Crime news | ಭಯಾನಕ ಕೊಲೆ ಕಂಡು ಪೊಲೀಸರಿಗೇ ಶಾಕ್!‌ 20 ಬಾರಿ ಕಲ್ಲು ಎತ್ತಿಹಾಕಿ ಕೊಂದ ಪಾತಕಿಗಳು! - Vistara News

ಕ್ರೈಂ

Crime news | ಭಯಾನಕ ಕೊಲೆ ಕಂಡು ಪೊಲೀಸರಿಗೇ ಶಾಕ್!‌ 20 ಬಾರಿ ಕಲ್ಲು ಎತ್ತಿಹಾಕಿ ಕೊಂದ ಪಾತಕಿಗಳು!

ಹೆಣ್ಣಿನ ಸಂಗದ ಕಾರಣಕ್ಕಾಗಿ ಬಾದಾಮಿ ಮೂಲದ ಒಬ್ಬಾತನನ್ನು ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ತಲೆ ಮೇಲೆ ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

VISTARANEWS.COM


on

Crime news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ ಭಯಾನಕ ಮರ್ಡರ್ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹೆಣ್ಣಿನ ಸಂಗದ ಕಾರಣಕ್ಕಾಗಿ ಬಾದಾಮಿ ಮೂಲದ ಒಬ್ಬಾತನನ್ನು ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ತಲೆ ಮೇಲೆ ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿದವರೂ ಬಾದಾಮಿ ಮೂಲದವರೇ ಆಗಿದ್ದು, ಆರು ಮಂದಿಯ ಗ್ಯಾಂಗ್‌ ಈ ಕೃತ್ಯ ನಡೆಸಿರುವುದು ಬಯಲಾಗಿದೆ.

3ನೇ ತಾರೀಕು ಮಧ್ಯರಾತ್ರಿ ಕೆ.ಪಿ ಅಗ್ರಹಾರದ 5ನೇ ಕ್ರಾಸ್‌ನಲ್ಲಿ ಹತ್ಯೆ ನಡೆದಿತ್ತು. ಬಾಳಪ್ಪ ಜಮಖಂಡಿ ಎಂಬಾತನನ್ನು ಆರು ಮಂದಿಯ ಗ್ಯಾಂಗ್ ಕೊಲೆ ನಡೆಸಿತ್ತು. ಕೊಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಭಾಗಿಯಾಗಿದ್ದಾರೆ. ಮೊದಲಿಗೆ ಕಲ್ಲು ಹುಡುಕಿ ಈತನ ಮೇಲೆ ತಲೆ ಮೇಲೆ ಎತ್ತಿಹಾಕಿದ್ದೇ ಒಬ್ಬ ಮಹಿಳೆ. ಆಗ ಕೆಲವರು ಬಾಳಪ್ಪನನ್ನು ಅದುಮಿ ಹಿಡಿದುಕೊಂಡಿದ್ದರು. ಉಳಿದವರು ಆತನ ತಲೆ ಮೇಲೆ ಹಲವಾರು ಬಾರಿ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಪರಿಚಿತರಿಂದಲೇ ಬಾಳಪ್ಪ ಜಮಖಂಡಿ ಹತ್ಯೆ‌ ನಡೆದಿರುವುದು ಖಚಿತವಾಗಿದ್ದು, ಕೊಲೆಯ ಮುನ್ನ ವಾಗ್ಯುದ್ಧ ನಡೆದಿರುವುದು ಸಿಸಿ ಟಿವಿ ಫೂಟೇಜ್‌ಗಳಿಂದ ಕಂಡುಬಂದಿದೆ. ಹೆಣ್ಣಿನ ಸಂಗದಲ್ಲಿ ಉಂಟಾಗಿರುವ ತಗಾದೆ ಹಾಗೂ ವೈಯಕ್ತಿಕ ದ್ವೇಷಗಳ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ | Crime News | KRSನಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಹೊತ್ತು ಹಾಕಿ ಭೀಕರ ಹತ್ಯೆ: ಇಲ್ಲೇ ನಡೆದಿತ್ತು ಸಾಮೂಹಿಕ ಕೊಲೆ!

ಮೊಬೈಲ್ ಸುಳಿವಿನ ಮೇರೆಗೆ ಮೃತ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿತ್ತು. ಶನಿವಾರ ರಾತ್ರಿ ಕೆ.ಪಿ ಅಗ್ರಹಾರಕ್ಕೆ ಬಂದಿದ್ದ ಬಾಳಪ್ಪ ಜಮಖಂಡಿ, ಆರೋಪಿಗಳ ಭೇಟಿಗೂ ಮುನ್ನ ಟೀ ಕುಡಿದು ಇನ್ನಿಬ್ಬರು ವ್ಯಕ್ತಿಗಳ ಭೇಟಿ ಮಾಡಿದ್ದ. ಸಿಗರೇಟ್ ಸೇದಿ, ನಂತರ ಮೆಡಿಕಲ್ ಶಾಪ್‌ನಲ್ಲಿ ಮೊಬೈಲ್ ಚಾರ್ಜ್‌ಗೆ ಹಾಕಿ, ಅವರೇನೋ ಅಲ್ಲಿಗೆ ಕರೀತಾ ಇದ್ದಾರೆ ಹೋಗಿ ಬರ್ತಿನಿ ಅಂದಿದ್ದ. ಐದನೇ ಕ್ರಾಸ್ ಮೆಡಿಕಲ್ ಸ್ಟೋರ್ ಬಳಿ ಇದ್ದಾಗ ಅಲ್ಲಿಗೆ ಆರು ಜನ‌ ಬಂದಿದ್ದರು. ಅವರಲ್ಲಿ ಮೂವರು ಮಹಿಳೆಯರು, ಮೂವರು ಪುರುಷರಿದ್ದರು. ಆರೋಪಿಗಳಲ್ಲಿ ಒಬ್ಬ ಕೆ.ಪಿ ಅಗ್ರಹಾರದಲ್ಲಿ ಸೆಕ್ಯುರಿಟಿಯಾಗಿದ್ದ. ಆತನನ್ನು ವಶಕ್ಕೆ ಪಡೆದು ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ | Murder Case | ಮುಸ್ಲಿಂ ಮಹಿಳೆಯಿಂದ ಅಜ್ಜಿಯ ಭೀಕರ ಕೊಲೆ; ಕಬೋರ್ಡ್‌ನಲ್ಲಿ ಶವ ಬಚ್ಚಿಟ್ಟು ಪರಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Child Death: ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ, ಮಳೆಗೆ ಮರ ಬಿದ್ದು ಮಹಿಳೆ ಸಾವು

Child Death: ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು.

VISTARANEWS.COM


on

child death belagavi
ಮೃತ ಸಾಯೀಶಾ, ಶ್ವೇತಾ ರಾಠೋಡ
Koo

ಬೆಳಗಾವಿ: 2 ವರ್ಷದ ಮಗುವೊಂದು ಆಟವಾಡುತ್ತ ಹೋಗಿ ನೀರಿನ ಸಂಪ್‌ಗೆ (Water Sump) ಬಿದ್ದು ಸಾವಿಗೀಡಾದ ದುರ್ಘಟನೆ (Child Death) ಬೆಳಗಾವಿಯ (Belagavi news) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗು. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಣ್ಮರೆಯಾದುದರಿಂದ ಗಾಬರಿಯಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಎಷ್ಟೇ ಹುಡುಕಿದರೂ ಕಾಣದಿದ್ದಾಗ ಪೋಷಕರು ಸಂಪ್ ಒಪನ್ ಮಾಡಿ ನೋಡಿದ್ದರು. ಸಂಪ್ ಓಪನ್ ಮಾಡುತ್ತಿದ್ದಂತೆ ಅಲ್ಲಿ ಬಿದ್ದಿದ್ದ ಮಗು ಸಾಯೀಶಾ ಕಂಡುಬಂದಿದ್ದಳು.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಪೋಷಕರು ಕರೆದೊಯ್ದರಾದರೂ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯರು ಮಾಹಿತಿ ನೀಡಿದರು. ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಬಿದ್ದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರದಿಂದಾಗಿ, ನೀರು ತರಲು ಹೋದ ಮಹಿಳೆ ಮೇಲೆ ಮರ ಬಿದ್ದು ಮಹಿಳೆ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಶ್ವೇತಾ ರಾಠೋಡ (21) ಮೃತ ಮಹಿಳೆ.

ಬಿರುಗಾಳಿ ಸಹಿತ ಮಳೆ ಬರುತ್ತಿದ್ದಾಗಲೇ ನೀರು ತರಲು ಹೋದ ಶ್ವೇತಾ ರಾಠೋಡ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಶ್ವೇತಾರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರ ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Continue Reading

ದೇಶ

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

Physical Abuse: ಮುಂಬೈನ ನಲಾಸೊಪರದಲ್ಲಿ ಕಾಸ್ಟಿಂಗ್‌ ಏಜೆಂಟ್‌ ಆಗಿರುವ ಆನಂದ್‌ ಸಿಂಗ್‌ ಎಂಬುವನು ಮೇ 20ರಂದು ಮಹಿಳೆಯನ್ನು ಆಡಿಷನ್‌ಗೆ ಮನೆಗೆ ಕರೆದಿದ್ದಾನೆ. ದೇಶಾದ್ಯಂತ ಖ್ಯಾತಿ ಗಳಿಸಿರುವ ದಿ ಕಪಿಲ್‌ ಶೋನಲ್ಲಿ ಚಾನ್ಸ್‌ ಸಿಗುತ್ತದೆ ಎಂಬ ಆಸೆಯಿಂದ ಮಹಿಳೆಯು ವ್ಯಕ್ತಿ ಹೇಳಿದ ಜಾಗಕ್ಕೆ ತೆರಳಿದ್ದಾರೆ. ಅಲ್ಲಿ, ಆನಂದ್‌ ಸಿಂಗ್‌ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

The Kapil Sharma Show
ಸಾಂದರ್ಭಿಕ ಚಿತ್ರ.
Koo

ಮುಂಬೈ: ಸಿನಿಮಾಗಳಲ್ಲಿ ನಟಿಸಲು ಚಾನ್ಸ್‌ ಕೊಡಿಸುತ್ತೇನೆ, ನನಗೆ ಆ ಹೀರೊ ಪರಿಚಯ ಇದ್ದಾನೆ, ಸೀರಿಯಲ್‌, ಕಾಮಿಡಿ ಶೋಗಳಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಯುವತಿಯರಿಗೆ ಮೋಸ ಮಾಡುವ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ (Mumbai) ಖ್ಯಾತ ದಿ ಕಪಿಲ್‌ ಶರ್ಮಾ ಶೋನಲ್ಲಿ (The Kapil Sharma Show) ಚಾನ್ಸ್‌ ಕೊಡಿಸುವುದಾಗಿ ನಂಬಿಸಿದ ವ್ಯಕ್ತಿಯು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮುಂಬೈನ ನಲಾಸೊಪರದಲ್ಲಿ ಕಾಸ್ಟಿಂಗ್‌ ಏಜೆಂಟ್‌ ಆಗಿರುವ ಆನಂದ್‌ ಸಿಂಗ್‌ ಎಂಬುವನು ಮೇ 20ರಂದು ಮಹಿಳೆಯನ್ನು ಆಡಿಷನ್‌ಗೆ ಮನೆಗೆ ಕರೆದಿದ್ದಾನೆ. ದೇಶಾದ್ಯಂತ ಖ್ಯಾತಿ ಗಳಿಸಿರುವ ದಿ ಕಪಿಲ್‌ ಶೋನಲ್ಲಿ ಚಾನ್ಸ್‌ ಸಿಗುತ್ತದೆ ಎಂಬ ಆಸೆಯಿಂದ ಮಹಿಳೆಯು ವ್ಯಕ್ತಿ ಹೇಳಿದ ಜಾಗಕ್ಕೆ ತೆರಳಿದ್ದಾರೆ. ಅಲ್ಲಿ, ಆನಂದ್‌ ಸಿಂಗ್‌ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Physical Abuse

ಮಹಿಳೆಯು ತಾನು ಹೇಳಿದ ಜಾಗಕ್ಕೆ ಬರುತ್ತಲೇ ಆನಂದ್‌ ಸಿಂಗ್‌ ಆಡಿಷನ್‌ ತೆಗೆದುಕೊಳ್ಳುವ ನಾಟಕವಾಡಿದ್ದಾನೆ. ಮಹಿಳೆಯು ಆಡಿಷನ್‌ ನೀಡುವಾಗಲೇ ಅವರ ಮೈ ಮುಟ್ಟಿದ್ದಾನೆ. ಇನ್ನೂ ಹತ್ತಿರ ಬನ್ನಿ ಎಂಬುದಾಗಿ ಹೇಳಿದ್ದಾನೆ. ಈತನ ಕುತಂತ್ರ ಅರಿತ ಮಹಿಳೆಯು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ, ಆನಂದ್‌ ಸಿಂಗ್‌ ಇನ್ನಷ್ಟು ಕುಪಿತನಾಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಕುರಿತು ಬೇರೆ ಯಾರಿಗಾದರೂ ಹೇಳಿದರೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

“ಕಪಿಲ್‌ ಶರ್ಮಾ ಜತೆಗೆ ನಂಟಿದೆ, ಆತನ ಪರಿಚಯವಿದೆ. ದಿ ಕಪಿಲ್‌ ಶರ್ಮಾ ಶೋನಲ್ಲಿ ಚಾನ್ಸ್‌ ಕೊಡಿಸುತ್ತೇನೆ ಎಂಬುದಾಗಿ ನಂಬಿಸಿದ. ಮನೆಗೆ ಹೋದ ಬಳಿಕ ಚೆನ್ನಾಗಿಯೇ ಮಾತನಾಡಿಸಿದ ಆತ, ಬಳಿಕ ನನ್ನ ಹತ್ತಿರ ಬಂದು ಮುಟ್ಟಲು ಶುರುಮಾಡಿದ. ಆಗ ನಾನು ಪ್ರತಿರೋಧ ಒಡ್ಡಿದೆ. ಅಷ್ಟಾದರೂ ಕೇಳದೆ ಆತ ಅತ್ಯಾಚಾರ ಎಸಗಿದ” ಎಂಬುದಾಗಿ ಮಹಿಳೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಪಿಲ್‌ ಶರ್ಮಾ ಅವರು ನಡೆಸಿಕೊಡುತ್ತಿದ್ದ ದಿ ಕಪಿಲ್‌ ಶರ್ಮಾ ಶೋ ದೇಶಾದ್ಯಂತ ಖ್ಯಾತಿಯಾಗಿದೆ. ಇತ್ತೀಚೆಗೆ, ನೆಟ್‌ಫ್ಲಿಕ್ಸ್‌ನಲ್ಲಿ ಶೋ ಪ್ರಸಾರವಾಗಿತ್ತು.

ಇದನ್ನೂ ಓದಿ: Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

Continue Reading

ಕರ್ನಾಟಕ

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Rain News: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ಅವಘಡ ನಡೆದಿದೆ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

Rain News
Koo

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Continue Reading

ಕರ್ನಾಟಕ

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Shivamogga News: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದಿದ್ದಾನೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಹೆದ್ದಾರಿಯಲ್ಲೇ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗ (Shivamogga News) ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಲಾಂಗ್‌ ಕಸಿದುಕೊಂಡು ಮನಸೋ ಇಚ್ಛೆ ಥಳಿಸಿರುವ ಸ್ಥಳೀಯರು, ನಂತರ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲಾಂಗ್ ಹಿಡಿದು ಹುಚ್ಚಾಟ ಮೆರೆದ ಸಮೀರ್ ಎಂಬ ಯುವಕನನ್ನು ಆನಂದಪುರ ಪೊಲೀಸ್‌ ಠಾಣೆಗೆ ಸ್ಥಳೀಯರು ಒಪ್ಪಿಸಿದ್ದಾರೆ. ಯುವಕನ ಪುಂಡಾಟದ ದೃಶ್ಯ ಮೊಬೈಲ್‌ನಲ್ಲಿ ಕಾರು ಚಾಲಕರೊಬ್ಬರು ಸೆರೆಹಿಡಿದಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
EPF Death Claim
ಮನಿ ಗೈಡ್9 mins ago

EPF Death Claim: ಆಧಾರ್ ದೃಢೀಕರಣ ಇಲ್ಲದೇ ಇದ್ದರೂ ಇಪಿಎಫ್‌ಒ ಡೆತ್ ಕ್ಲೈಮ್ ಸಾಧ್ಯವೆ? ಇಲ್ಲಿದೆ ಮಾಹಿತಿ

IPL 2024
ಕ್ರೀಡೆ17 mins ago

IPL 2024 : ಗೆಲ್ಲಬೇಕಾಗಿರುವುದು ಐಪಿಎಲ್​ ಟ್ರೋಫಿ, ಆರೆಂಜ್ ಕ್ಯಾಪ್ ಅಲ್ಲ; ಅನಗತ್ಯವಾಗಿ ಕೊಹ್ಲಿಯ ಕಾಲೆಳೆದ ಅಂಬಾಟಿ ರಾಯುಡು

Dhruva Sarja Entry to Bollywood in brother Role
ಸ್ಯಾಂಡಲ್ ವುಡ್25 mins ago

Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

Toothpaste For Cleaning
ಲೈಫ್‌ಸ್ಟೈಲ್26 mins ago

Toothpaste For Cleaning: ಅಡುಗೆ ಮನೆ ಕೊಳೆಯಾಗಿದೆಯೇ? ಸ್ವಚ್ಛತೆಗೆ ಟೂತ್‌ಪೇಸ್ಟ್‌ ಬಳಸಿ!

Cyclone Remal
ದೇಶ33 mins ago

Cyclone Remal: ʼರೆಮಾಲ್‌ʼ ಅಬ್ಬರಕ್ಕೆ ಬಂಗಾಳ, ಬಾಂಗ್ಲಾ ತತ್ತರ-ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣ

child death belagavi
ಕ್ರೈಂ43 mins ago

Child Death: ಆಟವಾಡುತ್ತ ಸಂಪ್‌ಗೆ ಬಿದ್ದು 2 ವರ್ಷದ ಕಂದಮ್ಮ ದುರ್ಮರಣ, ಮಳೆಗೆ ಮರ ಬಿದ್ದು ಮಹಿಳೆ ಸಾವು

IPL 2024
ಕ್ರೀಡೆ45 mins ago

IPL 2024 : ಕೆಕೆಆರ್​ ಗೆದ್ದ ಸಂಭ್ರಮದಲ್ಲಿ ಕೋಚ್ ಗಂಭೀರ್​ ಹಣೆಗೆ ಮುತ್ತಿಟ್ಟ ಶಾರುಖ್​ ಖಾನ್​, ಇಲ್ಲಿದೆ ವಿಡಿಯೊ

IPL 2024
ಕ್ರೀಡೆ1 hour ago

IPL 2024 : ‘ಪ್ಲೇಯರ್​​ ಆಫ್​ ದಿ ಟೂರ್ನಮೆಂಟ್​’ ಸೇರಿ ನಾನಾ ಪ್ರಶಸ್ತಿ ವಿಜೇತ ಪಟ್ಟಿ ಇಲ್ಲಿದೆ

Color In Food
ಆರೋಗ್ಯ1 hour ago

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

israel palestine war12
ವಿದೇಶ1 hour ago

Israel Palestine War: ಇಸ್ರೇಲ್‌ ಪ್ರತೀಕಾರದ ದಾಳಿ, 35 ಪ್ಯಾಲೆಸ್ತೀನೀಯರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು16 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌