ಬೆಂಗಳೂರು: ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಡೆಂಗೆ ಪ್ರಕರಣಗಳು (Dengue Cases increasing) ಏಕಾಏಕಿ ಹೆಚ್ಚಳವಾಗಿದೆ. ಕಳೆದ ಕೆಲವೇ ದಿನಗಳ ಅವಧಿಯಲ್ಲಿ ಏಳು ಸಾವಿರಕ್ಕೂ ಅಧಿಕ ಪ್ರಕರಣಗಳು (7000 Dengue Cases) ಕಂಡುಬಂದಿರುವುದರಿಂದ ಎಲ್ಲರೂ ಇದರ ಬಗ್ಗೆ ಎಚ್ಚರಿಕೆ (Dengue problem) ವಹಿಸುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ಡೆಂಗೆ ಬಗ್ಗೆ ಭಯ ಬೇಡ, ಆದರೆ ಎಚ್ಚರಿಕೆ ಇರಲಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಹೇಳಿದ್ದೇನು?
- ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗೆ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.
- ಡೆಂಗೆ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
- ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛ ಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.
- ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
- ಡೆಂಗೆ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು…
— CM of Karnataka (@CMofKarnataka) September 11, 2023
ಜ್ವರ, ಕೈ-ಕಾಲು ಸೆಳೆದ ಬಂದ ಹುಷಾರಾಗಿರಿ ಎಂದ ಆರೋಗ್ಯ ಸಚಿವರು
ಈ ನಡುವೆ, ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ (Heath Minister Dinesh gundurao) ಅವರು ಅಧಿಕಾರಿಗಳ ಸಭೆಯನ್ನು ನಡೆಸಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಅವರು ಕೂಡಾ ಪೋಸ್ಟ್ ಹಾಕಿಕೊಡಿದ್ದಾರೆ.
ಇದನ್ನೂ ಓದಿ : Rain Effects | ಮಲೇರಿಯ, ಡೆಂಗೆ, ಮೆದುಳು ಜ್ವರ ಹೆಚ್ಚಾದೀತು ಹುಷಾರು, ಮುನ್ನೆಚ್ಚರಿಕೆ ವಹಿಸಲು ಸೂಚನೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೋಗ್ಯ ಇಲಾಖೆ ಮತ್ತು ಬಿ.ಬಿ.ಎಂ.ಪಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ ಎಂದು ತಿಳಿಸಿರುವ ಅವರು, ಜ್ವರ, ಕೈ–ಕಾಲುಗಳಲ್ಲಿ ಸೆಳೆತ, ಆಯಾಸದ ಲಕ್ಷಣಗಳಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ ಎಂದಿದ್ದಾರೆ.
ವೈದ್ಯರನ್ನು ಭೇಟಿಯಾಗಿ ತಪಾಸಣೆ ನಡೆಸುವಂತೆ ಸಾರ್ವಜನಿಕರಲ್ಲಿ ನಾನು ಮನವಿ ಮಾಡುತ್ತಿದ್ದೇನೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಿಸಲು ಎಲ್ಲಾ 198 ವಾರ್ಡ್‌ಗಳಲ್ಲಿಯೂ ಸೊಳ್ಳೆ ನಿಯಂತ್ರಣಕ್ಕೆ ಪ್ರತಿನಿತ್ಯ ಎರಡು ಬಾರಿ ಔಷಧಿ ಸಿಂಪಡಣೆಯ ಜೊತೆಗೆ ನೀರು ನಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆರೋಗ್ಯ ಇಲಾಖೆ ಮತ್ತು ಬಿ.ಬಿ.ಎಂ.ಪಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 7, 2023
ಜ್ವರ, ಕೈ–ಕಾಲುಗಳಲ್ಲಿ ಸೆಳೆತ, ಆಯಾಸದ ಲಕ್ಷಣಗಳಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ.
1/2 pic.twitter.com/PNjTBDrCvF