Site icon Vistara News

DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

DCET 2024

ಬೆಂಗಳೂರು: ಡಿಸಿಇಟಿ-2024ರಲ್ಲಿ (DCET 2024 ) ರ‍್ಯಾಂಕ್‌ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಅರ್ಹತೆಯನ್ನು ಪರೀಕ್ಷಿಸಲು ಜುಲೈ 1ರಂದು ಮಲ್ಲೇಶ್ವರ ಕೆಇಎ ಕಚೇರಿಯಲ್ಲಿ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಯುಜಿಸಿಇಟಿ-24ಕ್ಕೆ ಸಂಬಂಧಿಸಿದಂತೆ ಜೂನ್ 10ರಿಂದ 12ರವರೆಗೆ ನಡೆದ ವೈದ್ಯಕೀಯ ತಪಾಸಣೆಗೆ ಗೈರುಹಾಜರಾದ ವಿಕಲಚೇತನ ಅಭ್ಯರ್ಥಿಗಳು ಕೂಡ ಜುಲೈ 1ರಂದು ತಪಾಸಣೆಗೆ ಬರಬಹುದು. ಈ ಮೊದಲು ತಪಾಸಣೆಗೆ ಹಾಜರಾಗಿದ್ದವರು ಪುನಃ ತಪಾಸಣೆಗೆ ಬರುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಡಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು.

ಇದನ್ನೂ ಓದಿ: vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version