Dinesh Gundurao : ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ಬದಲು 7 ಸಾವಿರ ರೂ. ಗೌರವಧನ - Vistara News

ಬೆಂಗಳೂರು

Dinesh Gundurao : ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ಬದಲು 7 ಸಾವಿರ ರೂ. ಗೌರವಧನ

Dinesh Gundu Rao : ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂ ರಾವ್‌ ಅವರು ಗೌರವಧನವನ್ನು ಏಳು ಸಾವಿರಕ್ಕೆ ಖಾತ್ರಿಗೊಳಿಸುವುದಾಗಿ ಹೇಳಿದರು.

VISTARANEWS.COM


on

DInesh Gundurao Asha Workers2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ (Asha worker) ಪ್ರತಿ ತಿಂಗಳು ಪಾವತಿಯಾಗುತ್ತಿದ್ದ 5 ಸಾವಿರದ ಬದಲು 7 ಸಾವಿರ ನೇರ ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ (Health Minister) ದಿನೇಶ್ ಗುಂಡೂರಾವ್ (Dinesh Gundurao) ಭರವಸೆ ನೀಡಿದರು. ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ (Asha protest) ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನು ಆಲಿಸಿದ ಸಚಿವರು, ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ ಎಂದರಲ್ಲದೆ, ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ ನಮ್ಮ ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಾವು ಗಳಿಸಿದ ಪ್ರೋತ್ಸಾಹಧನದ ವಿವರಗಳನ್ನು ಗಮನಿಸಲು ಆಶಾ ನಿಧಿ ತಂತ್ರಾಂಶದಲ್ಲಿ “ASHA View My Incentive” ನ್ನು ಸೃಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದರು.

DInesh Gundurao Asha Workers2

ಇದನ್ನೂ ಓದಿ : Dinesh Gundurao : ನಕಲಿ ವೈದ್ಯರನ್ನು ದೂರ ಇಟ್ಟರೆ ಮಾತ್ರ ನಾಟಿ ಪದ್ಧತಿಗೆ ಏಳಿಗೆ ಎಂದ ದಿನೇಶ್ ಗುಂಡೂರಾವ್

ಆಶಾ ಕಾರ್ಯಕರ್ತರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5 ಸಾವಿರದ ಜೊತೆಗೆ 2 ಸಾವಿರ ಸೇರಿಸಿ ಒಟ್ಟು 7 ಸಾವಿರ ಖಾತ್ರಿಪಡಿಸುವುದಾಗಿ ಘೋಷಿಸಿದರು.‌ ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹಧನವನ್ನು ಪಾರದರ್ಶಕವಾಗಿ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು. ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಾಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ಟೀಮ್ ಬೇಸ್ಟ್ ಇನ್ಸೆಂಟಿವ್ ಕೂಡಾ ಆಶಾ ನಿಧಿ ತಂತ್ರಾಂಶದ ಮೂಲಕ ರವಾನೆ

ಅಲ್ಲದೇ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು ದಾಖಲಿಸಲು ಪ್ರತ್ಯೇಕವಾದ ಮೊಬೈಲ್ ಅಪ್ಲಿಕೇಷನ್ ನ್ನು ವಿನ್ಯಾಸ ಮಾಡಲಾಗುವುದು. ಆಶಾ ಕಾರ್ಯಕರ್ತೆಯರೇ ತಾವು ನಿರ್ವಹಿಸಿದ ಕಾರ್ಯಚಟುವಟಿಕೆಗಳು, ಹಾಗೂ ಸಿಗಬೇಕಾದ ಪ್ರೋತ್ಸಾಹಧನವನ್ನ ಆ್ಯಪ್ ನಲ್ಲಿ ನೋಡಿಕೊಳ್ಳಲು ಅವಕಾಶ ಕಲ್ಪಿಸುವಂತಹ ಪಾರದರ್ಶಕ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Dinesh Gundurao : ಮಾಸಿಕ ವೇತನ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚೆ

ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ವೇತನ ನಿಗದಿ ಮಾಡುವ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸುತ್ತೇನೆ. ಆದರೆ ಸದ್ಯಕ್ಕೆ ಇರುವ ಸಮಸ್ಯೆಗಳನ್ನ ಪರಿಹರಿಸುವ ಕೊಡುವ ಜವಾಬ್ದಾರಿ ಆರೋಗ್ಯ ಸಚಿವನಾಗಿ ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ತಾಂತ್ರಿಕ ಸಮಸ್ಯೆಗಳನ್ನ ಸರಿಪಡಿಸಲಾಗುತ್ತಿದೆ. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ವರ್ಕರ್ಸ್ ಗೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರವಾಗಿದ್ದಾಗ ಪ್ರತಿಭಟನೆ ನಡೆಸುವ ಅಗತ್ಯತೆ ಇಲ್ಲ ಎಂದು ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ತಿಳಿಹೇಳಿದರು.‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Prajwal Revanna Case: ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದರು.

VISTARANEWS.COM


on

Prajwal Revanna Case Centre says it has no power to revoke Prajwal diplomatic passport Big relief for MP
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಬೆನ್ನಲ್ಲೇ, ಇದು ತಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರದ ಉತ್ತರ ಬಂದಿದೆ.

ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (ರಾಜತಾಂತ್ರಿಕ ಪಾಸ್‌ಪೋರ್ಟ್‌) ರದ್ದುಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಪ್ರತಿಕ್ರಿಯೆ ನೀಡಿ, ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕೆಂದರೆ ಅದಕ್ಕೆ ನ್ಯಾಯಾಲಯದ ಆದೇಶ ಬೇಕು. ಈವರೆಗೂ ನಮಗೆ ಯಾವುದೇ ನ್ಯಾಯಾಲಯವು ಪಾಸ್‌ಪೋರ್ಟ್‌ ರದ್ದುಗೊಳಿಸಲು ನಿರ್ದೇಶನ ನೀಡಿಲ್ಲ. ಹೀಗಾಗಿ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಮೇಯ ಬರುವುದಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ!

ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದರು.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದರು.

Prajwal Revanna Case  and Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರ

ಆದರೆ, ಈಗ ಈ ಸಂಬಂಧ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ಪಾಸ್‌ಪೋರ್ಟ್‌ ರದ್ದುಗೊಳಿಸುವ ಅಧಿಕಾರ ವಿದೇಶಾಂಗ ಸಚಿವಾಲಯಕ್ಕೆ ಇಲ್ಲ. ಇದಕ್ಕೆ ನ್ಯಾಯಾಲಯದಿಂದ ಆದೇಶ ಬರಬೇಕು. ಅಂತಹ ಯಾವುದೇ ಆದೇಶವು ಈ ವರೆಗೆ ಯಾವುದೇ ನ್ಯಾಯಾಲಯದಿಂದ ತಮಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಪ್ರಜ್ವಲ್‌ಗೆ ರಿಲೀಫ್‌

ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ನ್ಯಾಯಾಲಯದಿಂದ ಆದೇಶ ಬರುವವರೆಗೂ ಹೊರ ದೇಶದಲ್ಲಿ ಪ್ರಜ್ವಲ್‌ ಸೇಫ್‌ ಎಂದು ಹೇಳಲಾಗುತ್ತಿದೆ. ಅಲ್ಲಿಯವರಿಗೆ ಅವರು ಹಲವು ದೇಶಕ್ಕೆ ಪ್ರಯಾಣ ಮಾಡಬಹುದಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ತನಿಖಾ ತಂಡವು ಕೂಡಲೇ ಕೋರ್ಟ್‌ ಮೊರೆ ಹೋಗಿ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮನವಿ ಸಲ್ಲಿಸಿದರೆ ಪ್ರಜ್ವಲ್‌ಗೆ ಸಂಕಷ್ಟ ಎದುರಾಗಬಹುದು ಎಂದು ಹೇಳಲಾಗುತ್ತಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

Continue Reading

ಬೆಂಗಳೂರು

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Murder case : ಭಿನ್ನಾಭಿಪ್ರಾಯದಿಂದ ದೂರಾಗಿದ್ದ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು ಪತಿಯೊಬ್ಬ ಕೊಲೆ ಮಾಡಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

VISTARANEWS.COM


on

By

Murder case in Bengaluru
ಸ್ಥಳ ಪರಿಶೀಲನೆ ನಡೆಸಿದ ಕೋರಮಂಗಲ ಪೊಲೀಸರು
Koo

ಬೆಂಗಳೂರು: ಬೆಂಗಳೂರಿನ (Bengaluru News) ಕೋರಮಂಗಲ ಪೊಲೀಸ್ ಠಾಣಾ (Kormangala police station) ವ್ಯಾಪ್ತಿಯಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ಸೆಲ್ವಿನ್ ಪ್ರಾನ್ಸಿಸ್ ಎಂಬಾತ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಸೆಲ್ವಿನ್ ಪ್ರಾನ್ಸಿಸ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ಪತಿಯಿಂದ 6 ತಿಂಗಳ ಹಿಂದೆ ದೂರಾಗಿದ್ದಳು. ವೆಂಕಟಾಪುರದ ತಾಯಿ ಮನೆಯಲ್ಲಿ ವಾಸವಿದ್ದಳು. ಇಂದು ಗುರುವಾರ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಪತ್ನಿ ಜತೆಗೆ ಸೆಲ್ವಿನ್‌ ಪ್ರಾನ್ಸಿಸ್‌ ಗಲಾಟೆ ಮಾಡಿಕೊಂಡಿದ್ದ. ಈ ಮೊದಲೇ ಪ್ರಿಪ್ಲಾನ್‌ ಮಾಡಿಕೊಂಡು ಪತ್ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೆಂಜ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೃತ್ಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

ಬೆಂಗಳೂರು: ವಿವಾಹಿತ ಮಹಿಳೆಯ (Assault Case) ಹಿಂದೆ ಬಿದ್ದ ಪಾಗಲ್‌ ಪ್ರೇಮಿಯೊಬ್ಬ, ಮದುವೆ ಆಗುವಂತೆ ಪೀಡಿಸುತ್ತಿದ್ದ. ಮದುವೆಗೆ ಮಹಿಳೆ ನಿರಾಕರಿಸಿದ್ದಕ್ಕೆ ಆಕೆ ಮನೆಗೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಘಟನೆ ನಡೆದಿದೆ.

ಅರ್ಬಾಜ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಮಹಿಳೆಗೆ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಇತ್ತೀಚೆಗೆ ತನ್ನ ವಾರಸೆ ಬದಲಾಯಿಸಿಕೊಂಡಿದ್ದ. ಮಹಿಳೆಗೆ ಮದುವೆ ಆಗಿದ್ದರೂ, ತನ್ನನ್ನು ಮದುವೆ ಆಗು ಎಂದು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮನೆಯವರಿಗೆ ವಿಚಾರ ತಿಳಿಸಿದ್ದಳು. ಹೀಗಾಗಿ 2 ಕುಟುಂಬದ ಹಿರಿಯರು ಅರ್ಬಾಜ್‌ಗೆ ಬುದ್ಧಿವಾದ ಹೇಳಿದ್ದರು.

ಆದರೂ ಮಹಿಳೆಗೆ ಆಗಾಗ ಫೋನ್‌ ಮಾಡಿ ಗಲಾಟೆ ಮಾಡುತ್ತಿದ್ದ. ಹೀಗಿರುವಾಗ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆ ಬಳಿ ಬಂದವನೇ ಬೆಂಕಿ ಇಟ್ಟಿದ್ದಾನೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ಬೆಂಕಿಗಾಹುತಿ ಆಗಿವೆ.

ಸದ್ಯ ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರ್ಬಾಜ್‌ನನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Prajwal Revanna Case: ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ.

VISTARANEWS.COM


on

Prajwal Revanna Case Locked up as Prajwal arrives at Bengaluru airport
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಲುಕ್‌ ಔಟ್‌ ನೋಟಿಸ್‌ ನೀಡಿ ಬಿಸಿ ಮುಟ್ಟಿಸಲಾಗಿದ್ದರಿಂದ ಪ್ರಜ್ವಲ್‌ ರೇವಣ್ಣ ಯಾವ ಸಮಯದಲ್ಲಿ ಬೇಕಿದ್ದರೂ ಬೆಂಗಳೂರಿಗೆ ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಅಲ್ಲಿಯೇ ಲಾಕ್‌ ಮಾಡಲು ಪ್ಲ್ಯಾನ್‌ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವ ಎಸ್‌ಐಟಿ ತಂಡ‌ವು ಏರ್‌ಪೋರ್ಟ್‌ ಸಿಬ್ಬಂದಿ, ಅಧಿಕಾರಿಗಳಿಗೆ ಸೂಚನೆ‌ ನೀಡಿದೆ. ಪ್ರಜ್ವಲ್ ರೇವಣ್ಣ ಕಂಡ ಕೂಡಲೇ ವಶಕ್ಕೆ ಪಡೆಯುವಂತೆ ಹೇಳಲಾಗಿದೆ. ಈ ಸಂಬಂಧ ಏರ್‌ಪೋರ್ಟ್‌ನ ಇಮಿಗ್ರೇಷನ್ ಅಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ವಿದೇಶದಿಂದ ಬಂದ ಕೂಡಲೇ ಇಮಿಗ್ರೇಷನ್‌ಗೆ ಪ್ರಜ್ವಲ್‌ ಹೋಗಬೇಕು. ಈ ವೇಳೆ ಅಲ್ಲಿಯೇ ವಶಕ್ಕೆ ಪಡೆದು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಲು ನಿರ್ದೇಶನ ನೀಡಲಾಗಿದೆ. ಇದಾದ ಬಳಿಕ ಏರ್‌ಪೋರ್ಟ್‌ ಪೋಲಿಸರು ಎಸ್‌.ಐ.ಟಿ. ಅಧಿಕಾರಿಗಳಿಗೆ ಪ್ರಜ್ವಲ್ ಅವರನ್ನು ವಶಕ್ಕೆ ನೀಡುತ್ತಾರೆ.

ಪ್ರಜ್ವಲ್‌ ವೀಸಾ, ಪಾಸ್‌ಪೋರ್ಟ್‌ ರವಾನೆ

ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಫೋಟೊ, ವೀಸಾ ಪಾಸ್‌ಪೋರ್ಟ್‌ನ ಮಾಹಿತಿಯನ್ನು ಏರ್‌ಪೋರ್ಟ್‌ನ ಸಿಬ್ಬಂದಿಗೆ ರವಾನೆ ಮಾಡಲಾಗಿದೆ. ಅಲ್ಲದೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಲೀಸರು ಸಹ ಬೀಡುಬಿಟ್ಟಿದ್ದಾರೆ. ಸುತ್ತಮುತ್ತ ಹೈ ಅಲರ್ಟ್ ಆಗಿದ್ದು, ಪ್ರಜ್ವಲ್‌ ಬರುತ್ತಿದ್ದಂತೆ ಅಲ್ಲಿಯೇ ಹಿಡಿದು ಕರೆದೊಯ್ಯಲು ಮುಂದಾಗಲಾಗಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆ ಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟಿಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟಿಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕರ್ನಾಟಕ

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Karnataka legislative council: ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ (Karnataka legislative council) 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ ಆದೇಶಿಸಲಾಗಿದೆ. ಹಾಲಿ ಸದಸ್ಯರ ಅವಧಿ ಜೂನ್ 21ಕ್ಕೆ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಹೀಗಾಗಿ ಜೂನ್‌ 3ಕ್ಕೆ ಈ ಆರೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ

  • ಈಶಾನ್ಯ ಪದವೀಧರ ಕ್ಷೇತ್ರ
    ನೈರುತ್ಯ ಪದವೀಧರ ಕ್ಷೇತ್ರ
    ಬೆಂಗಳೂರು ಪದವೀಧರ ಕ್ಷೇತ್ರ
  • ಆಗ್ನೇಯ ಶಿಕ್ಷಕರ ಕ್ಷೇತ್ರ
    ನೈರುತ್ಯ ಶಿಕ್ಷಕರ ಕ್ಷೇತ್ರ
    ದಕ್ಷಿಣ ಶಿಕ್ಷಕರ ಕ್ಷೇತ್ರ

ನಾಮಪತ್ರ ಸಲ್ಲಿಕೆಗೆ ಮೇ 16 ಕೊನೇ ದಿನ

ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಒಂದು ವೇಳೆ ನಾಮಪತ್ರದಲ್ಲಿ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗವು ಅಂತಹ ನಾಮಪತ್ರವನ್ನು ತಿರಸ್ಕೃತ ಮಾಡಲಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನ ಎಂದು ಚುನಾವಣಾ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ. ಜೂನ್ 3ರಂದು ಮತದಾನ ನಡೆದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.

ನೀತಿ ಸಂಹಿತೆ ಜಾರಿ

ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅವಧಿ ಪೂರೈಸುತ್ತಿರುವ ಪರಿಷತ್‌ ಸದಸ್ಯರು ಇವರು

ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ್‌ ಬಿ. ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ‌ – ಆಯನೂರು ಮಂಜುನಾಥ್ (2023ರ ಏಪ್ರಿಲ್‌ 19ಕ್ಕೆ ರಾಜೀನಾಮೆ)
ಬೆಂಗಳೂರು ಪದವೀಧರ ಕ್ಷೇತ್ರ‌ – ಎ. ದೇವೇಗೌಡ

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಆಗ್ನೇಯ ಶಿಕ್ಷಕರ ಕ್ಷೇತ್ರ – ವೈ.ಎ. ನಾರಾಯಣಸ್ವಾಮಿ
ನೈರುತ್ಯ ಶಿಕ್ಷಕರ ಕ್ಷೇತ್ರ – ಎಸ್.ಎಲ್.‌ ಭೋಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ (2024ರ ಮಾರ್ಚ್‌ 21ಕ್ಕೆ ರಾಜೀನಾಮೆ)

Continue Reading
Advertisement
Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ6 mins ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ15 mins ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ17 mins ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Murder case in Bengaluru
ಬೆಂಗಳೂರು26 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ27 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್40 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ41 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ42 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ44 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್52 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌