ಬೆಂಗಳೂರು: ʼಕಾಂತಾರʼ ಚಲನಚಿತ್ರದ ದೃಶ್ಯವೊಂದು ಕೊಲೆ ಬೆದರಿಕೆಗೆ ಬಳಕೆಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಜಮೀನು ವ್ಯಾಜ್ಯ ಸಂಬಂಧ ಹಿರಿಯ ನಾಗರಿಕರೊಬ್ಬರಿಗೆ ಹೀಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಕುಣಿಗಲ್‌ನಲ್ಲಿ ನರಸಿಂಹಮೂರ್ತಿ ಎಂಬ ಹಿರಿಯ ನಾಗರಿಕರಿಗೆ ಶರತ್ ಕುಮಾರ್ ಎಂಬಾತ ಹೀಗೆ ಹತ್ಯೆ ಬೆದರಿಕೆ ಒಡ್ಡಿದ್ದಾನೆ. ಕುಣಿಗಲ್‌ನಲ್ಲಿ ಪತ್ನಿ ಹೆಸರಿನಲ್ಲಿ ನರಸಿಂಹ ಮೂರ್ತಿ ಎರಡು ಎಕರೆ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಕುರಿತು ಶರತ್ ಕುಮಾರ್ ಎಂಬಾತ ತಗಾದೆ ತೆಗೆದಿದ್ದ. ಜಮೀನಿಗೆ ಈತ ಅತಿಕ್ರಮ ಪ್ರವೇಶ ಮಾಡಿದ್ದಾನೆ ಎಂದು ಈ ಹಿಂದೆ ನರಸಿಂಹಮೂರ್ತಿ ದೂರು ನೀಡಿದ್ದರು. ಸದ್ಯ ಜಮೀನು ವ್ಯಾಜ್ಯ ನ್ಯಾಯಾಲಯದಲ್ಲಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶರತ್ ಕುಮಾರ್ ತನಗೆ ಕೊಲೆ ಬೆದರಿಕೆ ಹಾಕುತ್ತಿದ್ದಾನೆ. ವಾಟ್ಸ್ಯಾಪ್ ಮೂಲಕ ʼಕಾಂತಾರʼ ಚಿತ್ರದ ದೃಶ್ಯಗಳನ್ನು ಕಳಿಸಿ ಇದೇ ರೀತಿ ಸಾಯ್ತೀಯ ಎಂದು ಬೆದರಿಕೆ ಹಾಕಿದ್ದಾನೆ ಎಂದು ನರಸಿಂಹಮೂರ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್‌ನಲ್ಲಿ ಕೂಡ ಉಲ್ಲೇಖಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಕೊಲೆ ಬೆದರಿಕೆ ದೂರು ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್ ಡ್ರೈವರ್‌ಗೆ 30 ವರ್ಷ ಜೈಲು