

Lok Sabha Election 2024: ವಿಧಾನ ಪರಿಷತ್‌ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ; ಕಾಂಗ್ರೆಸ್‌ ಸೇರ್ಪಡೆ?

gold rate today kajal
ಚಿನ್ನದ ದರ1 hour ago

Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು20 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ21 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು24 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌